BigTv News
November 7, 2024
Breaking News, ಬಳ್ಳಾರಿ
ಬಳ್ಳಾರಿ : ನಿನ್ನೆಯಷ್ಟೇ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ಅಧಿಕಾರಿಗಳ ವಿಚಾರಣೆಯನ್ನು ಎದುರಿಸಿದರು. ಇದೀಗ ಬಳ್ಳಾರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಆಗಿ ನಾನೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನನ್ನು ಬಿಜೆಪಿ ಜೆಡಿಎಸ್ ನವರು ಮುಗಿಸುವುದಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ ಮುಗಿಸಿದರೇ ಕಾಂಗ್ರೆಸ್ ಮುಗಿಸಿದಂತೆ …
Read More »
BigTv News
November 7, 2024
Breaking News, ಬೀದರ್
ಬೀದರ್: ತೋಟಗಾರಿಕೆ ವಿಜ್ಞಾನ ಗಳ ವಿಶ್ವವಿದ್ಯಾಲಯ ವತಿಯಿಂದ ನಗರದಲ್ಲಿ ಆಯೋಜಿಸಿರುವ ಮೂರು ದಿನಗಳ ಕಲಾ ಬಿದರಿ ಸಂಗಮ-2024 (ಯುವ ಜನೋತ್ಸವ) ನಿಮಿತ್ತ ಇಂದು (ನ.07) ನಗರದಲ್ಲಿ ಸಾಂಸ್ಕೃತಿಕ ಮೆರವಣಿಗೆ ನಡೆಯಿತು. ನಗರದ ಅಂಬೇಡ್ಕರ್ ವೃತ್ತದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ ಅವರು ಚಾಲನೆ ನೀಡಿದರು. ಶಿವಾಜಿ ವೃತ್ತ, ಹರಳಯ್ಯ ವೃತ್ತ ಮೂಲಕ ಸಾಗಿ ರಂಗ ಮಂದಿರ ಮೈದಾನದಲ್ಲಿ ಕೊನೆಗೊಂಡಿತು. ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯ ಮೆರಗು ಹೆಚ್ಚಿಸಿದವು. ತೋಟಗಾರಿಕೆ ವಿಶ್ವವಿದ್ಯಾಲಯದ ವ್ಯಾಪ್ತಿಯ …
Read More »
Shaikh BigTv
November 7, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಅನುದಾನ ಬೇಕಾದ್ರೆ ತಲೆ ತಗ್ಗಿಸಬೇಕು ವಿಚಾರ, ನಾನು ಹೇಳಿದ್ದು ತೇಜಸ್ವಿ ಸೂರ್ಯಗೆ, ನಾನು ಎಂಎಲ್‌ಎ ಆದ್ಮಲೆ ಬೆಂಗಳೂರು ಅಧೋಗತಿ ಆಗಿದೆ ಅಂದ್ರು. ಏನು ಅಗತ್ಯವಿದೆ ಲೆಕ್ಕ ಕೊಡಿ ಅಂತ ಹೇಳಿದೆ ಅದಕ್ಕೆ ಆರ್. ಅಶೋಕ್ ತಲೆ ಕೆಡಿಸಿಕೊಂಡಿದ್ದಾರೆಂದು ಆರ್. ಅಶೋಕ್ ಟ್ವಿಟ್ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗರಂ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮ್ಯಾಚ್ ಫಿಕ್ಸಿಂಗ್ ಅಂತ ಅಶೋಕ ಹೇಳಿದ್ದಾರೆ. ನಮ್ಮ ಸಂಸ್ಥೆ ಸಂವಿಧಾನದ ಒಂದು …
Read More »
Shaikh BigTv
November 7, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಸೇರಿದಂತೆ ಶಾಸಕರು, ಮುಖಂಡರು ಭಾಗಿಯಾಗಿದ್ದರು. ಶಿಗ್ಗಾಂವಿ ಉಪ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿರೋ ಡಿ.ಕೆ. ಶಿವಕುಮಾರ್, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿದ್ದು, ರಸ್ತೆ ಮೂಲಕ ಶಿಗ್ಗಾಂವಿ ಕ್ಷೇತ್ರಕ್ಕೆ ತೆರಳಲಿದ್ದಾರೆ. ಅದಕ್ಕೂ ಮುಂಚೆ ವಿಮಾನ ನಿಲ್ದಾಣದಲ್ಲಿ ಡಿಕೆಶಿ ಅವರನ್ನು ಭೇಟಿಯಾಗಲು ಬೆಳಗಾವಿಯಿಂದ ಸಚಿವೆಲಕ್ಷ್ಮೀ ಹೆಬ್ಬಾಳ್ಳರ್ …
