BigTv News
December 13, 2024
Breaking News, ವಿಜಯಪುರ
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಆಲಮಟ್ಟಿ ಜಲಾಶಯವನ್ನು ಪೂರ್ವ ನಿಗದಿತ 524.256 ಮೀಟರ್ ಗೆ ಎತ್ತರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿಯೂ ಆದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಭೂಸ್ವಾಧೀನ: ಸರ್ಕಾರಕ್ಕೆ ನಿತ್ಯ ₹1 ಕೋಟಿ ಬಡ್ಡಿ ಹೊರೆ! ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಮುಳುಗಡೆ ಭೂಮಿಗೆ ನಿಗದಿಯಾದ ಪರಿಹಾರ ಕೊಡಲು ನಮ್ಮ ಸರ್ಕಾರದ …
Read More »
Shaikh BigTv
December 12, 2024
Breaking News
ನವಲಗುಂದ : 2ಎ ಮೀಸಲಾತಿಗಾಗಿ ನಡೆಯುತ್ತಿದ್ದ ಹೋರಾಟವನ್ನ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತಿಕ್ಕುವ ಕುತಂತ್ರ ಮಾಡಿದ್ದರಿಂದಲೇ ಇಷ್ಟೊಂದು ರಾದ್ಧಾಂತ ನಡೆದಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಿಡಿಕಾರಿದರು. ಪಂಚಮಸಾಲಿ ಹೋರಾಟದ ವೇಳೆ ರಾಜ್ಯ ಸರಕಾರ ಲಾಠಿ ಚಾರ್ಜ ಮಾಡಿದ್ದನ್ನು ಖಂಡಿಸಿ ಪಟ್ಟಣದ ಬಸ್ ನಿಲ್ದಾಣದ ಎದುರಿಗೆ ಹೆದ್ದಾರಿ ತಡೆದು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಶ್ರೀಗಳ ನೇತೃತ್ವದಲ್ಲಿ ನಡೆದ ಹೋರಾಟ ಶಾಂತಿಯುತವಾಗಿ ನಡೆದಿತ್ತು. ಆದರೆ, ವ್ಯವಸ್ಥಿತವಾಗಿ …
Read More »
Shaikh BigTv
December 12, 2024
Breaking News
ಕುಂದಗೋಳ : ಅನ್ನದಾತನ ತೋಟಕ್ಕೆ ಕನ್ನ ಹಾಕಿದ ದುಷ್ಕರ್ಮಿಗಳು ತೋಟದಲ್ಲಿ ಬೆಳೆದಂತಹ ಗಿಡಗಳನ್ನು ಕಳ್ಳತನ ಮಾಡಿರುವ ದುಷ್ಕೃತ್ಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ನಡೆದಿದೆ. ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ 209/9 ಮತ್ತು 209/10 ಸರ್ವೇ ನಂಬರ್ ಜಮೀನಿನ ತೋಟದಲ್ಲಿ ರೈತ ಬೆಳೆದ 30 ಸಾವಿರ ಮೌಲ್ಯದ ಬಿದಿರಿನ ಮರ, 5 ಸಾವಿರ ಮೌಲ್ಯದ ಅಕೆಶಿಯಾ ಗಿಡ, 15 ಸಾವಿರ ತೆಂಗಿನಮರ, 50 ಸಾವಿರ ಮೌಲ್ಯದ ಗಂಧದ ಮರಗಳನ್ನು ನೂಲ್ವಿ …
Read More »
Shaikh BigTv
