Breaking News

Breaking News

ರೈತರ ಕೃಷಿ ಜಮೀನಿನ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ : ರೈತರ ಕೃಷಿ ಜಮೀನಿನ ಪಂಪ್ ಸೆಟ್ ಗಳಿಗೆ ಸರ್ಕಾರದ ನಿಯಮಾನುಸಾರ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಲಘಟಗಿ ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ನಿಯಮದಂತೆ ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಆಯಾ ಭಾಗದ ಕಡೆ ಒಂದು …

Read More »

ಪ್ರಧಾನಮಂತ್ರಿ ರೋಜಗಾರ್ ಮೇಳ: ಇಂದು 71 ಸಾವಿರ ಯುವಕರಿಗೆ ಮೋದಿಯವರಿಂದ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಕೇಂದ್ರ ಸರ್ಕಾರದ ನಾನಾ ಇಲಾಖೆಗಳಲ್ಲಿ ನೇಮಕಗೊಂಡಿರುವ 71 ಸಾವಿರ ಯುವಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ನೇಮಕಾತಿ ಪತ್ರಗಳನ್ನು ವಿತರಣೆ ಮಾಡಲಿದ್ದಾರೆ. ಪ್ರಧಾನಿ ಕಚೇರಿಯಿಂದ ವಿಡಿಯೋ ಕಾನ್ಫ್​​ರೆನ್ಸ್​ ಮೂಲಕ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ದೇಶದ 45 ಸ್ಥಳಗಳಲ್ಲಿ ಪ್ರಧಾನ ಮಂತ್ರಿ ರೋಜಗಾರ್ ಮೇಳ ಆಯೋಜಿಸಲಾಗಿದೆ. ಉದ್ಯೋಗ ಸೃಷ್ಟಿಸಬೇಕೆಂಬ ಪ್ರಧಾನಿ ನರೇಂದ್ರ ಮೋದಿಯವರ ಅತ್ಯಂತ ಬದ್ಧತೆಯ ಭಾಗವಾಗಿ ಈ ಉದ್ಯೋಗ ಮೇಳ ನಡೆಯುತ್ತಿದೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ. ಗೃಹ …

Read More »

ರಾಜ್ಯದಲ್ಲಿ ಮತ್ತೊಂದು ಐಐಟಿ ಸ್ಥಾಪನೆಗೆ ಕೇಂದ್ರದೊಂದಿಗೆ ಚರ್ಚೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ : ಜಿಲ್ಲೆಯ ಕೆಆರ್​​​​​​ಎಸ್​​​​​ ಸಮೀಪ ಐಐಟಿ ಸ್ಥಾಪನೆ ಮಾಡುವ ಬಗ್ಗೆ ಶಾಸಕ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿ ಕೇಂದ್ರದೊಂದಿಗೆ ಚರ್ಚಿಸುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹಾಗೂ ಮಂಡ್ಯ ಸಂಸದ ಹೆಚ್​.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು. ಮಂಡ್ಯದಲ್ಲಿ ಸಮಾರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿ ಸಮ್ಮೇಳನದ ಅಧ್ಯಕ್ಷ ಡಾ.ನಾಡೋಜ ಗೊ.ರು.ಚನ್ನಬಸಪ್ಪ ಅವರನ್ನು ಅಭಿನಂದಿಸಿ …

Read More »

ಶಿಕ್ಷಣ ಇಲಾಖೆ ಸೇರಿದಂತೆ ರಾಜ್ಯದ 43 ಇಲಾಖೆಗಳಲ್ಲಿ 2.76 ಲಕ್ಷ ಹುದ್ದೆ ಖಾಲಿ: ಸರ್ಕಾರದಿಂದ ಮಾಹಿತಿ

ಬೆಂಗಳೂರು : ಶಿಕ್ಷಣ ಇಲಾಖೆ ಸೇರಿದಂತೆ ರಾಜ್ಯದ 43 ಇಲಾಖೆಗಳಲ್ಲಿ ಒಟ್ಟಾರೆ 2.76 ಲಕ್ಷ (2,76,386) ಹುದ್ದೆಗಳು ಖಾಲಿ ಉಳಿದಿರುವುದಾಗಿ ಸರ್ಕಾರದ ಅಧಿಕೃತ ಮಾಹಿತಿಯೊಂದು ತಿಳಿಸಿದೆ. ರಾಜ್ಯ ಸರ್ಕಾರದ 43 ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ 16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ. 16,734 ಬಿ ದರ್ಜೆಯ ಹುದ್ದೆಗಳು, 1,66,021 ಸಿ ದರ್ಜೆಯ ಹುದ್ದೆಗಳು, 77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಲಾಗಿದೆ. …

Read More »

ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಾದ್ಯಂತ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್

ಪುತ್ತೂರು: ಕೋಲಾರ ಜಿಲ್ಲೆಯಲ್ಲಿ ಆರಂಭಿಸಿದ ಗೃಹ ಆರೋಗ್ಯ ಯೋಜನೆ ಯಶಸ್ಸು ಕಂಡಿದ್ದು, ಶೀಘ್ರವೇ ರಾಜ್ಯಾದ್ಯಂತ ವಿಸ್ತರಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಪತ್ರಕರ್ತರ ಜತೆ ಮಾತನಾಡಿದ ಅವರು, ರಕ್ತದೊತ್ತಡ, ಮಧು ಮೇಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕ್ರಮೇಣ ಇದು ಬೇರೆ ಕಾಯಿಲೆಗಳಿಗೂ ದಾರಿ ಮಾಡುತ್ತದೆ. ಗೃಹ ಆರೋಗ್ಯ ಯೋಜನೆ ಯಡಿ ಕೋಲಾರದಲ್ಲಿ ಮನೆ ಮನೆಗೆ ತೆರಳಿ …

