Breaking News

Breaking News

ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆ

ನವಲಗುಂದ: ಕುಲ ಕುಲವೆಂದು ಹೊಡೆದಾಡದಿರಿ ಎಂದು ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿದ್ದ ಸ್ಥಾಪಿತ ಮೌಡ್ಯಗಳನ್ನು ಕಳೆಯಲು ಶ್ರಮಿಸಿದವರು ಶ್ರೀ ಭಕ್ತ ಕನಕದಾಸರು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಶ್ರೀ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಕನಕದಾಸರು ತಮ್ಮ ಕವಿತೆಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ಎತ್ತಿ ಹಿಡಿದು ಸಾಮಾಜಿಕ ಸುಧಾರಣೆಯ ಮೂಲಕ ಕ್ರಾಂತಿಯನ್ನು ಮೊಳಗಿಸಿದವರು ಎಂದರು. ತಹಶೀಲ್ದಾರ ಸುಧೀರ …

Read More »

ಹಿಂದೆ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್​ ಶಾಸಕರನ್ನು ಬೆಜೆಪಿಗೆ ಕಳುಹಿಸಿದ್ದೆ ಸಿಎಂ ಸಿದ್ದರಾಮಯ್ಯ: ಪ್ರಲ್ಹಾದ ಜೋಶಿ ಹೊಸ ಬಾಂಬ್

ಧಾರವಾಡ : ಬಿಜೆಪಿ ಆಪರೇಷನ್ ಕಮಲ ಮಾಡಲು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ನೀಡಿದೆ ಎಂದು ಶಾಸಕ ಗಣಿಗ ರವಿ ಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಈ ಹಿಂದೆ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ಸಿನ ಶಾಸಕರನ್ನು ಕಳುಹಿಸಿದ್ದೇ ಸಿಎಂ ಸಿದ್ದರಾಮಯ್ಯನವರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ …

Read More »

ಏರ್‌ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ದಿ:

ಬೆಂಗಳೂರು: ಏರ್​​ಪೋರ್ಟ್​ ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್​ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿ ಮುಂದೆ ಇಡುತ್ತೇವೆ. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ನರೇಂದ್ರ ಮೋದಿ ಬೇಡ ಎನ್ನುವುದಿಲ್ಲ. ರೈಲ್ವೆ …

Read More »

ಕೃಷಿ ತ್ಯಾಜ್ಯ ಬೆಂಕಿಯಿಂದ ಉತ್ತರ ಭಾರತ ವೈದ್ಯಕೀಯ ತುರ್ತು ಸ್ಥಿತಿ ಎದುರಿಸುತ್ತಿದೆ: ದೆಹಲಿ ಸಿಎಂ

ನವದೆಹಲಿ: ಅಪಾಯಕಾರಿ ಕೃಷಿ ತ್ಯಾಜ ಸುಡುವ ಪರಿಣಾಮ ಉತ್ತರ ಭಾರತ ವೈದ್ಯಕೀಯ ತುರ್ತು ಸ್ಥಿತಿ ಎದುರಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಾಲಿನ್ಯದ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ. ಬಿಜೆಪಿ ಆಡಳಿತವಿರುವ ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುತ್ತಿರುವುದರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಇದೇ ವೇಳೆ ಎಎಪಿ ಆಡಳಿತವಿರುವ …

Read More »

ತನ್ನ ತಂದೆಯನ್ನು ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡ ಪಾಪಿ ಮಗ

ನವಲಗುಂದ: ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ತಲೆಮೊರಬದಲ್ಲಿ ನ.13ರಂದು ಮನೆ ಪಕ್ಕದ ಶೆಡ್‌ನಲ್ಲಿ ಮಲಗಿದ್ದಾಗ ಅನುಮಾನಾಸ್ಪದ ಕೊಲೆ ನಡೆದಿದ್ದು ಬೆಳಕಿಗೆ ಬಂದಿತ್ತು. ಅಡಿವೆಪ್ಪ ತಡಕೋಡ(58) ಕೊಲೆಯಾಗಿದ್ದ ವ್ಯಕ್ತಿ. ಯಾರೋ ಕಲ್ಲು ಎತ್ತಿ ಹಾಕಿ ಕೊಂದಿದ್ದ ಶಂಕೆ ವ್ಯಕ್ತವಾದ ಹಿನ್ನಲೆ ಪೊಲೀಸ್‌ ತನಿಖೆ ನಡೆಸಿ ಸತ್ಯ ಬಯಲು ಮಾಡಿದ್ದಾರೆ. ಅಡಿವೆಪ್ಪನ ಹಿರಿಯ ಮಗ ಶಿವಯೋಗಿ ತಡಕೋಡ(30)ನನ್ನು ಬಂಧಿಸಿ ವಿಚಾರಿಸಿದಾಗ ತನ್ನ ತಂದೆಯನ್ನು ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಗ್ರಾಮದ ಮಹಿಳೆಯೊಂದಿಗೆ ಅನೈತಿಕ …

Read More »

