Breaking News

Breaking News

ಬೀದರ್ ನ ಕಾರಂಜಾ ಯೋಜನೆಯ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಬೀದರ್:‌ ಜಿಲ್ಲೆಯ ಕಾರಂಜಾ ಯೋಜನೆಗಾಗಿ ಭೂಮಿ ಕಳೆದುಕೊಂಡು ನ್ಯಾಯಯುತ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿರುವ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಬೆಳಗಾವಿ ಸುವರ್ಣಸೌಧದ ಸಮಿತಿ ಕೊಠಡಿಯಲ್ಲಿ ಇಂದು (ಡಿ.19) ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ, ಪೌರಾಡಳಿತ ಸಚಿವ ರಹೀಂಖಾನ್, ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ಸಂತ್ರಸ್ತರ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇದು ಹಲವು ವರ್ಷಗಳ ಹಿಂದಿನ ಸಮಸ್ಯೆಯಾಗಿದ್ದು ಈ ಬಗ್ಗೆ …

Read More »

ಪಂಚಮಸಾಲಿ ಮೀಸಲಾತಿ ಕುರಿತಾಗಿ ಚರ್ಚೆ: ಡಿ.21 ರಂದು ಸರ್ವ ಪಕ್ಷಗಳ ಶಾಸಕರ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಕುರಿತಾಗಿ ಚರ್ಚೆ ನಡೆಸಲು ಡಿಸೆಂಬರ್ 21ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವ ಪಕ್ಷಗಳ ಶಾಸಕರ ಸಭೆ ಕರೆದಿದ್ದಾರೆ. ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಡಿಸೆಂಬರ್ 21ರಂದು ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಪಂಚಮಸಾಲಿ ಸಮಾಜದ ಶಾಸಕರನ್ನು ಹೊರತುಪಡಿಸಿ ಸಮುದಾಯದ ಯಾವುದೇ ಮುಖಂಡರನ್ನು ಸಭೆಗೆ ಆಹ್ವಾನಿಸಿಲ್ಲ. ಪಂಚಮಸಾಲಿ ಸಮಾಜದ ಮೀಸಲಾತಿ ಬೇಡಿಕೆ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ಅಭಿಪ್ರಾಯ ಏನಿದೆ? ಹಿಂದುಳಿದ …

Read More »

ತಾಂಡಾಗಳಿಗೆ ಅನಧಿಕೃತ ವಿದ್ಯುತ್ ಸಂಪರ್ಕ ಸಕ್ರಮಗೊಳಿಸಲು ಆದೇಶ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ದೇವದುರ್ಗ ತಾಲ್ಲೂಕಿನಲ್ಲಿ ಇರುವ ದೊಡ್ಡಿಗಳು ಹಾಗೂ ತಾಂಡಗಳಿಗೆ ಅನಧಿಕೃತ ವಿದ್ಯುತ್‌ ಸಂಪರ್ಕ ಪಡೆಯಲಾಗಿದ್ದು, ಈ ವಿದ್ಯುತ್‌ ಸಂಪರ್ಕವನ್ನು ಸಕ್ರಮಗೊಳಿಸಲು ಆದೇಶ ನೀಡಲಾಗಿದೆ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್‌ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌‍ ಶಾಸಕಿ ಕರೆಮ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇವದುರ್ಗ ತಾಲ್ಲೂಕಿನಲ್ಲಿ 132 ದೊಡ್ಡಿಗಳ 792 ಮನೆಗಳು ಹಾಗೂ 26 ತಾಂಡಗಳ 373 ಮನೆಗಳಿಗೆ ನಿರಂತರ ಜ್ಯೋತಿ ಮಾರ್ಗಗಳ ಮೂಲಕ 24 ಗಂಟೆ …

Read More »

