Breaking News

Breaking News

ಇಂದು ಕುವೈತ್ ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ದ್ವಿಪಕ್ಷೀಯ ಒಪ್ಪಂದ ಮತ್ತು ರಕ್ಷಣಾ ಸಹಕಾರ ಕುರಿತು ಚರ್ಚೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಗಲ್ಫ್ ರಾಷ್ಟ್ರ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಕುವೈತ್ ರಕ್ಷಣೆ ಮತ್ತು ವ್ಯಾಪಾರ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಬಲಪಡಿಸುವತ್ತ ಗಮನ ಹರಿಸುವ ನಿರೀಕ್ಷೆಯಿದೆ. ಕುವೈತ್ ನ ಉನ್ನತ ನಾಯಕರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ, ಭಾರತೀಯ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ, ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಗಲ್ಫ್ ಕಪ್ ಫುಟ್ಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಕಳೆದ …

Read More »

ಹಣಕಾಸು ಆಯೋಗದ ಅಡಿಯಲ್ಲಿ ರಾಜ್ಯಗಳಿಗೆ ನಿಗದಿಗಿಂತ ಹೆಚ್ಚಿನ ಅನುದಾನ ವಿತರಣೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಜೈಸಲ್ಮೇರ್: ಆರೋಗ್ಯಕರ ಸ್ಥೂಲ ಆರ್ಥಿಕ ವಾತಾವರಣ, ತೆರಿಗೆ ಸಂಗ್ರಹಣೆಯಲ್ಲಿನ ದಕ್ಷತೆಯಿಂದಾಗಿ, 15 ನೇ ಹಣಕಾಸು ಆಯೋಗದ ಅಡಿಯಲ್ಲಿ ಕಳೆದ 45 ತಿಂಗಳುಗಳಲ್ಲಿ ರಾಜ್ಯಗಳಿಗೆ 14 ನೇ ಹಣಕಾಸು ಆಯೋಗದ ಅಡಿಯಲ್ಲಿ 60 ತಿಂಗಳುಗಳಲ್ಲಿ ವಿತರಿಸಿದ ಅನುದಾನಕ್ಕಿಂತ ಹೆಚ್ಚಿನ ಅನುದಾನಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು. ಇಂದು ಜೈಸಲ್ಮೇರ್‌ನಲ್ಲಿ ನಡೆಯುತ್ತಿರುವ 55ನೇ ಜಿಎಸ್‌ಟಿ ಸಮಿತಿ ಸಭೆಯ ಮುನ್ನ ತಮ್ಮನ್ನು ಭೇಟಿ …

Read More »

ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ: ಗೌರವಧನ ಹೆಚ್ಚಿಸಲು ಅಗತ್ಯ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಗೌರವಧನ ಹೆಚ್ಚಳದ ಕುರಿತು ಸಿಹಿ ಸುದ್ದಿ ‌ನೀಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ವಿಷಯವನ್ನು ಪ್ರಸ್ತಾಪಿಸಿ, ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ಮಾಸಿಕ 12,000 ರೂಪಾಯಿ ಗೌರವಧನವನ್ನು ನಿಗದಿ ಮಾಡಲಾಗಿದೆ, ಅದು ಕನಿಷ್ಠ ವೇತನಕ್ಕಿಂತ ಕಡಿಮೆಯಾಗಿದೆ. ಇದರಿಂದಾಗಿ, ಅತಿಥಿ ಉಪನ್ಯಾಸಕರು ತಮ್ಮ ಆರ್ಥಿಕ ಸ್ಥಿತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಮುಖ್ಯಮಂತ್ರಿ …

Read More »