Read More »

ಬೀದರ್ ನಲ್ಲಿ 20 ಲಕ್ಷ ರೂ. ಮೌಲ್ಯದ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಸಂಸದ ಸಾಗರ್ ಖಂಡ್ರೆ ಚಾಲನೆ

ಬೀದರ್ : ಭಾಲ್ಕಿ ತಾಲ್ಲೂಕಿನ ಗಣೇಶಪುರ್ ವಾಡಿಯಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಲು ಸಂಸದ ಸಾಗರ್ ಖಂಡ್ರೆ ಅವರು ಅಡಿಗಲ್ಲು ಹಾಕಿದರು. ಗ್ರಾಮದ ಶಂಕರರಾವ್ ಭೂಸುಂಡೆ ಅವರ ಮನೆಯಿಂದ ಲೋಕೇಶ್ ಭೂರೆ ಅವರ ಮನೆಯವರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅನುದಾನದ ಅಡಿಯಲ್ಲಿ 20 ಲಕ್ಷ ರೂ.ಮೌಲ್ಯದ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಪುರಸಭೆ ಉಪಾಧ್ಯಕ್ಷ ಅಶೋಕ್ ಗಾವಕವಾಡ್, ಪ್ರಶಾಂತ್ ಕೋಟಗೇರಾ, ಯಾದವರಾವ್ …

Read More »

ದೆಹಲಿಯಲ್ಲಿ 18 ವರ್ಷ ಮೇಲ್ಪಟ್ಟ ಹೆಣ್ಣುಮಕ್ಕಳಿಗೆ ಮಾಸಿಕ ₹1000 ಒದಗಿಸುವ ಯೋಜನೆ ಪ್ರಾರಂಭ: ಕೇಜ್ರಿವಾಲ್

ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎಎಪಿ ಪಕ್ಷವು ರಾಜಕೀಯ ಕಾರ್ಯತಂತ್ರ ರೂಪಿಸಿದ್ದು, ಅದರಂತೆ 18 ವರ್ಷ ಮೇಲ್ಪಟ್ಟ ಎಲ್ಲಾ ಹೆಣ್ಣು ಮಕ್ಕಳು ಹಾಗೂ ಮಹಿಳೆಯರಿಗೆ ಮಾಸಿಕ ₹1,000 ಒದಗಿಸುವ ಯೋಜನೆ ಪ್ರಾರಂಭವಾಗಲಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಇಂದು ಘೋಷಿಸಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಳೆಯಿಂದ (ಡಿ.23) ಈ ಯೋಜನೆಗೆ ಚಾಲನೆ ದೊರೆಯಲಿದ್ದು, ಮಹಿಳೆಯರು ಅರ್ಜಿ ಸಲ್ಲಿಸಲು ಎಲ್ಲಿಯೂ ಹೋಗಬೇಕಿಲ್ಲ. ನಮ್ಮ ಸ್ವಯಂ …

Read More »

ಭಾರತ ಶೀಘ್ರದಲ್ಲಿ ವೈದ್ಯಕೀಯ ಮತ್ತು ಉತ್ಪಾದನೆ ಕ್ಷೇತ್ರಗಳಲ್ಲಿ ವಿಶ್ವದ ಹಬ್ ಆಗಲಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ವಿಜಯಪುರ: ಭಾರತ ಶೀಘ್ರದಲ್ಲಿ ವೈದ್ಯಕೀಯ ಮತ್ತು ಉತ್ಪಾದನೆ ಕ್ಷೇತ್ರಗಳಲ್ಲಿ ವಿಶ್ವದ ಹಬ್ ಆಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಕೇಂದ್ರ ಇಂಧನ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದ ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಅವರು ಭಾಷಣ ಮಾಡಿದರು. ಭಾರತದಲ್ಲಿ ಹೇರಳವಾದ ಪ್ರಾಕೃತಿಕ ಮತ್ತು ಮಾನವ ಸಂಪನ್ಮೂಲವಿದೆ. ಪ್ರಾಚೀನ ಭಾರತದ ಆರ್ಯಭಟರಿಂದ ಹಿಡಿದು ಶಲ್ಯರವರೆಗೆ ಮತ್ತು …

Read More »

ಬೆಳಗಾವಿಯಲ್ಲಿ ಡಿ.26, 27 ರಂದು ಶತಮಾನೋತ್ಸವ ಕಾರ್ಯಕ್ರಮ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ. 26, 27ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಕಾಂಗ್ರೆಸ್‌ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವ 1924ರಲ್ಲಿ ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆ ವಹಿಸಿ, ದೇಶದ …

Read More »

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳು ಶೀಘ್ರವೇ ಭರ್ತಿ: ಸಿಎಂ ಸಿದ್ದರಾಮಯ್ಯ

ಕಲಬುರಗಿ : ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್ ಗಳನ್ನು ಆರಂಭಿಸುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ತುಂಬುವ ಕೆಲಸವನ್ನೂ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, …

Read More »