Breaking News

Breaking News

ಬೆಂಬಲ ಬೆಲೆ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ರೈತರಿಂದ ಭತ್ತ ಖರೀದಿ

ಧಾರವಾಡ: ಮುಂಗಾರು ಹಂಗಾಮಿನಲ್ಲಿ ಭತ್ತ ಬೆಳೆದ ರೈತರಿಗೆ ಸರ್ಕಾರ ಸಿಹಿಸುದ್ದಿಯನ್ನು ನೀಡಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಧಾರವಾಡ ಜಿಲ್ಲೆಯ ರೈತರಿಂದ ಭತ್ತ ಖರೀದಿ ಮಾಡಲು ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ. ಎಫ್‌ಎಕ್ಯೂ ಗುಣಮಟ್ಟದ ಭತ್ತವನ್ನು ರೈತರಿಂದ ಪ್ರತಿ ಕ್ವಿಂಟಾಲ್‌ಗೆ ರೂ.2,300 ಮತ್ತು ಬಿಳಿಜೋಳವನ್ನು ರೂ. 3,371 ದರದಲ್ಲಿ ಖರೀದಿ ಮಾಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಧಾರವಾಡ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಈ …

Read More »

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಕಾಂಗ್ರೆಸ್​ ನ ಪ್ರಣಾಳಿಕೆ ಬಿಡುಗಡೆ ಮಾಡಿದ ಖರ್ಗೆ

ಮಹಾರಾಷ್ಟ್ರ : ಕಾಂಗ್ರೆಸ್ ನ ಪ್ರಣಾಳಿಕೆಯಿಂದ ಮಹಾರಾಷ್ಟ್ರದ ಕಲ್ಯಾಣಕ್ಕೆ ಸಹಕಾರಿಯಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಬಗ್ಗೆ ಮಹಾರಾಷ್ಟ್ರದಲ್ಲಿ ಮಾತನಾಡಿದ ಅವರು, ನಮ್ಮ 5 ಭರವಸೆಗಳು ಮಹಾರಾಷ್ಟ್ರದ ಎಲ್ಲರ ಕಲ್ಯಾಣಕ್ಕೆ ಸಹಕಾರಿಯಾಗುತ್ತವೆ. ಪ್ರತಿ ಕುಟುಂಬಕ್ಕೂ ವಾರ್ಷಿಕ ಸುಮಾರು ನೆರವು ಸಿಗುತ್ತದೆ ಎಂದು ಹೇಳಿದರು. ನಮ್ಮ ಮಹಾಲಕ್ಷ್ಮಿ ಯೋಜನೆಯಲ್ಲಿ ಎಲ್ಲಾ ಮಹಿಳೆಯರಿಗೆ ಆರ್ಥಿಕ ನೆರವು ನೀಡಲಾಗುವುದು, ಪ್ರತಿ ತಿಂಗಳು ತಲಾ 3000 ರೂ.ಗಳನ್ನು ನೀಡಲಾಗುವುದು ಈ …

Read More »

ವಿಶ್ವ ಪಾರಂಪರಿಕ ಪಟ್ಟಿಗೆ ನಾಲ್ಕು ಸ್ಥಳ ಸೇರಿಸಲು ಪ್ರಯತ್ನ: ಸಚಿವ ಎಚ್‌.ಕೆ.ಪಾಟೀಲ್

ಹೊಸಪೇಟೆ: ಡೆಕ್ಕನ್ ಸುಲ್ತಾನಿ, ಹಿರೇಬೆನಕಲ್‍ನ ಪ್ರೀಹಿಸ್ಟಾರಿಕ್ ಸೈಟ್, ಶ್ರೀರಂಗಪಟ್ಟಣದ ಕೋಟೆಗಳು ಹಾಗೂ ಬದಾಮಿ ಐಹೊಳೆಗಳನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಪ್ರಯತ್ನ ನಡೆದಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್ ಹೇಳಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಆರಂಭವಾದ ಕರ್ನಾಟಕ ಇತಿಹಾಸ ಅಕಾಡೆಮಿಯ 38ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸ ಅಕಾಡೆಮಿಯ ಸಂಶೋಧಕರ ಸಂಶೋಧನೆಗಾಗಿ ಪ್ರತಿ ವರ್ಷ ₹5 ಲಕ್ಷ ನೆರವು ನೀಡುವುದಾಗಿ ಪ್ರಕಟಿಸಿದರು. ರಾಜ್ಯದ 25 ಸಾವಿರ …

Read More »

