Breaking News

Breaking News

ಆರೋಗ್ಯ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಖಾಯಂ ಮಾಡಲು ಅವಕಾಶವಿಲ್ಲ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ: ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಖಾಯಂ ಮಾಡಲು ಅವಕಾಶವಿಲ್ಲ. ಆದರೆ ಶೇ.15 ರಷ್ಟು ವೇತನ ಹೆಚ್ಚಳ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಉಡುಪಿ ಕ್ಷೇತ್ರದ ಶಾಸಕ ಯಶ್‌ಪಾಲ್‌ ಸುವರ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎನ್‌ಎಚ್‌ಎಂ ಅಭಿಯಾನದ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಗುತ್ತಿಗೆ ಆಧಾರದ …

Read More »

ಬಿಬಿಎಂಪಿ ಪೌರಕಾರ್ಮಿಕ ನೇಮಕಾತಿ: 8000 ಮಹಿಳಾ ಪೌರಕಾರ್ಮಿಕರಿಗೆ ಕಾಯಂ ಭಾಗ್ಯ

ಬೆಂಗಳೂರು: ಬಿಬಿಎಂಪಿಯ ಪೌರಕಾರ್ಮಿಕ ನೇಮಕಾತಿ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದ್ದು, ಕಾಯಂಗೊಂಡಿರುವ 12 ಸಾವಿರ ಹುದ್ದೆಗಳ ಪೈಕಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಬಿಬಿಎಂಪಿಯಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಎರಡು ಹಂತದಲ್ಲಿ ನೇಮಕ ಮಾಡಿಕೊಳ್ಳಲಾಗಿದ್ದು, ಒಟ್ಟು 14980 ಪೌರಕಾರ್ಮಿಕರನ್ನು ಕಾಯಂಗೊಳಿಸವುದಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಪೈಕಿ ಇದೀಗ 12,699 ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಇದರಲ್ಲಿ ಬಹುತೇಕ 7,500 ರಿಂದ 8 ಸಾವಿರ …

Read More »

ಎಲ್ಲಾ ಆಸ್ತಿಗಳನ್ನು ಸ್ಕ್ಯಾನಿಂಗ್ ಮಾಡಿ ಮನೆಮನೆಗೆ ಖಾತಾ ವಿತರಿಸಲು ನಿರ್ಧಾರ: ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ: ಎಲ್ಲಾ ಆಸ್ತಿಗಳನ್ನು ಸ್ಕ್ಯಾನಿಂಗ್ ಮಾಡಿ ಮನೆಮನೆಗೆ ಖಾತಾ ವಿತರಿಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಬಿಎಂಪಿ ಎರಡನೇ ತಿದ್ದುಪಡಿ ವಿಧೇಯಕ ಕುರಿತು ಚರ್ಚೆಯ ವೇಳೆ ವಿಪಕ್ಷ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಸ್ಕ್ಯಾನಿಂಗ್ ಮಾಡಿ ಮನೆಮನೆಗೆ ಖಾತಾ ವಿತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ಬಿಬಿಎಂಪಿಯಲ್ಲಿ ಅಂದಾಜು 7 ಲಕ್ಷ ಆಸ್ತಿಗಳು …

Read More »

ಅಲೆಮಾರಿ ಸಮುದಾಯದ ಮೀಸಲಾತಿ, ಇತರ ಬೇಡಿಕೆಗಳಿಗೆ ಅಗತ್ಯ ಕ್ರಮ: ಸಚಿವ ಆರ್.ಬಿ.ತಿಮ್ಮಾಪುರ

ಬೆಳಗಾವಿ: ಅಲೆಮಾರಿ ಸಮುದಾಯದ ಮೀಸಲಾತಿ ಮತ್ತು ಇತರ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್‌ ಬಿ ತಿಮ್ಮಾಪುರ ಅವರು ಹೇಳಿದರು. ಶೋಷಿತ ಸಮುದಾಯಗಳ ಸರ್ವಾಂಗೀಣ ಪ್ರಗತಿಗಾಗಿ ಸಂವಿಧಾನ ಕಲ್ಪಿಸಿದ ಒಳಮೀಸಲಾತಿಯಲ್ಲಿ ಶೇ.3ರಷ್ಟನ್ನು ಅಲೆಮಾರಿ ಸಮುದಾಯಗಳಿಗೆ ನಿಗದಿಪಡಿಸಬೇಕು’ ಎಂದು ಒತ್ತಾಯಿಸಿ, ಪರಿಶಿಷ್ಟ ಜಾತಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಅಲೆಮಾರಿ ಸಮುದಾಯಗಳ …

