Breaking News

Breaking News

ಮಣಿಪುರದಲ್ಲಿ ಎಲ್ಲವನ್ನೂ ಸರಿ ಮಾಡಲು ಸರ್ವ ರೀತಿಯಿಂದ ಪ್ರಯತ್ನ ನಡೆದಿದೆ : ಜೋಶಿ

ಧಾರವಾಡ: ಮಣಿಪುರದ ಗಲಭೆ ವಿಷಯವನ್ನು ಕೇಂದ್ರ ಗೃಹ ಇಲಾಖೆ ಕಂಟ್ರೋಲ್ ಮಾಡುವ ಕೆಲಸವನ್ನು ಮಾಡುತ್ತಿದೆ. ಇದೊಂದು ಸೂಕ್ಷ್ಮ ವಿಚಾರ. ಮಣಿಪುರದಲ್ಲಿ ಎಲ್ಲವನ್ನೂ ಸರಿ ಮಾಡಲು ಸರ್ವ ರೀತಿಯಿಂದ ಪ್ರಯತ್ನ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಮಣಿಪುರ ಗಲಭೆ ಸೂಕ್ಷ್ಮ ಹಾಗೂ ಕಾಂಪ್ಲಿಕೆಟೆಡ್ ಇದೆ. ಹಿಂದಿನ ಗಲಭೆಗಳಿಗೆ ಇದನ್ನು ನಾನು ಹೋಲಿಕೆ ಮಾಡುವುದಿಲ್ಲ. ಹಿಂದೆಯೂ ಇದೇ ರೀತಿ ಗಲಭೆ ನಡೆದಿದೆ. ಆಗ ಇಷ್ಟೊಂದು …

Read More »

ನ. 21ರಂದು ಸಾರ್ವಜನಿಕ ಕುಂದು ಕೊರತೆಗಳ ಸಭೆ

ಕುಂದಗೋಳ: ಕರ್ನಾಟಕ ಲೋಕಾಯುಕ್ತ ಬೆಂಗಳೂರು ಗೌರವಾನ್ವಿತ ನ್ಯಾಯಮೂರ್ತಿಗಳಾದ ಕೆ.ಎಸ್‌.ಫಣಿಂದ್ರ ಗೌರವಾನ್ವಿತ ಉಪ ಲೋಕಾಯುಕ್ತರು ಕರ್ನಾಟಕ ರಾಜ್ಯ ಇವರಿಂದ ಸಾರ್ವಜನಿಕರಿಂದ ಕುಂದು ಕೊರತೆಗಳ ಬಗ್ಗೆ ದೂರುಗಳ ಸ್ವೀಕಾರ, ವಿಚಾರಣೆ ವಿಲೇವಾರಿ ಸಭೆ ನವೆಂಬ‌ರ್ 21 ಗುರುವಾರ ಸಮಯ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಕುಂದಗೋಳ ತಾಲೂಕಿನ ಹಳ್ಳಿಗರು ತಮ್ಮ ಸಾರ್ವಜನಿಕ ಸಮಸ್ಯೆ ಇದ್ದಲ್ಲಿ ಭಾಗವಹಿಸುವಂತೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ …

Read More »

ಮಹಾನ್ ವ್ಯಕ್ತಿಗಳ ಜಯಂತಿಗಳು ಒಂದೊಂದು ಸಮಾಜಕ್ಕೆ ಮಾತ್ರ ಸೀಮಿತವಾಗಿವೆ : ಜೋಶಿ

ಧಾರವಾಡ: ನಾಡಿನ ಎಲ್ಲ ಮಹಾನ್ ವ್ಯಕ್ತಿಗಳ ಜಯಂತಿಗಳು ಒಂದೊಂದು ಸಮಾಜಕ್ಕೆ ಮಾತ್ರ ಸೀಮಿತವಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬೇಸರ ವ್ಯಕ್ತಪಡಿಸಿದರು. ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕನಕದಾಸರ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಕನಕದಾಸರ ಜಯಂತಿ ಬಂದಾಗ ಕುರುಬರು, ಬಸವ ಜಯಂತಿ ಬಂದಾಗ ಲಿಂಗಾಯತರು, ಅಂಬೇಡ್ಕ‌ರ್ ಜಯಂತಿ ಬಂದಾಗ ಹರಿಜನರು, ರಾಮಾನುಜಾಚಾರ್ಯರ ಜಯಂತಿ ಬಂದಾಗ ವೈಷ್ಣವರು, ಶಂಕರಾಚಾರ್ಯರ ಜಯಂತಿ ಬಂದಾಗ ಬ್ರಾಹ್ಮಣರು, ವಾಲ್ಮೀಕಿ …