ಕನಕದಾಸರ ಜಯಂತಿ ಆಚರಣೆ

ನವಲಗುಂದ: ಕನಕದಾಸರ ನಿರಂತರ ಸಾಧನೆ, ಬದುಕಿನ ಅನುಭವಗಳು, ಆಧ್ಯಾತ್ಮಿಕತೆ ಹಾಗೂ ಕನಕದಾಸರ ದಾಸ ಸಾಹಿತ್ಯವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಮೋಘ ಕೊಡುಗೆಯಾಗಿದೆ. ಕನಕದಾಸರು ಶ್ರೇಷ್ಠ ಸಂತ, ವರ ಕವಿ, ಕೀರ್ತನೆಕಾರ, ಕರ್ನಾಟಕದ ದಾಸ ಸಾಹಿತ್ಯದ ಅಶ್ವಿನಿ ದೇವತೆಗಳಲ್ಲಿ ಒಬ್ಬರು ಎಂದು ಡಾ. ನಾಗರತ್ನ ಕುರಡೇಕರ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಹರಿಭಕ್ತ, ದಾಸಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು …

Read More »

ಮಂಡ್ಯದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಆರಂಭ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಸಕ್ಕರಿನಗರಿ ಮಂಡ್ಯದಲ್ಲಿ ನಡೆಯುತ್ತಿದೆ. ಈ ನುಡಿಜಾತ್ರೆಯನ್ನು ಮತ್ತಷ್ಟು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲು, ಮಂಡ್ಯ ಜಿಲ್ಲಾಡಳಿತ ತಯಾರಿ ಮಾಡಿಕೊಂಡಿದೆ. ಈ ಮಧ್ಯೆ ತಾಂತ್ರಿಕ ಸಮಿತಿಯ ವರದಿಯ ಆಧರಿಸಿ, ನಗರದ ಹೊರವಲಯದ 60 ಎಕರೆ ಪ್ರದೇಶದಲ್ಲಿ ನುಡಿಜಾತ್ರೆಗೆ ಈಗಿನಿಂದಲೇ ತಯಾರಿ ಶುರುವಾಗಿದೆ. ಈ ಬಾರಿ ಸಕ್ಕರಿನಗರಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ …

Read More »

ಬೀದರ್ ನಲ್ಲಿ ಬೀದಿ ದೀಪಗಳಿಲ್ಲದೇ ಬಡವಾದ ಮಹಾನಗರದ ಪ್ರಮುಖ ರಸ್ತೆಗಳು

ಬೀದರ್‌: ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕವಾಗಿ ಮಹತ್ವ ಪಡೆದಿರುವ ಬೀದರ್‌ ಮಹಾನಗರದ ಪ್ರಮುಖ ರಸ್ತೆಗಳು ಬೀದಿ ದೀಪಗಳಿಲ್ಲದೆ ಬಡವಾಗಿವೆ. ಬೀದರ್‌ ಶಾಸಕರೂ ಆದ ಪೌರಾಡಳಿತ ಸಚಿವ ರಹೀಂ ಖಾನ್‌ ಅವರ ತವರಿನ ರಸ್ತೆಗಳೇ ಅಂಧಕಾರದಲ್ಲಿ ಮುಳುಗಿವೆ. ಜನ ವಾಹನಗಳ ಬೆಳಕಿನ ಆಸರೆಯಲ್ಲಿ ಓಡಾಡುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ. ನಗರದ ನೌಬಾದ್‌ ಬಸವೇಶ್ವರ ವೃತ್ತದಿಂದ ಆರ್‌ಟಿಒ ಕಚೇರಿ ವರೆಗಿನ ಬೀದರ್‌-ನಾಂದೇಡ್‌ ಮುಖ್ಯರಸ್ತೆಯ ಬೀದಿದೀಪಗಳು ಹಾಳಾಗಿ ಅನೇಕ ತಿಂಗಳುಗಳಾಗಿವೆ. ಇಡೀ ಭಾಗ ಅಂಧಕಾರದಲ್ಲಿ ಮುಳುಗಿದೆ. …

Read More »

ಸಂತಶ್ರೇಷ್ಠ ಕನಕದಾಸರ ಜಯಂತಿ: ರಾಜ್ಯದ ಜನತೆಗೆ ಸಿಎಂ ಶುಭಾಶಯ

ಬೆಂಗಳೂರು : ಸಂತಶ್ರೇಷ್ಠ ಕನಕದಾಸರ 537 ನೇ ಜಯಂತಿ ಮಹೋತ್ಸವವನ್ನ ಸರ್ಕಾರದ ವತಿಯಿಂದ ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ದಾಸಶ್ರೇಷ್ಠ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ರಾಜ್ಯದ ಜನತೆಗೆ ಕನಕ ಜಯಂತಿಯ ಶುಭಾಶಯಗಳನ್ನು ಕೋರಿದರು. ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು …

Read More »

ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ: 1,016 ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿ ಮಾಡಿ ಆದೇಶ

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂಬಂಧಿಸಿ 1,016 ಅಭ್ಯರ್ಥಿಗಳಿಗೆ ನ.16ರಂದು ಆನ್‍ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗಿದ್ದು, ಅದರಂತೆ ಸ್ಥಳ ಆಯ್ಕೆ ಮಾಡಿಕೊಂಡವರಿಗೆ ಸ್ಥಳ ನಿಯುಕ್ತಿ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ರವಿವಾರ ಪ್ರಕಟನೆ ಹೊರಡಿಸಿರುವ ಅವರು, ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಮಂಜೂರಾದ ಹುದ್ದೆಗಳಲ್ಲಿ ಒಟ್ಟು 1,654 ಹುದ್ದೆಗಳು ಖಾಲಿ …

Read More »