Breaking News

Breaking News

ಹುಬ್ಬಳ್ಳಿ: ಹೊಸ ವರ್ಷ ಸಂಭ್ರಮಾಚರಣೆಗೆ ಪೊಲೀಸ್ ಇಲಾಖೆ ಹದ್ದಿನ ಕಣ್ಣು

ಹುಬ್ಬಳ್ಳಿ: ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಿಕೊಳ್ಳಲು ನಗರದ ಜನರು ಪೂರ್ವಸಿದ್ಧತೆ ನಡೆಸುತ್ತಿದ್ದರೆ, ಶಾಂತಿಯುತ ಆಚರಣೆಗೆ ಪೊಲೀಸ್‌ ಇಲಾಖೆ ಮನರಂಜನೆ ಕಾರ್ಯಕ್ರಮಗಳನ್ನು ನಡೆಸುವ ಹೋಟೆಲ್‌ಗಳ ಮೇಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹದ್ದಿನ ಕಣ್ಣಿಡಲು ಮುಂದಾಗಿದೆ. ಕೆಲವು ಪ್ರತಿಷ್ಠಿತ ಹೋಟೆಲ್‌ಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗ್ರಾಹಕರನ್ನು ಸೆಳೆಯಲು ಸಿದ್ಧತೆ ನಡೆಸಿವೆ. ಯುವಕರನ್ನು ಆಕರ್ಷಿಸಲು ಡಿಜೆ, ಮ್ಯೂಸಿಕ್‌ ಪಾರ್ಟಿಗಳನ್ನು ಆಯೋಜಿಸಿ, ಗಾಯಕರನ್ನು ಕರೆಸಿ ಸಂಗೀತ ರಾತ್ರಿ ನಡೆಸಲು ತೀರ್ಮಾನಿಸಿವೆ. ಬಹುತೇಕ ಹೋಟೆಲ್‌ಗಳು ಆಲಂಕಾರಿಕ ವಿದ್ಯುದ್ದೀಪಗಳಿಂದ …

Read More »

ಶೇ.15 ರಷ್ಟು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಮಿತಿ ಶಿಫಾರಸು

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಸೇರಿದಂತೆ ನಾಲ್ಕೂ ನಿಗಮಗಳ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಶಿಫಾರಸ್ಸು ಮಾಡಿದೆ. ಸಾರಿಗೆ ನಿಗಮಗಳು 2020ರಿಂದ ಪ್ರಯಾಣ ದರ ಪರಿಷ್ಕರಣೆ ಮಾಡದಿರುವ ಕಾರಣಕ್ಕೆ ನಷ್ಟಕ್ಕೆ ಸಿಲುಕಿವೆ. ವಾರ್ಷಿಕ 3,650ಕೋಟಿ ರೂ.ಹೊರೆಯಾಗುತ್ತಿದ್ದು, ಪ್ರಯಾಣ ದರ ಪರಿಷ್ಕರಣೆಯಿಂದ ನಷ್ಟದ ಪ್ರಮಾಣ 1,800ಕೋಟಿ ರೂ.ಗೆ …

Read More »

ರೈಲ್ವೆ ಇಲಾಖೆಯಲ್ಲಿ 60,000 ಹುದ್ದೆಗಳ ನೇಮಕಾತಿಗೆ ಭರ್ತಿ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಮುಂದಿನ ನಾಲ್ಕು ತಿಂಗಳಲ್ಲಿ ರೈಲ್ವೆ ಇಲಾಖೆಯಲ್ಲಿ 60,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿದ್ದ ‘ಹೆಸರಾಯಿತು ಕರ್ನಾಟಕ-50ರ ಸಂಭ್ರಮ’ ಮತ್ತು ಪ್ರತಿಜ್ಞಾ ಸ್ವೀಕಾರ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ಮೊದಲು ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ರೈಲ್ವೆ ಇಲಾಖೆ ಪರೀಕ್ಷೆ ನಡೆಯುತ್ತಿದ್ದವು. ನಾನು …

Read More »

ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಕಲಬುರಗಿ: ಬಿಜೆಪಿ ಮುಖಂಡರ ಹತ್ಯೆಗೆ ಸಂಚು ರೂಪಿಸಿರುವ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜಗತ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಜಗತ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು, ವಾಹನಗಳ ಸಂಚಾರ ತಡೆದು ಟೈರ್‌ಗಳಿಗೆ ಬೆಂಕಿ ಹಚ್ಚಿದರು. ಪೊಲೀಸ್, ಜಿಲ್ಲಾಡಳಿತ, ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಘೋಷಣೆ ಕೂಗಿದರು. ಜಿಲ್ಲೆಯಲ್ಲಿ ಕಾನೂನು …

Read More »

