Breaking News

Breaking News

ವಿಜಯಪುರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸ್ಥಳ ಪರಿಶೀಲನೆ

ವಿಜಯಪುರ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ.ಎಸ್.ಸಿ.ಎ) ವತಿಯಿಂದ ವಿಜಯಪುರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಸ್ಥಳ ಪರಿಶೀಲನೆ ಮಾಡಲಾಯಿತು. ಕೆ.ಎಸ್.ಸಿ.ಎ ಸದಸ್ಯ ಮತ್ತು ವಿಧಾನಪರಿಷತ್ ಸದಸ್ಯ ಪ್ರಕಾಶ ರಾಠೋಡ ಅವರು ವಿಜಯಪುರದಲ್ಲಿ ಸುಂದರ ಕ್ರಿಕೆಟ್ ಕ್ರೀಡಾಂಗಣ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರೊಂದಿಗೆ ಈ ಹಿಂದೆ ಕೂಡ ಚರ್ಚಿಸಿದ್ದರು. ನಗರದ ಹೊರವಲಯದ 2-3 ಜಾಗೆಗಳನ್ನು ಕ್ರಿಕೆಟ್ ಕ್ರೀಡಾಂಗಣಕ್ಕಾಗಿ ಗುರುತಿಸುವ ಪ್ರಕ್ರಿಯೆ ನಡೆದಿದ್ದು, ಅದರನ್ವಯ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, …

Read More »

ರೈತರಿಗೆ ಅಡಮಾನ ರಹಿತ ಕೃಷಿ ಸಾಲದ ಮಿತಿ ₹2 ಲಕ್ಷಕ್ಕೆ ಹೆಚ್ಚಿಸಿದ ಆರ್ ಬಿ ಐ: ಜ.1 ರಿಂದ ಜಾರಿಗೆ

ನವದೆಹಲಿ: ರೈತರಿಗೆ ಅಡಮಾನ ರಹಿತವಾಗಿ ನೀಡಲಾಗುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್ ಬ್ಯಾಂಕ್‌ (RBI) ₹2 ಲಕ್ಷಕ್ಕೆ ಹೆಚ್ಚಿಸಿದೆ. ಇದು ಬರುವ ಜ. 1ರಿಂದಲೇ ಜಾರಿಗೆ ಬರಲಿದೆ. ಈ ಮೊದಲು ಅಡಮಾನವಿಲ್ಲದೇ ₹1.6 ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್‌ಬಿಐನ ಈ ಹೊಸ ನಿರ್ದೇಶನದ ಮೂಲಕ, ರಾಷ್ಟ್ರವ್ಯಾಪಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು ಪಡೆಯುವ ₹2ಲಕ್ಷ ವರೆಗಿನ ಸಾಲಕ್ಕೆ ಅಡಮಾನ ಅಥವಾ ಇತರ ಅಗತ್ಯ ದಾಖಲೆಗಳ ಮಿತಿಯನ್ನು ತೆಗೆದುಹಾಕಲು ಬ್ಯಾಂಕ್‌ಗಳಿಗೆ …

Read More »

ಬೀದರ್ ನಲ್ಲಿ ಕಾರಂಜಾ ಸಂತ್ರಸ್ತರನ್ನು ಭೇಟಿಯಾದ ಬಿಜೆಪಿ ನಿಯೋಗ

ಬೀದರ್‌: ವಿಷ ಸೇವಿಸಿ ಅಸ್ವಸ್ಥರಾಗಿ ನಗರದ ಬ್ರಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಂಜಾ ಸಂತ್ರಸ್ತರನ್ನು ಜಿಲ್ಲಾ ಬಿಜೆಪಿ ನಿಯೋಗ ಶುಕ್ರವಾರ ಭೇಟಿ ಮಾಡಿತು. ಕಾರಂಜಾ ನೀರಾವರಿ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಮೂವರು ರೈತರು ಗುರುವಾರ ವಿಷ ಸೇವಿಸಿ ಅಸ್ವಸ್ಥರಾಗಿದ್ದರು. ಕಾರಂಜಾ ಸಂತ್ರಸ್ತರ ಹಿತರಕ್ಷಣ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ, ರಾಜಪ್ಪ ಕಮಲಾಪುರ ಹಾಗೂ ರಾಜಶೇಖರ್‌ ಅವರನ್ನು ಬಿಜೆಪಿ ಮುಖಂಡರು ಭೇಟಿ ಮಾಡಿ ಆರೋಗ್ಯ …

Read More »

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತರ ಆರೋಗ್ಯ ವಿಚಾರಿಸಿದ ಸಚಿವ ಈಶ್ವರ್ ಖಂಡ್ರೆ

ಬೀದರ್ : ಕಾರಂಜಾ ಯೋಜನೆಯಲ್ಲಿ ಜಮೀನು ಕಳೆದುಕೊಂಡವರಿಗೆ ವೈಜ್ಞಾನಿಕ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ರೈತರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಡ ರಾತ್ರಿ ಭೇಟಿ ಮಾಡಿದರು. ಬೆಳಗಾವಿಯಿಂದ ಹೊರಟು ರಾತ್ರಿ ಬೀದರ ನಗರದ ಬ್ರಿಮ್ಸ್‌ಗೆ ಬಂದ ಸಚಿವ ಖಂಡ್ರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರಂಜಾ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ,ರೈತರಾದ ರಾಜಪ್ಪ ಕೋಸಂ …

Read More »

ವಿಕಲಚೇತನರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ವಿಕಲಚೇತನರ ಹಿರಿಯ ನಾಗರಿಕರ ಹಿತಕಾಯುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಎಂಆರ್‌ಡಬ್ಲ್ಯು (ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು), ವಿಆರ್‌ಡಬ್ಲ್ಯು(ಗ್ರಾಮೀಣ ಪುನವರ್ಸತಿ ಕಾರ್ಯಕರ್ತರು) ಹಾಗೂ ಯುಆರ್‌ಡಬ್ಲ್ಯು(ನಗರ ಪುನರ್ವಸತಿ ಕಾರ್ಯಕರ್ತರ) ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ಸುವರ್ಣವಿಧಾನಸೌಧದ ಬಳಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವಕರ್ನಾಟಕ, ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘದ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ …

Read More »

ಗ್ರಾಮ ಪಂಚಾಯತ ಸದಸ್ಯರ ಮಾಸಿಕ ಗೌರವಧನ ಹೆಚ್ಚಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್‌ ಖರ್ಗೆ ಅವರು, ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, …

Read More »

ಮಹಾನಗರಗಳಿಗೆ 2000 ಕೋಟಿ ರೂ. ಅನುದಾನ: ಶಿವಮೊಗ್ಗದ ಗಾಜನೂರು ಬಳಿ ನೀರು ಶುದ್ಧೀಕರಣ ಘಟಕ ನಿರ್ಮಾಣ

ಬೆಳಗಾವಿ: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಶೀಘ್ರವೇ ಅರಣ್ಯ ಇಲಾಖೆಯಿಂದ ಎನ್.ಓ.ಸಿ ಪಡೆದು ಕಾಮಗಾರಿ ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ. ಒಂದು ವೇಳೆ ಎನ್.ಓ.ಸಿ ಲಭಿಸದಿದ್ದರೆ, ಸೂಕ್ತವಾದ ಬದಲಿ ಜಾಗವನ್ನು ಸಹ ಗುರುತಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದರು. …

Read More »

ಬೆಂಗಳೂರಿನಲ್ಲಿ ಪ್ರವಾಹ ಹಾನಿ ತಡೆಗಟ್ಟಲು 5000 ಕೋಟಿ ರೂ.ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅತಿಹೆಚ್ಚು ಮಳೆಯಿಂದ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5000 ಕೋಟಿ ರೂ. ಗಳ ಶಾಶ್ವತ ಯೋಜನೆ ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು. ಪ್ರಸಕ್ತ ವರ್ಷ ರಾಜ್ಯದಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಿಧಾನಸಭೆ ಕಲಾಪದಕಲ್ಲಿ ಅವರು ಈ ವಿಷಯ ತಿಳಿಸಿದರು. ಬೆಂಗಳೂರು …

Read More »

ರಾಜ್ಯದಲ್ಲಿ 50 ಗ್ರಾ.ಪಂ.ಗಳನ್ನು ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರಿಸಲು ಕ್ರಮ: ಸಚಿವ ಭೈರತಿ ಸುರೇಶ್

ಬೆಳಗಾವಿ : ರಾಜ್ಯದಲ್ಲಿ 50ಕ್ಕೂ ಗ್ರಾಮ ಪಂಚಾಯ್ತಿಗಳನ್ನು ಪಟ್ಟಣ ಪಂಚಾಯಿ ಹಾಗೂ ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದ್ದು, ಹಂತ-ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಭರವಸೆ ನೀಡಿದ್ದಾರೆ. ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ದಿನಕರ್ ಶೆಟ್ಟಿ ಕೇಳಿದ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಮ್ ಖಾನ್ ಉತ್ತರ ನೀಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಅವರು, 2011ರ ಜನಗಣತಿ ಪ್ರಕಾರ ಮೇಲ್ದರ್ಜೆಗೇರಿಸಲು ಅವಕಾಶವಿಲ್ಲ. ಆದರೆ ಗೋಕರ್ಣಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಗೋಕರ್ಣದ …

Read More »

ಲೋಕಸಭೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡಿಸಲು ಕೇಂದ್ರ ಸರ್ಕಾರ ಸಜ್ಜು

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಮಂಡನೆ ಮಾಡಲು ಸೋಮವಾರ ಲೋಕಸಭೆಯಲ್ಲಿ ಮಂಡಿಸಲು ಕೇಂದ್ರ ಸರ್ಕಾರವು ಸಜ್ಜಾಗಿದೆ. ಸಾಂವಿಧಾನಿಕ ತಿದ್ದುಪಡಿಗೆ ಹೆಚ್ಚುವರಿಯಾಗಿ, ಪ್ರಸ್ತಾವಿತ ತಿದ್ದುಪಡಿಯ ನಿಬಂಧನೆಗಳೊಂದಿಗೆ ಜೋಡಿಸಲು ಶಾಸಕಾಂಗ ಸಭೆಗಳೊಂದಿಗೆ ಮೂರು ಕೇಂದ್ರಾಡಳಿತ ಪ್ರದೇಶಗಳನ್ನು ನಿಯಂತ್ರಿಸುವ ಕಾನೂನುಗಳನ್ನು ತಿದ್ದುಪಡಿ ಮಾಡುವ ಗುರಿಯನ್ನು ಹೊಂದಿರುವ ಎರಡನೇ ಮಸೂದೆಯನ್ನು ಕ್ಯಾಬಿನೆಟ್ ಅನುಮೋದಿಸಿತು. ಒಂದು ರಾಷ್ಟ್ರ, ಒಂದು ಚುನಾವಣೆ’ ಉಪಕ್ರಮವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಡಲು ಸಜ್ಜಾಗಿದ್ದು, ಸೋಮವಾರ ಲೋಕಸಭೆಯಲ್ಲಿ …

Read More »