ಬೆಳಗಾವಿಯಲ್ಲಿ ಎಸ್ ಡಿ ಎ ಆತ್ಮಹತ್ಯೆ ಪ್ರಕರಣ: ಎಲ್ಲ ಸಿಬ್ಬಂದಿಗಳ ವಿಚಾರಣೆ

ಬೆಳಗಾವಿ: ತಹಶೀಲ್ದಾರ್‌ ಕಚೇರಿಯಲ್ಲೇ ಎಸ್‌ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡು ಐದು ದಿನಗಳಾದರೂ ತಲೆಮರೆಸಿಕೊಂಡ ಮೂವರೂ ಆರೋಪಿಗಳನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ಇದರ ಮಧ್ಯೆ, ಕಚೇರಿಯ ಎಲ್ಲ ಸಿಬ್ಬಂದಿ ಮತ್ತು ವಾಟ್ಸ್‌ಆಯಪ್‌ ಗ್ರೂಪ್‌ನ ಅಡ್ಮಿನ್‌ಗಳನ್ನು ಕರೆದ ವಿಚಾರಣೆ ಮಾಡಲಾಗುತ್ತಿದೆ. ರುದ್ರಣ್ಣ ಅವರ ಮೊಬೈಲ್‌ನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಅಲ್ಲಿನ ಕರೆಗಳು, ವಾಟ್ಸ್‌ಆಯಪ್‌ ಸಂದೇಶ, ವಿಡಿಯೊಗಳು ಸೇರಿ ಪ್ರತಿಯೊಂದನ್ನೂ ತಪಾಸಣೆ ಮಾಡಲಾಗುತ್ತಿದೆ. ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ ಎಂದು ನಗರ ಪೊಲೀಸ್‌ …

Read More »

ಪಿಎಂ ವಿಶ್ವಕರ್ಮ ಯೋಜನೆಯ ನೋಂದಣಿಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

ಉಡುಪಿ: ದೇಶದ ಸುಮಾರು 25 ಸಾಂಪ್ರದಾಯಿಕ ಕುಲ ಕಸುಬುಗಳನ್ನು ಪ್ರೋತ್ಸಾಹಿಸಿ ಅಗತ್ಯ ತರಬೇತಿ ಮತ್ತು ಸೌಲಭ್ಯವನ್ನು ಒದಗಿಸಲು ಕೇಂದ್ರ ಸರಕಾರ ಕಳೆದ ವರ್ಷ ಜಾರಿಗೆ ತಂದ ಪಿಎಂ ವಿಶ್ವಕರ್ಮ ಯೋಜನೆಯ ನೋಂದಣಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ದೇಶಕ್ಕೆ ಮಾದರಿಯಾಗಿದೆ. 2023ರ ಸೆಪ್ಟಂಬರ್‌ನಲ್ಲಿ ಜಾರಿಯಾದ ಈ ಯೋಜನೆಗೆ ಆರಂಭದಲ್ಲಿ ದೇಶದ ಕೆಲವು ಜಿಲ್ಲೆಗಳನ್ನು ಮಾತ್ರ ಪರಿಗಣಿಸಲಾಗಿತ್ತು. ಅನಂತರ ಎಲ್ಲ ಜಿಲ್ಲೆಗಳನ್ನು ಯೋಜನೆಯ ವ್ಯಾಪ್ತಿಗೆ ತರಲಾಗಿತ್ತು. ಈವರೆಗೆ ದೇಶದಲ್ಲಿ 2.58 ಕೋಟಿ ಅರ್ಜಿಗಳು …

Read More »

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ವಿಲೀನಕ್ಕೆ ರಾಜ್ಯಗಳು ತಮ್ಮ ಅಭಿಪ್ರಾಯ ತಿಳಿಸಬೇಕು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ವಿಲೀನಕ್ಕೆ ಸಂಬಂಧಿಸಿದಂತೆ ರಾಜ್ಯಗಳು ತಮ್ಮ ಅಭಿಪ್ರಾಯ ತಿಳಿಸಬೇಕಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ನಗರದಲ್ಲಿ ನಡೆದ ದಕ್ಷಿಣ ವಲಯದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಒಂದು ರಾಜ್ಯ, ಒಂದು ಆರ್‌ಆರ್‌ಬಿ ಎಂಬುದು ಸರ್ಕಾರದ ತತ್ವವಾಗಿದೆ. ಹಾಗಾಗಿ, ವಿಲೀನ ಪ್ರಸ್ತಾವ ಕುರಿತು ಅಭಿಪ್ರಾಯ ಮಂಡಿಸಬೇಕಿದೆ ಎಂದು ಸೂಚಿಸಿದರು. ಗ್ರಾಮೀಣ ಪ್ರದೇಶದ ಆರ್ಥಿಕತೆ ಬೆಳವಣಿಗೆಯಲ್ಲಿ …

Read More »