December 12, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಪಂಚಮಸಾಲಿ ಲಿಂಗಾಯತ ಸಮುದಾಯದ ಮೀಸಲಾತಿಗಾಗಿ ಸುವರ್ಣಸೌಧದ ಮುಂದೆ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಸಮುದಾಯದ ಸದಸ್ಯರ ಮೇಲೆ, ನಿನ್ನೆ ನಡೆದ ಲಾಠಿಚಾರ್ಜ್ ಅಮಾನುಷವಾದದ್ದು, ಅತ್ಯಂತ ಖಂಡನೀಯವಾದದ್ದು, ಅಧಿಕಾರದ ದುರುಪಯೋಗ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ಈ ಸರ್ವಾಧಿಕಾರಿ ಧೋರಣೆಗೆ ಧಿಕ್ಕಾರ. ಧರಣಿಯನ್ನು ಹತ್ತಿಕ್ಕುವ ಭರದಲ್ಲಿ ಪೊಲೀಸರಿಂದ ಧರಣಿ ನಿರತರ ಮೇಲೆ ಹಲ್ಲೆ ನಡೆಸಿ, ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ ನಿಮ್ಮ ನಡೆಯನ್ನು ನಾವು ಖಂಡಿಸುತ್ತೇವೆಂದು ಸಂಸದ ಜಗದೀಶ್ ಶೆಟ್ಟರ್ …
Read More »
BigTv News
December 12, 2024
Breaking News, ಮಹಾರಾಷ್ಟ್ರ
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಭವಿಷ್ಯದ ದೃಷ್ಟಿಯಿಂದ ಈ ವರ್ಷ ಅತ್ಯಧಿಕ ಚಿನ್ನ ಖರೀದಿಸಿದೆ. ಅಕ್ಟೋಬರ್‌ನಲ್ಲಿ ಆರ್‌ಬಿಐ ಖರೀದಿಸಿದ ಬಂಗಾರವು ಇತರ ಕೇಂದ್ರೀಯ ಬ್ಯಾಂಕ್‌ಗಳು ಖರೀದಿಸಿದ ಒಟ್ಟು ಚಿನ್ನದ ಶೇಕಡಾ 48ರಷ್ಟು ಎಂದು ವರದಿ ಆಗಿದೆ. ಪ್ರಸಕ್ತ ಅಕ್ಟೋಬರ್ ವರೆಗೆ ಆರ್‌ಬಿಐ ಬರೋಬ್ಬರಿ 77 ಟನ್ ಚಿನ್ನ ಖರೀದಿಸಿದೆ. ಈ ಎಲ್ಲ ಅಂಕಿಸಂಖ್ಯೆಗಳನ್ನು ನೋಡಿದರೆ ಚಿನ್ನದ ಬೇಡಿಕೆ ಎಷ್ಟಿದೆ ಎಂಬುದು ಗೊತ್ತಾಗುತ್ತದೆ. ಅಕ್ಟೋಬರ್ ಒಂದೇ ತಿಂಗಳಿನಲ್ಲಿ ಮೀಸಲು ಉದ್ದೇಶಕ್ಕಾಗಿ …
Read More »
BigTv News
December 12, 2024
Breaking News, ಬೆಳಗಾವಿ
ಬೆಳಗಾವಿ: ಪಂಚಮಸಾಲಿ ಹೋರಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅದರಲ್ಲಿಯೂ ಬೆಳಗಾವಿಯಲ್ಲಿ ಪ್ರತಿಭಟನೆ ಮತ್ತೆ ತೀವ್ರ ಸ್ವರೂಪ ಪಡೆಯುತ್ತಿದೆ. ಬೆಳಗಾವಿಯ ಹಿರೆಬಾಗೇವಾಡಿ, ಅಥಣಿ ಸೇರಿದಂತೆ ಹಲವೆಡೆ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಪೊಲಿಸರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು, ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ …
Read More »
BigTv News
December 12, 2024
Breaking News
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರಿಗೆ ಮಾಸಿಕ ₹1000 ಆರ್ಥಿಕ ನೆರವು ನೀಡುವ ‘ಮುಖ್ಯಮಂತ್ರಿ ಮಹಿಳಾ ಸಮ್ಮಾನ ಯೋಜನೆ’ಗೆ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಇಂದು (ಗುರುವಾರ) ಚಾಲನೆ ನೀಡಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಯ ಬಳಿಕ ಎಎಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಆರ್ಥಿಕ ನೆರವಿನ ಮೊತ್ತವನ್ನು ₹2,100ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. ಆದಾಗ್ಯೂ, ದೆಹಲಿಯಲ್ಲಿ ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗಿ ಮಾದರಿ ಸಂಹಿತೆ …
