Breaking News

Breaking News

ರಾಜ್ಯದ ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವಧನ ಹೆಚ್ಚಳ ಕುರಿತು ಸಿಎಂ ಜೊತೆ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಳಗಾವಿ : ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ …

Read More »

ಮಳೆಹಾನಿಗೆ ಈ ವರ್ಷ 297 ಕೋಟಿ ರೂ. ಹಣವನ್ನು ರೈತರಿಗೆ ಪರಿಹಾರವಾಗಿ ನೀಡಲಾಗಿದೆ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ : ಕಳೆದ ವರ್ಷ ರಾಜ್ಯ ಬರಕ್ಕೆ ತುತ್ತಾಗಿದ್ದರೆ, ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬೆಳೆಹಾನಿಯಾಗಿದೆ. ಬರ ಪರಿಹಾರವಾಗಿ ರಾಜ್ಯ ಸರ್ಕಾರ ಕಳೆದ ವರ್ಷ ರೂ.4200 ಕೋಟಿ ಹಣವನ್ನು ರೈತರಿಗೆ ಪರಿಹಾರದ ರೂಪದಲ್ಲಿ ನೀಡಿದರೆ, ಮಳೆಹಾನಿಗೆ ಈ ವರ್ಷ ರೂ.297 ಕೋಟಿ ಹಣವನ್ನು ಪರಿಹಾರವಾಗಿ ರೈತರಿಗೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ಇಂದು ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ರಾಜ್ಯದಲ್ಲಿ …

Read More »

ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯ: ಜಿ.ವಿ.ಡೋಣೂರಮಠ

ನವಲಗುಂದ : ಪ್ರತಿಯೊಬ್ಬರಲ್ಲಿಯೂ ಒಂದು ವಿಶಿಷ್ಟವಾದ ವ್ಯಕ್ತಿತ್ವವಿರುತ್ತದೆ. ದೈಹಿಕ, ಬೌದ್ಧಿಕ, ಸಾಮಾಜಿಕ, ಆಧ್ಯಾತ್ಮಿಕ ಆಯಾಮಗಳ ರೂಪದಲ್ಲಿ ವ್ಯಕ್ತವಾಗುತ್ತದೆ. ಗುಣಾತ್ಮಕ ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿಗಳಾದ ಜಿ.ವಿ.ಡೋಣೂರಮಠ ತಿಳಿಸಿದರು. ಪಟ್ಟಣದ ಶ್ರೀ ಶಂಕರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜನೆ ಮಾಡಲಾದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಮ್ಮ ಸಮಾಜದಲ್ಲಿ ಅನೇಕ ಹಿರಿಯ ಸಾಧಕ ಸಂಪನ್ಮೂಲ ವ್ಯಕ್ತಿಗಳನ್ನೇ ಆದರ್ಶವನ್ನಾಗಿ ಇಟ್ಟುಕೊಂಡರೆ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಲ್ಲಿ …

Read More »

ಬೀದಿ ನಾಯಿಗಳ ಹಾವಳಿ ತಪ್ಪಿಸಬೇಕು: ಮಾಬುಸಾಬ ಯರಗುಪ್ಪಿ ಆಗ್ರಹ

ನವಲಗುಂದ : ಪಟ್ಟಣದಲ್ಲಿ ಇತ್ತೀಚಿಗೆ ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಓಡಾಡುವುದು ಕಷ್ಟವಾಗಿದ್ದು, ಸೂಕ್ತ ಕ್ರಮ ಜರುಗಿಸಿ ಬೀದಿ ನಾಯಿಗಳ ಹಾವಳಿ ತಪ್ಪಿಸಬೇಕೆಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಆಗ್ರಹ ಮಾಡಿದರು. ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ಎಸ್‌.ಪಿ.ಪೂಜಾರ ಅವರಿಗೆ ಮನವಿ ನೀಡಿ ಮಾತನಾಡಿದ ಅವರು ಪ್ರತಿ ವಾರ್ಡ್‌ಗಳಲ್ಲೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಐದರಿಂದ ಹತ್ತು ನಾಯಿಗಳ ಹಿಂಡು ಬೀದಿಗಳಲ್ಲಿ ಓಡಾಡುವ ಮೂಲಕ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿವೆ, ಬೀದಿ …

