Breaking News

Breaking News

ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಿ: ರೈತರ ನಿಯೋಗದಿಂದ ಸಿಎಂ ಸಿದ್ದರಾಮಯ್ಯರಿಗೆ ಮನವಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು. ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1777 ಎಕ್ರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ರೈತರ ನಿಯೋಗ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. …

Read More »

ಸಿಎಂ ಸಿದ್ದರಾಮಯ್ಯ ನೇತೃತ್ವದ ಸಮಿತಿ ಸಭೆಯಲ್ಲಿ ₹9,823 ಕೋಟಿ ಹೂಡಿಕೆ ಯೋಜನೆಗಳಿಗೆ ಒಪ್ಪಿಗೆ: 5,605 ಉದ್ಯೋಗ ಸೃಷ್ಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64ನೇ ಸಭೆಯು ಒಟ್ಟು ₹9,823.31 ಕೋಟಿ ಬಂಡವಾಳ ಹೂಡಿಕೆಯ ಒಂಬತ್ತು ಯೋಜನೆಗಳಿಗೆ ಹಸಿರು ನಿಶಾನೆ ತೋರಿಸಿದೆ. ಇದರಿಂದ 5,605 ಉದ್ಯೋಗಗಳು ಸೃಷ್ಟಿಯಾಗಲಿವೆ. ಇಂದು ಕೃಷ್ಣಾ ದಲ್ಲಿ ನಡೆದ ಸಭೆಯಲ್ಲಿ ಬೃಹತ್ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಚೆಲುವರಾಯಸ್ವಾಮಿ, ಸರಕಾರದ ಮುಖ್ಯ …

Read More »

ಕೇಂದ್ರ ಸರ್ಕಾರ ರಾಜ್ಯಕ್ಕೆ ವಸೂಲಿ ಆಗುವ ತೆರಿಗೆಯ ಅರ್ಧಭಾಗ ನೀಡಬೇಕು: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ಸರಿಯಾದ ಪಾಲು ನೀಡುತ್ತಿಲ್ಲ. ವಸೂಲಿ ಆಗುವ ತೆರಿಗೆಯಲ್ಲಿ ಅರ್ಧಭಾಗ ವಾಪಸ್ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಒಟ್ಟು ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಒಟ್ಟು 4.50 ಲಕ್ಷ ಕೋಟಿ ರೂ.ಗಳನ್ನು ಕೇಂದ್ರಕ್ಕೆ ನಮ್ಮಿಂದ ಸಂಗ್ರಹವಾಗುತ್ತಿದೆ. ಆದರೆ ನಮಗೆ ವಾಪಸ್ ನೀಡುತ್ತಿರುವುದು ಒಂದು ರೂಪಾಯಿಗೆ ಹದಿಮೂರು ಪೈಸೆ …

Read More »

ರೈತ ದೇಶದ ಬೆನ್ನೆಲುಬು, ಅವರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧ: ಪ್ರಧಾನಿ ಮೋದಿ

ನವದೆಹಲಿ : ಯುವ ಸಮೂಹವನ್ನು ಕೇಂದ್ರೀಕರಿಸಿ ಕೇಂದ್ರ ಸರ್ಕಾರದಿಂದ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದ್ದು, ಭಾರತ ಜಗತ್ತಿನ 5 ನೇ ಅತಿ ದೊಡ್ಡ ಅರ್ಥ ವ್ಯವಸ್ಥೆ ಇರುವ ದೇಶ ಎಂಬ ಹೆಗ್ಗಳಿಕೆಗಳಿಸಿದೆ ಎಂದು ಪಿಎಂ ಮೋದಿ ಹೇಳಿದ್ದಾರೆ. ಆತ್ಮನಿರ್ಭರ್ ಭಾರತ ಅಭಿಯಾನ , ಮೇಕ್ ಇನ್ ಇಂಡಿಯಾ ,ಸ್ಟಾರ್ಟ್ ಅಪ್ ಇಂಡಿಯಾ , ಡಿಜಿಟಲ್ ಇಂಡಿಯಾ , ಸ್ಟ್ಯಾಂಡ್ ಅಪ್ ಇಂಡಿಯಾ ಸೇರಿದಂತೆ ಅನೇಕ ಯೋಜನೆಗಳನ್ನು ದೇಶವಾಸಿಗಳಿಗೆ ನಮ್ಮ ಸರ್ಕಾರ …

