Breaking News

Breaking News

ಬಗರ್ ಹುಕುಂ ಅರ್ಜಿಗಳನ್ನು ನ.25 ರೊಳಗೆ ತೆರವುಗೊಳಿಸಲು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು: ಬಗರ್ ಹುಕುಂ ಸಂಬಂಧಿತ ಅರ್ಜಿಗಳನ್ನು ನ.25ರೊಳಗೆ ತೆರವುಗೊಳಿಸಬೇಕು, ಆದೇಶ ಪಾಲನೆಯಾಗದಿದ್ದಲ್ಲಿ ಎಲ್ಲರಿಗೂ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಖಡಕ್ ಸೂಚನೆ ನೀಡಿದ್ದಾರೆ. ಬಗರ್ ಹುಕುಂ ಅರ್ಜಿ ವಿಲೇವಾರಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ತಹಶೀಲ್ದಾರ್‌ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಬಗರ್ ಹುಕುಂ ಬಡವರ ಕೆಲಸ, ಬಡ ರೈತರಿಗೆ ಶೀಘ್ರ ಭೂ ಮಂಜೂರು ಮಾಡಬೇಕು ಎಂದು ರೈತಪರ ಸಂಘಟನೆಗಳು …

Read More »

ತಂಬಾಕು ಮುಕ್ತ ಯುವ ಅಭಿಯಾನ ಜಿಲ್ಲೆಯ 187 ಶಾಲೆಗಳು ಮತ್ತು 4 ಗ್ರಾಮಗಳು ತಂಬಾಕು ಮುಕ್ತ

ಧಾರವಾಡ: ಭಾರತ ಸರ್ಕಾರದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅಭಿಯಾನದ ತಂಬಾಕು ಮುಕ್ತ ಯುವ ಅಭಿಯಾನ ಕಾರ್ಯಕ್ರಮವನ್ನು ಸೆ. 24, 2024 ರಿಂದ ಹಮ್ಮಿಕೊಳ್ಳಲಾಗಿತ್ತು. ಸುಮಾರು 63 ಹೆಚ್ಚು ಜನ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಸಂಘಟಿಸಲಾಗಿತ್ತು. ಧಾರವಾಡ ಜಿಲ್ಲೆಯಲ್ಲಿ 60 ದಿನಗಳ ತಂಬಾಕು ಮುಕ್ತ ಯುವ ಅಭಿಯಾನದಲ್ಲಿ ಧಾರವಾಡ ಜಿಲ್ಲೆಯಲ್ಲಿನ 187 ಶಾಲೆಗಳನ್ನು ಮತ್ತು 4 ಗ್ರಾಮಗಳನ್ನು ತಂಬಾಕು ಮುಕ್ತಗೊಳಿಸಲಾಗಿದೆ. ಧಾರವಾಡ ತಾಲೂಕಿನ ಗರಗ ಪ್ರಾಥಮಿಕ …

Read More »

ರಂಗಭೂಮಿಗೆ ಬಾಳಾಚಾರ್ ಅವರ ಕೊಡುಗೆ ಅಪಾರ

ಧಾರವಾಡ: ರಂಗಾಯಣದ ಪಂ. ಬಸವರಾಜ ರಾಜುಗುರು ಬಯಲು ರಂಗಮಂದಿರದಲ್ಲಿ ಧಾರವಾಡ ರಂಗಾಯಣ ಹಾಗೂ ಸಕ್ಕರಿ ಬಾಳಾಚಾರ್ (ಶಾಂತಕವಿ) ಟ್ರಸ್ಟ್ ಸಹಯೋಗದೊಂದಿಗೆ ಆಧುನಿಕ ಕನ್ನಡ ರಂಗಭೂಮಿ ದಿನದ ಅಂಗವಾಗಿ ಆಯೋಜಿಸಿದ್ದ 3 ದಿನಗಳ ನಾಟಕೋತ್ಸವವನ್ನು ಸಕ್ಕರಿ ಬಾಳಾಚಾರ್ (ಶಾಂತಕವಿ) ಟ್ರಸ್ಟ್‍ನ ಅಧ್ಯಕ್ಷ ಬಾಬುರಾವ್ ಸಕ್ಕರಿ ಅವರು ಉದ್ಘಾಟಿಸಿ, ಸಕ್ಕರಿ ಬಾಳಾಚಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಿದರು. ಉತ್ತರ ಕರ್ನಾಟಕದಲ್ಲಿ ಮರಾಠಿ ನಾಟಕಗಳು ಹೆಚ್ಚು ಪ್ರಚಲಿತವಾಗಿದ್ದನ್ನು ಕಂಡು ಕನ್ನಡಿಗರಲ್ಲಿ ಕನ್ನಡ ಪ್ರಜ್ಞೆಯನ್ನು ಜಾಗೃತಗೊಳಿಸುವ …

