BigTv News
December 13, 2024
Breaking News, ಬೆಳಗಾವಿ
ಬೆಳಗಾವಿ: ಬಿಪಿಎಲ್ ಪಡಿತರ ಚೀಟಿ ರದ್ದು ಮಾನದಂಡ ಸಂಬಂಧ ಶಾಸಕರಾದ ಡಾ| ಭರತ್ ಶೆಟ್ಟಿ ವೈ. ಅವರು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಪಿಎಲ್ ಪಡಿತರ ಫಲಾನುಭವಿಗಳು ಯಾವುದೋ ಕಾರಣಕ್ಕೆ ಒಂದೆರಡು ತಿಂಗಳು ಪಡಿತರ ಪಡೆದುಕೊಳ್ಳದಿದ್ದಲ್ಲಿ ಕಾರ್ಡ್ ರದ್ದಾಗುತ್ತಿದೆ. ಕೆಲವೊಂದು ಸಾಲ ಸೌಲಭ್ಯಕ್ಕಾಗಿ ಕೇವಲ ಆದಾಯ ರಿಟರ್ನ್ ಮಾಡಿದವರ ಕಾರ್ಡ್ ರದ್ದಾಗುತ್ತಿದೆ. ಆಯುಷ್ಮಾನ್ ಜತೆ ಬಿಪಿಎಲ್ ಪಡಿತರ ಲಿಂಕ್ ಇರುವುದರಿಂದ ಮತ್ತೆ ಕಾರ್ಡ್ ಪಡೆಯಲು ಫಲಾನುಭವಿಯ ಫೈಲ್ ಜಿಲ್ಲಾ ಮಟ್ಟದಲ್ಲಿ ವಿಲೇವಾರಿ …
Read More »
BigTv News
December 13, 2024
Breaking News, ಬೆಳಗಾವಿ
ಬೆಳಗಾವಿ: ಬಿಜೆಪಿ ಸರ್ಕಾರದಲ್ಲಿ ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯಲ್ಲಿ ಬಹುದೊಡ್ಡ ಹಗರಣ ನಡೆದಿತ್ತು. ಅದನ್ನು ನಮ್ಮ ಸರ್ಕಾರ ಬಂದ ಬಳಿಕ ಬಗೆಹರಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಗರಣ ಮಾಡಿ ಹೊಗಿದ್ದರು. ಆದರೆ ಅದನ್ನೆಲ್ಲ ನಾವು ಸ್ವಚ್ಚಗೊಳಿಸಿ ಹೈಕೋರ್ಟ್ ಆದೇಶದಂತೆ ಮರು ಪರೀಕ್ಷೆ ನಡೆಸಿದ್ದೇವೆ ಎಂದು ತಿಳಿಸಿದರು. ಪ್ರಸ್ತುತ ನಡೆದಿರುವ 545 ಪಿಎಸ್‌ಐ ಹುದ್ದೆಗಳ ನೇಮಕಾತಿಯ ಪ್ರಕ್ರಿಯೆಯನ್ನು ಸರ್ಕಾರ ಅಂತಿಮ …
Read More »
BigTv News
December 13, 2024
Breaking News, ಬೆಳಗಾವಿ
ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ …
Read More »
BigTv News
December 13, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಸುತ್ತಿರುವ ಬೆನ್ನಲ್ಲೇ ಕೆಎಚ್ ಮುನಿಯಪ್ಪ ಅನರ್ಹರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಲು ಸರ್ಕಾರ ಕೆಲವೊಂದು ಮಾನದಂಡಗಳನ್ನು ವಿಧಿಸಿದೆ. ಅದರಂತೆ ಆದಾಯ ತೆರಿಗೆ ಪಾವತಿಸುವವರು, ಸರ್ಕಾರೀ ನೌಕರರು ಬಿಪಿಎಲ್ ಕಾರ್ಡ್ ಹೊಂದುವಂತಿಲ್ಲ. ಅಂತಹ ಕಾರ್ಡ್ ಗಳನ್ನು ರದ್ದು ಮಾಡಿ ಎಪಿಎಲ್ ಗೆ ವರ್ಗಾಯಿಸಲಾಗುವುದು ಎಂದು ಈಗಾಗಲೇ ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಅದರಂತೆ ಈಗ ಎಲ್ಲಾ ಗ್ರಾಮ, ವಾರ್ಡ್ ಮಟ್ಟದಲ್ಲಿ ಅನರ್ಹ …
Read More »
BigTv News
December 13, 2024
Breaking News, ಬೆಳಗಾವಿ
ಬೆಳಗಾವಿ: ರಾಜ್ಯದಲ್ಲಿ 50 ಗ್ರಾಮಪಂಚಾಯ್ತಿಗಳನ್ನು, ಪಟ್ಟಣ ಪಂಚಾಯ್ತಿಗಳನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇದ್ದು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ವಿಧಾನಸಭೆಗಿಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ದಿನಕರ್ ಕೇಶವ ಶೆಟ್ಟಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಅವರು 2011ರ ಜನಗಣತಿ ಪ್ರಕಾರ ಮೇಲ್ದರ್ಜೆಗೇರಿಸಲು ಅವಕಾಶವಿಲ್ಲ. ಆದರೆ ಗೋಕರ್ಣಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿರುವುದು ನಿಜ. ಗೋಕರ್ಣದ ಬಗ್ಗೆ …
Read More »
