BigTv News
December 27, 2024
Breaking News, ರಾಯಚೂರು
ರಾಯಚೂರು : ಜಿಲ್ಲೆಯ ಅನೇಕ ವರ್ಷಗಳ ಬೇಡಿಕೆಯಾಗಿದ್ದ, ನೂತನ ಮಿನಿ ವಿಧಾನಸೌಧ ಹೊಸವರ್ಷದ ನಿಮಿತ್ತವಾಗಿ ಜನವರಿಯಲ್ಲಿ ಕಾರ್ಯಾರಂಭ ಮಾಡುವ ಮೂಲಕ ಸರ್ಕಾರ ಸಾರ್ವಜನಿಕರಿಗೆ, ಸಿಬ್ಬಂದಿಗೆ ಹೊಸ ವರ್ಷದ ಗಿಫ್ಟ್ ನೀಡಲು ಸಜ್ಜಾಗಿದೆ. ನಗರದ ಹೊರವಲಯದ ಯಕ್ಲಾಸಪೂರ ಗ್ರಾಮದಲ್ಲಿ ನೂತನ ಮಿನಿ ವಿಧಾನಸೌಧ ನಿರ್ಮಾಣದ ಕಾಮಗಾರಿಗೆ 2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಡಿಗಲ್ಲು ಹಾಕಿದ್ದರು. ಕಾಮಗಾರಿ ಅಂತಿಮ ಹಂತದಲ್ಲಿದ್ದು, ಅಂದುಕೊಂಡಂತೆ ಆದರೆ ಜನವರಿ ಮೊದಲನೆ ವಾರ ನೂತನ ಮಿನಿ ವಿಧಾನಸೌಧ ಕಾರ್ಯಾರಂಭವಾಗಲಿದೆ ಎಂದು …
Read More »
Shaikh BigTv
December 27, 2024
Breaking News, ಧಾರವಾಡ
ಧಾರವಾಡ : ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ನರೇಂದ್ರ ಹಾಗೂ ಚಿಕ್ಕಮಲ್ಲಿಗವಾಡ ಗ್ರಾಮ ಪಂಚಾಯತಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ವಿಕಲಚೇತನರು ಜನವರಿ 17, 2025 ರೊಳಗಾಗಿ ಅರ್ಜಿ ನಮೂನೆಯಲ್ಲಿ ವೈಯಕ್ತಿಕ ವಿವರಗಳನ್ನು ಬರೆದು ಧಾರವಾಡ ತಾಲೂಕಾ ಪಂಚಾಯತಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತ (ಎಂಆರ್‍ಡಬ್ಲ್ಯೂ)ರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ …
Read More »
BigTv News
December 27, 2024
Breaking News, ಬೆಳಗಾವಿ
ಬೆಳಗಾವಿ: ದೇಶದ ಬೆಳವಣಿಗೆಗಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ರಚಿಸಿದ ಸುಧಾರಣೆಗಳ ಬಗ್ಗೆ ಎಲ್ಲ ವಿದ್ಯಾರ್ಥಿಗಳು ಕಲಿಯಲು ನೆರವಾಗುವಂತೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನೆ ಮತ್ತು ಅಧ್ಯಯನ ಕೇಂದ್ರವನ್ನು ಪ್ರಾರಂಭಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆಯನ್ನು ಎಂದಿಗೂ ಬದಲಾಯಿಸಲು ಸಾಧ್ಯವಿಲ್ಲ ಎಂದರು. ಹಣೆಬರಹ ನಮ್ಮ ಕೈಯಲ್ಲಿಲ್ಲ. ಆದರೆ, ಮನಮೋಹನ್ ಸಿಂಗ್ ಅವರು ಇನ್ನಿಲ್ಲವಾದರೂ ಅವರು …
Read More »
BigTv News
December 27, 2024
Breaking News, ಕಲಬುರಗಿ
ಚಿಂಚೋಳಿ: ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಒಳಗೊಂಡು ನಾಲ್ವರು ಅಧಿಕಾರಿಗಳ ತಂಡ ಶುಕ್ರವಾರ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಪತ್ರಕರ್ತರು, ರೈತರು ಸೇರಿದಂತೆ ಯಾರನ್ನೂ ಒಳಗಡೆ ಬಿಡದೇ ಅಧಿಕಾರಿಗಳು, ವಕೀಲರು ಸಭೆ ನಡೆಸುತಿದ್ದಾರೆ. ಮಾಧ್ಯಮದವರಿಗೆ ಒಳಗಡೆ ಪ್ರವೇಶ ನಿರಾಕರಿಸಲಾಗಿದೆ. ತಾಲ್ಲೂಕಿನ ವಿವಿಧ ಹಳ್ಳಿಗಳು ಹಾಗೂ ತಾಲ್ಲೂಕುಗಳಿಂದ ರೈತರನ್ನು …
Read More »
Shaikh BigTv
December 27, 2024
Breaking News, Crime, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಇಲ್ಲಿನ ನಗರದ ಹೊರವಲಯದ ಗದಗ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದ್ದು, ಕೊಲೆ ಮಾಡಿದ ಆರೋಪಿತರನ್ನು ಆದಷ್ಟು ಬೇಗ ಬಂಧನ ಮಾಡಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹೇಳಿದರು. ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, 38 ವರ್ಷದ ಸ್ಯಾಮ್ಯೂಯಲ್ ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದು, ಈತ ಹಂದಿ …
Read More »
BigTv News
December 27, 2024
Breaking News, ಬೆಳಗಾವಿ
