Shaikh BigTv
December 17, 2024
Breaking News
ನವಲಗುಂದ: ಪಟ್ಟಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಆಂಜನೇಯನ ವೃತ ಹಿಡಿದು ಮಹಾಪೂಜೆ ನಡೆಸಿ ಪಾಲಿಕೆ, ಮೆರವಣಿಗೆ ಮೂಲಕ ಭಕ್ತಾದಿಗಳು ಪಾದಯಾತ್ರೆ ಕೈಗೊಂಡರು. ಈ ಪಾದಯಾತ್ರೆಯು ಲಾಲಘಡ ಮಾರುತಿ ದೇವಸ್ಥಾನದಿಂದ ಪ್ರಾರಂಭಗೊಂಡು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿ, 14ಕಿಲೋ ಮೀಟರ್ ದೂರದಲ್ಲಿ ಇರುವ ಕಾಲವಾಡ ಗ್ರಾಮದ ಜೋಡ್ ಆಂಜನೇಯ ದೇವಸ್ಥಾನದವರೆಗೂ ನಡೆಯಿತು. ನೂರಾರು ಭಕ್ತರು ಈ ವಿಶೇಷ ಸಂದರ್ಭದಲ್ಲಿ ಭಾಗಿಯಾಗಿದ್ದರು
Read More »
Shaikh BigTv
December 17, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಗಣೇಶ ಟ್ರಾವೆಲ್ಸ್ ಬಸ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಈ ಘಟನೆ ಅಂಕೋಲಾ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಅಂಕೋಲದತ್ತ ತೆರಳುತ್ತಿದ್ದ ಗಣೇಶ ಟ್ರಾವೆಲ್ಸ್ ಬಸ್, ಎದುರಿಗೆ ಬರುತ್ತಿದ್ದ ಟ್ಯಾಂಕರ್ ನಡುವೆ ಡಿಕ್ಕಿ ಸಂಬವಿಸಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ತೀವ್ರ ಗಾಯಗೊಂಡವರನ್ನು ಆ್ಯಂಬುಲೆನ್ಸ್ ಮೂಲಕ ಅಂಕೋಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
Read More »
BigTv News
December 17, 2024
Breaking News, ಬೆಳಗಾವಿ
ಬೆಳಗಾವಿ: ಪ್ರಸಕ್ತ ಸಾಲಿಗೆ 3.46 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಿದ್ದ ರಾಜ್ಯ ಸರಕಾರ ಸೋಮವಾರ ವಿಧಾನಸಭೆಯಲ್ಲಿ ಪೂರಕ ಅಂದಾಜುಗಳ ಎರಡನೇ ಕಂತನ್ನು ಮಂಡಿಸಿದ್ದು, ಹೆಚ್ಚುವರಿಯಾಗಿ 5,317.83 ಕೋಟಿ ರೂ. ಬಳಕೆಗೆ ಅವಕಾಶ ಮಾಡಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ 2024-25ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತನ್ನು ಮಂಡಿಸಿದರು. ಇದರಲ್ಲಿ ಸಂಚಿತ ನಿಧಿಯಿಂದ 3,012.88 ಕೋಟಿ ರೂ. ಹಾಗೂ ಕೇಂದ್ರ ಸಹಾಯಕ್ಕೆ ಸಂಬಂಧಿಸಿದ 1,199.94 …
Read More »
BigTv News
December 17, 2024
Breaking News
ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ, ‘ಒಂದು ರಾಷ್ಟ್ರ, ಒಂದೇ ಚುನಾವಣೆ’ಗೆ ಸಂಬಂಧಿತ ಎರಡು ಪ್ರತ್ಯೇಕ ಮಸೂದೆಗಳನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಿದೆ. ಲೋಕಸಭೆ ಕಲಾಪ ಕಾರ್ಯಸೂಚಿಯಲ್ಲಿ ಈ ಅಂಶ ಸೇರ್ಪಡೆಗೊಂಡಿದೆ. ಮಸೂದೆಗೆ ಸಮ್ಮತಿ ನೀಡುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಂಪುಟ, ಈ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿತ್ತು. ಕೇಂದ್ರ ಕಾನೂನು ಸಚಿವ ಅರುಣ್ ರಾಮ್ ಮೇಘವಾಲ್ ಅವರು ‘ಸಂವಿಧಾನ (129ನೇ ತಿದ್ದುಪಡಿ) ಮಸೂದೆ ಹಾಗೂ ‘ಕೇಂದ್ರ ಪ್ರಾಂತ್ಯವಾರು …
Read More »
BigTv News
December 17, 2024
Breaking News, ಬೆಳಗಾವಿ
ಬೆಳಗಾವಿ : ರಾಜ್ಯದ ಆರೋಗ್ಯಇಲಾಖೆ ಯಲ್ಲಿ ಒಟ್ಟು 69915 ಹುದ್ದೆಗಳು ಮಂಜೂರಾಗಿದ್ದು ಅವುಗಳಲ್ಲಿ 37045 ಹುದ್ದೆಗಳನ್ನು ಭರ್ತಿ ಮಾಡಿದ್ದು 32870 ಹುದ್ದೆಗಳು ಖಾಲಿ ಇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ.ಎಂ. ಜಿ. ಮುಳೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಖಾಲಿಯಿರುವ ಹುದ್ದೆಗಳಲ್ಲಿ ಗ್ರೂಪ್-ಡಿ ಹುದ್ದೆಗಳನ್ನು ಶೇ.30 ರಷ್ಟು Non-Clinical ಗೂ, ಶೇ. 45 ರಷ್ಟು …
