Shaikh BigTv
December 24, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..? ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮನ್ನ ಅಸಮರ್ಥ ಸಚಿವ ಎಂಬ ಕೇಂದ್ರ ಸಚಿವ ಜೋಶಿ ಅವರ ಹೇಳಿಕೆಗೆ ತಿರುಗೇಟು ನೀಡಿದರು. ಸಿ.ಟಿ. ರವಿ ಪ್ರಕರಣವನ್ನು ಈಗಾಗಲೇ ಸಿಓಡಿ ತನಿಖೆಗೆ ಒಪ್ಪಿಸಲಾಗಿದೆ. …
Read More »
BigTv News
December 24, 2024
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಸುಮಾರು 20 ತಾಲೂಕುಗಳಲ್ಲಿರುವ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಸುಮಾರು 100 ಕೋಟಿ ವೆಚ್ಚದಲ್ಲಿ 200 ಪಶು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದೂ, 20 ತಾಲೂಕುಗಳ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಇದೀಗ ರಾಜ್ಯ ಸರ್ಕಾರ ತೀರ್ಮಾನಿಸಿದೆ. 10 ಕೋಟಿ ರೂಪಾಯಿ ವೆಚ್ಚದಲ್ಲಿ ಪಶು ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಬಾಡಿಗೆ ಹಾಗೂ ಶಿಥಿಲಾವಸ್ಥೆಯಲ್ಲಿರುವ ಪಶು ಆಸ್ಪತ್ರೆಗಳನ್ನು ಮರು ನಿರ್ಮಾಣ ಮಾಡಲು ಮೇಲ್ದರ್ಜೆಗೆ ಏರಿಸಲಾಗಿದೆ. …
Read More »
BigTv News
December 24, 2024
Breaking News, ಬೆಂಗಳೂರು
ಬೆಂಗಳೂರು: ಮೆಜೆಸ್ಟಿಕ್‌ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣವನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮಾದರಿಯಲ್ಲಿ ಮರು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲು ನೈರುತ್ಯ ರೈಲ್ವೆ ಮುಂದಾಗಿದೆ. ಒಟ್ಟು ₹ 1,200 ಕೋಟಿ ವೆಚ್ಚದ ಯೋಜನೆಗೆ ಒಪ್ಪಿಗೆ ಕೋರಿ ಕೇಂದ್ರ ಸಂಪುಟದ ಮುಂದೆ ಪ್ರಸ್ತಾವ ಸಲ್ಲಿಸಲಾಗಿದೆ. ಕೆಎಸ್‌ಆರ್ ರೈಲ್ವೆ ನಿಲ್ದಾಣ, ಮೆಜೆಸ್ಟಿಕ್ ರೈಲ್ವೆ ನಿಲ್ದಾಣ, ಸಿಟಿ ರೈಲ್ವೆ ನಿಲ್ದಾಣ ಎಂದು ನಾನಾ ಹೆಸರಿನಿಂದ ಕರೆಯಲಾಗುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣವು …
Read More »
BigTv News
December 24, 2024
Breaking News, ಕಲಬುರಗಿ
ಆಳಂದ: ಅತಿವೃಷ್ಟಿ, ಅನಾವೃಷ್ಟಿ ಸಮಸ್ಯೆ ಕಾಡುತ್ತಿರುವ ದಿನಗಳಲ್ಲಿ ರೈತರೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು ಎಂದು ಜವಳಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದರು. ತಾಲ್ಲೂಕಿನ ಸರಸಂಬಾ ಗ್ರಾಮದಲ್ಲಿ ಸೋಮವಾರ ಸಮತಾ ಲೋಕ ಶಿಕ್ಷಣ ಸಮಿತಿ, ಕಲಬುರಗಿ ಕೃಷಿ ಮಹಾವಿದ್ಯಾಲಯ ಸಹೋಗದಲ್ಲಿ ಹಮ್ಮಿಕೊಂಡ ಎರಡು ದಿನದ ಸಾಸಿರನಾಡಿನ ಕೃಷಿ ಜಾತ್ರೆ ಉದ್ಘಾಟಿಸಿ ಮಾತನಾಡಿದರು. ಕಬ್ಬು, ಭತ್ತದಂತ ಬೆಳೆಗಳು ಹೆಚ್ಚು …
Read More »
BigTv News
December 24, 2024
Breaking News, ಬೆಂಗಳೂರು
ಬೆಂಗಳೂರು: ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮಾತುಕತೆ ನಡೆಸಿದ ಸಿಎಂ, ಭೂಸ್ವಾಧೀನಕ್ಕಾಗಿ ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದ್ದು, 430 ಎಕರೆಗೆ ಅಂತಿಮ …
Read More »
BigTv News
December 24, 2024
