Breaking News

Breaking News

ಎಪಿಎಲ್, ಬಿಪಿಎಲ್ ಕಾರ್ಡ್ ಗಳನ್ನು ಏಕೆ ರದ್ದು ಮಾಡಿದ್ದಾರೆ ನನಗೆ ಗೊತ್ತಿಲ್ಲ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಎಪಿಎಲ್, ಬಿಪಿಎಲ್ ಕಾರ್ಡ್ ಗಳನ್ನು ಏಕೆ ರದ್ದು ಮಾಡಿದ್ದಾರೆ ನನಗೆ ಗೊತ್ತಿಲ್ಲ. ನಾವು ಶೇಕಡಾ 50ರಷ್ಟು ನಗರ ಪ್ರದೇಶ, ಗ್ರಾಮೀಣ ಪ್ರದೇಶಗಳಲ್ಲಿ ಶೇಕಡಾ 75 ರಷ್ಟು ಉಚಿತವಾಗಿ ಆಹಾರ ಕೊಡ್ತೀವಿ. ಇವರು ಯಾಕೆ ಕಾರ್ಡ್ ರದ್ದು ಮಾಡಲು ತೀರ್ಮಾನ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ನಾನು ಸಂಪೂರ್ಣವಾಗಿ ತಿಳಿದುಕೊಳ್ಳಿನೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಆಹಾರ ಭದ್ರತೆಗಾಗಿ ನಾವು ಪ್ರತಿ ವರ್ಷ 2 ಲಕ್ಷ …

Read More »

50 ಕೋಟಿ ಆರೋಪದ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಶಿ

ಹುಬ್ಬಳ್ಳಿ: 50 ಕೋಟಿ ಆರೋಪದ ವಿಚಾರ, ಹುಚ್ಚು ಹುಚ್ಚರ ತರಹ ಮಾತಾಡೋದು ಪ್ರಜಾಪ್ರಭುತ್ವದ ಮೇಲೆ ಪ್ರಭಾವ ಬೀರುತ್ತೆ. 50 ಜನರಿಗೆ 50 ಕೋಟಿ ಅಂದ್ರೆ 2500 ಕೋಟಿ ಆಗುತ್ತೆ. ಏನು ಮಾತಾಡ್ತೀರಿ ಅನ್ನೋ ಸೆನ್ಸ್ ಇದೆಯಾ ನಿಮಗೆ? 50 ಕೋಟಿ ಕೊಡ್ತಾರೆ ಅನ್ನೋ ಆರೋಪ ಮಾಡ್ತೀರಿ. ನಿಮ್ಮವರು ವ್ಯಾಪಾರ ಆಗೋಕೆ ತಯಾರಾಗಿದ್ದಾರಾ? ನಿಮ್ಮ ಶಾಸಕರು ಕತ್ತೆ ಕುರಿ ಕೋಣನಾ? ನಾನು ಹಾಗೆ ಭಾವಿಸಿಲ್ಲ. ಕತ್ತೆ ಕುರಿ ಮಾರಾಟ ಮಾಡ್ತಾರೆ. ಸಿಎಮ್ …

Read More »

ಕೃಷ್ಣಾ ಮೇಲ್ದಂಡೆ ಯೋಜನೆ: 10 ವರ್ಷಗಳಲ್ಲಿ ಅವಿಭಜಿತ ಆಂಧ್ರಕ್ಕೆ ಹರಿದ 5,611 ಟಿಎಂಸಿ ಅಡಿ ನೀರು

ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಮೂರನೇ ಹಂತದ ಕಾಮಗಾರಿ ನನೆಗುದಿಗೆ ಬಿದ್ದಿದ್ದು, 10 ವರ್ಷಗಳಲ್ಲಿ 5,611 ಟಿಎಂಸಿ ಅಡಿ ನೀರು ಅವಿಭಜಿತ ಆಂಧ್ರ ಪ್ರದೇಶಕ್ಕೆ ಹರಿದು ಹೋಗಿದೆ. ರಾಜ್ಯಕ್ಕೆ ತನ್ನ ಪಾಲಿನ 1,170 ಟಿಎಂಸಿ ಅಡಿ ನೀರು ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಕೃಷ್ಣಾ ನ್ಯಾಯಮಂಡಳಿ 2010ರಲ್ಲಿ ನೀಡಿದ ತೀರ್ಪಿನಲ್ಲಿ ಪ್ರತಿ ವರ್ಷ 177 ಟಿಎಂಸಿ ಅಡಿ ನೀರು ಬಳಕೆಗೆ ಅವಕಾಶ ನೀಡಿದೆ. ಮೂರನೇ ಹಂತದ ಯೋಜನೆ ಜಾರಿಯಾಗಿದ್ದರೆ ಕಲಬುರಗಿ, ವಿಜಯಪುರ, …