₹13.35 ಕೋಟಿ ರೂ. ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ಯಮಕನಮರಡಿ: ಲೋಕಸಭೆ ಚುನಾವಣೆ ವೇಳೆಯೇ ಕೆಲ ಸಮಸ್ಯೆಗಳ ಬಗ್ಗೆ ತಾವು ಗಮನಕ್ಕೆ ತಂದಿದ್ದರಿಂದ ಯಮಕನಮರಡಿ ಕ್ಷೇತ್ರದ ಕಲಕಾಂಬ, ಚಂದಘಡ, ಅಷ್ಟೆ, ಮುಚ್ಚಂಡಿ ಗ್ರಾಮದಲ್ಲಿ ಒಟ್ಟು ₹13.35 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ತಿಳಿಸಿದರು. ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಲಕಾಂಬ ಗ್ರಾಮದಲ್ಲಿ ₹4.5 ಕೋಟಿ, ಚಂದಗಡ ಗ್ರಾಮದಲ್ಲಿ ₹70 ಲಕ್ಷ, ಅಷ್ಟೆ ಗ್ರಾಮದಲ್ಲಿ ₹1.80 ಕೋಟಿ ಮತ್ತು ಮುಚ್ಚಂಡಿ ಗ್ರಾಮದಲ್ಲಿ ₹6.80 ಕೋಟಿ …

Read More »

ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಗಮನ ಹರಿಸಿ ಹೆಚ್ಚಿನ ಸಾಲ ನೀಡಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಕೃಷಿ ಸಂಬಂಧಿತ ಚಟುವಟಿಕೆಗಳಾದ ಹೈನುಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆಮುಂತಾದವು ಗಳಿಗೆ ವಿಶೇಷ ಗಮನ ಹರಿಸಿ ಹೆಚ್ಚಿನ ಸಾಲ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ನಿರ್ದೇಶನ ನೀಡಿದರು. ಬೆಂಗಳೂರಿನಲ್ಲಿ ನಡೆದ ದಕ್ಷಿಣ ಭಾರತ ರಾಜ್ಯಗಳನ್ನು ಒಳಗೊಂಡ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮುದ್ರಾ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ …

Read More »

ನವೆಂಬರ್‌ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಸಿಎಂ ಮಹತ್ವದ ಮಾಹಿತಿ

ಬಳ್ಳಾರಿ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ನವೆಂಬರ್ ತಿಂಗಳ ಹಣ ಬಿಡುಗಡೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿಗೆ ಹಂಚಲು ಹಣ ಇಲ್ಲ ಎಂಬ ದೇವೇಗೌಡರ ಹೇಳಿಕೆ ಶುದ್ಧ ಸುಳ್ಳು. ಅಕ್ಟೋಬರ್ ವರೆಗೂ ಒಂದು ತಿಂಗಳದ್ದೂ ತಪ್ಪದೆ ಗೃಹಲಕ್ಷ್ಮಿ ಹಣ ನೀಡಿದ್ದೇವೆ ಅಂದರೆ ಏನು ಅರ್ಥ? ನವೆಂಬರ್ ತಿಂಗಳದ್ದೂ ಸದ್ಯದಲ್ಲೇ ಹಾಕುತ್ತೇವೆ ಎಂದು ತಿಳಿಸಿದ್ದಾರೆ. ವಕ್ಫ್ …

Read More »

ವಿಶ್ವದ ಮಹಾಶಕ್ತಿಗಳ ಪಟ್ಟಿಯಲ್ಲಿ ಭಾರತ ಸೇರ್ಪಡೆಯಾಗಬೇಕು: ರಷ್ಯಾ ಅಧ್ಯಕ್ಷ ಪುಟಿನ್

ಮಾಸ್ಕೋ: ನಾವು ವಿವಿಧ ಕ್ಷೇತ್ರಗಳಲ್ಲಿ ಭಾರತದೊಂದಿಗಿನ ಸಂಬಂಧಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ, ಭಾರತ ಒಂದು ಶ್ರೇಷ್ಠ ದೇಶವಾಗಿದೆ. ಆರ್ಥಿಕ ಬೆಳವಣಿಗೆಯ ವಿಷಯದಲ್ಲಿಯೂ, ಇದು ದೊಡ್ಡ ಅರ್ಥವ್ಯವಸ್ಥೆಯಲ್ಲಿ ಪ್ರಮುಖವಾಗಿದೆ. ಇದರ ಅಭಿವೃದ್ಧಿ ದರ ಶೇ.7.4ರಷ್ಟಿದೆ. ರಷ್ಯಾ ಮತ್ತು ಭಾರತದ ನಡುವಿನ ಸಹಕಾರ ಪ್ರತಿ ವರ್ಷ ಹೆಚ್ಚುತ್ತಿದೆ. ವಿಶ್ವದ ಮಹಾಶಕ್ತಿಗಳ ಪಟ್ಟಿಯಲ್ಲಿ ಭಾರತ ಸೇರ್ಪಡೆಯಾಗಬೇಕು ಎಂದು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಭಾರತವನ್ನು ಶ್ಲಾಘಿಸಿದ್ದಾರೆ. ಅವರು ರಷ್ಯಾದ ಸೊಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದರು. ಭಾರತವು …

Read More »