Read More »

ಬೆಂಬಲ ಬೆಲೆ ಯೋಜನೆಯಡಿ ಶೀಘ್ರ ಭತ್ತ ಖರೀದಿ ಕೇಂದ್ರ ಸ್ಥಾಪನೆಗೆ ತೀರ್ಮಾನ: ಸಚಿವ ಬೋಸರಾಜು

ಬೆಂಗಳೂರು: ಬೆಂಬಲ ಬೆಲೆಯೊಂದಿಗೆ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ ಭತ್ತ ಖರೀದಿ ಕೇಂದ್ರವನ್ನು ಪ್ರಾರಂಭಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಜನವರಿ 01- 2025 ರಂದು ಕರ್ನಾಟಕದಲ್ಲಿ ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ದಿನಾಂಕ ನಿಗದಿ ಮಾಡಲಾಗಿದೆ. ಆದರೆ ತುಂಗಭದ್ರಾ ಅಚ್ಚುಕಟ್ಟು …

Read More »

ಉತ್ತರ ಕರ್ನಾಟಕ ಭಾಗದಲ್ಲಿ 127 ಬಸ್ ಗಳ ಸಂಚಾರಕ್ಕೆ ಹಸಿರು ನಿಶಾನೆ

ಹುಬ್ಬಳ್ಳಿ: ಕರ್ನಾಟಕದ ವಾಯುವ್ಯ ಕರ್ನಾಟ ರಸ್ತೆ ಸಾರಿಗೆ ಸಂಸ್ಥೆಗೆ ಅತ್ಯಧಿಕ ಬಸ್‌ಗಳು ಬೇಕು ಉತ್ತಮವಾದ ಹೊಸ ಬಸ್‌ಗಳಿಗೆ ಬಹುದಿನಗಳಿಂದ ಬೇಡಿಕೆ ಇತ್ತು ಅದೀಗ ನೆರವೇರಿದ್ದು, ಸಾರಿಗೆ ಸಚಿವರು ಇಂದು ಉತ್ತರ ಕರ್ನಾಟಕ ಭಾಗದಲ್ಲಿ 127 ಹೊಸ ಬಸ್‌ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಹುಬ್ಬಳ್ಳಿಯ ಗೋಕುಲ ರಸ್ತೆಯ ಎಚ್.ಡಿ.ಬಿ.ಆರ್.ಟಿ.ಎಸ್. ಘಟಕದಲ್ಲಿ ಇಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭ ನಡೆಸಲಾಯಿತು. ಈ ವೇಳೆ ರಾಜ್ಯ …

Read More »

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತವಾಗಿದೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಬೆಳ್ತಂಗಡಿ: ಮಹಿಳೆಯರ ಸಶಕ್ತೀಕರಣ ಜತೆಗೆ ಸ್ವಯಂ ಉದ್ಯೋಗ ಕಲ್ಪಿಸಿ, ತಾವು ಉತ್ಪಾದಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ಇಂದು ಗ್ರಾಮೀಣ ಜನರ ನಾಡಿಮಿಡಿತ ವಾಗಿದೆ. ಕೇಂದ್ರ ಸರಕಾರ ಸಹಿತ ದೇಶದೆಲ್ಲೆಡೆ ನೂತನ ಯೋಜನೆಗಳನ್ನು ಆರಂಭಿಸುವ ಮುನ್ನ ಧರ್ಮಸ್ಥಳದ ಯೋಜನೆಗಳನ್ನು ಪ್ರಾಯೋಗಿಕವಾಗಿ ಅಧ್ಯಯನ ಮಾಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶ್ಲಾಘಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯಿಂದ …

Read More »

