Breaking News

Breaking News

ಮಂಡ್ಯದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರದಿಂದ 25 ಕೋಟಿ ರೂ. ಮಂಜೂರು

ಬೆಂಗಳೂರು: ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯ ಸರ್ಕಾರ 25 ಕೋಟಿ ರೂ. ಮಂಜೂರು ಮಾಡಿದೆ. ಕಾರ್ಯಕ್ರಮ ಆಯೋಜಿಸಲು ಕೆಎಸ್‌ಎಂಸಿ ಎಂಡ್ ಎ ಸಂಸ್ಥೆಯ ಸೇವೆಯನ್ನು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದಡಿ ಪ್ರದತ್ತವಾದ ಅಧಿಕಾರ ಚಲಾಯಿತಿ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಲಾಗಿದೆ. ಉತ್ತಮ ಗುಣಮಟ್ಟದ ಸರಕು, ಸೇವೆ ಸಮಂಜಸ ದರದಲ್ಲಿ ಪಡೆದುಕೊಳ್ಳುವುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜವಾಬ್ದಾರಿ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮಂಡ್ಯದ ಜನ …

Read More »

ಬೆಂಗಳೂರಿನಲ್ಲಿ ದಕ್ಷಿಣ ವಲಯದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳ ಕಾರ್ಯಕ್ಷಮತೆ ಪರಿಶೀಲಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ) ಬೆಂಗಳೂರಿನಲ್ಲಿ ದಕ್ಷಿಣ ವಲಯದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಪುದುಚೇರಿಯ ಕೇಂದ್ರಾಡಳಿತ ಪ್ರದೇಶಗಳ ಆರ್‌ಆರ್‌ಬಿಗಳ ಕಾರ್ಯಕ್ಷಮತೆಯನ್ನು ನಿರ್ಮಲಾ ಸೀತಾರಾಮನ್ ಪರಿಶೀಲಿಸಿದ್ದಾರೆ. ಇಂದು ನಡೆದ ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಹಣಕಾಸು ಸೇವೆಗಳ ಇಲಾಖೆ (ಡಿಎಫ್‌ಎಸ್) ಕಾರ್ಯದರ್ಶಿ, ಡಿಎಫ್‌ಎಸ್‌ನ ಹಿರಿಯ …

Read More »

ವಕ್ಫ್ ಬೋರ್ಡ್ ವಿವಾದ: ರೈತರ ಹೆಸರು ದುರ್ಬಳಕೆ ಖಂಡಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

ಬೆಂಗಳೂರು : ವಕ್ಫ್ ಬೋರ್ಡ್ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯವರು ರೈತರ ಹೆಸರನ್ನು ದುರ್ಬಳಕೆ ಮಾಡುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್​​​ ವತಿಯಿಂದ ಇಂದು ಸಂಸದ ತೇಜಸ್ವಿ ಸೂರ್ಯ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಲಾಯಿತು. ನಗರದ ಕಾಂಗ್ರೆಸ್ ಭವನದ ರೇಸ್ ಕೋರ್ಸ್ ರಸ್ತೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಕೈನಾಯಕರು ಕಿಡಿಕಾರಿದರು. ವಕ್ಫ್ …

Read More »

ಪಾಕಿಸ್ತಾನದ ರೈಲು ನಿಲ್ದಾಣದಲ್ಲಿ ಭಾರೀ ಬಾಂಬ್ ಸ್ಫೋಟ: 25 ಜನ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಇಂದು ಸಂಭವಿಸಿದ ಭಾರಿ ಬಾಂಬ್ ಸ್ಫೋಟದ್ದು ಎನ್ನಲಾದ ಸಿಸಿಟಿವ ದೃಶ್ಯಾವಳಿಯೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಬಾಂಬ್ ಸ್ಫೋಟ ಸಂಭವಿಸಿದ ಕ್ಷಣ, ಸ್ಫೋಟದ ತೀವ್ರತೆಗೆ ರೈಲು ನಿಲ್ದಾಣ ಛಿದ್ರಗೊಂಡಿರುವ ಸಿಸಿಟಿವಿ ದೃಶ್ಯ ಎಂದು ಸ್ಪುಟ್ನಿಕ್ ಇಂಡಿಯಾ ತಾಣ ವಿಡಿಯೋವೊಂದನ್ನು ಪೋಸ್ಟ್ ಮಾಡಿದೆ. ಆ ವಿಡಿಯೋ ಇಲ್ಲಿದೆ. ಬಲೂಚಿಸ್ತಾನ ಪ್ರಾಂತ್ಯದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸಂಭವಿಸಿದ ಪ್ರಬಲ ಬಾಂಬ್ ಸ್ಫೋಟದಲ್ಲಿ ಕನಿಷ್ಠ 25 ಮಂದಿ …