Read More »

ಹೊಸದಾಗಿ ರಚನೆಯಾದ ತಾಲೂಕುಗಳಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಹೊಸದಾಗಿ ರಚನೆಯಾದ 65 ತಾಲೂಕುಗಳ ಪೈಕಿ 27 ತಾಲ್ಲೂಕುಗಳಿಗೆ ಸರ್ಕಾರಿ ಕಟ್ಟಡ ಒದಗಿಸಲಾಗಿದೆ. ಉಳಿದ ತಾಲೂಕುಗಳಿಗೆ ಏಪ್ರಿಲ್ ನಂತರ ತಾಲೂಕು ಕಚೇರಿ ‘ಪ್ರಜಾಸೌಧ’ ಕಟ್ಟಡ ಒದಗಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಜಗದೇವ್ ಗುತ್ತೇದಾರ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಲ್ಯಾಣ ಕರ್ನಾಟಕದ ಎಲ್ಲಾ 16 ತಾಲೂಕುಗಳಿಗೆ ಪ್ರಜಾಸೌಧ ನಿರ್ಮಿಸಿ ಕಚೇರಿ ನೀಡಲಾಗಿದೆ. ಜಾಗ ಲಭ್ಯವಿದ್ದ ತಾಲೂಕುಗಳಲ್ಲಿ ಕಟ್ಟಡ …

Read More »

ಶೀಘ್ರವೇ ಮಲ್ಲಾಬಾದ್ ಏತ ನೀರಾವರಿ ಯೋಜನೆ ಟೆಂಡರ್ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗುವುದು: ಡಿಸಿಎಂ ಭರವಸೆ

ಬೆಳಗಾವಿ: ಶೀಘ್ರದಲ್ಲೇ ಮಲ್ಲಾಬಾದ್ ಏತ ನೀರಾವರಿ ಯೋಜನೆ ಟೆಂಡರ್ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಜಲಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್​ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ತಿನ ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯ ಬಿ.ಜಿ.ಪಾಟೀಲ್​ ಅವರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್ , ಬೊಮ್ಮಾಯಿ ಅವರ ಸರ್ಕಾರದ ಬಜೆಟ್​​ನಲ್ಲಿ ನೀರಾವರಿ ಇಲಾಖೆಗೆ 22 ಸಾವಿರ ಕೋಟಿ ಅನುದಾನ ನೀಡಿದ್ದರು. ಆದರೆ ನಿಗಮಗಳಲ್ಲಿ 28 ಸಾವಿರ ಕೋಟಿ ಮೊತ್ತದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಕೆಲಸ ಮಾಡಿಸಿ …

Read More »

ತೊಗರಿ ಧಾರಣೆ ಎರಡು ವಾರದಲ್ಲಿ ಕ್ವಿಂಟಲ್ ಗೆ ₹1,987 ಬೆಲೆ ಕುಸಿತ: ರೈತರಲ್ಲಿ ಆತಂಕ

ಕಲಬುರಗಿ: ತೊಗರಿ ಕಣಜ ಕಲಬುರಗಿಯಲ್ಲಿ ತೊಗರಿ ಇಳುವರಿ ಉತ್ತಮವಾಗಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆಗೆ (ಎಪಿಎಂಸಿ) ಹೆಚ್ಚಿನ ಪ್ರಮಾಣದಲ್ಲಿ ಆವಕವಾಗುತ್ತಿದೆ. ಇದರಿಂದ ದಿಢೀರ್ ದರ ಕುಸಿದಿದ್ದು, ರೈತರು ಆತಂಕಗೊಂಡಿದ್ದಾರೆ. ಪ್ರಸಕ್ತ ವರ್ಷ ಜಿಲ್ಲೆಯ 5.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆಯಾಗಿದ್ದು, ಸುಮಾರು 50 ಲಕ್ಷ ಕ್ವಿಂಟಲ್ ಇಳುವರಿಯ ನಿರೀಕ್ಷೆ ಇದೆ. ಈಗಾಗಲೇ, ಜಿಲ್ಲೆಯ ಎಪಿಎಂಸಿಗಳಿಗೆ 4.50 ಲಕ್ಷ ಕ್ವಿಂಟಲ್‌ ತೊಗರಿ ಆವಕವಾಗಿದೆ. ಡಿಸೆಂಬರ್ 2ರಂದು ಕ್ವಿಂಟಲ್‌ಗೆ ಗರಿಷ್ಠ ದರ ₹11,000 …