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು: ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಸರ್ಕಾರವು ನೀಡಿರುವ ಆಡಳಿತಾತ್ಮಕ ಅನುಮೋದನೆ ಮೇರೆಗೆ, ಅನುದಾನ ಲಭ್ಯತೆ ಅನುಸಾರ ಸೂಕ್ತ ಅನುದಾನ ಒದಗಿಸಿ, ಯೋಜನೆಯನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ವಿಧಾನ ಪರಿಷತ್ತಿನಲ್ಲಿ ಪಿ. ಹೆಚ್. ಪೂಜಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-1, 2 ಯೋಜನೆಯನ್ನು ಪೂರ್ಣಗೊಳಿಸಲಾಗಿದ್ದು, ಹಂತ-3ರ ಯೋಜನೆಯನ್ನು ಪರಿಷ್ಕೃತ ಅನುಮೋದಿತ ಅಂದಾಜು ಮೊತ್ತ ರೂ.51,148.94 …

Read More »

ಹೊಸಪೇಟೆಯಲ್ಲಿ ಅಂಬೇಡ್ಕರ್ ಅಪಮಾನ ಖಂಡಿಸಿ ಅಮಿತ್‌ ಶಾ ವಿರುದ್ಧ ಪ್ರತಿಭಟನೆ

ಹೊಸಪೇಟೆ: ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ವತಿಯಿಂದ ಇಂದು ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಕಾರರು, ಶಾ ಭಾವಚಿತ್ರಗಳಿಗೆ ಚಪ್ಪಲಿ ಏಟು ನೀಡಿದರು ಹಾಗೂ ಕೊನೆಯಲ್ಲಿ ಭಾವಚಿತ್ರಗಳನ್ನು ಸುಟ್ಟು ಹಾಕಿದರು. ಬಿಜೆಪಿ ಮನುವಾದಿ ಪಕ್ಷ, ಆ ಪಕ್ಷದ ನಿಜವಾದ ಬಣ್ಣ ಈಗ ಮತ್ತೊಮ್ಮೆ ಬಯಲಾಗಿದೆ. ಅಮಿತ್ ಶಾ …

Read More »

ಡಾ.ಬಿ.ಆರ್.ಅಂಬೇಡ್ಕರ್ ಗೆ ಅಪಮಾನ ಖಂಡಿಸಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಅಂಬೇಡ್ಕರ್ ಗೆ ಅಪಮಾನ ಮಾಡಿರುವ ಆರೋಪದ ಬೆನ್ನಲ್ಲೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಾರಿ ವಿರೋಧ ವ್ಯಕ್ತವಾಗಿದೆ. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಸಮತಾ ಸೇನೆ, ಸಮಗಾರ ಹರಳಯ್ಯ ಸಮಾಜ ಸೇರಿ ವಿವಿಧ ದಲಿತ ಸಂಘ ಸಂಸ್ಥೆಗಳಿಂದ ಪ್ರತಿಭಟನೆ ನಡೆಸುವ ಮೂಲಕ ಹುಬ್ಬಳ್ಳಿಯ ಅಂಬೇಡ್ಕರ ವೃತ್ತದಲ್ಲಿ ಅಮಿತ್ ಶಾ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಂಸತ್ ನಲ್ಲಿ ಅಮಿತ ಶಾ …

Read More »

ಏಕಾಏಕಿ ಅಂಬೇಡ್ಕರ್ ಭಾವಚಿತ್ರ ಹಿಡಿದು ಅಮಿತ್ ಶಾ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಳಗಾವಿ: ಧಿಕ್ಕಾರ ಧಿಕ್ಕಾರ, ಕೇಂದ್ರ ಬಿಜೆಪಿ ಸರಕಾರಕ್ಕೆ ಧಿಕ್ಕಾರ’ ಎಂದು ಕಾಂಗ್ರೆಸ್ ಸದಸ್ಯರು ಏಕಾಏಕಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಘಟನೆ ಇಂದು ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ನಡೆಯಿತು. ಲೋಕಸಭೆಯಲ್ಲಿ ಬುಧವಾರ ಅಮಿತ್ ಶಾ, ಅಂಬೇಡ್ಕರ್ ಹೆಸರು ಬಳಸುವುದು ಫ್ಯಾಶನ್ ಆಗಿದೆ ಎಂದು ನೀಡಿದ ಹೇಳಿಕೆಯಿಂದ ರಾಜ್ಯದ ವಿವಿಧೆಡೆ ಪ್ರತಿಭಟನೆ ಆರಂಭಗೊಂಡಿದ್ದು, …

