Breaking News

Breaking News

ದೆಹಲಿಯ ನಿವಾಸಕ್ಕೆ ಮನಮೋಹನ್ ಸಿಂಗ್ ಪಾರ್ಥಿವ ಶರೀರ: ಅಂತಿಮ ದರ್ಶನ ಪಡೆದ ಕೇಂದ್ರ ಸಚಿವ ಅಮಿತ್ ಶಾ

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಗಮಿಸಿದ್ದು, ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ …

Read More »

ಫೆಬ್ರವರಿಯ ಬಜೆಟ್‌ ನಲ್ಲಿ ವಾರ್ಷಿಕ 15 ಲಕ್ಷ ರೂ.ವರೆಗಿನ ಆದಾಯ ತೆರಿಗೆ ಕಡಿತಗೊಳಿಸುವ ಸಾಧ್ಯತೆ

ನವದೆಹಲಿ: ಮಧ್ಯಮ ವರ್ಗದವರಿಗೆ ಪರಿಹಾರ ಒದಗಿಸಲು ಮತ್ತು ಆರ್ಥಿಕತೆಯು ನಿಧಾನವಾಗುತ್ತಿದ್ದಂತೆ ಬಳಕೆಯನ್ನು ಹೆಚ್ಚಿಸಲು ಫೆಬ್ರವರಿಯ ಬಜೆಟ್ನಲ್ಲಿ ವರ್ಷಕ್ಕೆ 15 ಲಕ್ಷ ರೂ.ವರೆಗಿನ ಆದಾಯ ತೆರಿಗೆಯನ್ನು ಕಡಿತಗೊಳಿಸಲು ಕೇಂದ್ರ ಪರಿಗಣಿಸುತ್ತಿದೆ ಎಂದು ಸರ್ಕಾರದ ಮೂಲಗಳು ರಾಯಿಟರ್ಸ್ಗೆ ತಿಳಿಸಿವೆ. ವಸತಿ ಬಾಡಿಗೆಯಂತಹ ವಿನಾಯಿತಿಗಳನ್ನು ತೆಗೆದುಹಾಕುವ 2020 ರ ತೆರಿಗೆ ವ್ಯವಸ್ಥೆಯನ್ನು ಆರಿಸಿಕೊಂಡರೆ, ಈ ಕ್ರಮವು ಹತ್ತು ಮಿಲಿಯನ್ ತೆರಿಗೆದಾರರಿಗೆ, ವಿಶೇಷವಾಗಿ ಹೆಚ್ಚಿನ ಜೀವನ ವೆಚ್ಚದಿಂದ ಹೊರೆಯಾಗಿರುವ ನಗರವಾಸಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಈ ವ್ಯವಸ್ಥೆಯಲ್ಲಿ, …

Read More »

ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು, ರಾಜ್ಯದಲ್ಲಿ ಒಂದು ವಾರ ಶೋಕಾಚರಣೆ: ಡಿಸಿಎಂ ಡಿಕೆಶಿ

ಬೆಳಗಾವಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ ನಡೆದ ತುರ್ತು ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾವೇಶ ನಡೆಯಬೇಕಿದ್ದ ವೇದಿಕೆಯಲ್ಲಿಯೇ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ …

Read More »

ಬ್ಯಾಂಕುಗಳು ಕ್ರೆಡಿಟ್ ಕಾರ್ಡ್‌ ಗಳ ಬಾಕಿ ಮೇಲೆ ಶೇ.30 ಕ್ಕಿಂತ ಹೆಚ್ಚಿನ ಬಡ್ಡಿ ವಿಧಿಸಬಹುದು: ಸುಪ್ರೀಂ ಕೋರ್ಟ್‌ ತೀರ್ಪು

ನವದೆಹಲಿ: ಕ್ರೆಡಿಟ್ ಕಾರ್ಡ್ ಗಳ ಬಾಕಿ ಮೇಲೆ ಬ್ಯಾಂಕುಗಳು ಶೇಕಡ 30ಕ್ಕಿಂತ ಹೆಚ್ಚಿನ ಬಡ್ಡಿ ವಿಧಿಸಬಹುದಾಗಿದೆ ಇಂತಿಷ್ಟೇ ಬಡ್ಡಿ ವಿಧಿಸಬೇಕು ಎಂದು ಕಡ್ಡಾಯ ಮಾಡುವುದು 1949ರ ಬ್ಯಾಂಕಿಂಗ್ ರೆಗ್ಯುಲೇಷನ್ ಕಾಯ್ದೆಯ ಉದ್ದೇಶಕ್ಕೆ ವಿರುದ್ಧವಾದ ನಿಲುವಾಗುತ್ತದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ಮೂಲಕ ವಾರ್ಷಿಕ ಶೇಕಡ 30ಕ್ಕಿಂತ ಹೆಚ್ಚಿನ ಬಡ್ಡಿ ವಿಧಿಸಬಾರದು, ಹಾಗೆ ಮಾಡುವುದು ಗ್ರಾಹಕರ ಶೋಷಣೆಯಾಗುತ್ತದೆ ಎಂದು ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಆಯೋಗ 16 ವರ್ಷಗಳ ಹಿಂದೆ …

Read More »

ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ: ಕೇಂದ್ರ ಸಚಿವ ಕುಮಾರಸ್ವಾಮಿ

ಮಂಡ್ಯ: ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ವಿವಿಧ ವರ್ಗಗಳ ಜನರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಹಲವಾರು ಯೋಜನೆಗಳಿವೆ. ಅವುಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಲ್ಲಿಸಿದರೆ ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದಕ್ಕೆ ಸಿದ್ಧನಿದ್ದೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಸಂಸದ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ವಲಯ, …

Read More »

2027ಕ್ಕೆ ತುಮಕೂರು-ರಾಯದುರ್ಗ ರೈಲ್ವೆ ಕಾಮಗಾರಿ ಪೂರ್ಣ: ಕೇಂದ್ರ ಸಚಿವ ವಿ.ಸೋಮಣ್ಣ

ಮಧುಗಿರಿ: ತುಮಕೂರು -ರಾಯದುರ್ಗ ರೈಲ್ವೆ ಕಾಮಗಾರಿಯನ್ನು 2027ರ ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳಿಸುವ ಜೊತೆಗೆ ಕ್ಷೇತ್ರದ ಶ್ರೀಸಾಮಾನ್ಯರ ಅಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತೇನೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು. ತಾಲೂಕಿನ ದೊಡ್ಡೇರಿ ಮತ್ತು ಮಿಡಿಗೇಶಿ ಹೋಬಳಿಗಳಲ್ಲಿ ಗುರುವಾರ ಏರ್ಪಡಿಸಿದ್ದ ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ಉಚಿತ ಸಲಕರಣಾ ವಿತರಣೆ ಮತ್ತು ಸಾರ್ವಜನಿಕ ಕುಂದು ಕೊರತೆ ಸಭೆ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ …

Read More »

ಬಾಲ್ಕಿಯ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಒತ್ತಾಯ

ಬೆಂಗಳೂರು: ಕಲ್ಯಾಣ ಕರ್ನಾಟಕದ ಭಾಲ್ಕಿಯ ಗುತ್ತಿಗೆದಾರ ಸಚಿನ್ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ಮಾಡಿಸಬೇಕು. ಸತ್ಯಾಸತ್ಯತೆ ಹೊರಬರಬೇಕಿದೆ. ಈ ವಿಷಯದಲ್ಲಿ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆಯನ್ನು ಸಿದ್ದರಾಮಯ್ಯನವರು ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನ್ಯಾಯಾಂಗ ತನಿಖೆ, ಸಚಿವರ ರಾಜೀನಾಮೆ ಪಡೆಯದೆ ಇದ್ದರೆ ಬಿಜೆಪಿ ಇದರ ಬಗ್ಗೆ ಪ್ರಬಲ ಹೋರಾಟ ಮಾಡಲಿದೆ ಎಂದು ಅಶ್ವತ್ಥನಾರಾಯಣ್ …

Read More »

402 ಪಿಎಸ್ಐ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯ ಪೊಲೀಸ್ ನೇಮಾಕಾತಿ ವಿಭಾಗವು 402 ಸಬ್ ಇನ್ ಸ್ಪೆಕ್ಟರ್ ನೇಮಕಾತಿ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಪೊಲೀಸ್ ನೇಮಕಾತಿ ವಿಭಾಗವು 2023ರ ಫೆ.1 ರ ಸುತ್ತೋಲೆ ಅನ್ವಯ ಈ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಆಯ್ಕೆ ಪಟ್ಟಿಯೂ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವ ಮೇಲ್ಮನವಿಯ ಅಂತಿಮ ತಿರ್ಪಿಗೆ ಒಳಪಟ್ಟಿರುತ್ತದೆ. ಹಾಗೆಯೇ 2020 ರ ಜು.6 ರ ಸುತ್ತೋಲೆ ಅನ್ವಯ ಆಯ್ಕೆ ಪಟ್ಟಿಯಿಂದ ಹೊರುಗಳಿಯುವ ಕಲ್ಯಾಣ ಕರ್ನಾಟಕ ವೃಂದದ …

Read More »

ಧೀಮಂತ ನಾಯಕ ಡಾ.ಮನಮೋಹನ್ ಸಿಂಗ್ ಅವರ ಕೊಡುಗೆ ಕೊಂಡಾಡಿದ ಪ್ರಧಾನಿ ಮೋದಿ, ಕೇಂದ್ರ ಸಚಿವ ರಾಜನಾಥ್ ಸಿಂಗ್

ನವದೆಹಲಿ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರು ನಿನ್ನೆ (ಡಿಸೆಂಬರ್ 26) ನಿಧನರಾಗಿದ್ದಾರೆ. ನವದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮನಮೋಹನ್ ಸಿಂಗ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಎಲ್ಲಾ ಪಕ್ಷದ ರಾಜಕೀಯ ಗಣ್ಯರು ಏಮ್ಸ್ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ರಾಜಕೀಯ ನಾಯಕರು ಧೀಮಂತ ನಾಯಕ ಮನಮೋಹನ್ ಸಿಂಗ್ ಅವರ ನಿಧಾನಕ್ಕೆ ಸಂತಾಪ ಸೂಚಿಸಿದ್ದು, ಡಾ …

Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ: ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

ಬೆಂಗಳೂರು : ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸಿದ್ದು, ದಿವಂಗತರ ಗೌರವಾರ್ಥವಾಗಿ ದಿನಾಂಕ:27.12.2024 ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಿದೆ. ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. …

Read More »