BigTv News
December 26, 2024
Breaking News
ನವದೆಹಲಿ: ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನ್‌ಮೋಹನ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನ್‌ಮೋಹನ್ ಸಿಂಗ್ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು. ಇಂದು ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿತ್ತು. ಈ ಬಗ್ಗೆ ರಾಬರ್ಟ್ ವಾದ್ರಾ ಟ್ವೀಟ್ ಮಾಡಿದ್ದು, ಮಾಜಿ ಪ್ರಧಾನಿ …
Read More »
BigTv News
December 26, 2024
Breaking News, ಬೆಳಗಾವಿ
ಬೆಳಗಾವಿ: ಮಹಾತ್ಮ ಗಾಂಧಿ ಅಧ್ಯಕ್ಷತೆಯ ಐತಿಹಾಸಿನ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಸ್ಮರಣಾರ್ಥ ಬೆಳಗಾವಿಯಲ್ಲಿ ʼಗಾಂಧಿ ಭಾರತʼ ಕಾರ್ಯಕ್ರಮಗಳು ಇಂದು ಆರಂಭವಾಗಿವೆ. ಡಿ.26 ಮತ್ತು 27ರಂದು ಎರಡು ದಿನಗಳ ಕಾರ್ಯಕ್ರಮದ ಮೊದಲ ದಿನದ ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸಭೆ ಇಂದು ಮಧ್ಯಾಹ್ನ ಆರಂಭವಾಯಿತು. ಬೆಳಗಾವಿಯ ವೀರಸೌಧದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಶುರವಾಗಿದ್ದು, ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. …
Read More »
Shaikh BigTv
December 26, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡು ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂಬತ್ತು ಮಾಲಾಧಾರಿಗಳ ಪೈಕಿ ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (18) ಮೃತಪಟ್ಟಿದ್ದಾರೆ. ಈ ಇಬ್ಬರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸರ್ಕಾರ ಘೋಷಣೆ ಮಾಡಿದೆ. ಮೃತ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವ ಸಂತೋಷ್ …
Read More »
BigTv News
December 26, 2024
Breaking News
ನವದೆಹಲಿ:” ಐದು ವರ್ಷಗಳಲ್ಲಿ 2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳನ್ನು (ಪಿಎಸಿಎಸ್) ರಚಿಸುವ ಗುರಿಯನ್ನು ಹೊಂದಿದ್ದೇವೆ… ಇದು 5 ವರ್ಷಗಳನ್ನು ತೆಗೆದುಕೊಳ್ಳುವುದಿಲ್ಲ, ಅದಕ್ಕೂ ಮೊದಲು ನಾವು 2 ಲಕ್ಷ ಪಿಎಸಿಎಸ್ ಅನ್ನು ಸ್ಥಾಪಿಸುತ್ತೇವೆ.ಕಳೆದ ಮೂರು ತಿಂಗಳಲ್ಲಿ ನಾವು 10,000 ಪಿಎಸಿಎಸ್ ಗಳನ್ನು ಸ್ಥಾಪಿಸಿದ್ದೇವೆ.” ಎಂದು ಅಮಿತ್ ಶಾ ಹೇಳಿದ್ದಾರೆ.. ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಡೈರಿ ಮತ್ತು ಮೀನುಗಾರಿಕೆ ಸಹಕಾರ ಸಂಘಗಳ …
Read More »
BigTv News
December 26, 2024
Breaking News
ನವದೆಹಲಿ: ಕೇಂದ್ರ ಸರ್ಕಾರಿ ನೌಕರರು 8 ನೇ ವೇತನ ಆಯೋಗದ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ. ಈ ಆಯೋಗವು ಹಣದುಬ್ಬರ ಮತ್ತು ಇತರ ಆರ್ಥಿಕ ಪರಿಸ್ಥಿತಿಗಳಿಗೆ ಕಾರಣವಾಗುವ ಸರ್ಕಾರಿ ನೌಕರರು ಮತ್ತು ನಿವೃತ್ತರ ವೇತನ ಮತ್ತು ಪಿಂಚಣಿ ಹೊಂದಾಣಿಕೆಗಳನ್ನು ಪರಿಹರಿಸುವ ನಿರೀಕ್ಷೆಯಿದೆ. ಇನ್ನೂ ಯಾವುದೇ ಅಧಿಕೃತ ಪ್ರಕಟಣೆ ಇಲ್ಲದಿದ್ದರೂ, ಮುಂದಿನ ವರ್ಷದ ಆರಂಭದಲ್ಲಿ ಸುದ್ದಿ ಬರಬಹುದು ಎಂದು ಅನೇಕರು ನಂಬುತ್ತಾರೆ. 8 ನೇ ವೇತನ ಆಯೋಗದ ಶಿಫಾರಸುಗಳ ಸಂಭಾವ್ಯ ಅನುಷ್ಠಾನವು ಕೇಂದ್ರ …
Read More »
BigTv News
December 26, 2024
Breaking News, ಬೆಂಗಳೂರು
