BigTv News
August 11, 2026
Breaking News
ಮಂಗಳೂರು: ಸುರತ್ಕಲ್ ಸಮೀಪದ ಮಧ್ಯ ಕೊಡಿಪಾಡಿಯ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದಿದ್ದ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಆರೋಪಿ ಸುಖೇಶ್ ನಾಯ್ಕ್ (40)ನನ್ನು ಬಂಧಿಸಿದ್ದಾರೆ. ಆ.5ರಂದು ಬೆಳಗಿನ ಜಾವ ದೈವಸ್ಥಾನಕ್ಕೆ ನುಗ್ಗಿದ್ದ ಆರೋಪಿ, ಕಬ್ಬಿಣದ ಆಯುಧದಿಂದ ಬಾಗಿಲು ಹಾಗೂ ಕಿಟಕಿ ಮುರಿದು ಕಾಣಿಕೆ ಹುಂಡಿ ಕಳವು ಮಾಡಿದ್ದ. ಹುಂಡಿಯಲ್ಲಿದ್ದ ಸುಮಾರು ₹15 ಸಾವಿರ ನಗದನ್ನು ದೋಚಿಕೊಂಡು ಪರಾರಿಯಾಗಿದ್ದ. ಖಚಿತ ಮಾಹಿತಿ ಮೇರೆಗೆ ಆ.10ರಂದು ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ …
Read More »
BigTv News
August 11, 2026
Breaking News
ಚಿಕ್ಕಮಗಳೂರು: ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಅವರ ಹೆಸರು ಮತ್ತು ಭಾವಚಿತ್ರ ದುರುಪಯೋಗಪಡಿಸಿಕೊಂಡು ಸೈಬರ್ ವಂಚಕರು ಆಹಾರ ಇಲಾಖೆಯ ಉಪನಿರ್ದೇಶಕ ಯೋಗಾನಂದ್ ಅವರಿಗೆ ₹50 ಸಾವಿರ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ವಂಚಕರು ಡಿಸಿ ಹೆಸರಿನಲ್ಲಿ ನಕಲಿ ವಾಟ್ಸಪ್ ಖಾತೆ ಸೃಷ್ಟಿಸಿ, ತುರ್ತಾಗಿ ಹಣ ವರ್ಗಾಯಿಸುವಂತೆ ಯೋಗಾನಂದ್ ಅವರಿಗೆ ಸಂದೇಶ ಕಳುಹಿಸಿದ್ದರು. ಜಿಲ್ಲಾಧಿಕಾರಿಗಳೇ ಸಂದೇಶ ಕಳುಹಿಸಿದ್ದಾರೆಂದು ನಂಬಿದ ಅವರು, ವಂಚಕರು ನೀಡಿದ್ದ ಬ್ಯಾಂಕ್ ಖಾತೆಗೆ ₹50 ಸಾವಿರ ಆನ್‌ಲೈನ್ ಮೂಲಕ …
Read More »
BigTv News
August 11, 2026
Breaking News
ಕಲಬುರಗಿ: ಪತ್ನಿ ಮೇಲಿನ ಅನುಮಾನಕ್ಕೆ ವ್ಯಕ್ತಿಯೊಬ್ಬ ಮನೆಯೊಳಗೆ ಜಿಲೆಟಿನ್ ಕಡ್ಡಿ ಸ್ಫೋಟಿಸಿದ ಪರಿಣಾಮ ತಂದೆ-ಮಗಳು ಮೃತಪಟ್ಟಿರುವ ದಾರುಣ ಘಟನೆ ಆಳಂದ ತಾಲೂಕಿನ ಮಟಕಿ ತಾಂಡದಲ್ಲಿ ನಡೆದಿದೆ. ಮೃತರನ್ನು ಶಿವಲಾಲ್ ಬಳಿರಾಮ್ ರಾಠೋಡ್ (50) ಹಾಗೂ ಅವರ ಪುತ್ರಿ ಮೀರಾ (15) ಎಂದು ಗುರುತಿಸಲಾಗಿದೆ. ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಶಿವಲಾಲ್ ಅಲ್ಲಿಂದ ಜಿಲೆಟಿನ್ ಕಡ್ಡಿ ತಂದು, ಪತ್ನಿ ಹಾಗೂ ಕುಟುಂಬದವರನ್ನು ಕೊಲ್ಲುವುದಾಗಿ ಬೆದರಿಸಿ ಬಳಿಕ ಸ್ಫೋಟಿಸಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ಶಿವಲಾಲ್ …
Read More »
BigTv News
August 11, 2026
Breaking News
ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಮಡಿಕೇರಿಗೆ ತೆರಳುತ್ತಿದ್ದ ಸುಮಾರು 30 ಮಂದಿ ಬಾಂಗ್ಲಾದೇಶದವರು ಎಂಬ ಅನುಮಾನದಿಂದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಸ್ ತಡೆದು ಪ್ರತಿಭಟನೆ ನಡೆಸಿದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಯಾಣಿಕರನ್ನು ಪರಿಶೀಲಿಸಿದರು. ಪೊಲೀಸರ ವಿಚಾರಣೆಯಲ್ಲಿ ಬಹುತೇಕರು ಅಸ್ಸೋಂ ಮೂಲದವರಾಗಿದ್ದು, ಮಡಿಕೇರಿಯ ಕಾಫಿ ತೋಟಗಳಲ್ಲಿ ಕೆಲಸ ಮಾಡಲು ತೆರಳುತ್ತಿದ್ದರು ಎಂಬುದು ತಿಳಿದುಬಂದಿದೆ. ತಂಡದಲ್ಲಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನೂ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರ …
Read More »
BigTv News
August 11, 2026
Breaking News
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಟಕಿ ತಾಂಡಾದಲ್ಲಿ ಪತಿ-ಪತ್ನಿ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಪತಿಯೊಬ್ಬ ಸ್ಫೋಟಕ ಬಳಸಿ ಪತ್ನಿ ಹಾಗೂ ಮಕ್ಕಳನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ಮಂಗಳವಾರ ಬೆಳಗ್ಗೆ ನಡೆದ ಸ್ಫೋಟದಲ್ಲಿ ಶಿವಲಾಲ್ ಬಲಿರಾಮ ರಾಠೋಡ (49) ಹಾಗೂ ಅವರ 15 ವರ್ಷದ ಮಗಳು ವೀರಾ ಶಿವಲಾಲ್ ರಾಠೋಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿ ಸವಿತಾ (40), ಮಗ ಪ್ರಕಾಶ್ (19) ಸೇರಿದಂತೆ ಸಂಬಂಧಿಕರಾದ ಸುರೇಖಾ ಚವ್ಹಾಣ …
Read More »
BigTv News
August 11, 2026
Breaking News
ಬೆಂಗಳೂರು: ಮದುವೆಯಾದ ಕೆಲವೇ ದಿನಗಳಲ್ಲಿ ಪತಿಯಿಂದ ದೈಹಿಕ, ಮಾನಸಿಕ ಕಿರುಕುಳ ಅನುಭವಿಸಿ, ಬಳಿಕ ತಲಾಖ್ ಹೇಳಿ ಮನೆಯಿಂದ ಹೊರಹಾಕಲಾಗಿದೆ ಎಂದು ಯುವತಿಯೊಬ್ಬರು ಆರೋಪಿಸಿದ್ದಾರೆ. ವರದಕ್ಷಿಣೆ ಕಿರುಕುಳ, ಹಲ್ಲೆ ಹಾಗೂ ಬೆದರಿಕೆ ಸೇರಿದಂತೆ ಹಲವು ಆರೋಪಗಳನ್ನು ಕುಟುಂಬ ಮಾಡಿದೆ. ಪತಿ ಮತ್ತೊಬ್ಬ ಮಹಿಳೆಯೊಂದಿಗೆ ಸಂಪರ್ಕ ಹೊಂದಿದ್ದ ವಿಚಾರದಲ್ಲಿ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿಯ ಮೇಲೆ ಹಲ್ಲೆ ನಡೆಸಿ ಕಾಲಿಗೆ ಬಿಸಿನೀರು ಸುರಿಸಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಬಳಿಕ ಮನೆಯಲ್ಲೇ ತಲಾಖ್ …
Read More »
BigTv News
August 11, 2026
Breaking News
