Breaking News

Breaking News

ಮಹಾರಾಷ್ಟ್ರ ಅಧಿವೇಶನದಲ್ಲಿ ಮೂಲಸೌಕರ್ಯಗಳ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಮಂಡಿಸಿದ ಸಿಎಂ ಫಡ್ನವಿಸ್

ಮಹಾರಾಷ್ಟ್ರ: ನಾಗ್ಪುರದಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ನೀರಾವರಿ, ಕೈಗಾರಿಕೆಗಳು, ನದಿ ಜೋಡಣೆ ಯೋಜನೆಗಳು ಮತ್ತು ಮೂಲಸೌಕರ್ಯಗಳ ನಿರ್ಧಾರಗಳು ಸೇರಿದಂತೆ ವಿದರ್ಭ ಮತ್ತು ಮರಾಠವಾಡದ ಸಮಗ್ರ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರವಾದ ವಿಮರ್ಶೆಯನ್ನು ಮಂಡಿಸಲಾಯಿತು. ಹೆಚ್ಚುವರಿಯಾಗಿ, ಅಭಿವೃದ್ಧಿ ಹೊಂದಿದ, ಸಮತೋಲಿತ ಮತ್ತು ಸಮಗ್ರ ಮಹಾರಾಷ್ಟ್ರದ ನೀಲನಕ್ಷೆಯನ್ನು ವಿವರಿಸಲಾಗಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ. ಈ ಅಧಿವೇಶನದಲ್ಲಿ ವ್ಯಾಪಕ ಚರ್ಚೆಗಳ ನಂತರ 17 ಮಸೂದೆಗಳನ್ನು ಅಂಗೀಕರಿಸಲಾಯಿತು. ಸಾರ್ವಜನಿಕ …

Read More »

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಹುದ್ದೆ ಭರ್ತಿ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ

ಬೆಂಗಳೂರು: ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಒಪ್ಪಿಗೆ ನೀಡಿದೆ. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪತ್ರವನ್ನು ಆಧರಿಸಿ ನೇಮಕಾತಿಗೆ ಒಪ್ಪಿಗೆ ನೀಡಲಾಗಿದೆ. ಉಳಿಕೆ ಮೂಲ ವೃಂದದಲ್ಲಿ 8994 ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ 877 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಶುಭಂ …

Read More »

ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಗ್ರಾಚ್ಯುಟಿ ಹಣ ಬಿಡುಗಡೆ

ಬೆಂಗಳೂರು: ಸಾರಿಗೆ ನೌಕರರಿಗೆ ಸಿಹಿಸುದ್ದಿ, ನಿವೃತ್ತ ಸಾರಿಗೆ ನೌಕರರಿಗೆ ನೀಡಬೇಕಾಗಿದ್ದ ಗ್ರಾಚ್ಯುಟಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ ರಜೆ ನಗದೀಕರಣ: ಸರ್ಕಾರದಿಂದ ₹224.05 ಕೋಟಿ ಹಣ ಪಾವತಿಯಾಗಿದೆ. 2020ರ ವೇತನ ಪರಿಷ್ಕರಣೆ: ಬಾಕಿ ಹಣದ ಚೆಕ್‌ನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಬಿಡುಗಡೆ ಮಾಡಿದ್ದಾರೆ. ಹಣ ಬಿಡುಗಡೆ: ಒಟ್ಟು ₹11,694 ನಿವೃತ್ತ ನೌಕರರ ಹಣ ಬಿಡುಗಡೆಯಾಗಿದೆ. ಬಾಕಿ ಉಪಧನ ಪಾವತಿ: 2020ರ ಜನವರಿ 1ರಿಂದ 2023ರ ಫೆಬ್ರುವರಿ …

Read More »

ಕೊಪ್ಪಳ: ಶೈಕ್ಷಣಿಕ ಪ್ರವಾಸಕ್ಕೆ ಹೋದಾಗ ವಿದ್ಯಾರ್ಥಿ ಸಾವು ಪ್ರಕರಣ: 6 ಶಿಕ್ಷಕರ ಅಮಾನತು

ಕೊಪ್ಪಳ : ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಬಾವಿಯಲ್ಲಿ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಶಾಲೆಯ ಮುಖ್ಯೋಪಾಧ್ಯಾಯ ಸೇರಿದಂತೆ ಆರು ಜನರನ್ನು ಕೊಪ್ಪಳದ ಡಿಡಿಪಿಐ ಶ್ರೀಶೈಲ್ ಬಿರಾದಾರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವನ್ನಪ್ಪಿದ. ಹಾಗಾಗಿ ಕರ್ತವ್ಯ ಲೋಪ ವ್ಯಸಗಿದ ಆರೋಪದ ಹಿನ್ನೆಲೆ 6 ಸರಕಾರಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಗಾಣದಾಳ ಸರ್ಕಾರಿ ಹಿರಿಯ …

