Breaking News

Breaking News

ಸಿ.ಟಿ.ರವಿ ಜಾಮೀನು ಅರ್ಜಿ ವಿಚಾರಣೆ: ಬೆಳಗಾವಿ ಕೋರ್ಟ್ ಮಹತ್ವದ ಆದೇಶ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್‌ ಆದೇಶ ಪ್ರಕಟಿಸಿದೆ. ಸಿ.ಟಿ ರವಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ. Transit warrant ನೀಡುವ ಮೂಲಕ ಆದೇಶ ನೀಡಲಾಗಿದೆ. ಘನತೆ, ಗೌರವದಿಂದ ಆರೋಪಿಯನ್ನು ಕರೆದುಕೊಂಡು ಹೋಗಬೇಕು. 24 …

Read More »

ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯ ಸಂಸದರ ನಿಯೋಗದಿಂದ ಮನವಿ

ನವದೆಹಲಿ: ರಾಜ್ಯದ ಭದ್ರಾ ಮೇಲ್ಡಂಡೆ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿರುವ 5300 ಕೋಟಿ ರೂ. ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನೇತೃತ್ವದ ರಾಜ್ಯ ಸಂಸದರ ನಿಯೋಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ವಿಶ್ವೇಶ್ವರ ಹೆಗಡೆ ಕಾಗೇರಿ, ಡಾ. ಕೆ. …

Read More »

ಶಿಗ್ಗಾವಿ ಉಪಚುನಾವಣೆಯ ಖರ್ಚು-ವೆಚ್ಚಗಳ ಮಾಹಿತಿ ಸಂಗ್ರಹ: ಕಾಂಗ್ರೆಸ್ ಅಭ್ಯರ್ಥಿಯಿಂದ ₹32.69 ಲಕ್ಷ ಖರ್ಚು

ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಗಳ ಖರ್ಚು- ವೆಚ್ಚಗಳ ಬಗ್ಗೆ ದಾಖಲೆ ಸಮೇತ ಮಾಹಿತಿ ಸಂಗ್ರಹಿಸಿರುವ ಅಧಿಕಾರಿಗಳು, ಅದೇ ಮಾಹಿತಿಯನ್ನು ಸದ್ಯದಲ್ಲೇ ಚುನಾವಣಾ ಆಯೋಗಕ್ಕೆ ಸಲ್ಲಿಸಲು ತಯಾರಿ ನಡೆಸಿದ್ದಾರೆ. ನೂತನ ಶಾಸಕರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ ಅವರು ಚುನಾವಣೆ ಆರಂಭದಿಂದ ಅಂತ್ಯದವರೆಗೆ ₹ 32.69 ಲಕ್ಷ ಖರ್ಚು ಮಾಡಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಬಿಜೆಪಿಯ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ₹ 18.38 ಲಕ್ಷ …

Read More »

ಸಬ್ಸಿಡಿಗಳನ್ನು ಹೆಚ್ಚು ತಾರ್ಕಿಕಗೊಳಿಸುವಂತೆ ಸರ್ಕಾರಗಳಿಗೆ ಆರ್ ಬಿ ಐ ಸಲಹೆ

ನವದೆಹಲಿ: ಹಲವು ರಾಜ್ಯಗಳು ಸಾಲ ಮನ್ನಾ, ಕೃಷಿ ಮತ್ತು ಗೃಹಬಳಕೆಗೆ ಉಚಿತ ವಿದ್ಯುತ್, ಉಚಿತ ಸಾರಿಗೆ ಮತ್ತು ಯುವಕರು ಹಾಗೂ ಮಹಿಳೆಯರಿಗೆ ನೇರ ನಗದು ವರ್ಗಾವಣೆ ಯೋಜನೆಗಳನ್ನು ಘೋಷಿಸುತ್ತಿರುವ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ತೀವ್ರ ಆತಂಕ ವ್ಯಕ್ತಪಡಿಸಿದೆ. ಇಂಥ ವೆಚ್ಚದಿಂದಾಗಿ ಸಾಮಾಜಿಕ ಮತ್ತು ಭೌತಿಕ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿಗೆ ಲಭ್ಯವಾಗುವ ಹಣ ಕಡಿಮೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಚುನಾವಣೆ ನಡೆಯಲಿರುವ ರಾಜ್ಯಗಳು ಪೈಪೋಟಿಯಲ್ಲಿ ಮಹಿಳೆಯರು ಮತ್ತು …

Read More »

ಉತ್ತರ ಕರ್ನಾಟಕ ಅಭಿವೃದ್ದಿಗೆ ಗೋವಿಂದರಾವ್ ವರದಿ ಅನುಷ್ಠಾನ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಮತ್ತಷ್ಟು ಅಭಿವೃದ್ಧಿಗೆ ಡಾ| ಗೋವಿಂದರಾವ್‌ ನೇತೃತ್ವದ ಸಮಿತಿ ನೀಡಲಿರುವ ವರದಿಯ ಶಿಫಾರಸು ಅನುಷ್ಠಾನ, ಕೃಷ್ಣಾ ಮೇಲ್ದಂಡೆ ಯೋಜ ನೆಯ ಮೂರನೇ ಹಂತಕ್ಕೆ ಒಂದೇ ಹಂತ ದಲ್ಲಿ 73 ಸಾವಿರ ಎಕರೆ ಭೂಮಿ ಭೂ ಸ್ವಾಧೀನಕ್ಕೆ ಕ್ರಮ, ಮಹದಾಯಿ ಯೋಜ ನೆ ಒಪ್ಪಿಗೆ ನೀಡುವಂತೆ ಕೇಂದ್ರ ರಾಷ್ಟ್ರೀಯ ವನ್ನಜೀವಿ ಮಂಡಳಿ ಮೇಲೆ ಒತ್ತಡ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಉತ್ತರ ಕರ್ನಾಟಕ …

