Breaking News

Breaking News

ಪೋರ್ಬ್ಸ್ 2024 ನೇ ಸಾಲಿನ ವಿಶ್ವದ ಅತೀ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ 3 ಭಾರತೀಯರಿಗೆ ಸ್ಥಾನ

ನವದೆಹಲಿ: ವಾಣಿಜ್ಯ ನಿಯತಕಾಲಿಕೆ ಫೋರ್ಬ್ಸ್ 2024ನೇ ಸಾಲಿನ ವಿಶ್ವದ 100 ಅತ್ಯಂತ ಪ್ರಭಾವಿ ಮಹಿಳೆಯರ 21ನೇ ವಾರ್ಷಿಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜಾಗತಿಕವಾಗಿ ಪ್ರಭಾವ ಬೀರಿದ ವಿವಿಧ ರಂಗದ ಮಹಿಳಾ ಸಾಧಕಿಯರು ಈ ಪಟ್ಟಿಯಲ್ಲಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಮೂವರು ಭಾರತಿಯರು ಇದರಲ್ಲಿ ಸ್ಥಾನ ಪಡೆದಿದ್ದಾರೆ. ನಿರ್ಮಲಾ ಅವರಿಗೆ ಪಟ್ಟಿಯಲ್ಲಿ 28ನೇ ಸ್ಥಾನ ಲಭಿಸಿದ್ದು, ಭಾರತೀಯರ ಪೈಕಿ ಮೊದಲಿಗರಾಗಿದ್ದಾರೆ. ಅಲ್ಲದೇ ಪಟ್ಟಿಯಲ್ಲಿ ಎಚ್‌ಸಿಎಲ್‌ ಕಾರ್ಪೋರೇಶನ್‌ನ ಮುಖ್ಯ ಕಾರ್ಯನಿರ್ವಾಹಕ …

Read More »

9 ವಿವಿಧ ಪ್ರತಿಷ್ಠಾನ, ಟ್ರಸ್ಟ್ ಗಳಿಗೆ ಅಧ್ಯಕ್ಷ, ಸದಸ್ಯರ ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕನ್ನಡ ಸಂಸ್ಕೃತಿ ಇಲಾಖೆಯಡಿ ಕಾರ್ಯ ನಿರ್ವಹಿಸುವ 9 ವಿವಿಧ ಪ್ರತಿಷ್ಠಾನ ಮತ್ತು ಟ್ರಸ್ಟ್‌ಗಳ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿ ಸರಕಾರ ಆದೇಶಿಸಿದೆ. ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನಕ್ಕೆ ಡಾ| ಬಿ.ಎಲ್‌. ಶಂಕರ್‌ ಅಧ್ಯಕ್ಷತೆ, ಸೂಳೇಬಾವಿಯ ಪಿ.ಬಿ.ದುತ್ತರಗಿ ಟ್ರಸ್ಟ್‌ಗೆ ಸಂಗಪ್ಪ ಕಲ್ಲಪ್ಪ ಕೊನೆಸಾಗರ ಅಧ್ಯಕ್ಷತೆ, ಉಡುಪಿಯ ಡಾ| ಶಿವರಾಮ ಕಾರಂತ ಟ್ರಸ್ಟ್‌ಗೆ ಗಣನಾಥ ಎಕ್ಕಾರು ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಿಸಲಾಗಿದೆ. ಮಂಡ್ಯದ ಪು.ತಿ.ನ. ಟ್ರಸ್ಟ್‌ಗೆ ಮೈಸೂರಿನ ಎಂ. ಕೃಷ್ಣಗೌಡ ಅಧ್ಯಕ್ಷರಾಗಿದ್ದಾರೆ. …

Read More »

ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಅದರ ಭಾಗವಾಗಿ ಈಗಾಗಲೇ 152 ಕೋಟಿ ರೂ. ಹಣವನ್ನು ವಿವಿಧ ಕಾಮಗಾರಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ, ಮನುಷ್ಯ ಹಾಗೂ ಜಾನುವಾರುಗಳ …

Read More »

ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ ಹಿನ್ನಲೆ ಮೈಸೂರು ದಸರಾ ಮಾದರಿಯಲ್ಲಿ ವಿಜೃಂಭಣೆ: ಡಿಸಿಎಂ ಡಿಕೆಶಿ