ತೊಗರಿ ಬೆಳೆಗೆ ಬೆಂಬಲ ಬೆಲೆ ಹೆಚ್ಚಳ ಸಾಧ್ಯವಿಲ್ಲ: ಸಚಿವ ಶಿವಾನಂದ ಪಾಟೀಲ್

ಮುದ್ದೇಬಿಹಾಳ: ತೊಗರಿ ಬೆಳೆಗೆ ಬೆಂಬಲ ಬೆಲೆ ಹೆಚ್ಚಳ ಸಾಧ್ಯವಿಲ್ಲ. ಪರಿಹಾರ ನೀಡಲು ಸರ್ಕಾರದಿಂದ ಸಾಧ್ಯವಿಲ್ಲ. ಆದರೆ ಬೆಂಬಲ ಬೆಲೆಯಡಿ ರೈತರ ತೊಗರಿ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಹೇಳಿದರು. ಪಟ್ಟಣದ ನಾಲತವಾಡ ರಸ್ತೆಯಲ್ಲಿ ಇಂದು ಬಾಲಾಜಿ ದಾಲ್ ಇಂಡಸ್ಟ್ರಿಸ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರೈತರು ಕೇಳಿದಷ್ಟು ಪರಿಹಾರ ಕೊಡುವುದಕ್ಕೆ ಹೇಗೆ ಸಾಧ್ಯವಿದೆ? ರಾಜ್ಯದ 27 ಜಿಲ್ಲೆಗಳಲ್ಲಿ ತೊಗರಿ ಬಿತ್ತನೆ …

Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣ ವಿಚಾರ: ಎನ್ ಡಿ ಎ ಸರ್ಕಾರದ ವಿರುದ್ಧ ಅಶೋಕ್ ಗೆಹ್ಲೋಟ್ ಕಿಡಿ

ಜೈಪುರ: ಮಾಜಿ ಪ್ರಧಾನಿ ದಿವಗಂತ ಮನಮೋಹನ ಸಿಂಗ್‌ ಅವರ ಸ್ಮಾರಕ ನಿರ್ಮಾಣ ವಿಚಾರದಲ್ಲಿ ಎನ್‌ಡಿಎ ಸರ್ಕಾರ ಅನಗತ್ಯ ವಿವಾದ ಸೃಷ್ಟಿಸಿದೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಕಿಡಿಕಾರಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಮನಮೋಹನ ಸಿಂಗ್‌ ಅವರಂತಹ ಮಹಾನ್‌ ಚೇತನದ ಅಂತ್ಯಕ್ರಿಯೆ ವಿಚಾರದಲ್ಲೂ ಕೇಂದ್ರ ಸರ್ಕಾರ ಕಡೆಗಣಿಸಿದ್ದು, ಇದೀಗ ಸಿಂಗ್‌ ಅವರಿಗೆ ಸ್ಮಾರಕ ನಿರ್ಮಾಣ ವಿಚಾರದಲ್ಲೂ ಅನಗತ್ಯ ವಿವಾದ ಸೃಷ್ಟಿಸಿದೆ ಎಂದು …

Read More »

ಡಿ.31 ಕ್ಕೆ ಸಾರಿಗೆ ನೌಕರರ ಮುಷ್ಕರ: ಮನವೊಲಿಕೆ ಸಂಧಾನ ಸಭೆಯಲ್ಲಿ ಸಾರಿಗೆ ಸಚಿವರ ಪ್ರಯತ್ನ ವ್ಯರ್ಥ

ಬೆಂಗಳೂರು: ಡಿ. 31ರಂದು ಸಾರಿಗೆ ನೌಕರರ ಬಂದ್ ಕರೆ ನೀಡಿರುವ ವಿಚಾರ ಮತ್ತಷ್ಟು ಕಗ್ಗಂಟಾಗಿದೆ. ಜಂಟಿ ಕ್ರಿಯಾಸಮಿತಿಯ ಮನವೊಲಿಸಲು ಸಾರಿಗೆ ಇಲಾಖೆ ವಿಫಲ ಆಗಿದೆ. ಸತತ 6ನೇ ಬಾರಿ ಕೆಎಸ್ಆರ್ಟಿಸಿ ಯ ಕೇಂದ್ರ ಕಚೇರಿಯಲ್ಲಿ ನಡೆದ ಮನವೊಲಿಕೆ ಸಂಧಾನ ಪ್ರಯತ್ನ ವಿಫಲವಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಇಲಾಖೆಯ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಕ್ರಿಯಾಸಮಿತಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಾಯಿತು. ಸಾರಿಗೆ ಸಚಿವರ ಪ್ರಯತ್ನವೂ ವ್ಯರ್ಥವಾಗಿದ್ದು, …

Read More »