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 480 ಸಮುದಾಯ ಶೌಚಾಲಯಗಳ ನಿರ್ಮಾಣ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 480 ಸಮುದಾಯ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದ್ದು 2025ರ ಜನವರಿ ಅಂತ್ಯದೊಳಗೆ ಶೌಚಾಲಯಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಸಜ್ಜುಗೊಳಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ವಿಮರ್ಶಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿರ್ಮಾಣದ ನಂತರ ನಿರ್ವಹಣೆಯ ಜವಾಬ್ದಾರಿಯನ್ನು ನಿರ್ಮಾಣ ಸಂಸ್ಥೆಗೆ ಒಪ್ಪಿಸಲಾಗುತ್ತಿದ್ದು ಇದು ವಿನೂತನ ಪ್ರಯೋಗವಾಗಿದೆ, ನಿರ್ಮಾಣದ ನಂತರ ನಿರ್ವಹಣೆಯಿಲ್ಲದೆ ಸೊರಗಬಾರದು ಎಂಬ ಉದ್ದೇಶದಿಂದ ಈ …

Read More »

ಎಸ್ ಕೆ ಡಿ ಆರ್ ಡಿ ಪಿ ಟ್ರಸ್ಟ್ ವತಿಯಿಂದ ಸ್ವಸಹಾಯ ಸಂಘಗಳಿಗೆ ₹607 ಕೋಟಿ ಲಾಭಾಂಶ

ಉಜಿರೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ಬಿ.ಸಿ. ಟ್ರಸ್ಟ್‌ ವತಿಯಿಂದ ಸ್ವಸಹಾಯ ಸಂಘಗಳ ಸದಸ್ಯರಿಗೆ ಒಟ್ಟು ₹ 607.71 ಕೋಟಿ ಲಾಭಾಂಶವನ್ನು ಧರ್ಮಸ್ಥಳದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಕೇಂದ್ರ‌ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ ಅವರು ಸಾಂಕೇತಿಕವಾಗಿ ಬೆಳ್ತಂಗಡಿಯ ಧನ್ಯಶ್ರೀ ಸಂಘ, ಕುಂದಾಪುರದ ಶ್ರೀನಿಧಿ ಸಂಘ, ಹೊಸಪೇಟೆಯ ಶ್ರೀಶಂಕರ ಸಂಘ, ಆನೇಕಲ್‌ನ ಅಪೂರ್ವ ಸಂಘ, ಖಾನಾಪುರದ ಅಹದ್ ಸಂಘ, ಹಾಸನದ ರೌಷನ್ ಸಂಘಗಳ ಸದಸ್ಯರಿಗೆ ಲಾಭಾಂಶದ ಚೆಕ್ ವಿತರಿಸಿದರು. …

Read More »

ಶೀಘ್ರದಲ್ಲೇ 10 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವಿರುವುದು ನಿಜ, ಅದನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದ್ದು, ಇನ್ನೂ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದರು. ಶಾಲಾ ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಧು ಬಂಗಾರಪ್ಪ ಅವರು ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಅತ್ಯುತ್ತಮ …

Read More »

ಕರ್ನಾಟಕ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೆಟಿಂಗ್ ವಿಭಾಗದಲ್ಲಿ ಹುಬ್ಬಳ್ಳಿ ಯುವಕರ ಸಾಧನೆ

ಹುಬ್ಬಳ್ಳಿ: ಬೆಂಗಳೂರು ಹಾಗೂ ಮೈಸೂರ್‌ನಲ್ಲಿ ನಡೆದ 40 ಕರ್ನಾಟಕ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೆಟಿಂಗ್ ವಿಭಾಗದಲ್ಲಿ ಹುಬ್ಬಳ್ಳಿ ರೋಲರ್ ಸ್ಕೆಟಿಂಗ್ ಅಕಾಡೆಮಿಯ ಮಕ್ಕಳಾದ ನಂದೀಶ್ ಸುರೇಬಾನ ಒಂದು (ಚಿನ್ನದ ಪದಕ), ಅಗಸ್ಯ ಒಂದು (ಬೆಳ್ಳಿಯ ಪದಕ), ಸ್ವರ ಪಾಟೀಲ್ ಒಂದು (ಬೆಳ್ಳಿಯ ಪದಕ, ಸಮರ್ಥ ಮರಾಠ ಒಂದು (ಕಂಚಿನ ಪದಕ), ಹಾಗೂ ಆರ್ಟಿಸ್ಟಿಕ್ ವಿಭಾಗದಲ್ಲಿ ಕಸ್ತೂರಿ ಮಠದ್ ಒಂದು (ಕಂಚಿನ ಪದಕ) ಪಡೆದಿದ್ದಾರೆ. ಈ ಮಕ್ಕಳಿಗೆ ಅಕ್ಷಯ್ ಸೂರ್ಯವಂಶಿಯವರು ತರಬೇತಿ …

Read More »