Read More »

ಲೋಕಸಭೆಯಲ್ಲಿ ಕಾಂಗ್ರೆಸ್​ ಸಂಸದೆ ಪ್ರಿಯಾಂಕಾ ಗಾಂಧಿ ಚೊಚ್ಚಲ ಭಾಷಣ

ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ಮೊದಲ ಭಾಷಣ ಮಾಡಿದ್ದು ಭಾರತವು ಸಾವಿರಾರು ವರ್ಷಗಳ ಸಂವಾದ ಮತ್ತು ಚರ್ಚೆಯ ಸಂಪ್ರದಾಯವನ್ನು ಹೊಂದಿರುವ ದೇಶವಾಗಿದೆ ಎಂದು ಹೇಳಿದರು. ಚರ್ಚೆ ಮತ್ತು ಸಂವಾದಗಳು ನಮ್ಮ ಸಂಸ್ಕೃತಿಯಲ್ಲಿ ಆಳವಾದ ಬೇರುಗಳನ್ನು ಹೊಂದಿವೆ. ಇದು ವಿವಿಧ ಧರ್ಮಗಳು ಮತ್ತು ಸಮಾಜಗಳಲ್ಲಿಯೂ ಗೋಚರಿಸುತ್ತದೆ. ಈ ಸಂಪ್ರದಾಯದಿಂದ ಪ್ರೇರಿತರಾಗಿ, ಅಹಿಂಸೆ ಮತ್ತು ಸತ್ಯದ ಆಧಾರದ ಮೇಲೆ ನಮ್ಮ ಸ್ವಾತಂತ್ರ್ಯ ಹೋರಾಟ ಪ್ರಾರಂಭವಾಯಿತು. ಈ ಆಂದೋಲನವು ಪ್ರಜಾಸತ್ತಾತ್ಮಕವಾಗಿತ್ತು, ಇದರಲ್ಲಿ …

Read More »

ಉಡುಪಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರು ಮಾಡುವಂತೆ ಕೇಂದ್ರ ಸಚಿವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ

ಉಡುಪಿ: ಉಡುಪಿ ಜಿಲ್ಲೆಗೊಂದು ಸುಸಜ್ಜಿತ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಕೇಂದ್ರ ಸಚಿವ ಜೆಪಿ ನಡ್ಡಾ ಅವರಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದರು. ಇಂದು (ಡಿ.13) ಕೇಂದ್ರ ಸಚಿವರನ್ನು ಭೇಟಿಯಾದ ಅವರು ಉಡುಪಿ ಜಿಲ್ಲೆ ಸುಮಾರು 167 ಗ್ರಾಮ ಪಂಚಾಯಿತಿ ಮತ್ತು15 ಲಕ್ಷ ಜನಸಂಖ್ಯೆ ಹೊಂದಿರುವ ಪ್ರದೇಶವಾಗಿದ್ದು ಶಿಕ್ಷಣ ಕ್ಷೇತ್ರ, ದೇವರ ಬೀಡು, ಪ್ರವಾಸಿ ತಾಣವನ್ನು ಹೊಂದಿರುವ ಉಡುಪಿ ಜಿಲ್ಲೆಗೆ ಒಂದು ಸುಸಜ್ಜಿತವಾದ ಮೆಡಿಕಲ್ ಕಾಲೇಜಿನ ಅವಶ್ಯಕತೆ …

Read More »

ರೈತರಿಗೆ ಸಿಹಿಸುದ್ದಿ: ತುಂತುರು ನೀರಾವರಿ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ರೈತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಯೋಜನೆಯಡಿ ಜೆಟ್ ಪೈಪು/ಸ್ಪಿಕ್ಲಲ್ ಸೌಲಭ್ಯ ಪಡೆಯಲು ಕೃಷಿ ಇಲಾಖೆ ಶಿವಮೊಗ್ಗ ವತಿಯಿಂದ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕವನ್ನು ಶೇ. 90 ರ ಸಹಾಯಧನದಲ್ಲಿ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ವಿತರಿಸಲಾಗುತ್ತಿದ್ದು, ಅವಶ್ಯಕತೆ ಇರುವ ರೈತರು ಸದರಿ ಯೋಜನೆಯ ಉಪಯೋಗ ಪಡೆಯಲು ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಜೆರಾಕ್ಸ್, ಪಹಣ, …