Read More »
BigTv News
December 17, 2024
Breaking News, ಬೆಳಗಾವಿ
ಬೆಳಗಾವಿ : ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ರಚಿಸಬೇಕು ಎನ್ನುವ ಬೇಡಿಕೆ ನ್ಯಾಯಯುತವಾಗಿದ್ದು, ಸೂಕ್ತ ಸಂದರ್ಭದಲ್ಲಿ ಸರ್ಕಾರ ಈ ಬಗ್ಗೆ ನಿರ್ಣಯ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಸೋಮವಾರ ಸುವರ್ಣ ಸೌಧ ಜರುಗುತ್ತಿರುವ ಅಧಿವೇಶನದ ವಿಧಾನಸಭೆಯಲ್ಲಿ ಜರುಗಿದ ಪ್ರಶ್ನೋತ್ತರ ಕಲಾಪವೇಳೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಕಂದಾಯ ಸಚಿವರು ಉತ್ತರ ನೀಡಿದರು. ಶಾಸಕಿ …
Read More »
BigTv News
December 16, 2024
Breaking News, ಬೀದರ್
ಬೀದರ್ : ಜಿಲ್ಲೆಯಲ್ಲಿರುವ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಡಿಸಿಸಿ ಬ್ಯಾಂಕ್ ಹರಾಜಿಗೆ ಇಟ್ಟಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದ ಡಿಸಿಸಿ ಬ್ಯಾಂಕ್ ಎದುರುಗಡೆ ಪ್ರತಿಭಟನೆ ನಡೆಸಿದರು. ಸಾಲದ ಸುಳಿಗೆ ಸಿಲುಕಿ ಬಂದ್ ಆಗಿರುವ ಬಿ.ಎಸ್.ಎಸ್.ಕೆ.ಕಾರ್ಖಾನೆಯ ವಸ್ತುಗಳನ್ನು ಸೋಮವಾರ ಡಿಸಿಸಿ ಬ್ಯಾಂಕಿನ ಒಳಗೆ ಹರಾಜು ಪ್ರಕ್ರಿಯೆ ನಡೆಯುತ್ತಿದ್ದರೆ ಹೊರಗೆ ರೈತರು ಘೋಷಣೆ ಕೂಗುತ್ತ ಪ್ರತಿಭಟಿಸಿದರು. ಬ್ಯಾಂಕಿನ ಒಳಗೆ ನುಗ್ಗಲು ಪ್ರಯತ್ನಿಸಿದ ರೈತರನ್ನು ಮೊದಲೇ …
Read More »
BigTv News
December 16, 2024
Breaking News, ವಿಜಯಪುರ
ವಿಜಯಪುರ: ಆಲಮಟ್ಟಿ ಜಲಾಶಯದ ಅಣ್ಣೆಕಟ್ಟು ಎತ್ತರ ಆಗಬೇಕು ಎನ್ನುವ ಬಹುದಿನಗಳ ಕನಸು ಇದೀಗ ಈಡೇರುವ ಹಂತವನ್ನು ತಲುಪಿದೆ. ಈ ಬಗ್ಗೆ ಕುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್.519.60 ಮೀ. ನಿಂದ 524.26 ಮೀ. ನವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಯೋಜನೆಯನ್ನು ಹಂತ …
Read More »
Shaikh BigTv
December 16, 2024
Breaking News
ಕುಂದಗೋಳ : ಮಹಿಳೆಯೋರ್ವಳು ಮನೆಯಿಂದ ಕಾಣೆಯಾದ ಬಗ್ಗೆ ಪತ್ತೆ ಮಾಡಿ ಕೊಡುವಂತೆ ಸಂಬಂಧಿಕರು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮದ ಲಕ್ಷ್ಮೀ ಗುರುಸಿದ್ದಪ್ಪ ರಡ್ಡರ್ (25) ವರ್ಷದ ಮಹಿಳೆ ಮನೆಯಿಂದ ಹೊರಗೆ ಹೋದವರು ಪುನಃ ಬಾರದೆ ಕಾಣೆ ಆಗಿದ್ದಾರೆ. ಡಿ.13 ರಂದು ಕಾಣೆಯಾದ ಲಕ್ಷ್ಮೀ ಎಂಬುವವರನ್ನು ಪತ್ತೆ ಮಾಡಿ ಕೊಡುವಂತೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Read More »
Shaikh BigTv
December 16, 2024
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಕಳೆದ 2 ವರ್ಷಗಳಿಂದ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಶ್ ಯಳ್ಳೂರ್ ಅವರು ಠಾಣೆಯ ಮಹಿಳಾ ಸಿಬ್ಬಂದಿಗಳಿಗೆ ಹಾಗೂ ಕೆಲವು ಸಹೋದ್ಯೋಗಿಗಳಿಗೆ ಕೆಲಸದ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಿಗ್ಗೆ ಕಮಿಷನರ್ ಎನ್ ಶಶಿಕುಮಾರ್ ಅವರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ತೆರಳಿ ಅಲ್ಲಿರುವ ಮಹಿಳಾ ಕಾನ್ಸ್ಟೇಬಲ್ ಗಳನ್ನು ವಿಚಾರಣೆ ನಡೆಸಿದ್ದಾರೆ. ಈ ಕುರಿತು ಸಿಬ್ಬಂದಿಗಳನ್ನು ವಿಚಾರಿಸಿದಾಗ ಇನ್ಸ್ಪೆಕ್ಟರ್ ಸುರೇಶ …
Read More »