ಬೆಳಗಾವಿ: ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಧಿವೇಶನ ನಡೆದು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಗರವನ್ನು ಮೈಸೂರು ದಸರಾ ಮಾದರಿಯಲ್ಲಿ ವಿಜೃಂಭಿಸುವಂತೆ ಮಾಡಲಾಗುತ್ತದೆ. ಅಲ್ಲದೇ ಕಾಂಗ್ರೆಸ್‌ ಪಕ್ಷದ ಐತಿಹಾಸಿಕ ಸ್ಥಳವಾಗಿರುವ ವೀರಸೌಧದಿಂದ 2028ರ ಚುನಾವಣಾ ರಣಕಹಳೆ ಮೊಳಗಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹೇಳಿದರು. ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, …

Read More »

ಶೀಘ್ರವೇ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ: ಸಚಿವ ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಶರಣಗೌಡ ಕಂದಕೂರ್ ಅವರು ಕೇಳಿದಂತ ಪ್ರಶ್ನೆಗೆ ಉತ್ತರಿಸಿರುವಂತ ಅವರು ರಾಜ್ಯದಲ್ಲಿ 4871 ಸರ್ಕಾರಿ ಪ್ರೌಢ ಶಾಲೆಗಳಿದ್ದಾವೆ. 11,796 ಸಹ ಶಿಕ್ಷಕರ ವಿಷಯವಾರು ಹುದ್ದೆಗಳು ಖಾಲಿ ಇದ್ದಾವೆ ಎಂದರು. ಖಾಯಂ ಹುದ್ದೆ ಭರ್ತಿ ಆಗುವವರೆಗೂ ಅಥವಾ …

Read More »

ರಾಜ್ಯದ ಗ್ರಾ.ಪಂ.ಗಳಲ್ಲಿ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಅವರು ಮಾತನಾಡಿ, ಗ್ರಾಪಂಗಳ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಡದ ಎಲ್ಲಾ ಜಮೀನು, ಕಟ್ಟಡಗಳ ಸಾಕ್ಷಾತ್ ಸಮೀಕ್ಷೆಯ ನಂತರ ಆಸ್ತಿಗಳನ್ನು ಪಂಚತಂತ್ರ 2.0 ತಂತ್ರಾಂಶದಲ್ಲಿ ದಾಖಲೀಕರಣ ಮಾಡಲಾಗುತ್ತಿದೆ ಎಂದು ಮಾಹಿತಿ …

Read More »

ಕಲಬುರಗಿ: ಕೆಕೆಆರ್‌ಡಿಬಿಯ ₹3 ಕೋಟಿ ರೂ. ಅನುದಾನದಲ್ಲಿ ಸಿಸಿ ರಸ್ತೆ ಲೋಕಾರ್ಪಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ)ಯ ₹ 3 ಕೋಟಿ ಅನುದಾನದಲ್ಲಿ ಕೈಗೆತ್ತಿಕೊಂಡಿದ್ದ ನಗರದ ಆನಂದ ಹೋಟೆಲ್‌-ಎಸ್.ಎಂ. ಪಂಡಿತ ರಂಗಮಂದಿರ ಮಧ್ಯದ 700 ಮೀಟರ್ ಸಿ.ಸಿ. ರಸ್ತೆಯನ್ನು ಶಾಸಕ ಅಲ್ಲಮಪ್ರಭು ಪಾಟೀಲ ಲೋಕಾರ್ಪಣೆ ಮಾಡಿದರು. ರಸ್ತೆ, ಚರಂಡಿ, ಕಲ್ವರ್ಟ್, ಸಿ.ಡಿ ಹಾಗೂ ಪಾದಚಾರಿ ಮಾರ್ಗವುಳ್ಳ ಈ ರಸ್ತೆ ಉದ್ಘಾಟಿಸಿ ಮಾತನಾಡಿದ ಶಾಸಕ ಅಲ್ಲಮಪ್ರಭು, ‘ಬಹಳ ಗಟ್ಟಿಮುಟ್ಟಾದ ರಸ್ತೆ ನಿರ್ಮಾಣವಾಗಿದ್ದು, 1.6 ಮೀಟರ್ ಅಗಲವಿದೆ. ನಮ್ಮ ಪಕ್ಷ ಅಧಿಕಾರಕ್ಕೆ …