Read More »

ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಇಂದು ವಿಧಾನಪರಿಷತ್‌ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022ರಲ್ಲೇ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ …

Read More »

ಸದನದಲ್ಲಿ ಹೆಚ್ಚು ಸಮಯ ಇದ್ದವರು ಹೆಚ್ಚು ಬಾರಿ ಗೆಲುವು ಸಾಧಿಸುವರು: ಸಭಾಧ್ಯಕ್ಷ ಯು.ಟಿ.ಖಾದರ್

ಬೆಳಗಾವಿ: ಸದನದಲ್ಲಿ ಹೆಚ್ಚು ಸಮಯ ಇದ್ದವರು ಹೆಚ್ಚು ಬಾರಿ ಗೆಲುವು ಸಾಧಿಸುತ್ತಾರೆ ಹಾಗೂ ಉತ್ತಮ ರಾಜಕಾರಣಿಯಾಗಲು ಸಹಕಾರಿಯಾಗಲಿದೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ವಿಧಾನಸಭೆಯಲ್ಲಿಂದು ತಿಳಿಸಿದರು. ಇಂದು ಬೆಳಗ್ಗೆ ಸದನ ಸಮಾವೇಶಗೊಂಡಾಗ ನಿನ್ನೆ ಸಕಾಲಕ್ಕೆ ಆಗಮಿಸಿದ ಶಾಸಕರು ಹಾಗೂ ರಾತ್ರಿ 10 ಗಂಟೆವರೆಗೂ ಸದನದಲ್ಲಿ ಹಾಜರಿದ್ದ ಶಾಸಕರ,ಸಚಿವರ ಹೆಸರುಗಳನ್ನು ವಾಚಿಸಿದರು. ಸದನದಲ್ಲಿ ಗಮನಸೆಳೆಯುವ ಸೂಚನೆ ಮುಗಿದ ಕೂಡಲೇ ಶಾಸಕರು ಹೊರಹೋಗುವುದು ಸರಿಯಲ್ಲ. ಸದನದಲ್ಲಿ ಹೆಚ್ಚು ಕಾಲ ಇದ್ದು ಕಾರ್ಯ ಕಲಾಪಗಳಲ್ಲಿ ಭಾಗಿಯಾದರೆ …

Read More »

ಕ್ಷೌರಿಕರ ಮೇಲೆ ಬಿಜೆಪಿ ಮುಖಂಡನಿಂದ ದರ್ಪ

ಹುಬ್ಬಳ್ಳಿ: ತನ್ನ ಮಗನ ಹೇರ್ ಕಟಿಂಗ್ ವಿಚಾರವಾಗಿ ಬಿಜೆಪಿ‌ ಮುಖಂಡನಿಂದ ಮೂರು ಜನ‌ ಕ್ಷೌರಿಕರ ಮೇಲೆ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯ ನವನಗರದಲ್ಲಿರುವ ಹೇರ್ ಕಟಿಂಗ್ ಸಲೂನ್ ನಲ್ಲಿ ನಡೆದಿದೆ. ತನ್ನ ಮಗನ ಹೇರ್ ಕಟಿಂಗ್ ವಿಚಾರವಾಗಿ ಸಲೂನ್ ನಲ್ಲಿದ್ದ ಕ್ಷೌರಿಕರಿಗೆ ಮನಬಂದಂತೆ ಥಳಿಸಿದ ಬಿಜೆಪಿ ಮುಖಂಡ ವಿಜಯಕುಮಾರ ಅಪ್ಪಾಜಿ ಹುಬ್ಬಳ್ಳಿಯ ನವನಗರದ ನಿವಾಸಿ. ಹಲವು ಬಿಜೆಪಿ ಮುಖಂಡರ‌ ಜೊತೆ ಗುರುತಿಸಿಕೊಂಡಿರುವ ವಿಜಯ ಕುಮಾರ ಅಪ್ಪಾಜಿ ನವನಗರದಲ್ಲಿರುವ ಲೊರೇಲ್ ಸಲೂನ್ …

Read More »