Read More »

ರಾಜ್ಯ ಸರ್ಕಾರದಿಂದ ಸಾರಿಗೆ ನಿಗಮದಲ್ಲಿ 9000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ

ಬೆಳಗಾವಿ : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈಗಾಗಲೇ‌ ನಾಲ್ಕು ಸಾರಿಗೆ ನಿಗಮಗಳಲ್ಲಿ 9,000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಸಾರಿಗೆ ಸಚಿವರ ಪರವಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಉತ್ತರಿಸಿದ್ದು, ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಕಳೆದ …

Read More »

ಎಕೋಫಿಕ್ಸ್ ಡಾಂಬರೀಕರಣ ವೀಕ್ಷಿಸಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ

ಬೆಳಗಾವಿ: ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಬುಧವಾರ ನಗರದ ಕುಮಾರಸ್ವಾಮಿ ಬಡಾವಣೆಯ ಹತ್ತಿರ ರಸ್ತೆ ನಿರ್ಮಾಣ, ದುರಸ್ತಿಗೆ ಬಳಸಬಹುದಾದ ಎಕೋಫಿಕ್ಸ್ ಡಾಂಬರೀಕರಣ ಉತ್ಪನ್ನ ಬಳಕೆಯ ಅಣಕು ವೀಕ್ಷಿಸಿದರು. ಎಕೋಫಿಕ್ಸ್ ಡಾಂಬರೀಕರಣ ಉತ್ಪನ್ನದಲ್ಲಿ ಆಧುನಿಕ ತಂತ್ರಜ್ಞಾನ ‌ಬಳಸಿಕೊಳ್ಳಲಾಗಿದೆ. ಮಳೆ, ಚಳಿಮ ಬೇಸಿಗೆಯಲ್ಲೂ ಈ ಉತ್ಪನ್ನವನ್ನು ಬಳಕೆ ಮಾಡಬಹುದು. ರಸ್ತೆ ಗುಂಡಿಗಳ ತ್ವರಿತ ದುರಸ್ತಿಗಾಗಿ ಇದು ಅತೀ ಉಪಯುಕ್ತ. ಹೆದ್ದಾರಿ, ಸೇತುವೆ, ಪ್ಯಾಚ್ ವರ್ಕ್, ತಗ್ಗು ಪ್ರದೇಶದ ದುರಸ್ತಿ, ವಾಹನ ನಿಲುಗಡೆ …

Read More »

ಕಂದಾಯ ಹಾಗೂ ಸರ್ವೆ ಇಲಾಖೆಯಲ್ಲಿ ಭ್ರಷ್ಟಾಚಾರವಿದೆ: ಅಚ್ಚರಿ ಹೇಳಿಕೆ ನೀಡಿದ ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಇಲ್ಲಿನ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ವಿವಿಧ ಸಮಸ್ಯೆ ಹಾಗೂ ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ನಿನ್ನೆ ( ಡಿಸೆಂಬರ್‌ 18 ) ಕಂದಾಯ ಸಚಿವ ಕೃಷ್ಣ ಬೈರೇಗೌಡ ಸದನದಲ್ಲಿ ಮಾತನಾಡಿ ಕಂದಾಯ ಹಾಗೂ ಸರ್ವೆ ಇಲಾಖೆಯಲ್ಲಿ ಭ್ರಷ್ಟಾಚಾರ ಇರುವುದನ್ನು ಒಪ್ಪಿಕೊಂಡಿದ್ದಾರೆ. ಈ ಕುರಿತು ಅಚ್ಚರಿಯ ಹೇಳಿಕೆ ನೀಡಿರುವ ಕೃಷ್ಣ ಬೈರೇಗೌಡ ಆ ಭ್ರಷ್ಟಾಚಾರ ಇಲಾಖೆಯ ಕೆಳಹಂತದಲ್ಲಿದೆ ಎಂದೂ ಸಹ ಹೇಳಿದ್ದಾರೆ. ಇಲಾಖೆಯಲ್ಲಿ ಭ್ರಷ್ಟಾಚಾರ ಇರುವುದರ ಕುರಿತು …

Read More »