ಬೆಳಗಾವಿ: ಡಿಸೆಂಬರ್ 26 ರಂದು ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶದ ಆರ್ಥಿಕತೆಯ ಮೇಲೆ ‘ದೊಡ್ಡ ಛಾಪು’ ಮೂಡಿಸಿದ್ದಾರೆ. ಅತ್ಯಂತ ಗೌರವಾನ್ವಿತ ವ್ಯಕ್ತಿಯಾಗಿರುವ ಸಿಂಗ್, ಸರಳ, ಸಜ್ಜನ ಮತ್ತು ಪ್ರಾಮಾಣಿಕ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹೇಳಿದ್ದಾರೆ. ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿದೆ. ಸಿಂಗ್ ಅವರ ಜೀವನವು ಒಂದು ರೀತಿಯಲ್ಲಿ …
Read More »
BigTv News
December 27, 2024
Breaking News, ಕೊಪ್ಪಳ
ಕೊಪ್ಪಳ: ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರಿಂದ ಜನವರಿ 6ರಂದು ಕೊಪ್ಪಳ ಬಂದ್ ಗೆ ಕರೆ ನೀಡಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಸಮಿತಿ ಮುಖಂಡರು ತಿಳಿಸಿದ್ದಾರೆ. ಸಮಿತಿಯ ಮುಖಂಡರಾದ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಹನುಮೇಶ ಕಡೆಮನಿ, ಟಿ.ರತ್ನಾಕರ, ಈಶಪ್ಪ ಶಿರೂರು ಹಾಗೂ ಕೆ.ಎಸ್. ಮೈಲಾರಪ್ಪ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಸಂಸತ್ತಿನ ಅಧಿವೇಶನದಲ್ಲಿ ನಡೆದ ಚರ್ಚೆ ವೇಳೆ …
Read More »
BigTv News
December 27, 2024
Breaking News, ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಗುರುವಾರ ಇಲ್ಲಿಯ ತಾಲ್ಲೂಕು ಕಚೇರಿ, ಉಪವಿಗಾಧಿಕಾರಿಗಳ ಹಾಗೂ ಉಪನೋಂದಣಿ ಅಧಿಕಾರಿಗಳ ಕಚೇರಿಗೆ ದಿಢೀರ್ ಭೇಟಿ ನೀಡಿದರು. ಬೆಳಗ್ಗೆ 10.20ಕ್ಕೆ ಭೇಟಿ ನೀಡಿದಾಗ ಸಾರ್ವಜನಿಕರ ಹೊರತಾಗಿ ಯಾವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಯಲ್ಲಿ ಇರಲಿಲ್ಲ. ಎಲ್ಲಾ ಖುರ್ಚಿಗಳು ಖಾಲಿ ಇರುವುದನ್ನು ಕಂಡ ಸಚಿವರು ಗರಂ ಆದರು. ಕೂಡಲೇ ಜಿಲ್ಲಾಧಿಕಾರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಕಚೇರಿಯಲ್ಲಿ ತಾವು ಕಂಡ ದೃಶ್ಯವನ್ನು ಖಾರವಾಗಿಯೇ ಹೇಳಿದರು. …
Read More »
BigTv News
December 27, 2024
Breaking News
ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 92 ನೇ ವಯಸ್ಸಿನಲ್ಲಿ ನಿಧನರಾದರು. ಅವರ ನಿಧನದ ನಂತರ ಭಾರತ ಮಾತ್ರವಲ್ಲದೆ ವಿಶ್ವದಾದ್ಯಂತದ ರಾಜಕಾರಣಿಗಳು ದುಃಖ ವ್ಯಕ್ತಪಡಿಸಿದ್ದಾರೆ. ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಕೂಡ ಸಂತಾಪ ಸೂಚಿಸಿದ್ದು, ಭಾರತವು ಇಂದು ತನ್ನ ಅತ್ಯಂತ ಅದ್ಭುತ ಮಗನನ್ನು ಕಳೆದುಕೊಂಡಿದೆ ಎಂದು ಹೇಳಿದರು. ಮನಮೋಹನ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿರುವ ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ. ಭಾರತವು ತನ್ನ ಅತ್ಯಂತ …
Read More »
BigTv News
December 27, 2024
Breaking News, ಚೀನಾ
ಬೀಜಿಂಗ್: ವಿಶ್ವದಲ್ಲೇ ಅತಿ ದೊಡ್ಡದಾದ ಅಣೆಕಟ್ಟು ನಿರ್ಮಾಣಕ್ಕೆ ಚೀನಾ ಒಪ್ಪಿಗೆ ನೀಡಿದೆ. ಭೂಮಿ ಮೇಲಿನ ಅತ್ಯಂತ ದೊಡ್ಡ ಯೋಜನೆ ಇದಾಗಿದ್ದು, 137 ಬಿಲಿಯನ್ ಡಾಲರ್ (₹11.67 ಲಕ್ಷ ಕೋಟಿ) ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಬ್ರಹ್ಮಪುತ್ರ ನದಿಗೆ ಈ ಅಣೆಕಟ್ಟು ನಿರ್ಮಿಸಲು ಉದ್ದೇಶಿಸಿದ್ದು, ಈ ನದಿ ನೀರಿನಲ್ಲಿ ಪಾಲು ಹೊಂದಿರುವ ಭಾರತ ಹಾಗೂ ಬಾಂಗ್ಲಾದೇಶ ಕಳವಳ ವ್ಯಕ್ತಪಡಿಸಿವೆ. ಚೀನಾ ಸರ್ಕಾರವು ಯರ್ಲಿಂಗ್ ಝಿಂಗ್ಬೊ (ಭಾರತದಲ್ಲಿ ಬ್ರಹ್ಮಪುತ್ರ) ನದಿಯ ಕೆಳಭಾಗದಲ್ಲಿ ಜಲವಿದ್ಯುತ್ ಯೋಜನೆ ಕೈಗೆತ್ತಿಕೊಳ್ಳಲು ಒಪ್ಪಿಗೆ …
Read More »