Read More »

ನೆಲಮಂಗಲ-ತುಮಕೂರಿನವರೆಗೆ 6 ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ಸೋಮಣ್ಣ

ತುಮಕೂರು: ರಾಜ್ಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೆಲಮಂಗಲ – ತುಮಕೂರಿನವರೆಗೆ 6 ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ.ಸೋಮಣ್ಣ ತಿಳಿಸಿದರು. ಜಿಲ್ಲೆಯ ತುರುವೇಕೆರೆ ತಾಲೂಕಿನ ಸಂಪಿಗೆ ರೋಡ್ ರೈಲ್ವೆ ನಿಲ್ದಾಣದಲ್ಲಿ ಇಂದು ಸಂಜೆ ರೈಲ್ವೇ ನಿಲ್ದಾಣ ಪರಿವೀಕ್ಷಣೆ ಹಾಗೂ ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್ ಗೆ ಹೆಚ್ಚುವರಿ ರೈಲು ನಿಲುಗಡೆಗೆ ಚಾಲನೆ ನೀಡಿ ಮಾತನಾಡಿದರು. ಜಿಲ್ಲೆಯಲ್ಲಿ ರೈಲ್ವೇ …

Read More »

ಬಾಲಕಿಯೊರ್ವಳನ್ನು ಚುಡಾಯಿಸಿದ ಪ್ರಕರಣ:2 ಗಂಟೆಯಲ್ಲಿ ಬಂಧಿಸುವಲ್ಲಿ ಪೋಲಿಸರು ಯಶಸ್ವಿ

ಹುಬ್ಬಳ್ಳಿ: ಇತ್ತಿಚೆಗೆ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೊರ್ವಳನ್ನು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಆರೋಪಿಗಳನ್ನು ಘಟನೆ ನಡೆದ ಎರಡು ಗಂಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಹಳೇಹುಬ್ಬಳ್ಳಿಯ ಅಯೋಧ್ಯೆ ನಗರದ ನಿವಾಸಿಗಳಾದ ಶುಭಂ ತಡಸ, ಮೆಹಬೂಬ್ ಹಿತ್ತಲಮನಿ ಎಂದು ಗುರುತಿಸಲಾಗಿದೆ. ಇವರಿಂದ ಆರು ಮೊಬೈಲ್ ಮತ್ತು ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನು ಇಬ್ಬರು ಆರೋಪಿಗಳಿಗೆ ಸಹಕರಿಸಿದ ಸಾಗರ ಸಾತಪುತೆ, …

Read More »

ಕಲಬುರಗಿಯ ಬಿಸಿಎಂ ಮಹಿಳಾ ನಿಲಯಕ್ಕೆ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಭೇಟಿ

ಕಲಬುರಗಿ : ಜಿಲ್ಲೆಯ ಪ್ರವಾಸದಲ್ಲಿರುವ ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಅವರು ಇಂದು ದಿನವಿಡೀ ಸಾರ್ವಜನಿಕರ ಅಹವಾಲು ಸ್ಚೀಕರಿಸಿದ ನಂತರ ರಾತ್ರಿ 9 ಗಂಟೆ ಸುಮಾರಿಗೆ ನಗರದ ಐವಾನ್-ಎ-ಶಾಹಿ ಪ್ರದೇಶದ ಬಿ.ಸಿ.ಎಂ. ಮೆಟ್ರಿಕ್ ನಂತರದ ಮಹಿಳಾ ವಸತಿ ನಿಲಯಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಅಹವಾಲು ಆಲಿಸಿದರು. ವಸತಿ ನಿಲಯದಲ್ಲಿ ಫ್ಯಾನ್, ಲೈಟ್ ಇಲ್ಲ, ಕಟ್ಟಡ ಹಳೆದಾಗಿರುವುದರಿಂದ ದುರಸ್ತಿ ಮಾಡಿಸಬೇಕಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ. ವಾರ್ಡನ್ ಮೇಡಂ ಸರಿಯಾಗಿ …

Read More »