Read More »

ಬೆಂಗಳೂರಿನಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸುವ ಬೆದರಿಕೆ: ವೈದ್ಯರೊಬ್ಬರಿಂದ 20 ಸಾವಿರ ಲಂಚ ಪಡೆದ ಬೆಸ್ಕಾಂ ಅಧಿಕಾರಿಗಳು

ಬೆಂಗಳೂರು: ಮನೆಯಿಂದಲೇ ಕ್ಲಿನಿಕ್ ನಡೆಸುತ್ತಿದ್ದ ಪರ್ಯಾಯ ಔಷಧ ವೈದ್ಯರೊಬ್ಬರಿಂದ ಹೊರಮಾವಿನ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳು, ಪವರ್ ಕನೆಕ್ಷನ್ ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಿ 20,000 ರೂ. ಲಂಚ ಪಡೆದಿರುವುದು ಬೆಳಕಿಗೆ ಬಂದಿದೆ. ಸಹಾಯಕ ಎಂಜಿನಿಯರ್ (ಎಇ) ವೀರೇಶ್ ಮತ್ತು ಅವರ ಸಹವರ್ತಿ ಸುಬ್ರಮಣಿಯನ್, ಮೀಟರ್ ರೀಡರ್, ಹಣ ನೀಡದಿದ್ದರೇ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಿದರು. ಇದಾದ ನಂತರ ಮತ್ತೊಬ್ಬ ಮೀಟರ್ ರೀಡರ್ ಸುದರ್ಶನ್ ವಿ ಕಳೆದ …

Read More »

ಮಹಾಕುಂಭಮೇಳಕ್ಕೆ ಡಿಜಿಟಲ್ ತಂತ್ರಜ್ಞಾನದ ಸ್ಪರ್ಶ: ಸರ್ಕಾರದಿಂದ ಸಿದ್ಧತೆ

ಪ್ರಯಾಗ್‌ರಾಜ್‌ : ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ಪ್ರಯಾಗ್‌ರಾಜ್‌ ನಗರ ಸಜ್ಜಾಗುತ್ತಿದೆ. ಉತ್ತರ ಪ್ರದೇಶ ಸರಕಾರ ಕಳೆದ ಐದಾರು ತಿಂಗಳಿನಿಂದಲೇ ಕುಂಭಮೇಳಕ್ಕಾಗಿ ತಯಾರಿ ನಡೆಸುತ್ತಿದ್ದು, ಈ ಸಲದ ಕುಂಭಮೇಳ ಸಂಪೂರ್ಣವಾಗಿ ಡಿಜಿಟಲ್‌ ತಂತ್ರಜ್ಞಾನದ ಸ್ಪರ್ಶದೊಂದಿಗೆ ನಡೆಯುತ್ತಿರುವುದು ವಿಶೇಷವಾಗಿದೆ. ಭಕ್ತರಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಸೌಲಭ್ಯ ಕಲ್ಪಿಸಲು ಸರಕಾರ ಸಿದ್ಧತೆ ಮಾಡಿಕೊಂಡಿದೆ. ಸಾರಿಗೆ, ಭದ್ರತೆ, ವಸತಿ, ಪಾರ್ಕಿಂಗ್‌… ಹೀಗೆ ಪ್ರತಿಯೊಂದನ್ನು ಕೂಡ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಸಿದ್ಧಗೊಳಿಸಲಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ …

Read More »

