Breaking News

Breaking News

ನಾಡಿನ ಪ್ರತಿ ಅನ್ನದಾತನಿಗೂ ರಾಷ್ಟ್ರೀಯ ರೈತ ದಿನದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೋಟ್ಯಂತರ ಜನರ ಹಸಿವು ನೀಗಿಸುತ್ತಿರುವ ಈ ನಾಡಿನ ಪ್ರತಿ ಅನ್ನದಾತನಿಗೂ ರಾಷ್ಟ್ರೀಯ ರೈತ ದಿನದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೃಷಿ ದೇಶದ ಬೆನ್ನೆಲುಬು. ಕೃಷಿಯನ್ನು ಕೇವಲ ವೃತ್ತಿಯಾಗಿಸಿಕೊಳ್ಳದೆ, ಬದುಕಿನ ಮಾರ್ಗವಾಗಿಸಿಕೊಂಡು ಕೋಟ್ಯಂತರ ಜನರ ಹಸಿವು ನೀಗಿಸುತ್ತಿರುವ ಈ ನಾಡಿನ ಪ್ರತಿ ಅನ್ನದಾತನಿಗೂ ರಾಷ್ಟ್ರೀಯ ರೈತ ದಿನದ ಶುಭಾಶಯಗಳು ಎಂದು ಹೇಳಿದ್ದಾರೆ. ನಮ್ಮ ಸರ್ಕಾರದ ರೈತಪರವಾದ …

Read More »

ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ: ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಪೊಲೀಸರ ವಿರುದ್ಧ ಫುಲ್‌ ಗರಂ ಆಗಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿ.ಟಿ ರವಿ – ಲಕ್ಷ್ಮಿ ಹೆಬ್ಬಾಳ್ಕರ್ ಕೇಸ್ ಮುಗಿದ ಅಧ್ಯಾಯ. ಡಿ.19ರಂದೇ ಸದನದಲ್ಲಿ ರೂಲಿಂಗ್ ಕೊಟ್ಟಿದ್ದೇನೆ. ಅನಿರ್ದಿಷ್ಟಾವಧಿ ವರೆಗೆ ಮುಂದೂಡಿಕೆ ಆಗಿದೆ. ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ತಿಳಿಸಿದ್ದಾರೆ. ಮಹಜರು ಮಾಡ್ತೀನಿ …

Read More »

ಉತ್ತರ ಕರ್ನಾಟಕ ಅಭಿವೃದ್ಧಿಗೆ ಪಕ್ಷಾತೀತವಾಗಿ ಹೋರಾಡಲು ಸನ್ನದ್ಧರಾಗಬೇಕು: ಸಂಸದ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಬೆಳಗಾವಿಯಲ್ಲಿ ಕಾಟಾಚಾರದ ಅಧಿವೇಶನ ನಡೆಸಿದ್ದು, ಉತ್ತರ ಕರ್ನಾಟಕ ಈ ಸರ್ಕಾರದ ನಕ್ಷೆಯಲ್ಲಿ ಇದೆಯೋ ಇಲ್ಲವೋ ಎನ್ನುವ ಅನುಮಾನು ಮೂಡಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಪಕ್ಷಾತೀತವಾಗಿ ಚರ್ಚಿಸಿ, ಸರ್ಕಾರದ ಗಮನ ಸೆಳೆದು ಹೋರಾಟ ಮಾಡಲು ಸನ್ನದ್ಧರಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಯೋಜನೆಗಳು ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆಯಾಗಿ ಅದಕ್ಕೆ …

Read More »