Read More »

ಮನೆಯೊಂದರ ಮುಂದೆ ನಿಲ್ಲಿಸಿದ್ದ ಬೈಕ್‌ನಿಂದ ಪೆಟ್ರೋಲ್ ಕಳ್ಳತನ

ಹುಬ್ಬಳ್ಳಿ: ಹುಬ್ಬಳ್ಳಿಯ ಗುಡಿಹಾಳ ರೋಡ್ ವಿಶಾಲ ನಗರದ ಸದತ್ ಕಾಲೋನಿ 3ನೇ ಕ್ರಾಸ್ ಬಳಿಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ಬೈಕ್‌ನಿಂದ ಪೆಟ್ರೋಲ್ ಕಳ್ಳತನ ಮಾಡುತ್ತಿರುವ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೆಟ್ರೋಲ್ ಕಳ್ಳನವು ದಿನ ನಿತ್ಯವೂ ನೆಡೆಯುತ್ತಿರುವುದು ಜನರಿಗೆ ಶಾಕ್ ಕೊಟ್ಟಿದೆ. ಸದತ್ ಕಾಲೋನಿಯ ನಿವಾಸಿಗಳು ಬೈಕ್‌ನ ಪೆಟ್ರೋಲ್‌ ಕಳ್ಳರಿಂದ ಕಂಗೆಟ್ಟು ಹೋಗಿದ್ದರು. ರಾತ್ರಿ ಬೈಕ್‌ನಲ್ಲಿರುತ್ತಿದ್ದ ಪೆಟ್ರೋಲ್ ಬೆಳಗ್ಗೆ ನೋಡಿದಾಗ ಖಾಲಿ ಖಾಲಿ ಆಗಿರುತ್ತಿತ್ತು. ತಮ್ಮ ಕೆಲಸಕ್ಕೆ ಹೋಗಬೇಕಾದರೆ ಪೆಟ್ರೋಲ್ …

Read More »

100 ಕೋಟಿ ಆಫರ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಶಿ

ಹುಬ್ಬಳ್ಳಿ: 100 ಕೋಟಿ ಆಫರ್ ವಿಚಾರ, ರವಿ ಗಾಣಿಗ ದಾಖಲೆ ಇದ್ರೆ ಬಿಡುಗಡೆ ಮಾಡಲಿ, ಅಂತವರ ವಿರುದ್ಧ ಭಾರತ ಸರ್ಕಾರ ಕ್ರಮ ಕೈಗೊಳ್ಳುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಷಯ ಡೈವರ್ಟ್ ಮಾಡಲು ಸುಮ್ಮನೆ ಏನೇನೋ ಮಾತಾಡ್ತಿದ್ದಾರೆ, ದಾಖಲೆ ಇದ್ರೆ ಬಿಡುಗಡೆ ಮಾಡಲಿ, ಯಾರ ಬೇಡ ಅಂದ್ರು, ಡೈವರ್ಟ್ ಮಾಡೋಕೆ ಏನೇನೋ ಆರೋಪ ಮಾಡ್ತಿದ್ದಾರೆ. ಸಿದ್ದರಾಮಯ್ಯ ಸಿಕ್ಕಿ ಹಾಕಿಕೊಂಡಿದ್ದಾರೆ. ಹೀಗಾಗಿ ಬಾಯಿಗೆ ಬಂದಂತೆ …

Read More »

ತಹಶೀಲ್ದಾ‌ರ್ ರಾಜು ಮಾವರಕರ ನೇತೃತ್ವದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕನಕದಾಸರ ಜಯಂತಿ ಆಚರಣೆ