Read More »

ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿ ಮರಿಗಳನ್ನು ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಮೈಸೂರು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ಐದು ವಾರದ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಜಿಲ್ಲೆಗೆ 218 (ಪರಿಶಿಷ್ಟ ಜಾತಿ-9, ಪರಿಶಿಷ್ಟ ಪಂಗಂಡ 189, ಸಾಮಾನ್ಯ 20) ಗುರಿ ನಿಗಧಿಯಾಗಿದ್ದು ಆಯ್ಕೆಯಾಗುವ ಪ್ರತಿ ಫಲಾನುಭವಿಗಳಿಗೆ ಐದು ವಾರದ ನಾಟಿ ಕೋಳಿ ಮರಿಗಳನ್ನು ಉಚಿತವಾಗಿ …

Read More »

ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಜಂಟಿ ಸಂಸದೀಯ ಸಮಿತಿಗೆ ವರ್ಗಾವಣೆ: ಸದಸ್ಯ ಬಲ 39ಕ್ಕೆ ಏರಿಕೆ

ನವದೆಹಲಿ: ವಿವಾದಿತ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಲೋಕಸಭೆಯ ಜಂಟಿ ಸಂಸದೀಯ ಸಮಿತಿಗೆ ವರ್ಗಾಯಿಸಲಾಗಿದೆ. ಏಕಕಾಲಕ್ಕೆ ಚುನಾವಣೆಯನ್ನು ಪ್ರಸ್ತಾಪಿಸುವ ಎರಡು ಮಸೂದೆಗಳನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲಾಗಿದ್ದು, ಸಮಿತಿಯ ಸದಸ್ಯರ ಬಲ 31 ಸಂಸದರಿಂದ 39ಕ್ಕೆ ಏರಿಕೆ ಮಾಡಲಾಗಿದೆ. ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಲೋಕಸಭೆಯ 27 ಸದಸ್ಯರು ಮತ್ತು ರಾಜ್ಯಸಭೆಯ 12 ಸದಸ್ಯರನ್ನೊಳಗೊಂಡ ಜಂಟಿ ಸಮಿತಿಗೆ ಎರಡು ಮಸೂದೆಗಳನ್ನು ಉಲ್ಲೇಖಿಸುವ ಪ್ರಸ್ತಾಪವನ್ನು ಶುಕ್ರವಾರದ ಸದನದ …

Read More »

ಕರ್ನಾಟಕದಲ್ಲಿ ಪ್ರತಿಪಕ್ಷ ನಾಯಕರಿಗೆ ರಕ್ಷಣೆ ಇಲ್ಲ: ಸಿಟಿ ರವಿ ಪ್ರಕರಣಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ

ಬೆಳಗಾವಿ: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ …

Read More »

ಆರೋಗ್ಯ ಇಲಾಖೆಯ ಎನ್.ಹೆಚ್.ಎಂ ಸಿಬ್ಬಂದಿ ಸೇವೆಯನ್ನು ಕಾಯಂ ಮಾಡುವ ಪ್ರಸ್ತಾಪ ಇಲ್ಲ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ.) ಸಿಬ್ಬಂದಿ ಸೇವೆಯನ್ನು ಕಾಯಂ ಮಾಡುವ ಪ್ರಸ್ತಾಪ ಇಲ್ಲವೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅವರು ವಿಷಯ ಪ್ರಸ್ತಾಪಿಸಿ, ಗ್ರಾಮೀಣ ಆರೋಗ್ಯ ವ್ಯವಸ್ಥೆಯಲ್ಲಿ ಎನ್.ಹೆಚ್.ಎಂ. ನೌಕರರ ಅವಲಂಬನೆ ಹೆಚ್ಚಾಗಿದ್ದು, ಅವರ ಸೇವೆ ಕಾಯಂ ಮಾಡುವಂತೆ ಹೋರಾಟ ನಡೆಸಿದ್ದಾರೆ. ಅವರ ಬೇಡಿಕೆ ಈಡೇರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ. …

Read More »

ಡಿ.21 ರಂದು ಸಭೆ ಕರೆದ ಸಿಎಂ: ಲಿಂಗಾಯತ ಪಂಚಮಸಾಲಿ ಹೋರಾಟ ತಾತ್ಕಾಲಿಕ ಅಂತ್ಯ

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ ‘2ಎ’ ಮೀಸಲಾತಿ ನೀಡಬೇಕು ಮತ್ತು ಹೋರಾಟಗಾರರ ಮೇಲೆ ಲಾಠಿಚಾರ್ಜ್‌ ಮಾಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಆರಂಭಿಸಲಾಗಿದ್ದ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಬೆಳಗಾವಿಯ ಅಂಬೇಡ್ಕರ್ ಗಾರ್ಡನ್‌ನಲ್ಲಿ ಈ ಪ್ರತಿಭಟನೆ ನಡೆಯುತ್ತಿತ್ತು. ಸ್ಥಳಕ್ಕೆ ತೆರಳಿದ ಮಾಜಿ ಸಚಿವ ಸಿ.ಸಿ.ಪಾಟೀಲ್, ಶಾಸಕರಾದ ಡಾ.ವಿ‌.ಐ.ಪಾಟೀಲ್, ಹೆಚ್.ಎಸ್.ಶಿವಶಂಕರ್‌ ಅವರು, ಪ್ರತಿಭಟನಾನಿರತ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾಸಕ ವಿಜಯಾನಂದ …

Read More »