BigTv News
November 14, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ವಸತಿ, ವಾಣಿಜ್ಯ ಮತ್ತು ಕೃಷಿ ಭೂಮಿ ಸೇರಿದಂತೆ ಎಲ್ಲಾ ರೀತಿಯ ಆಸ್ತಿಗಳ ನೋಂದಣಿಗೆ ಇ-ಖಾತಾಗಳನ್ನು ರಾಜ್ಯ ಸರ್ಕಾರ ಕಡ್ಡಾಯ ಮಾಡಿದೆ. ಸ್ಥಿರಾಸ್ತಿಗಳ ನೋಂದಣಿಗಾಗಿ ಗ್ರಾಮಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತೆಗಳನ್ನು ವಿತರಿಸುವ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ನೇತೃತ್ವದಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು. ಈ ವೇಳೆ ಗ್ರಾಮ ಪಂಚಾಯಿತಿಗಳು …
Read More »
BigTv News
November 12, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಇ-ಸ್ವತ್ತು ಮಂಜೂರಾತಿ ಪ್ರಕ್ರಿಯೆಯನ್ನು ಸರಳೀಕರಣ ಹಾಗೂ ಸಬಲೀಕರಣಗೊಳಿಸುವ ಸಲುವಾಗಿ ಕಂದಾಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ಸಲುವಾಗಿ ಕಾರ್ಯಪಡೆಯೊಂದನ್ನು ರಚಿಸುವದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇ-ಖಾತ ಸಂಬಂಧದಲ್ಲಿ ನಾಳೆ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ …
Read More »
BigTv News
November 12, 2024
Breaking News, ಬೆಂಗಳೂರು
ಬೆಂಗಳೂರು: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ ಸೋಮಣ್ಣ ಅವರು ಇಂದು ನೆಲಮಂಗಲದಿಂದ ತುಮಕೂರುವರೆಗಿನ ರಾಷ್ಟ್ರೀಯ ಹೆದ್ದಾರಿ 48 ಕಾಮಗಾರಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಬೇಗೂರು, ಕುಲುವನಹಳ್ಳಿ, ಹನುಮಂತಪುರ, ಹಳೆನಿಜಗಲ್ ಮತ್ತು ಬಿಲ್ಲಿನಕೋಟೆ ಗ್ರಾಮಗಳ ಜನರನ್ನು ಭೇಟಿಯಾಗಿ ಅವರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಈ ರಾಷ್ಟ್ರೀಯ ಹೆದ್ದಾರಿ 48 ನ್ನು ದಶಪಥಗಳಲ್ಲಿ ವಿಸ್ತರಿಸುತ್ತಿರುವುದರಿಂದ ಭೂ ಸ್ವಾಧೀನ ಪ್ರಕ್ರಿಯೆ ಜಾರಿಯಲ್ಲಿದೆ. ಆದರೆ ಹೆದ್ದಾರಿ ಕಾಮಗಾರಿ ವಿಳಂಬಗೊಳ್ಳುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ …
Read More »
BigTv News
November 12, 2024
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರವು ರೇಷ್ಮೆ ಬೆಳೆಗಾರರಿಗೆ ಸಿಹಿಸುದ್ದಿ ನೀಡಿದ್ದು, ಬೈವೋಲೈನ್ ರೇಷ್ಮೆ ಗೂಡುಗಳಿಗೆ ನೀಡುತ್ತಿರುವ ಪ್ರೋತ್ಸಾಹಧನ ಪ್ರತಿ ಕಿಲೋಗೆ 10 ರಿಂದ ₹30 ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ರೇಷ್ಮೆ ಕೃಷಿ ಮತ್ತು ರೇಷ್ಮೆ ನೂಲು ಬಿಚ್ಚಾಣಿಕೆ ಚಟುವಟಿಕೆಗಳಲ್ಲಿ ಪ್ರತಿ ವರ್ಷ ಅಂದಾಜು 15.34 ಲಕ್ಷ ಜನರಿಗೆ ಉದ್ಯೋಗ ಭಾಗ್ಯ ಸಿಕ್ಕಿದೆ. ₹200 ಕೋಟಿ ವೆಚ್ಚದಲ್ಲಿ ಶಿಡ್ಲಘಟ್ಟದಲ್ಲಿ ಎರಡು ಹಂತದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ …
Read More »
BigTv News
November 12, 2024
Breaking News, ಬೆಂಗಳೂರು
ಬೆಂಗಳೂರು: ಸಿವಿಲ್ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮ್ ಸಮುದಾಯದವರಿಗೆ ಶೇ.4 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿರುವ ಬೆನ್ನಲ್ಲೇ ಸರ್ಕಾರ ಸ್ಪಷ್ಟನೆ ನೀಡಿದೆ. ಸಿಎಂ ಸಿದ್ದರಾಮಯ್ಯ ಪ್ರಸ್ತಾವನೆಗೆ ಅನುಮೋದನೆ ನೀಡಿದ ವಿಚಾರವಾಗಿ ಬಿಜೆಪಿ ಈಗಾಗಲೇ ಆಕ್ರೋಶ ವ್ಯಕ್ತಪಡಿಸಿದೆ. ಈ ವಿಚಾರ ಸಾರ್ವಜನಿಕವಾಗಿ ಚರ್ಚೆಗೆ ಕಾರಣವಾಗಬಹುದು ಮತ್ತು ನಾಳೆ ನಡೆಯಲಿರುವ ಉಪಚುನಾವಣೆ ಮೇಲೆ ಪರಿಣಾಮ ಬೀರಬಹುದು ಎಂದು ಅರಿತ ಸರ್ಕಾರ ಯೂ ಟರ್ನ್ ಹೊಡೆದಿದೆ. ಉಪಚುನಾವಣೆಗೆ ಒಂದು ದಿನ …