ಭಯೋತ್ಪಾದಕರು ಈಗ ತಮ್ಮ ಮನೆಗಳಲ್ಲೂ ಅಸುರಕ್ಷಿತವಾಗಿದ್ದಾರೆ: ಪ್ರಧಾನಿ ಮೋದಿ

ನವದೆಹಲಿ: ಹಿಂದಿನ ಸರ್ಕಾರಗಳು ವೋಟ್ ಬ್ಯಾಂಕ್ ರಾಜಕೀಯಕ್ಕೆ ತಕ್ಕಂತೆ ನೀತಿಗಳನ್ನು ರೂಪಿಸುತ್ತಿದ್ದರೆ, ಪ್ರಸ್ತುತ ಸರ್ಕಾರವು ಸರ್ಕಾರದ ಮೇಲಿನ ಜನರ ನಂಬಿಕೆಯನ್ನು ಪುನಃಸ್ಥಾಪಿಸುವುದನ್ನು ಖಚಿತಪಡಿಸಿಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂದು ಎಚ್‌ಟಿ ನಾಯಕತ್ವ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ತಮ್ಮ ಸರ್ಕಾರವು ಜನರ, ಜನರಿಂದ ಮತ್ತು ಜನರಿಗಾಗಿ ಪ್ರಗತಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ ಎಂದು ಹೇಳಿದರು. ಹಲವು ದೇಶಗಳಲ್ಲಿ ಪ್ರತಿ ಚುನಾವಣೆಗೂ ಸರ್ಕಾರಗಳು ಬದಲಾಗುತ್ತಿವೆ. ಆದರೆ ಭಾರತದಲ್ಲಿ ಜನರು …

Read More »

ಕಾಂಗ್ರೆಸ್ ಶಾಸಕರು ಸ್ವಾಭಿಮಾನಿಗಳು: ಲಕ್ಷ್ಮಣ ಸವದಿ

ಬೆಳಗಾವಿ: 50 ಕೋಟಿ ಅಲ್ಲ, 100 ಕೋಟಿ ರೂ. ಕೊಟ್ಟರೂ ಯಾರೂ ಬಿಜೆಪಿ ಆಮಿಷಕ್ಕೆ ಒಳಗಾಗುವುದಿಲ್ಲ. ಕಾಂಗ್ರೆಸ್ ಶಾಸಕರು ಸ್ವಾಭಿಮಾನಿಗಳು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡನಲ್ಲಿ ಮಾದ್ಯಮಗಳ ಜೊತೆ ಮಾತನಾಡಿರುವ ಅವರು, ಮುಖ್ಯಮಂತ್ರಿಯವರು ಹೀಗೆ ಹೇಳಿದ್ದಾರೆಂದರೆ ಅವರ ಬಳಿ ಬಲವಾದ ಸಾಕ್ಷ್ಯ ಇರಬಹುದು. ಅದಕ್ಕೆ ಅವರು ಹೇಳಿರಬಹುದು, ಏನೇ ಮಾಡಿದರೂ ಬಿಜೆಪಿಯವರ ಕನಸು ನನಸಾಗದು ಎಂದು ಬಿಜೆಪಿಯವರು ಕಾಂಗ್ರೆಸ್‌ ಶಾಸಕರಿಗೆ ತಲಾ ರೂ.50 ಕೋಟಿ …

Read More »

ಉಡುಪಿ ಜಿಲ್ಲೆಗೆ ಸಮರ್ಪಕವಾಗಿ ಇಂಧನ ಪೂರೈಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಜಿಲ್ಲೆಯಲ್ಲಿ ಸಿಎನ್‌ಜಿ ಇಂಧನ ಚಾಲಿತ ಆಟೊ ರಿಕ್ಷಾ ಚಾಲಕರು ಸಮಸ್ಯೆ ಎದುರಿಸುತ್ತಿದ್ದು, ಸಿಎನ್‌ಜಿ ಬಂಕ್‌ಗಳಿಗೆ ಸಮರ್ಪಕವಾಗಿ ಇಂಧನ ಪೂರೈಸಿ ಎಂದು ಮಂಗಳೂರಿನ ಗೇಲ್‌ ಇಂಡಿಯಾ ಕಂಪನಿ ಹಾಗೂ ಅದಾನಿ ಕಂಪನಿ ಪ್ರತಿನಿಧಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಿಎನ್‌ಜಿ ಇಂಧನ ತುಂಬಿಸಿಕೊಳ್ಳಲು ರಿಕ್ಷಾ ಚಾಲಕರು ಬಂಕ್‌ಗಳ ಮುಂದೆ ಕಿ.ಮೀ.ಗಟ್ಟಲೆ ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. …

Read More »

ರೈತರಿಗೆ ರಿಯಾಯಿತಿ ದರದಲ್ಲಿ ಕೃಷಿ ಉಪಕರಣ ಖರೀದಿಸಲು ಅರ್ಜಿ ಆಹ್ವಾನ

ಮಡಿಕೇರಿ : ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವೀಡರ್, ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್ಸೆಟ್, ಪ್ಲೋರ್ಮಿಲ್, ಯಂತ್ರ ಚಾಲಿತ ಮೋಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ …

Read More »