ಶತಮಾನೋತ್ಸವ ನಡೆಸಿ ಕಾಂಗ್ರೆಸ್ ಹಣ ಪೋಲು ಮಾಡುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಸಮಾವೇಶ ನಡೆಸಿ ಹಣ ಪೋಲು ಮಾಡುತ್ತಿದೆ. ಮಹಾತ್ಮ ಗಾಂಧೀಜಿಗೂ ಇಂದಿನ ಕಾಂಗ್ರೆಸ್‌ಗೂ ಏನು ಸಂಬಂಧ? ಈಗಿರುವ ಕಾಂಗ್ರೆಸ್ ನಲ್ಲಿ ಮೂಲಕ ಕಾಂಗ್ರೆಸ್ ಕಾಣುತ್ತಿಲ್ಲ. ಇದು ಇಂದಿರಾ ಗಾಂದಿ ಕಾಂಗ್ರೆಸ್ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಹೇಳಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿರುವ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಗೂ ಇಂದಿನ ಕಾಂಗ್ರೆಸ್‌ಗೂ ಏನು ಸಂಬಂಧ? ಮಹಾತ್ಮಾ ಗಾಂಧಿ ಕಾಂಗ್ರೆಸ್ …

Read More »

ನನಗೆ ಆದ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತೇನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ವಿಧಾನಪರಿಷತ್ ನಲ್ಲಿ ನಡೆದಿದ್ದ ಸಿಟಿ ರವಿಯವರ ನಿಂದನಾತ್ಮಕ ಪದ ಬಳಕೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಸಿಟಿ ರವಿ ಆ ಪದ ಬಳಕೆ ಮಾಡಿದ್ದು ನಿಜ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಇಂದು ವಿಡಿಯೋ ಬಿಡುಗಡೆ ಮಾಡಿ ಸಾಕ್ಷ್ಯ ತೋರಿಸಿದ್ದಾರೆ. ಇದನ್ನು ಮೋದಿಯವರಿಗೂ ತೋರಿಸಿ ನ್ಯಾಯ ಕೇಳುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಇನ್ನು, ನನ್ನ ಗಂಡ ಅಂತಹ ಪದ ಬಳಕೆ ಮಾಡುವವರಲ್ಲ, ಅವರನ್ನು …

Read More »

ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಕಾರ್ಖಾನೆಯನ್ನು ₹15000 ಕೋಟಿ ವೆಚ್ಚದಲ್ಲಿ ಪುನಶ್ಚೇತನಗೊಳಿಸಲು ನಿರ್ಧಾರ: ಕೇಂದ್ರ ಸಚಿವ ಎಚ್ಡಿಕೆ

ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಕೈಗಾರಿಕಾಭಿವೃದ್ಧಿಗೆ ಹೆಚ್ಚು …

Read More »

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಪಡಿತರ ಪಡೆಯಲು ಎಲ್ಲರ ವೇತನ ಪ್ರಮಾಣಪತ್ರ ಅಗತ್ಯವಿಲ್ಲ

ಕೋಲಾರ: ಸರ್ಕಾರಿ ನೌಕರರಿಗೂ ಬಿಪಿಎಲ್ ರೇಷನ್ ಕಾರ್ಡ್ ಪಡೆದಿರುವ ಬಗ್ಗೆ ಕಟ್ಟು ನಿಟ್ಟಿನ ಪರಿಶೀನೆ ಮಾಡಿ, ರದ್ದು ಪಡಿಸಲಾಗುತ್ತಿದೆ. ಈ ನಡುವೆ ಪಡಿತರ ಪಡೆಯಲು ಎಲ್ಲರ ವೇತನ ಪ್ರಮಾಣ ಪತ್ರ ಅಗತ್ಯವಿಲ್ಲ ಎಂಬುದಾಗಿ ಆಹಾರ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪಡಿತರ ಪಡೆಯಲು ಎಲ್ಲರ ವೇತನ ಪ್ರಮಾಣ ಪತ್ರ ಅಗತ್ಯವಿಲ್ಲ. ಬಿಪಿಎಲ್ …

Read More »