ಉಡುಪಿ: ಮುದರಂಗಡಿಯ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಎಂಬುವರನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳಾದ ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತೋಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಎಂಬುವವರನ್ನು ಪ್ರಕರಣದ ತನಿಖಾಧಿಕಾರಿ ಕಾಪು ಪೊಲೀಸ್ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪೊಲೀಸರು ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ …
Read More »
BigTv News
August 11, 2026
Breaking News
ಕಾಸರಗೋಡು: ಒಂದೇ ಕುಟುಂಬದ ಬಾಲಕ ಸೇರಿ ಆರು ಮಂದಿಗೆ ಇರಿದು ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕೊರಕೋಡಿನ ಇಮ್ರಾನ್, ತಳಂಗರೆ ಬಾಂಗೋಡಿನ ಸನಾಫ್, ಕೊರಕೋಡಿನ ಅಹಮದ್ ಹಾಗೂ ಬಾಂಗೋಡಿನ ಬಾಸಿತ್ ಬಂಧಿತರು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆ.8ರಂದು ರಾತ್ರಿ ಕೊರಕೋಡಿನ ಅಂಗಡಿಯೊಂದರ ಬಳಿ ಜಾಫರ್ ಸಾದಿಕ್, ಅವರ 15 ವರ್ಷದ ಸಹೋದರ, ತಂದೆ ಅಬ್ದುಲ್ ಕರೀಂ ಸೇರಿದಂತೆ ಆರು ಮಂದಿಗೆ ಇರಿದು ಗಾಯಗೊಳಿಸಲಾಗಿತ್ತು. …
Read More »
BigTv News
August 11, 2026
Breaking News
ವಿಜಯನಗರ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಲಾಕಪ್ ಡೆತ್ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ. ಸಿಐಡಿ ಡಿವೈಎಸ್‌ಪಿ ಗೋಪಾಲಕೃಷ್ಣ ನೇತೃತ್ವದ ತಂಡ, ಪ್ರಕರಣದಲ್ಲಿ ಆರೋಪಿಗಳಾದ ಪೊಲೀಸ್ ಸಿಬ್ಬಂದಿ ವೆಂಕಟೇಶ್ ಮತ್ತು ರಾಘವೇಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಆಗಸ್ಟ್ 1ರಂದು ಕೌಟುಂಬಿಕ ಕಲಹದ ವಿಚಾರಣೆಗೆ ಕರೆತರಲಾಗಿದ್ದ ಕಟ್ಟಡ ಕಾರ್ಮಿಕ ಸಿ. ಖಲೀಲ್ ಉಲ್ಲಾ(38) ಠಾಣೆಯ ಲಾಕಪ್‌ನಲ್ಲಿ ಮೃತಪಟ್ಟಿದ್ದರು. ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ …
Read More »
BigTv News
August 11, 2026
Breaking News
ಬೆಂಗಳೂರು: ಮಾದಕ ವಸ್ತುಗಳ ಮಾರಾಟ ಹಾಗೂ ಪೂರೈಕೆ ವಿರುದ್ಧ ಪೊಲೀಸರು ನಡೆಸುತ್ತಿರುವ ‘ಆಪರೇಷನ್ ರೈಸ್’ ಮತ್ತು ‘ಬೇಡ ಬ್ರೊ’ ಕಾರ್ಯಾಚರಣೆಯಲ್ಲಿ 39 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ ₹55.80 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಲ್ಲಿ 8 ವಿದೇಶಿಗರು, 21 ಹೊರರಾಜ್ಯದವರು ಹಾಗೂ 10 ಸ್ಥಳೀಯರು ಸೇರಿದ್ದಾರೆ. ಅಮೃತಹಳ್ಳಿ ಪೊಲೀಸರು ₹28.88 ಕೋಟಿ ಮೌಲ್ಯದ ಎಂಡಿಎಂಎ ಜಪ್ತಿ ಮಾಡಿ ದೆಹಲಿ ಹಾಗೂ ನೈಜೀರಿಯಾ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಕೆಐಎ …
Read More »