Read More »

210 ತಾಲೂಕುಗಳಿಗೂ ಭೂ ಸುರಕ್ಷೆ ಯೋಜನೆ ವಿಸ್ತರಿಸಲಾಗುವುದು: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ಸರ್ವೇ ಹಾಗೂ ಕಂದಾಯ ಇಲಾಖೆಗಳಲ್ಲಿನ ಹಳೆ ಭೂ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಿ ಡಾಟಾಬೇಸ್‌ನಲ್ಲಿ ಸಂರಕ್ಷಿಸುವ ಉದ್ದೇಶದಿಂದ 31 ತಾಲ್ಲೂಕುಗಳಲ್ಲಿ ಪ್ರಾಯೋಗಿಕ ಜಾರಿಗೊಳಿಸಿದ್ದ ‘ಭೂ ಸುರಕ್ಷೆ’ ಯೋಜನೆಯನ್ನು ಉಳಿದ 210 ತಾಲ್ಲೂಕುಗಳಿಗೂ ವಿಸ್ತರಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು. ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಮೂಲ ದಾಖಲೆಗಳ ಸ್ಕ್ಯಾನಿಂಗ್ ಪ್ರಕ್ರಿಯೆ 31 ತಾಲ್ಲೂಕುಗಳಲ್ಲಿ ಪೂರ್ಣಗೊಂಡಿದೆ. 2025ರ ಡಿಸೆಂಬರ್ ಒಳಗಾಗಿ ಉಳಿದ ತಾಲೂಕುಗಳಲ್ಲಿನ …

Read More »

ರೈತರ ಹಾಗೂ ದೇವಸ್ಥಾನದ ಭೂಮಿಯನ್ನು ವಕ್ಫ್ ಬೋರ್ಡ್ ಹಿಂತೆಗೆದುಕೊಳ್ಳಲ್ಲ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಇಂದು ವಿಪಕ್ಷ ಬಿಜೆಪಿ ನಾಯಕರು ವಕ್ಫ್ ಬೋರ್ಡ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳಿದರು. ಈ ವೇಳೆ ಸರ್ಕಾರದ ಪರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಉತ್ತರ ನೀಡಲು ಮುಂದಾದಾಗ ಸದನದಲ್ಲಿ ಗದ್ದಲ ಸೃಷ್ಟಿಯಾಯ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಮದ್ಯ ಪ್ರವೇಶಿಸಿ ವಿಪಕ್ಷ ನಾಯಕರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ವಕ್ಫ್ ಬೋರ್ಡ್ ನಿಂದ ದೇವಸ್ಥಾನಕ್ಕೆ ನೋಟಿಸ್ ಕೊಟ್ಟಿದ್ದರೆ ಆ ರೀತಿಯ …

Read More »

ಖರ್ಗೆ ಬೇಡಿಕೆಯಂತೆ ನಾನು ರಾಜೀನಾಮೆ ಕೊಡಲು ಸಿದ್ಧ: ಸ್ಫೋಟಕ ಹೇಳಿಕೆ ನೀಡಿದ ಅಮಿತ್ ಶಾ

ನವದೆಹಲಿ: ಅಂಬೇಡ್ಕರ್ ವಿವಾದ ಭಾರಿ ಕೋಲಾಹಲ ಸೃಷ್ಟಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಆಡಿದ ಮಾತನ್ನೇ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅಸ್ತ್ರವಾಗಿ ಹಿಡಿದುಕೊಂಡಿದೆ. ಅಂಬೇಡ್ಕರ್‌ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಹೋರಾಟ ನಡೆಸುತ್ತಿದೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಅಮಿತ್ ಶಾ ಹೇಳಿಕೆ ಖಂಡಿಸಿದ್ದಾರೆ ಇಷ್ಟೇ ಅಲ್ಲ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ವಿವಾದ ಜೋರಾಗುತ್ತಿದ್ದಂತೆ ಅಮಿತ್ ಶಾ ಸುದ್ದಿಗೋಷ್ಠಿ ನಡೆಸಿದ್ದಾರೆ ಈ ವೇಳೆ ಮಲ್ಲಿಕಾರ್ಜುನ …

Read More »