Read More »

ಕಲಬುರಗಿ: ಇಂದು ಜಯದೇವ ಆಸ್ಪತ್ರೆ ಲೋಕಾರ್ಪಣೆ

ಕಲಬುರಗಿ: ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ಇಂದು ಲೋಕಾರ್ಪಣೆಗೊಳ್ಳಲಿದೆ. ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ …

Read More »

ದೇಶದಲ್ಲಿ ಅರಣ್ಯ ಪ್ರದೇಶ ಕುಸಿತ ಪ್ರಮಾಣದಲ್ಲಿ ಕರ್ನಾಟಕಕ್ಕೆ 2 ನೇ ಸ್ಥಾನ: ಕೇಂದ್ರ ಸರ್ಕಾರ ಮಾಹಿತಿ

ಬೆಂಗಳೂರು : ಭಾರತದಲ್ಲಿ ಅರಣ್ಯ ಹಾಗೂ ಹಸಿರು ಹೊದಿಕೆ ಪ್ರಮಾಣವು 2021 ರಿಂದ 2023ರ ಅವಧಿಯಲ್ಲಿ 1445 ಚದರ ಕಿ.ಮೀ.ನಷ್ಟು ವೃದ್ಧಿಸಿದೆ. ಅಂದರೆ ದೇಶದ ಒಟ್ಟು ಭೂಭಾಗದ ಶೇ.25.17 ಪ್ರದೇಶದಲ್ಲೀಗ ಅರಣ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಆದರೆ ಕಳವಳಕಾರಿ ವಿಷಯವೆಂದರೆ, ಇದೇ ಅವಧಿಯಲ್ಲಿ ಕರ್ನಾಟಕದಲ್ಲಿ ಅರಣ್ಯ ಪ್ರದೇಶ ಕುಸಿತದ ಪ್ರಮಾಣದಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನ ಪಡೆದಿದೆ. ಹೌದು ಈ ಕುರಿತಂತೆ ಇಂಡಿಯಾ ಸ್ಟೇಟ್ ಆಫ್ ಫಾರೆಸ್ಟ್ …

Read More »

ಸಾರಿಗೆ ನೌಕರರು ಮುಷ್ಕರ ಘೋಷಣೆ ಮಾಡಿದ ಬೆನ್ನಲ್ಲೇ ಬೇಡಿಕೆ ಈಡೇರಿಕೆಗೆ ಆದೇಶ

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನಿವೃತ್ತ ಸಿಬ್ಬಂದಿಗೆ ನೀಡಬೇಕಾದ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಪಾವತಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ವೇತನ ಹೆಚ್ಚಳ, ವೇತನ ಹೆಚ್ಚಳ ಬಾಕಿ ಜೊತೆಗೆ ನಿವೃತ್ತ ನೌಕರರ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಬಾಕಿ ಪಾವತಿಸುವಂತೆ ಒತ್ತಾಯಿಸಿ ಡಿಸೆಂಬರ್ 31 ರಿಂದ ಕರ್ತವ್ಯ ಬಹಿಷ್ಕರಿಸಿ ಮುಷ್ಕರ …

Read More »

ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾಧ್ಯಕ್ಷ ಸ್ಥಾನ ಲಭಿಸಿದರೆ ಪಕ್ಷ ಬಲಗೊಳಿಸುವಲ್ಲಿ ಪ್ರಾಮಾಣಿಕ ಪ್ರಯತ್ನ: ಫಾರೂಕ್ ಅಬ್ಬೂನವರ..