Breaking News, ತುಮಕೂರು
ತುಮಕೂರು: ಉತ್ತರ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ 4500 ಕೋಟಿ ರೂ. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಗ್ರೀನ್ ಫೀಲ್ಡ್ ಕರ್ನಾಟಕದ ದೊಡ್ಡ ಯೋಜನೆಯಾಗಲಿದೆ ಎಂದು ಹೇಳಿದರು. ಹಾಸನ, ತಿಪಟೂರು, ಹುಳಿಯಾರು, …
Read More »
BigTv News
December 24, 2024
Breaking News
ನವದೆಹಲಿ: ನರೇಂದ್ರ ಮೋದಿ ಸರ್ಕಾರವು ರೈತರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಆಗ್ರಹಿಸಿದ್ದಾರೆ. ಮಾಜಿ ಪ್ರಧಾನಿ ಚರಣ್ ಸಿಂಗ್ ಅವರ ಜನ್ಮದಿನದ ಅಂಗವಾಗಿ ‘ಎಕ್ಸ್’ ಖಾತೆಯಲ್ಲಿ ಸಂದೇಶ ನೀಡಿರುವ ಅವರು, ಭಾರತದ ಬೆನ್ನೆಲುಬು ಎನಿಸಿರುವ ರೈತರು ದೇಶದ ಹೆಮ್ಮೆಯೂ ಹೌದು. ಎಲ್ಲ ರೈತರು ಮತ್ತು ಕೃಷಿ ಕಾರ್ಮಿಕರಿಗೆ ಕಿಸಾನ್ ದಿವಸ್‌ನ ಶುಭಾಶಯಗಳು. ರೈತರ ಪರವಾಗಿ ಹೋರಾಟ ನಡೆಸಿರುವ ಮಾಜಿ ಪ್ರಧಾನಿ ಚೌಧರಿ ಚರಣ್ …
Read More »
BigTv News
December 23, 2024
Breaking News, ಮೈಸೂರು
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ಆಸಕ್ತಿ ತೋರುತ್ತಿಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು. ಇಲ್ಲಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಇಂದು ರೈತ ಸಂಘಟನೆಗಳ ಒಕ್ಕೂಟ ಹಾಗೂ ರೈತ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ರೈತ ದಿನಾಚರಣೆ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ರೈಲ್ವೆ ಇಲಾಖೆಯಲ್ಲಿ 12 ಲಕ್ಷ ನೌಕರರಿದ್ದಾರೆ. ದಕ್ಷಿಣ ಭಾರತದಲ್ಲಿ ಶೇ 99ರಷ್ಟು ಉತ್ತರ ಭಾರತದ ಸಿಬ್ಬಂದಿಯೇ ಇದ್ದಾರೆ. ಕನ್ನಡಿಗರಿಗೂ ಅವಕಾಶ …
Read More »
BigTv News
December 23, 2024
Breaking News, ಬೆಂಗಳೂರು
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು. ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1,777 ಎಕರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದುಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎನ್ನುವ ರೈತರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ 430 …
Read More »
Shaikh BigTv
December 23, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಸಾವಿನ ಹೆದ್ದಾರಿ ಎಂದೇ ಕುಖ್ಯಾತಿಗೆ ಪಾತ್ರ ಆಗಿರುವ ಹುಬ್ಬಳ್ಳಿ – ಧಾರವಾಡ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯ ಬಗ್ಗೆ ಸಚಿವ ಪ್ರಹ್ಲಾದ ಜೋಶಿ ಅವರು ಬಿಗ್ ಅಪ್ಡೇಟ್ಸ್ ಕೊಟ್ಟಿದ್ದಾರೆ. ಈ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ಅವ್ಯಸ್ಥೆಯಿಂದ ಈ ಭಾಗದ ಜನ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳಿಂದ ನೂರಾರು ಜನ ಸಾವನ್ನಪ್ಪಿದ್ದಾರೆ. ಅಲ್ಲದೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ರಸ್ತೆಯನ್ನು ಅಗಲೀಕರಣ ಮಾಡಬೇಕು …
Read More »