BigTv News
December 13, 2024
Breaking News, ಮಂಗಳೂರು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳಿಕೆಯಾದ166 ಎಕ್ರೆ ಡಿ.ಸಿ. ಮನ್ನಾ (ಡಿಪ್ರಸ್ಡ್ ಕ್ಲಾಸ್) ಜಮೀನನ್ನು ಪ. ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ನೀಡುವಂತೆ ದಲಿತ ನಾಯಕರು ಆಗ್ರಹಿಸಿದ್ದು, ಈ ಬಗ್ಗೆ ಪಿಟಿಸಿಎಲ್ ಕಾಯ್ದೆಯಡಿ ನಿಯಮ ರೂಪಿಸಲು ಸರಕಾರಕ್ಕೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಗುರುವಾರ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ /ಪಂಗಡದ ಮುಖಂಡರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಸಂಸ ಮುಖಂಡ ದೇವದಾಸ್ ಎಂ. …
Read More »
BigTv News
December 13, 2024
Breaking News, ಕಲಬುರಗಿ
ಕಲಬುರಗಿ: ಕೇಂದ್ರ ಸರ್ಕಾರದ ಮಹತ್ವಪೂರ್ಣ ಯೋಜನೆಯಾದ ‘ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆ’ಗೆ ಜೆಸ್ಕಾಂ ವ್ಯಾಪ್ತಿಯಲ್ಲಿ ಅರ್ಜಿಗಳ ಸಲ್ಲಿಕೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದರೂ ಸೋಲಾರ್ ಪ್ಯಾನಲ್ ಅಳವಡಿಸಿಕೊಳ್ಳುವಲ್ಲಿ ಗ್ರಾಹಕರು ನಿರಾಸಕ್ತಿ ತೋರುತ್ತಿದ್ದಾರೆ. ಫೆಬ್ರುವರಿ 29ರಂದು ಈ ಯೋಜನೆಗೆ ಚಾಲನೆ ದೊರಕಿದ್ದು, 10 ತಿಂಗಳ ಅವಧಿಯಲ್ಲಿ ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ 7,083 ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಇದರಲ್ಲಿ 244 ಜನರು ಮಾತ್ರ ಸೋಲಾರ್ ಪ್ಯಾನಲ್‌ಗಳನ್ನು ಅಳವಡಿಸಿಕೊಂಡಿದ್ದಾರೆ. …
Read More »
BigTv News
December 13, 2024
Breaking News, ಬೆಂಗಳೂರು
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಕ್ಟೋಬರ್ 27ರಂದು ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ. ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದಿರುವ ಹಾಗೂ ಪತ್ರಿಕೆ -1 ಮತ್ತು ಪತ್ರಿಕೆ- 2ರಲ್ಲಿ ಕನಿಷ್ಠ ಶೇ 35ರಷ್ಟು ಅಂಕ ಪಡೆದಿರುವ ಅರ್ಹರ ಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿದ್ದಾರೆ. ಈ …
Read More »
BigTv News
December 13, 2024
Breaking News, ಬೀದರ್
ಬೀದರ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಜೋಳ ಖರೀದಿ ಕೇಂದ್ರ ಪ್ರಾರಂಭ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರೈತರಿಂದ ಭತ್ತ (ಸಾಮಾನ್ಯ ಪ್ರತಿ ಕ್ವಿಂಟಾಲ್‌ಗೆ 2,300 ರೂ.) ಹಾಗೂ ಭತ್ತ (ಗ್ರೇಡ್-ಎ ಪ್ರತಿ ಕ್ವಿಂಟಾಲ್‌ಗೆ 2,320 ರೂ.) ರಂತೆ ಖರೀದಿಸಲು ಹಾಗೂ ಬಿಳಿಜೋಳ (ಹೈಬ್ರಿಡ್ ಪ್ರತಿ ಕ್ವಿಂಟಾಲ್‌ಗೆ 3371 …
Read More »
BigTv News
December 13, 2024
Breaking News, ಬೆಳಗಾವಿ
ಬೆಳಗಾವಿ : ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸದ್ರಿ ಯೋಜನೆಗಳಿಗೆ ಆಯವ್ಯಯ ದಲ್ಲಿ 52,009 ಕೋಟಿ ರೂ ಗಳನ್ನು ಒದಗಿಸಿದೆ. ರಾಜ್ಯ …
Read More »