Read More »
BigTv News
November 12, 2024
Breaking News, ಬೆಂಗಳೂರು
ಬೆಂಗಳೂರು : ಕರ್ನಾಟಕದಲ್ಲಿ ಭಾರತದ ಮೊದಲ ಜಿಸಿಸಿ ನೀತಿಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ, ಇದು ಈ ವಲಯದಲ್ಲಿ ಜಾಗತಿಕ ಪ್ರತಿಭೆ ಮತ್ತು ಹೂಡಿಕೆಗಳಿಗೆ ಕರ್ನಾಟಕವನ್ನು ಪ್ರಶಸ್ತ ತಾಣವಾಗಿಸುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬೆಂಗಳೂರಿನಲ್ಲಿ ಝೈಸ್ ಗ್ಲೋಬಲ್ ಕೆಪಬಿಲಿಟೀಸ್ ಸೆಂಟರ್ ಉದ್ಘಾಟನೆ ಮಾಡಲಾಗಿದ್ದು, ಇದರಿಂದ 600 ಕ್ಕೂ ಹೆಚ್ಚು ವೃತ್ತಿಪರರು ಜಾಗತಿಕವಾಗಿ ಹೊಸ ಆವಿಷ್ಕಾರಗಳಿಗೆ ಕೊಡುಗೆ ನೀಡಲಿದ್ದಾರೆ. ನಮ್ಮ …
Read More »
BigTv News
November 12, 2024
Breaking News, ವಿಜಯಪುರ
ವಿಜಯಪುರ: ಗ್ಯಾರಂಟಿ ಭಾಗ್ಯಗಳನ್ನು ನಿಲ್ಲಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಸಲಹೆ ನೀಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಗ್ಯಗಳನ್ನು ನಿಲ್ಲಿಸಿ ದೇವಸ್ಥಾನ, ಮಸೀದಿ, ಚರ್ಚ್ ಆಸ್ತಿ ಹೋಗಿದ್ದರೆ ಪರಿಹಾರ ಕೊಡುವ ಕಾನೂನು ತರಬೇಕು. ಶಾಸಕ ಯತ್ನಾಳರು ಬಸವ ಭಕ್ತರು ಕೂಡಿಸುವ ಕೆಲಸ ಮಾಡಿಸಬೇಕು, ಆದರೆ ಒಡೆಯುವ ಕೆಲಸ ಮಾಡಬಾರದು. ಬಸವಣ್ಣನಿಗೆ ಅಪಚಾರ ಮಾಡಿದ್ದಾರೆ, ಸಮಾಜಗಳ ಮಧ್ಯೆದಲ್ಲಿ ಬಿರುಕು ಮಾಡಿದ್ದಾರೆ ಎಂದರು. ರೈತರ …
Read More »
BigTv News
November 12, 2024
Breaking News
ಚನ್ನಪಟ್ಟಣ: ರಾಜಕೀಯದಲ್ಲಿ ನನಗೆ ಹೆಸರು ಬರಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪಾತ್ರವೂ ಇದೆ ಎಂದು ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಪರ ಪ್ರಚಾರದ ವೇಳೆ ಮಾತನಾಡಿದ ಅವರು (2005-06) ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರ ಮಾಡಲು ನಾನು ಪ್ರಾಮಾಣಿಕವಾಗಿ ತೀರ್ಮಾನ ಮಾಡಿದ್ದೆ. ಅಧಿಕಾರ ನೀಡಿದ್ದರೆ ಅಂದೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ವನಾಶ ಆಗುತ್ತಿತು. ಆದರೆ, ವಿಧಿ ಆಟದ ಮುಂದೆ ನಮ್ಮದೇನು …
Read More »
BigTv News
November 12, 2024
Breaking News, ದಾವಣಗೆರೆ
ದಾವಣಗೆರೆ: ಹರಿಹರ ತಾಲ್ಲೂಕಿನ, ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನರೇಗಾದಡಿ ಸಣ್ಣ, ಅತಿಸಣ್ಣ, ರೈತರು ಅರ್ಜಿ ಸಲ್ಲಿಸಬೇಕು. ಆಸಕ್ತ ರೈತರು ನವಂಬರ್ 30 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಹರಿಹರ ಕಚೇರಿಗೆ ಅಥವಾ ಆಯಾ ಗ್ರಾಮ ಪಂಚಾಯತಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ …
Read More »
BigTv News
November 12, 2024
Breaking News
ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರು, ಚೆನ್ನೈ, ವಿಶಾಖಾಪಟ್ಟಣಂ ಹಾಗೂ ಜೈಪುರದಲ್ಲಿ ಯೂನಿಯನ್ ಬ್ಯಾಂಕ್ ನಾರಿ ಶಕ್ತಿ ಶಾಖೆಗಳನ್ನು ಉದ್ಘಾಟನೆ ಮಾಡಿದರು. ಈ ವಿಶೇಷ ಶಾಖೆಗಳು ಮಹಿಳಾ ಉದ್ಯಮಿಗಳಿಗೆ ಆರ್ಥಿಕ ನೆರವು ಹಾಗೂ ಬೆಂಬಲವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ. ಈ ಶಾಖೆಗಳನ್ನು ತೆರೆಯುವ ಮೂಲಕ ಯೂನಿಯನ್ ಬ್ಯಾಂಕ್ ಹಾಗೂ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತದೆ. ಇದರ ಮುಖಾಂತರ ಮಹಿಳೆಯರಿಗೆ ವಿಶೇಷ ಕೌಶಲ್ಯ ತರಬೇತಿ ಹಾಗೂ ಹಣಕಾಸು …
Read More »