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಸರಿಸಲಾಗಿದ್ದ ‘ವಿವೇಕ’ ಶಾಲೆಗಳಿಗೆ ಪರ್ಯಾಯವಾಗಿ ಪ್ರತಿ ಹೋಬಳಿ ಕೇಂದ್ರದಲ್ಲೂ ‘ಗಾಂಧಿ ವಸತಿ ಶಾಲೆ’ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಳಗಾವಿಯಲ್ಲಿ 1924ರಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಶತಮಾನೋತ್ಸವದ ನೆನಪಿಗಾಗಿ ಈಗಾಗಲೇ ‘ಗಾಂಧಿ ಭಾರತ’ ಕಾರ್ಯಕ್ರಮಗಳನ್ನು ವರ್ಷವಿಡೀ ಆಯೋಜಿಸಿದ್ದು, ಅದರ ಮುಂದುವರಿದ ಭಾಗವಾಗಿ ಗಾಂಧಿ ವಸತಿ ಶಾಲೆಗಳನ್ನು ತೆರೆಯಲಾಗುತ್ತಿದೆ. ಈ ಯೋಜನೆಯನ್ನು ಬೆಳಗಾವಿ ಕಾರ್ಯಕ್ರಮದ ಬದಲು, 2025-26ನೇ ಸಾಲಿನ ಬಜೆಟ್‌ನಲ್ಲೇ ಘೋಷಣೆ ಮಾಡಲು …
Read More »
BigTv News
December 26, 2024
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕದಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಸಜ್ಜಾಗಿರುವ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಮಿನಿ ಏರ್‌ಪೋರ್ಟ್’ ನಿರ್ಮಿಸುವ ಯೋಜನೆಗೆ ಕೈ ಹಾಕಿದೆ. ಆರಂಭಿಕ ಹಂತದಲ್ಲಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಜಾಗ ಅಂತಿಮ ಮಾಡಿರುವ ಸರ್ಕಾರ ಡಿಪಿಆರ್ ಸಿದ್ಧಪಡಿಸುವಲ್ಲಿ ನಿರತವಾಗಿದೆ. ಭವಿಷ್ಯದಲ್ಲಿ ಇದರಿಂದ ಪ್ರವಾಸೋದ್ಯಮಕ್ಕೆ ಭಾರೀ ಉತ್ತೇಜನ ಸಿಗುವ ವಿಶ್ವಾಸ ಇದೆ. ಪ್ರವಾಸೋದ್ಯಮ ಬೆಂಬಲಿಸುವುದು ಮಾತ್ರವಲ್ಲದೇ ಕೈಗಾರಿಕೆ ಅಭಿವೃದ್ಧಿ, ನೈಸರ್ಗಿಕ ವಿಕೋಪಗಳು ಎದುರಾದ ಸಂದರ್ಭದಲ್ಲಿ ತ್ವರಿತಗತಿಯಲ್ಲಿ …
Read More »
BigTv News
December 26, 2024
Breaking News, ಬೆಳಗಾವಿ
ಬೆಳಗಾವಿ : “ಗಾಂಧಿ ಭಾರತ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಇಂದು (ಡಿ.26) ಗಂಗಾಧರ ದೇಶಪಾಂಡೆ ಅವರ ಸ್ಮಾರಕ ಭವನ ಮತ್ತು ಛಾಯಾಚಿತ್ರ ಗ್ಯಾಲರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಸ್ಮಾರಕ ಭವನ ಅಂದಾಜು 15 ಗುಂಟೆ ಜಾಗೆಯಲ್ಲಿ 1.58 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಸ್ಥಳದಲ್ಲಿ ಸ್ಮಾರಕ ಭವನ, ದೇಶಪಾಂಡೆ ಅವರ ಪುತ್ಥಳಿ, ಫೋಟೋ ಗ್ಯಾಲರಿ, ಆವರಣದ ಕಾಂಪೌಂಡ್, ತಂತಿಬೇಲಿ, ಪೇವರ್ಸ್ ಹಾಗೂ ಉದ್ಯಾನವನ ನಿರ್ಮಿಸಲಾಗಿದೆ. …
Read More »
BigTv News
December 26, 2024
Breaking News, ಮೈಸೂರು
ಮೈಸೂರು: ಜನವರಿ ಎರಡನೇ ವಾರದಲ್ಲಿ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂದಿನ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. ಚಾಮರಾಜನಗರ ಜಿಲ್ಲೆಯ ಆದಿವಾಸಿಗಳು ಸೇರಿದಂತೆ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು 2002 ರಲ್ಲಿ ಬಿಳಿಗಿರಿರಂಗ ಬೆಟ್ಟದಲ್ಲಿ ಅಂದಿನ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು, …
Read More »
BigTv News
December 26, 2024
Breaking News
ಸಿಂಧನೂರು: ಫುಟ್‍ಪಾತ್ ಅತಿಕ್ರಮಿಸಿ ನಿರ್ಮಿಸಿದ್ದ ಶೆಡ್ ಮತ್ತು ಡಬ್ಬಾ ಅಂಗಡಿಗಳನ್ನು ನಗರದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಬುಧವಾರ ಬೆಳಗಿನಿಂದ ಸಂಜೆವರೆಗೆ ಸ್ವಯಂಪ್ರೇರಣೆಯಿಂದ ತೆರವು ಕಾರ್ಯಾಚರಣೆ ನಡೆಸಿದ ಹಿನ್ನೆಲೆಯಲ್ಲಿ ಅಘೋಷಿತ ನಿಷೇದಾಜ್ಞೆ ಜಾರಿಯಾದಂತೆ ಕಂಡುಬಂತು. ಲಿಂಗಸುಗೂರು ಸಹಾಯಕ ಆಯುಕ್ತ ಬಸವಣೆಪ್ಪ ಕಲ್‍ಶೆಟ್ಟಿ, ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ಸೇರಿದಂತೆ ಡಿವೈಎಸ್‍ಪಿ, ನಗರಸಭೆ ಪೌರಾಯುಕ್ತ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಸರ್ಕಲ್ ಇನ್ಸ್‌ಪೆಕ್ಟರ್ ಮತ್ತಿತರ ಅಧಿಕಾರಿಗಳು ಬುಧವಾರ ಸಂಜೆ ಸುಮಾರು 500ಕ್ಕೂ ಅಧಿಕ ಪೊಲೀಸರ …
Read More »