Read More »
BigTv News
December 12, 2024
Breaking News, ಬೆಳಗಾವಿ
ಬೆಳಗಾವಿ: ಈಗಾಗಲೇ ರಾಜ್ಯದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವುದರ ಕುರಿತು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮಿಗಳ ಜೊತೆ ಎರಡು ಬಾರಿ ಸಭೆ ಮಾಡಿದ್ದೇನೆ. ಅವರಿಗೆ ಪ್ರತಿಭಟನೆ ಮಾಡಲು ಅವಕಾಶ ಇದೆ. ಆದರೆ, 2ಎ ಮೀಸಲಾತಿ ಒತ್ತಾಯ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ಪಾಲ್ಗೊಂಡು ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟದ ವಿಚಾರವಾಗಿ ಜಯಮೃತ್ಯುಂಜಯ ಸ್ವಾಮಿಗಳ ಜೊತೆ 2 …
Read More »
BigTv News
December 12, 2024
Breaking News
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯ 3ನೇ ಅವಧಿ ಸರ್ಕಾರದಲ್ಲಿ ಕೆಲ ಬಹುನಿರೀಕ್ಷಿತ ಮಸೂದೆಗಳ ಪೈಕಿ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಮುಖವಾಗಿದೆ. ಇದೇ ಚಳಿಗಾಲದ ಅಧಿವೇಶದಲ್ಲಿ ಮಸೂದೆ ಮಂಡನೆಯಾಗಲಿದೆ. ಇದಕ್ಕೆ ಪೂರಕವಾಗಿ ಇದೀಕ ಕೇಂದ್ರ ಕ್ಯಾಬಿನೆಟ್ ಒನ್ ನೇಷನ್ ಒನ್ ಎಲೆಕ್ಷನ್ ಬಿಲ್‌ಗೆ ಅನುಮೋದನೆ ನೀಡಿದೆ. ಈ ಮೂಲಕ ಮೋದಿ ಸರ್ಕಾರ, ದೇಶದ ಚುನಾವಣಾ ವ್ಯವಸ್ಥೆಯಲ್ಲಿ ಮಾಡಲು ಹೊರಟಿರುವ ಮಹತ್ವದ ಬಿಲ್‌ಗೆ ಶೀಘ್ರದಲ್ಲೇ ಎರಡು ಸದನಗಳಲ್ಲಿ ಮಂಡನೆಯಾಗಲಿದೆ. ಏಕಕಾಲಕ್ಕೆ ದೇಶದಲ್ಲಿ …
Read More »
BigTv News
December 12, 2024
Breaking News, ಬೆಳಗಾವಿ
ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ತಾಂತ್ರಿಕ ವಿಭಾಗದ ಜಂಟಿ ನಿರ್ದೇಶಕ ಪಿ.ಜಿ. ವೇಣುಗೋಪಾಲ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಪಂ ವ್ಯಾಪ್ತಿಯಲ್ಲಿನ ಅರಣ್ಯ ಪ್ರದೇಶದಲ್ಲಿ ನಿರ್ಮಿಸಿದ ಹೊಸ ಕೆರೆ, ಭೇಟಿ ನೀಡಿ ಕೆಲಸ ಮಾಡುತ್ತಿದ್ದ 264 ಕೂಲಿಕಾರರೊಂದಿಗೆ ಮಾತನಾಡುತ್ತಾ ಮೇಟ್ ಗಳಿಂದ ಕೂಲಿಕಾರರ ಕೆಲಸದ ಪ್ರಮಾಣ ಮತ್ತು ಎನ್.ಎಮ್.ಎಮ್.ಎಸ್ ಮಾಹಿತಿ ಪಡೆದುಕೊಂಡು …
Read More »