Read More »

ಯತ್ನಾಳ ಪ್ರಕರಣಗಳ ವಿಚಾರಣೆಗೆ ಒಂದು ದಿನವನ್ನೇ ಮೀಸಲಿಡಬೇಕು: ಹೈಕೋರ್ಟ್

ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧದ ಪ್ರಕರಣಗಳನ್ನು ವಿಚಾರಣೆ ಮಾಡಬೇಕಾದರೆ ಕನಿಷ್ಠ ಒಂದು ದಿನವನ್ನೇ ಆ ಪ್ರಕರಣಗಳಿಗಾಗಿ ಮೀಸಲಿಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಟಿಪ್ಪು ಸುಲ್ತಾನ್‌ ಲಕ್ಷಾಂತರ ಹಿಂದೂಗಳ ಕೊಲೆ ಮಾಡಿದ್ದಾನೆ. ಅವನು ಹರಾಮ್​​​​ಕೋರ ಎಂದು ಮೇ.1ರಂದು (2023) ಯತ್ನಾಳ್​​ ಚುನಾವಣೆಯ ಪ್ರಚಾರದ ಭಾಷಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅಂದು ಯತ್ನಾಳ್ ಧಾರವಾಡದ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ಪ್ರಚಾರದಲ್ಲಿ ಈ ಮಾತನ್ನು ಆಡಿದ್ದರು. ಈ …

Read More »

₹214 ಕೋಟಿ ವೆಚ್ಚದ 3,811 ಕಾಮಗಾರಿಗಳಿಗೆ ಅನುಮೋದನೆ: ಸಚಿವ ಪರಮೇಶ್ವರ್

ಕೊರಟಗೆರೆ: ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ₹214 ಕೋಟಿ ವೆಚ್ಚದ 3,811 ಕಾಮಗಾರಿಗಳಿಗೆ ಸರ್ಕಾರದಿಂದ ಅನುಮೋದನೆ ದೊರೆತಿದೆ ಎಂದು ಗೃಹಸಚಿವ ಜಿ. ಪರಮೇಶ್ವರ ತಿಳಿಸಿದರು. ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಹುತೇಕ ಈ ಕಾಮಗಾರಿಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಸಿಎಸ್‌ಆರ್ ಅನುದಾನದಲ್ಲಿ ₹27 ಕೋಟಿ ಕೊಠಡಿಗಳ ದುರಸ್ತಿ, ನೂತನ ಕಟ್ಟಡ ನಿರ್ಮಾಣದ ಜೊತೆಗೆ ಆಟದ ಮೈದಾನ, ಶೌಚಾಲಯ ನಿರ್ಮಾಣ ಆರೋಗ್ಯ …

Read More »

ರಾಜ್ಯದಲ್ಲಿ ಸಂವಿಧಾನಾತ್ಮಕವಾಗಿ ರಚನೆಯಾದ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ: ಸಂಸದ ಕಾರಜೋಳ

ಹುಬ್ಬಳ್ಳಿ: ರಾಜ್ಯದಲ್ಲಿ ಸಂವಿಧಾನತ್ಮವಾಗಿ ರಚನೆಯಾದ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಸಂಸದ ಜಗದಂಬಿಕಾ ಪಾಲ್ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾವದರು. ಅವರ ಬಗ್ಗೆ ಸಿಎಂ, ಡಿಸಿಎಂ ಸೇರಿ ಅನೇಕರು ಹಗುರವಾಗಿ ಮಾತನಾಡಿದ್ದಾರೆ. ಅವರು ಜೆಪಿಸಿ ಅಧ್ಯಕ್ಷರಾಗಿ ಬಂದಿದ್ದರು ಸಿದ್ದರಾಮಯ್ಯ ಸರ್ಕಾರಕ್ಕೆ ಸಂವಿಧಾದನ ಮೇಲೆ ಗೌರವ ಇಲ್ಲ ಇದನ್ನು ನಾನು ಖಂಡಿಸುತ್ತೇನೆ ಎಂದರು. ಜೆಪಿಸಿ ಅಧ್ಯಕ್ಷರು …