Read More »

ಬೀದರ್: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ತಮಟೆ ಚಳುವಳಿ

ಬೀದರ್‌: ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ತರಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಘಟಕದ ಕಾರ್ಯಕರ್ತರು ಶನಿವಾರ ನಗರದಲ್ಲಿ ತಮಟೆ ಚಳವಳಿ ನಡೆಸಿದರು. ನಗರದಲ್ಲಿನ ಪೌರಾಡಳಿತ ಸಚಿವ ರಹೀಂ ಖಾನ್ ಹಾಗೂ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಮನೆಯ ಎದುರು ತಮಟೆ ಬಾರಿಸಿ, ಪ್ರತಿಭಟನೆ ನಡೆಸಿದರು. ಬಳಿಕ ಮನವಿ ಪತ್ರ ಸಲ್ಲಿಸಿದರು. ಒಳಮೀಸಲು ಜಾರಿಗೆ ತರಬೇಕೆನ್ನುವುದು ಮಾದಿಗ ಸಮುದಾಯದ ಮೂರು ದಶಕಗಳ ಬೇಡಿಕೆಯಾಗಿದೆ. ಸುಪ್ರೀಂಕೋರ್ಟ್‌ ಕೂಡ …

Read More »

ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಾಮಗಾರಿ ಪರಿಶೀಲಿಸಿದ ಡಾ.ಶಾಲಿನಿ ರಜನೀಶ್

ಧಾರವಾಡ: ಕರ್ನಾಟಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಡಾ. ಶಾಲಿನಿ ರಜನೀಶ ಅವರು ಇಂದು ಬೆಳಿಗ್ಗೆ, ನರೇಂದ್ರ ಕ್ರಾಸ್ ದಿಂದ ಗಬ್ಬೂರ ವರೆಗಿನ ಬೈಪಾಸ್ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ರಾಷ್ಷ್ರೀಯ ಹೆದ್ದಾರಿ 48 ರಲ್ಲಿ ಧಾರವಾಡದ ನರೇಂದ್ರ ಕ್ರಾಸ್ ದಿಂದ ಹುಬ್ಬಳ್ಳಿಯ ಗಬ್ಬೂರ ವರೆಗೆ ಬರುವ ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ಅಗಲೀಕರಣದ ಕಾಮಗಾರಿಗೆ ಮೊದಲ ಹಂತದಲ್ಲಿ ಅಗತ್ಯವಿರುವ ಭೂಮಿ ಸ್ವಾದೀನಪಡಿಸಿಕೊಂಡು ನೀಡಿದರೂ, ಗುತ್ತಿಗೆದಾರ …

Read More »

ಮಹಿಳೆಯರಿಗೆ ಸಿಹಿಸುದ್ದಿ: ಜ.1 ರಿಂದ ತಿಂಗಳಿಗೆ 2,500 ರೂ, ಉಚಿತ ಪಡಿತರ ವಿತರಣೆ

ನವದೆಹಲಿ: ಭಾರತ ಸರ್ಕಾರ ಇತ್ತೀಚೆಗೆ ಮಹತ್ವದ ಘೋಷಣೆ ಮಾಡಿದ್ದು, ಇದು ದೇಶದ ಮಹಿಳೆಯರು ಮತ್ತು ಬಡ ಕುಟುಂಬಗಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಈ ಯೋಜನೆಯಡಿ, ಮಹಿಳೆಯರಿಗೆ ತಿಂಗಳಿಗೆ 2,500 ರೂ., ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು 450 ಕ್ಕೆ ನಿಗದಿಪಡಿಸುವುದು ಮತ್ತು ಅರ್ಹ ಕುಟುಂಬಗಳಿಗೆ ಉಚಿತ ಪಡಿತರವನ್ನು ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ.ಆರ್ಥಿಕತೆಯನ್ನು ಬಲಪಡಿಸಲು ಮತ್ತು ಬಡತನವನ್ನು ನಿವಾರಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಮತ್ತು ಅವರು ಸ್ವಾವಲಂಬಿಗಳಾಗಲು …

Read More »