BigTv News
December 18, 2024
Breaking News, ಬೆಳಗಾವಿ
ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ 2024 ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ ನೀಡಿತು. ಕಲಾಪದ ವೇಳೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಪ್ರಸ್ತಾವವನ್ನು ಮಂಡಿಸಿದರು. ಇದಕ್ಕೆ ಅನುಮೋದನೆ ದೊರೆತ್ತಿದ್ದು, ಕಾರ್ಮಿಕರ ಕಲ್ಯಾಣಕ್ಕೆ ಅನುಕೂಲವಾಗುವ ಉಪಕ್ರಮವನ್ನು ಈ ಮಸೂದೆ ಒಳಗೊಂಡಿದೆ. ಪ್ರಸ್ತಾವ ಮಂಡಿಸಿದ ನಂತರ ವಿವರ ನೀಡಿದ ಸಚಿವ ಲಾಡ್ ಅವರು, ಈ ತಿದ್ದುಪಡಿಯು ಈಗಾಗಲೇ ಇರುವ ಕಾಯ್ದೆಗೆ …
Read More »
BigTv News
December 18, 2024
Breaking News, ಬೆಳಗಾವಿ
ಬೆಳಗಾವಿ: ರಾಜ್ಯದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ಸ್ವಾಧೀನಪಡಿಸಿಕೊಳ್ಳುವ ಜಮೀನಿನ ಪರಿಹಾರವನ್ನು ಸಂಬಂಧಪಟ್ಟ ಖಾತೆದಾರರಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆರ್.ಟಿ.ಜಿ. ಎಸ್ ಮುಖಾಂತರ ನೇರವಾಗಿ ಜಮೆ ಮಾಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ.ಪಾಟೀಲ್ ತಿಳಿಸಿದರು. ಅವರು ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಭಾರತಿ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯ ಸರ್ಕಾರವು ಕೈಗಾರಿಕಾ ಪ್ರದೇಶಗಳ …
Read More »
BigTv News
December 18, 2024
Breaking News, ಬೆಳಗಾವಿ
ಬೆಳಗಾವಿ: ಅನುದಾನದ ಕೊರತೆಯಾಗುತ್ತಿದೆ ಎಂದು ಹಲವಾರು ಶಾಸಕರು ಆರೋಪ ಮಾಡುತ್ತಿದ್ದರು. ಅದರಲ್ಲೂ ಕಾಂಗ್ರೆಸ್ ಶಾಸಕರು ಕೂಡ ಆರೋಪಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಎಲ್ಲರಿಗೂ ವಾಗ್ದಾನ ನೀಡಿದ್ದಾರೆ. ಕಾಂಗ್ರೆಸ್ ಶಾಸಕರಿಗೂ ಸಿಎಂ ಸಿದ್ದರಾಮಯ್ಯ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದ್ದು, ಪ್ರತಿಯೊಂದು ಕ್ಷೇತ್ರಕ್ಕೆ 26 ಕೋಟಿ ರೂ.ಅನುದಾನ ನೀಡಲು ಮುಂದಾಗಿದ್ದಾರೆ. ಕಾಂಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಸದನದಲ್ಲೇ ಈ ರೀತಿಯಾಗಿ ಘೋಷಿಸಿದ್ದಾರೆ. ಅನುದಾನ ಕೊರತೆ ನೀಗಿಸಲು …
Read More »
BigTv News
December 18, 2024
Breaking News, ಬೀದರ್
ಬೀದರ್: ಆಶಾ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಸರ್ಕಾರಿ ನೌಕರರಾಗಿ ನೇಮಕ ಮಾಡುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಸಮಿತಿಯವರು ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಮಂಗಳವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸೇವೆ ಕಾಯಂಗೊಳಿಸುವ ಸಂಬಂಧ ಈಗಾಗಲೇ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರವರ್ಗ-3 ಹಾಗೂ ಪ್ರವರ್ಗ-4ರ ಅಡಿ ಸೇವೆ …
Read More »
BigTv News
December 18, 2024
Breaking News, ಬೆಳಗಾವಿ
ಬೆಳಗಾವಿ: ಬೆಂಗಳೂರು ಸೇರಿ ರಾಜ್ಯದ ಯಾವುದೇ ಭಾಗದಲ್ಲಿ ಸರ್ಕಾರಿ ಜಮೀನು ಒತ್ತುವರಿಯಾಗಿದ್ದರೆ ಅದನ್ನು ತೆರವುಗೊಳಿಸುವ ಸಂಪೂರ್ಣ ಅಧಿಕಾರವನ್ನು ತಹಶೀಲ್ದಾರರಿಗೆ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ‘ಕರ್ನಾಟಕ ಭೂಕಂದಾಯ 3ನೇ ತಿದ್ದುಪಡಿ ಮಸೂದೆ’ಗೆ ವಿಧಾನಸಭೆ ಅಂಗೀಕಾರ ನೀಡಿದೆ. ಈ ಮಸೂದೆಯಲ್ಲಿ ಒಟ್ಟು 4 ತಿದ್ದುಪಡಿಗಳಿಗೆ ಒಪ್ಪಿಗೆ ನೀಡಲಾಯಿತು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಸೂದೆ ಮಂಡಿಸಿದರು. ಈ ಕುರಿತು ವಿವರಣೆ ನೀಡಿದ ಕೃಷ್ಣಬೈರೇಗೌಡ, ಕರ್ನಾಟಕ ಭೂಕಂದಾಯ ಸೆಕ್ಷನ್ 104 ಅನ್ನು ಈ …