ಕುಂದಗೋಳ : ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತಿ ಆಚರಣೆಯನ್ನು ಕುಂದಗೋಳ ತಾಲೂಕು ಆಡಳಿತದ ವತಿಯಿಂದ ಶಾಸಕ ಎಂ.ಆರ್.ಪಾಟೀಲ್ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದ ಬೆಂತೂರ ಅವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ತಹಶೀಲ್ದಾ‌ರ್ ರಾಜು ಮಾವರಕರ ನೇತೃತ್ವದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕನಕದಾಸರ ಜಯಂತಿ ಆಚರಣೆ ಮಾಡಲಾಯಿತು. ಬಳಿಕ ಶಾಸಕ ಎಂ.ಆರ್.ಪಾಟೀಲ್ ಹಾಗೂ ಶಿವಾನಂದ ಬೆಂತೂರ ಅವರು ಮಾತನಾಡಿ ಕನಕದಾಸರು ಹಿರಿಮೆ ತಿಳಿಸಿದರು, ಈ …

Read More »

ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆ

ನವಲಗುಂದ: ಕುಲ ಕುಲವೆಂದು ಹೊಡೆದಾಡದಿರಿ ಎಂದು ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿದ್ದ ಸ್ಥಾಪಿತ ಮೌಡ್ಯಗಳನ್ನು ಕಳೆಯಲು ಶ್ರಮಿಸಿದವರು ಶ್ರೀ ಭಕ್ತ ಕನಕದಾಸರು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಶ್ರೀ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಕನಕದಾಸರು ತಮ್ಮ ಕವಿತೆಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ಎತ್ತಿ ಹಿಡಿದು ಸಾಮಾಜಿಕ ಸುಧಾರಣೆಯ ಮೂಲಕ ಕ್ರಾಂತಿಯನ್ನು ಮೊಳಗಿಸಿದವರು ಎಂದರು. ತಹಶೀಲ್ದಾರ ಸುಧೀರ …

Read More »

ಹಿಂದೆ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್​ ಶಾಸಕರನ್ನು ಬೆಜೆಪಿಗೆ ಕಳುಹಿಸಿದ್ದೆ ಸಿಎಂ ಸಿದ್ದರಾಮಯ್ಯ: ಪ್ರಲ್ಹಾದ ಜೋಶಿ ಹೊಸ ಬಾಂಬ್

ಧಾರವಾಡ : ಬಿಜೆಪಿ ಆಪರೇಷನ್ ಕಮಲ ಮಾಡಲು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ನೀಡಿದೆ ಎಂದು ಶಾಸಕ ಗಣಿಗ ರವಿ ಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಈ ಹಿಂದೆ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ಸಿನ ಶಾಸಕರನ್ನು ಕಳುಹಿಸಿದ್ದೇ ಸಿಎಂ ಸಿದ್ದರಾಮಯ್ಯನವರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ …

Read More »

ಏರ್‌ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ದಿ:

ಬೆಂಗಳೂರು: ಏರ್​​ಪೋರ್ಟ್​ ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್​ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿ ಮುಂದೆ ಇಡುತ್ತೇವೆ. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ನರೇಂದ್ರ ಮೋದಿ ಬೇಡ ಎನ್ನುವುದಿಲ್ಲ. ರೈಲ್ವೆ …

Read More »

ಕೃಷಿ ತ್ಯಾಜ್ಯ ಬೆಂಕಿಯಿಂದ ಉತ್ತರ ಭಾರತ ವೈದ್ಯಕೀಯ ತುರ್ತು ಸ್ಥಿತಿ ಎದುರಿಸುತ್ತಿದೆ: ದೆಹಲಿ ಸಿಎಂ

ನವದೆಹಲಿ: ಅಪಾಯಕಾರಿ ಕೃಷಿ ತ್ಯಾಜ ಸುಡುವ ಪರಿಣಾಮ ಉತ್ತರ ಭಾರತ ವೈದ್ಯಕೀಯ ತುರ್ತು ಸ್ಥಿತಿ ಎದುರಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಾಲಿನ್ಯದ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ. ಬಿಜೆಪಿ ಆಡಳಿತವಿರುವ ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುತ್ತಿರುವುದರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಇದೇ ವೇಳೆ ಎಎಪಿ ಆಡಳಿತವಿರುವ …

Read More »