Read More »

ಬೆಂಗಳೂರಿನ ಮೆಜೆಸ್ಟಿಕ್ ಕೇಂದ್ರ ಬಸ್‌ ನಿಲ್ದಾಣ ಸಹ ವಕ್ಫ್ ಆಸ್ತಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹಾವೇರಿ: ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಕೇಂದ್ರ ಬಸ್ ನಿಲ್ದಾಣ ಸಹ ವಕ್ಫ್ ಆಸ್ತಿ ಎಂಬುದಾಗಿ ವಕ್ಫ್ ಮಂಡಳಿ ಹೇಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಜಮೀನು ವಕ್ಫ್ ಆಸ್ತಿ ಆಯಿತೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ರೈತ ರುದ್ರಪ್ಪ ಅವರ ಹಾನಗಲ್ ತಾಲ್ಲೂಕಿನ ಹರನಗಿರಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ವಕ್ಫ್ ಮೂಲಕ ರಾಜ್ಯ ಸರ್ಕಾರ, 9 ಲಕ್ಷ ಎಕರೆ ಜಮೀನು ಕಬಳಿಸಲು ಹೊರಟಿದೆ ಎಂದರು. ಬೆಂಗಳೂರಿನ …

Read More »

15 ರಿಂದ 20 ದಿನಗಳಲ್ಲಿ ಸಿದ್ಧರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ: ಬಿ.ಎಸ್.ಯಡಿಯೂರಪ್ಪ

ಸಂಡೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಸಿಲುಕಿದ್ದು, ಅಧಿಕಾರದಲ್ಲಿ ಮುಂದುವರಿಯಲು ಅವರು ಅರ್ಹರಲ್ಲ. 15 ರಿಂದ 20 ದಿನಗಳಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌ ಯಡಿಯೂರಪ್ಪ ಹೇಳಿದರು. ಸಂಡೂರು ಕ್ಷೇತ್ರದ ಬೊಮ್ಮಘಟ್ಟ, ಚೋರನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಡಾ ಹಗರಣ ಆರೋಪ ಸಾಬೀತಾಗುತ್ತದೆ‌. ಇ.ಡಿ, ಸಿಬಿಐ ವಿರುದ್ಧ ಸಿದ್ದರಾಮಯ್ಯ ವಿನಾ ಕಾರಣ ಅಪಪ್ರಚಾರ …

Read More »

ಲಿಂಗಾಯತರ ಅಸ್ಮಿತೆ ಜೊತೆ ಆಟ ಆಡುವುದು ಬೇಡ: ಸಚಿವ ಎಂ.ಬಿ.ಪಾಟೀಲ್

ವಿಜಯಪುರ: ಸಂಘ ಪರಿವಾರದವರು ವಚನ ದರ್ಶನ ಪುಸ್ತಕದ ಮೂಲಕ ನಮ್ಮ ವಚನಗಳನ್ನು ತಿದ್ದಲು ಹೊರಟಿದ್ದಾರೆ‌. ವಚನಗಳು ನಮ್ಮ(ಲಿಂಗಾಯತ) ಅಸ್ಮಿತೆ. ನಮ್ಮ ಅಸ್ಮಿತೆ ಜೊತೆ ಆಟ ಆಡುವುದು ಬೇಡ ಎಂದು ಸಚಿವ ಎಂ.ಬಿ.ಪಾಟೀಲ ಎಚ್ಚರಿಕೆ ನೀಡಿದರು. ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡ ಬಿ.ಎಲ್‌.ಸಂತೋಷ್‌ ಅವರು ನಮ್ಮ ಅಸ್ಮಿತೆಗಳಾದ ವಚನಗಳ ಬಗ್ಗೆ ಹಸ್ತಕ್ಷೇಪ ಮಾಡುವುದನ್ನು ಬಿಡಬೇಕು. ಇಲ್ಲವಾದರೆ ನಾವು ನಿಮ್ಮ ಸುಳ್ಳು ಅಸ್ಮಿತೆ ಬಿಚ್ಚಿಡುತ್ತೇವೆ. ವೇದ, ಉಪನಿಷತ್ತುಗಳ ಸುಳ್ಳಿನ …

Read More »