ಕಳೆದ ಒಂದೂವರೆ ವರ್ಷದಲ್ಲಿ ಯುವಜನತೆಗೆ 10 ಲಕ್ಷ ಖಾಯಂ ಸರ್ಕಾರಿ ಉದ್ಯೋಗ: ಪ್ರಧಾನಿ ಮೋದಿ

ನವದೆಹಲಿ: ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಅಂದರೆ ಸುಮಾರು 10 ಲಕ್ಷ ಖಾಯಂ ಸರ್ಕಾರಿ ನೌಕರಿಯನ್ನು ಯುವ ಜನತೆಗೆ ಒದಗಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ರೋಜ್ ಗಾರ್ ಮೇಳದಲ್ಲಿ ನೇಮಕಾತಿಯಾದವರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂತಹ ಕಾರ್ಯಕ್ರಮದ ಮೂಲಕ ಇಷ್ಟೊಂದು ದಾಖಲೆ ಪ್ರಮಾಣದಲ್ಲಿ ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಉದ್ಯೋಗ ನೀಡಿರಲಿಲ್ಲ ಎಂದು ಹೇಳಿದರು. ಈ ರೋಜ್ ಗಾರ್ ಮೇಳದಲ್ಲಿ 71,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ …

Read More »

ಸಿಎಂ ಅಧ್ಯಕ್ಷತೆಯ ಸಮಿತಿ ಸಭೆಯಲ್ಲಿ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು 9,823 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಅನುಮೋದನೆ

ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ರೂ. ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಭೆಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್‌, ಚಲುವರಾಯಸ್ವಾಮಿ, ಪ್ರಿಯಾಂಕ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.ಕೋಚನಹಳ್ಳಿಯ ಎಲೆಕ್ಟ್ರಾನಿಕ್ಸ್ ಮ್ಯಾನುಫಾಕ್ಚರಿಂಗ್‌ ಕ್ಲಸ್ಟರ್‌ನಲ್ಲಿ ಸೆಮಿಕಂಡಕ್ಟರ್‌ ವಲಯದಲ್ಲಿ ರೂ. 3425 ಕೋಟಿ ವೆಚ್ಚದ ಪ್ರಥಮ …

Read More »

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. 1,205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ(ANM) ಮತ್ತು 300 ಆರೋಗ್ಯ ನಿರೀಕ್ಷಣಾಧಿಕಾರಿ(HIO) ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಪಡೆಯಲಾಗಿದ್ದು, ಕರ್ನಾಟಕ ಲೋಕಸೇವಾ ಆಯೋಗ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕಾತಿ ನಡೆಸಲಾಗುವುದು. ಆರಂಭದಲ್ಲಿ ಈ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಬಹುದು. ಈ ಮೂಲಕ ಕಾಯಂ ನೇಮಕಾತಿಯ ಸಂದರ್ಭದಲ್ಲಿ …

Read More »

ವಿಜಯಪುರ: ₹5 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಸಚಿವ ಸತೀಶ ಜಾರಕಿಹೊಳಿ ಚಾಲನೆ

ವಿಜಯಪುರ: ಪಟ್ಟಣದ ಶಿವಗಣೇಶ ಸರ್ಕಲ್‌ನಿಂದ ಶಿಡ್ಲಘಟ್ಟ ಕ್ರಾಸ್‌ವರಗೆ ₹5 ಕೋಟಿ ವೆಚ್ಚದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭಾನುವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭೂಮಿ ಪೂಜೆ ಸಲ್ಲಿಸಿದರು. ಪಟ್ಟಣದಲ್ಲಿ ಈಗಾಗಲೇ ಸುಮಾರು ₹9.5 ಕೋಟಿ ವೆಚ್ಚದಲ್ಲಿ ಕೋಲಾರ ಮುಖ್ಯರಸ್ತೆಯಲ್ಲಿ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಈಗ ಶಿವಗಣೇಶ ಸರ್ಕಲ್ ನಿಂದ 480 ಮೀಟರ್ ಉದ್ದದ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ರಸ್ತೆ ಕಾಮಗಾರಿ ಗುಣಮಟ್ಟದಲ್ಲಿರುವಂತೆ …

Read More »