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಕೆಪಿಸಿಸಿಯಿಂದ ಮಹಾನಗರ ಜಿಲ್ಲಾಧ್ಯಕ್ಷರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಲು ಸರ್ವೇ ನಡೆಸಲಾಗಿದ್ದು, ನಮ್ಮ ಸ್ಥಳೀಯ ಸಚಿವರು ಹಾಗೂ ಶಾಸಕರೊಂದಿಗೆ ಚರ್ಚಿಸಿ ಒಳ್ಳೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಫಾರೂಕ್ ಅಬ್ಬೂನವರ ತಿಳಿಸಿದ್ದಾರೆ.ನಗರದಲ್ಲಿ ಇಂದು ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಪಕ್ಷ ತತ್ವ ಸಿದ್ಧಾಂತಗಳ ಮೇಲೆ ನಡೆಯುವಂತಹದ್ದಾಗಿದೆ. ಬಹಳ ದಿನಗಳಿಂದ ನಾನು ಮೂಲ ಕಾಂಗ್ರೆಸ್ಸಿಗನಾಗಿ, ಯೂತ್ ಕಾಂಗ್ರೆಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಹಿಂದೆಯೂ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷನಾಗಿ ಒಳ್ಳೆಯ ಕೆಲಸ, ಕಾರ್ಯಗಳನ್ನು …

Read More »

ಸಿ.ಟಿ.ರವಿ ಮಾತಾಡಿರೋದಕ್ಕೆ ಲೆಕ್ಕ ಚುಕ್ತಾ ಮಾಡ್ತೀವಿ: ಕೇಸರಿಪಡೆ ವಿರುದ್ಧ ಡಿಕೆಶಿ ವಾಗ್ದಾಳಿ

ಬೆಂಗಳೂರು : ಬಿಜೆಪಿ MLC ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆಶಿ ಕೇಸರಿಪಡೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಸಿಟಿ ರವಿ ಮಾತುಗಳು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಅವರು ಮಾತಾಡಿರೋದಕ್ಕೆ ಲೆಕ್ಕ ಚುಕ್ತಾ ಮಾಡ್ತೀವಿ ಅಂತ ಕೆಂಡಕಾರಿದ್ದಾರೆ. ಚಿಕ್ಕಮಗಳೂರು ಜನ ಬುದ್ಧಿವಂತರು, ಅವರಿಗೆ ಉತ್ತಮ ಸಂಸ್ಕೃತಿ ಇದೆ. ಸುಮ್ಮನೆ ಲೀಡರ್ ಗಳನ್ನು ಸಪೋರ್ಟ್ ಮಾಡೋದಲ್ಲ. ನಮ್ಮ ಪಕ್ಷದವರು ಆ ರೀತಿಯ ಅಶ್ಲೀಲ ಪದಬಳಕೆ …

Read More »

ಗದಗ: ದುಷ್ಕರ್ಮಿಗಳಿಂದ ಮುಖ್ಯ ಶಿಕ್ಷಕಿಯ ಭೀಕರ ಕೊಲೆ

ಗದಗ: ರೊಟ್ಟಿ ಮಾಡುವ ಕ್ವಾಮಣಗಿಯಿಂದ ತಲೆಗೆ ಹೊಡೆದು ಮುಖ್ಯ ಶಿಕ್ಷಕಿಯನ್ನು ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ನವನಗರದಲ್ಲಿ ನಡೆದಿದೆ. ಅನ್ನಪೂರ್ಣ ರಾಠೋಡ್ (55) ಮೃತ ಮುಖ್ಯ ಶಿಕ್ಷಕಿಯಾಗಿದ್ದು, ಗಜೇಂದ್ರಗಡ ತಾಲೂಕಿನ ರೋಣದ ಬಿಇಒ ಕಚೇರಿಯಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮನೆಯಲ್ಲಿದ್ದ ಮುಖ್ಯ ಶಿಕ್ಷಕಿಯ ತಲೆಗೆ ದುಷ್ಕರ್ಮಿಗಳು ರೊಟ್ಟಿ ಮಾಡುವ ಕಟ್ಟಿಗೆಯ ಕ್ವಾಮಣಗಿಯಿಂದ ಹೊಡೆದು ಭೀಕರ ಕೊಲೆ ಮಾಡಲಾಗಿದ್ದು, ಇದನ್ನು ಕಂಡ ಗಜೇಂದ್ರಗಡ ನಿವಾಸಿಗಳು ಆತಂಕಗೊಂಡಿದ್ದಾರೆ. ಇನ್ನೂ ಸ್ಥಳಕ್ಕೆ …

Read More »