ಬಿಜೆಪಿಯವರಿಗೆ ರಾಮನ ಹೆಸರು ಹೇಳುವ ಯೋಗ್ಯತೆಯೂ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಸಿ.ಟಿ. ರವಿ ನೀಡಿದ ಹೇಳಿಕೆ ಮನುವಾದಿ ಬಿಜೆಪಿಯ ಸಂಸ್ಕೃತಿಯನ್ನು ತೋರಿಸುತ್ತದೆ. ಬಿಜೆಪಿಯವರಿಗೆ ಮರ್ಯಾದೆ ಇಲ್ಲ. ಮರ್ಯಾದಾ ಪುರುಷೋತ್ತಮ ರಾಮನ ಹೆಸರು ಹೇಳುವ ಯೋಗ್ಯತೆಯೂ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನುವಾದಿಗಳು ಹೆಣ್ಣನ್ನು ಗೌರವಿಸುವುದಿಲ್ಲ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ. ಅವರು ಅಶ್ಲೀಲ ಪದ ಬಳಸುವ ಮೂಲಕ ಸ್ತ್ರೀ ಕುಲಕ್ಕೆ …

Read More »

ಡಾ.ಅಂಬೇಡ್ಕರ್ ಗೆ ಅಪಮಾನ ಖಂಡಿಸಿ ಶಾ ವಿರುದ್ಧ ಖರ್ಗೆ ಹಕ್ಕುಚ್ಯುತಿ ನೋಟಿಸ್

ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವಿರುದ್ಧ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಶೇಷ ಹಕ್ಕುಚ್ಯುತಿ ನೊಟೀಸ್ ನ್ನು ರಾಜ್ಯಸಭಾಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಅಮಿತ್ ಶಾ ಅವರ ಹೇಳಿಕೆಗಳು ಸಂವಿಧಾನ ಶಿಲ್ಪಿಗೆ ಅವಮಾನವಾಗಿದ್ದು, ಸದನದ ಅವಹೇಳನಕ್ಕೆ ಸಮಾನವಾಗಿದೆ ಮತ್ತು ಸವಲತ್ತು ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಖರ್ಗೆ ರಾಜ್ಯಸಭಾಧ್ಯಕ್ಷರಿಗೆ ನೊಟೀಸ್ ಸಲ್ಲಿಸಿದ್ದಾರೆ. …

Read More »

ಪ್ರವಾಸೋದ್ಯಮ ಇಲಾಖೆಯಿಂದ 24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ 1.20 ಕೋಟಿ ರೂ. ಅನುದಾನ ಬಿಡುಗಡೆ: ಸಚಿವ ಎಚ್.ಕೆ.ಪಾಟೀಲ್‌

ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ 24 ಕಂಬಳ ಕೂಟಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ತಲಾ 5 ಲಕ್ಷದಂತೆ 1.20 ಕೋಟಿ ರೂ.ಅನುದಾನ ಬಿಡುಗಡೆ ಮಾಡಲು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಅವರು ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಪ್ರತೀ ಕಂಬಳಕ್ಕೆ ಸರಕಾರ ತಲಾ 5 ಲಕ್ಷ ರೂ.ಅನುದಾನ ಬಿಡುಗಡೆ ಮಾಡಬೇಕೆಂದು ಶಾಸಕ ಅಶೋಕ್‌ ಕುಮಾರ್‌ ರೈ ಅವರು ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದರು. ಪ್ರತೀ …

Read More »

ಆರೋಗ್ಯ ಮತ್ತು ಜೀವ ವಿಮೆ ಕಂತುಗಳ ಮೇಲಿನ ತೆರಿಗೆ ದರ ಕಡಿತಗೊಳಿಸಲು ಮುಂದಾದ ಕೇಂದ್ರ ಸರ್ಕಾರ

ನವದೆಹಲಿ : ಆರೋಗ್ಯ ಮತ್ತು ಜೀವ ವಿಮೆ ಕಂತುಗಳ ಮೇಲಿನ ತೆರಿಗೆ ದರವನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಇಂದು ರಾಜಸ್ಥಾನದ ಜೈಸಲ್ಮೇರ್ ನಲ್ಲಿರುವ GST ಮಂಡಳಿ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು 55ನೇ GST ಮಂಡಳಿ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವಿವಿಧ ರಾಜ್ಯಗಳ ಹಣಕಾಸು ಸಚಿವರು ಪಾಲ್ಗೊಳ್ಳಲಿದ್ದಾರೆ. 148 ವಸ್ತುಗಳ ದರ ಬದಲಾವಣೆ ಕುರಿತೂ ಮೀಟಿಂಗ್​​​​​ನಲ್ಲಿ ಚರ್ಚೆ ನಡೆಯಲಿದೆ ಎಂದು …