ಬೆಳಗಾವಿ ಚಲೋ ನಡೆಸುವ ಬಗ್ಗೆ ಆಲೋಚನೆ: ಸಿ.ಟಿ.ರವಿ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಹಮ್ಮುರಾಬಿ ಸಿದ್ಧಾಂತದ ಮೇಲೆ ನಡೆಯುತ್ತಿದೆ. ನನ್ನನ್ನು ಬಂಧಿಸಿ ಇಡೀರಾತ್ರಿ ಸುತ್ತಾಡಿಸಿದ ಕ್ರಮದ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆ. ಬೆಳಗಾವಿ ಚಲೊ ನಡೆಸುವ ಬಗ್ಗೆಯೂ ಆಲೋಚನೆ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು. ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದ್ದಂತೆ ಕಾಣಿಸುತ್ತಿಲ್ಲ. ಕಬ್ಬಿನ ಗದ್ದೆ, ಜಲ್ಲಿ ಕ್ರಷರ್ ಬಳಿಗೆ ಪೊಲೀಸರು ಕರೆದೊಯ್ದು ಕೂರಿಸಿದ್ದರು. ಅವರಿಗೆ ಪ್ರತಿ ಅರ್ಧ ಗಂಟೆಗೊಮ್ಮೆ ಬರುತ್ತಿದ್ದ ನಿರ್ದೇಶನದಂತೆ …

Read More »

ಹವಾಮಾನ ಬದಲಾವಣೆ ಪರಿಹರಿಸುವಲ್ಲಿ ವಿಫಲವಾದರೆ ಬೆಂಗಳೂರಿಗೆ ಸಾಮೂಹಿಕ ವಲಸೆ ಹೆಚ್ಚಳ: ನಾರಾಯಣ ಮೂರ್ತಿ

ಬೆಂಗಳೂರು: ಹವಾಮಾನ ಬದಲಾವಣೆಯನ್ನು ಪರಿಹರಿಸುವಲ್ಲಿ ವಿಫಲವಾದರೆ ಬೆಂಗಳೂರು, ಪುಣೆ ಮತ್ತು ಹೈದರಾಬಾದ್‌ನಂತಹ ನಗರಗಳಿಗೆ ಸಾಮೂಹಿಕ ವಲಸೆಗೆ ಕಾರಣವಾಗಬಹುದು ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್ ನಾರಾಯಣ ಮೂರ್ತಿ ಎಚ್ಚರಿಸಿದ್ದಾರೆ. ಎಲ್ಲಾ ಪ್ರಮುಖ ಭಾರತೀಯ ನಗರಗಳು ತೀವ್ರತೆಯ ವಿವಿಧ ಹಂತಗಳಲ್ಲಿ ಒಂದೇ ರೀತಿಯ ಸವಾಲುಗಳನ್ನು ಎದುರಿಸುತ್ತಿವೆ. ಹೀಗಾಗಿ ತಪ್ಪಿಸಿಕೊಳ್ಳಲು ಬೇರೆ ಸ್ಥಳವಿಲ್ಲದೇ, ನಾವು ಅವರ ಸ್ವಂತ ನಗರಗಳಲ್ಲಿ ಈ ಸಮಸ್ಯೆಗಳನ್ನು ನಿಭಾಯಿಸಬೇಕು ಎಂದಿದ್ದಾರೆ. ಹವಾಮಾನ ಬದಲಾವಣೆಯ ಪರಿಣಾಮವನ್ನು ಪರಿಹರಿಸಲು ಎರಡು ವಿಧಾನದ ಅಗತ್ಯವಿದೆ, …

Read More »

ಕಲ್ಯಾಣ ಕರ್ನಾಟಕಕ್ಕೆ ಶುಭಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ: ಪ್ರತ್ಯೇಕ ಸಚಿವಾಲಯ ರಚನೆ

ಕಲಬುರಗಿ: ಕಲ್ಯಾಣ ಕರ್ನಾಟಕ ಜನತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಸುದ್ದಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ. ಬಹಳ ವರ್ಷಗಳಿಂದ ಪ್ರತ್ಯೇಕ ಸಚಿವಾಲಯದ ಬೇಡಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ …

Read More »