Read More »
BigTv News
December 18, 2024
Breaking News, ಬೀದರ್
ಬೀದರ್: ಜಿಲ್ಲೆಯಲ್ಲಿ ಡಿ. 14ರಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 73,628 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಬೀದರ್ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ತಿಳಿಸಿದರು. ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಕ್ಷಿದಾರರಿಗೆ ಒಟ್ಟು ₹23.43 ಕೋಟಿ ಪರಿಹಾರ ಒದಗಿಸಲಾಗಿದೆ ಎಂದು ಹೇಳಿದರು. ಒಟ್ಟು 10,191 ಪೆಂಡಿಂಗ್ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ₹13.16 ಕೋಟಿ ವಸೂಲಾತಿ ಮತ್ತು ಪರಿಹಾರ ಒದಗಿಸಲಾಗಿದೆ. …
Read More »
BigTv News
December 18, 2024
Breaking News, ಬೆಳಗಾವಿ
ಬೆಳಗಾವಿ: ಕರ್ನಾಟಕ ಸರ್ಕಾರವು ರಾಜ್ಯದ ಭೂ ಕಂದಾಯ ಕಾಯ್ದೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆಗಳನ್ನು ‘ತಿದ್ದುಪಡಿ’ ಎಂದು ಕರೆಯಲಾಗುತ್ತದೆ. ಈ ತಿದ್ದುಪಡಿಗಳ ಮುಖ್ಯ ಉದ್ದೇಶಗಳು ಸರ್ಕಾರಿ ಜಮೀನುಗಳನ್ನು ಕಾಪಾಡುವುದು ಮತ್ತು ಸಣ್ಣ ಉದ್ದಿಮೆಗಳಿಗೆ ಸುಲಭವಾಗಿ ಕೆಲಸ ಮಾಡಲು ಅನುವು ಮಾಡಿಕೊಡುವುದು. ಸರ್ಕಾರಿ ಜಮೀನುಗಳ ರಕ್ಷಣೆ: ಈ ಹಿಂದೆ ಕೆಲವರು ಸರ್ಕಾರಿ ಜಮೀನುಗಳನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಈ ತಿದ್ದುಪಡಿಯಿಂದ ಇದು ಸುಲಭವಾಗಿ ಸಾಧ್ಯವಾಗುವುದಿಲ್ಲ. ಸಣ್ಣ ಉದ್ದಿಮೆಗಳಿಗೆ ಸುಲಭ: …
Read More »
BigTv News
December 17, 2024
Breaking News, ಬೆಳಗಾವಿ
ಬೆಳಗಾವಿ: ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿದವು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ರೈತರು ಪ್ರತಿಭಟನೆ ನಡೆಸಿದರು. ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು. ಟನ್ ಕಬ್ಬಿಗೆ ಕಾರ್ಖಾನೆಗಳಿಂದ ಸರಕಾರಕ್ಕೆ ಹೋಗುತ್ತಿರುವ 5 ಸಾವಿರ ರೂ.ಗಳ ತೆರಿಗೆ ಹಣದಲ್ಲಿಯ 2 ಸಾವಿರ ರೂ.ಗಳನ್ನು ರೈತರಿಗೆ ನೀಡಬೇಕು. …
Read More »
BigTv News
December 17, 2024
Breaking News, ಬೆಳಗಾವಿ
ಬೆಳಗಾವಿ: ರೈತರು ಕೈಗಾರಿಕಾ ಉದ್ದೇಶಗಳಿಗೆ ಜಮೀನು ನೀಡುವಾಗ ಭೂ ಪರಿಹಾರ ಬೇಡ ಎಂದರೆ ಅಂಥವರಿಗೆ ಅಭಿವೃದ್ಧಿಪಡಿಸಿದ 10781 ಚದರ ಅಡಿ ಜಮೀನನ್ನು ಸರ್ಕಾರ ನೀಡುತ್ತಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ವಿಧಾನಪರಿಷತ್ನಲ್ಲಿಂದು ಪ್ರಶ್ನೋತ್ತರ ಅವಧಿಯಲ್ಲಿ ಭಾರತಿ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಅವರು, ಭೂ ಸ್ವಾಧೀನ ಪ್ರಕ್ರಿಯೆ ವೇಳೆ ರೈತರಿಗೆ ಮಾರುಕಟ್ಟೆ ದರದಂತೆ ಪರಿಹಾರ ನೀಡಲಾಗುತ್ತದೆ. ಒಂದು ವೇಳೆ ಯಾರಾದರೂ ನಮಗೆ ಪರಿಹಾರ ಬೇಡ ಎಂದರೆ ನಮ ಇಲಾಖೆ …
Read More »
BigTv News
December 17, 2024
Breaking News
ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ’ಯನ್ನು ವಿಸ್ತೃತ ಸಮಾಲೋಚನೆಗಾಗಿ ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲು ಸರ್ಕಾರ ಸಿದ್ಧವಾಗಿದೆ ಎಂದು ಲೋಕಸಭೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಏಕಕಾಲದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸಂವಿಧಾನ (ನೂರ ಇಪ್ಪತ್ತೊಂಬತ್ತು ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆ, 2024 ಅನ್ನು ಲೋಕಸಭೆಯಲ್ಲಿ …
Read More »