ಅವಳಿ ನಗರದಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸರ ಬಂದೂಕು: ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕ್ರಿಮಿನಲ್‌ ಮೇಲೆ ಫೈರಿಂಗ್

ಧಾರವಾಡ: ಅವಳಿ ನಗರದಲ್ಲಿ ಪೊಲೀಸ್ ಬಂದೂಕು ಮತ್ತೆ ಸದ್ದು ಮಾಡಿದೆ. ನಟೋರಿಯಸ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಹೌದು, ಮನೆ ಕಳ್ಳತನ ಪ್ರಕರಣದ ಆರೋಪಿ ಕ್ರಿಮಿನಲ್, ನಟೋರಿಯಸ್ ಪಾಲಾ ವೆಂಕಟೇಶ್ವರರಾವ್ ಎಂಬಾತನ ಎರಡು ಕಾಲಿಗೆ ಗುಂಡು ಬಿದಿದ್ದು, ಮೂಲತಃ ಆಂದ್ರಪ್ರದೇಶದ ಪಾಲಾ ವೆಂಕಟೇಶ್ವರ‌ರಾವ್, ಧಾರವಾಡದ ನವಲೂರಿನ ಮನೆಯೊಂದಕ್ಕೆ ಕನ್ನ ಹಾಕಿದ್ದ ಭೂಪ, ನಟೋರಿಯಸ್ ಕ್ರಿಮಿನಲ್‌‌ನನ್ನ ಬಂಧಿಸಿ ಹೆಚ್ಚಿನ ವಿಚಾರಣೆ ಕರೆದುಕೊಂಡು ಹೋದಾಗ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ. ಆರೋಪಿ ದಾಳಿ …

Read More »

ಕೇಂದ್ರ ಸರ್ಕಾರದಿಂದ 2024-25 ರ ನೇರ ವರ್ಗಾವಣೆ ಅಡಿಯಲ್ಲಿ 1,206 ಯೋಜನೆಗಳಿಗೆ 2.23 ಲಕ್ಷ ಕೋಟಿ ವರ್ಗಾವಣೆ

ನವದೆಹಲಿ: ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ (ಡಿಒಇ) 2024-25ರ ಹಣಕಾಸು ವರ್ಷದಲ್ಲಿ ನೇರ ಲಾಭ ವರ್ಗಾವಣೆ (ಡಿಬಿಟಿ) ಅಡಿಯಲ್ಲಿ ಬರುವ 1,206 ಯೋಜನೆಗಳಿಗೆ ನೈಜ ಸಮಯದ, ಪಾರದರ್ಶಕ ಹಣವನ್ನು ವಿತರಿಸಲು ಅನುವು ಮಾಡಿಕೊಟ್ಟಿದೆ, ದಾಖಲೆಯ 2.23 ಲಕ್ಷ ಕೋಟಿ ರೂ.ಗಳ ವಹಿವಾಟುಗಳನ್ನು ಪ್ರಕ್ರಿಯೆಗೊಳಿಸಿದೆ ಎಂದು ಶುಕ್ರವಾರ ಬಿಡುಗಡೆಯಾದ ವರ್ಷಾಂತ್ಯದ ವರದಿ ತಿಳಿಸಿದೆ. ಈ ಉಪಕ್ರಮವು 117 ಬಾಹ್ಯ ವ್ಯವಸ್ಥೆಗಳೊಂದಿಗೆ ವ್ಯಾಪಕ ಏಕೀಕರಣದ ಮೂಲಕ ಡಿಜಿಟಲ್ ಇಂಡಿಯಾ ಮಿಷನ್ ಅನ್ನು ಬೆಂಬಲಿಸಿದೆ …

Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಮಾರಕಕ್ಕೆ ಶೀಘ್ರವೇ ಸ್ಥಳ ಹಂಚಿಕೆ: ಕೇಂದ್ರ ಸಚಿವ ಅಮಿತ್ ಶಾ

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ಕೇಂದ್ರ ಸರ್ಕಾರ ಶೀಘ್ರವೇ ಸ್ಥಳ ಹಂಚಿಕೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಕಟಿಸಿದ್ದಾರೆ. ಕೇಂದ್ರ ಸಂಪುಟ ಸಭೆಯ ಬಳಿಕ ಶನಿವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಈ ವಿಷಯವನ್ನು ತಿಳಿಸಿದ್ದಾರೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಈ ಬಗ್ಗೆ ಹೇಳಿಕೆ ನೀಡಿ, ಅಂತ್ಯಕ್ರಿಯೆ ಮತ್ತು ಇತರ ವಿಧಿವಿಧಾನಗಳು ಮುಂದುವರಿಸಬಹುದು. ಏಕೆಂದರೆ ಟ್ರಸ್ಟ್ ರಚನೆ ಮತ್ತು ಜಾಗ …

Read More »