Read More »

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರ ನಿಂತ ವೀರಶೈವ ಲಿಂಗಾಯತ ಮಹಾಸಭಾ: ಸಿ.ಟಿ ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಶಾಮನೂರು ಶಿವಶಂಕ್ರಪ್ಪ

ದಾವಣಗೆರೆ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿಂತಿದ್ದು, ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು, ಸಿ, ಟಿ.ರವಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಡಿದ ಆಕ್ಷೇಪಾರ್ಹ ಮಾತು ವಿಧಾನಸಭೆ ಹಾಗೂ ವಿಧಾನ …

Read More »

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ.ರವಿ ಸ್ಥಳಾಂತರ: ಬಂಧಿತನ ಬೆಂಬಲಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ & ಟೀಮ್

ಹುಬ್ಬಳ್ಳಿ: ಸದನದಲ್ಲಿಯೇ ಸಚಿವೆಗೆ ಅಶ್ಲೀಲ ಪದಗಳನ್ನು ಬಳಿಸಿದ ಆರೋಪದ ಮೇಲೆ ಬಂಧಿತನಾಗಿರುವ ಸಿಟಿ ರವಿ ಅವರನ್ನು ಪೊಲೀಸರು ಬೆಳಗಾವಿಯಿಂದ ಬೆಂಗಳೂರಿನತ್ತ ಕರೆದುಕೊಂಡು ಬರುತ್ತಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಪ್ರಾಸ್ಟಿಟ್ಯೂಟ್ ಪದ ಬಳಿಸಿದ ಆರೋಪದ ಮೇಲೆ ಹಿರೇಬಾಗೇವಾಡಿಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಬೆಳಗಾವಿಯಿಂದ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಬಂಧಿತ ಸಿಟಿ ರವಿ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಬಿ ವೈ ವಿಜಯೇಂದ್ರ ಅವರು, ವಿರೋಧ ಪಕ್ಷದ ನಾಯಕರಾದ ಆರ್ …

Read More »

ಲಿಂಗಾಯತ ಪಂಚಮಸಾಲಿ ಮೀಸಲಾತಿಗಾಗಿ ಧ್ವನಿ ಎತ್ತದಂತೆ ಹಲವು ಶಾಸಕರಿಗೆ ಆಮಿಷ: ಜಯಮೃತ್ಯುಂಜಯ ಸ್ವಾಮೀಜಿ ಆರೋಪ

ಕೊಪ್ಪಳ: ಲಿಂಗಾಯತ ಪಂಚಮಸಾಲಿ ಸಮುದಾಯ ಮೀಸಲಾತಿಗಾಗಿ‌ ಹೋರಾಟ ಮಾಡುತ್ತಿದ್ದರೆ, ಕೆಲ ಶಾಸಕರಿಗೆ ಆಸೆ ಹಾಗೂ ಆಮಿಷ ತೋರಿಸಿ, ಇದರ ಬಗ್ಗೆ ಧ್ವನಿ ಎತ್ತದಂತೆ ಕೆಲವರು ಕುತಂತ್ರ ಮಾಡುತ್ತಿದ್ದಾರೆ ಎಂದು ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ಹೋರಾಟದ ವೇಳೆ ಲಿಂಗಾಯತ ಪಂಚಮಸಾಲಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಹೀಗಾಗಿ ಸರ್ಕಾರ ಕೂಡಲೇ ಸಮಾಜದ ಕ್ಷಮೆ ಕೇಳಬೇಕು. ಹಲ್ಲೆ ಮಾಡಿದ ಪೊಲೀಸರನ್ನು ಅಮಾನತು ಮಾಡಬೇಕು. ಸಮಾಜದವರ ಮೇಲೆ …

Read More »