Read More »
Shaikh BigTv
November 7, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ರಾಜ್ಯದಲ್ಲಿ ಅತಿ ದೊಡ್ಡ ಹಾವಳಿ ಎದ್ದ ವಕ್ಸ್ ಬೋರ್ಡ್ ಆಸ್ತಿ ವಿವಾದದ ಹಿನ್ನೆಲೆಯಲ್ಲಿ, ಇಂದು ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ಹುಬ್ಬಳ್ಳಿಗೆ ಆಗಮಿಸಿ, ವಕ್ಷದಲ್ಲಿ ಸಿಲುಕಿದ ರೈತರ ಅಹವಾಲುಗಳನ್ನು ಸ್ವೀಕರಿಸಿದರು. ರಾಜ್ಯ ಸರ್ಕಾರ ನೀಡಿದ ನೋಟಿಸ್‌ನಿಂದ ಕಂಗಾಲಾದ ರೈತರು, ಮತ್ತು ಹಳ್ಳಿ ಮುಖಂಡರು ಆಕ್ರೋಶಕ್ಕೆ ಒಳಗಾಗಿದ್ದರು. ಇದನ್ನರಿತು ಕೇಂದ್ರದಿಂದ ವಕ್ಸ್ ಬೋರ್ಡ್ ಜಾಯಿಂಟ್ ಪಾರ್ಲಿಮೆಂಟ್ ಕಮಿಟಿ ಚೇರ್ಮನ್ ಜಗದಂಬಿಕಾ ಪಾಲ್ ಅವರು ವಕ್ಷ್ಯಲ್ಲಿ ನೋಂದಣಿಯಾದ …
Read More »
BigTv News
November 7, 2024
Breaking News
ನವದೆಹಲಿ: ಬೆಳಗಾವಿ, ಧಾರವಾಡ ವೃತ್ತ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಹೆಚ್ಚುತ್ತಿರುವ ಅರಣ್ಯ ಒತ್ತುವರಿ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಪರಿಸರ, ಅರಣ್ಯ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ನಿರ್ದೇಶನ ನೀಡಿದೆ. ಕಳೆದೆರಡು ವರ್ಷಗಳಿಂದ ಬೆಳಗಾವಿ ಹಾಗೂ ಧಾರವಾಡ ವೃತ್ತ ಸೇರಿದಂತೆ ರಾಜ್ಯದಾದ್ಯಂತ ಹೊಸ ಅರಣ್ಯ ಒತ್ತುವರಿ ಪ್ರಕರಣಗಳು ವ್ಯಾಪಕ ಪ್ರಮಾಣದಲ್ಲಿ ಹೆಚ್ಚಾಗಿವೆ ಎಂದು ಆರೋಪಿಸಿ ಧಾರವಾಡದ ನಿವಾಸಿ ಹಣಮಂತ ಎಂಬುವರು …
Read More »
BigTv News
November 7, 2024
Breaking News
ನವದೆಹಲಿ :ನಿವೃತ್ತ ಯೋಧರಿಗೆ ಒನ್ ರ್ಯಾಂಕ್ ಒನ್ ಪೆನ್ಶನ್ ಜಾರಿಯು ತನ್ನ ವೀರರಿಗೆ ರಾಷ್ಟ್ರದ ಕೃತಜ್ಞತೆಯನ್ನು ಪುನರುಚ್ಚರಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 2014 ರ ಲೋಕಸಭಾ ಚುನಾವಣೆಯ ಮೊದಲು ಬಿಜೆಪಿಯ ಭರವಸೆಯ ಯೋಜನೆಯನ್ನು ಈ ದಿನ ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರವು ನವೆಂಬರ್ 7, 2015 ರಂದು ಆದೇಶವನ್ನು ಹೊರಡಿಸುವ ಮೂಲಕ OROP ಜಾರಿಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿತು, ಅದರ ಪ್ರಯೋಜನಗಳನ್ನು ಜುಲೈ 1, …
Read More »
Shaikh BigTv
November 7, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವಕ್ಫ್ ಬೋರ್ಡ್ ಆಸ್ತಿ ಕಬಳಿಸುವ ಆರೋಪ ಕೇಳಿಬಂದ ಹಿನ್ನೆಲೆ ಕರ್ನಾಟಕ ಜನರ ಸಮಸ್ಯೆಗಳ ಆಲಿಸಿ ಇದರ ವಿಸ್ತೃತ ವರದಿಯನ್ನು ಸಭಾಪತಿ ಅವರಿಗೆ ಸಲ್ಲಿಸಲಾಗುವುದು ಎಂದು ಕೇಂದ್ರ ವಕ್ಫ್ ಬೋರ್ಡ್ ಸಂಸದೀಯ ಜಂಟಿ ಸಮಿತಿ (JPC)ಯ ಅಧ್ಯಕ್ಷ ಜಗದಂಬಿಕಾ ಪಾಲ್ ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ತೇಜಸ್ವಿ ಸೂರ್ಯ ಅವರು ಕರ್ನಾಟಕದ ರೈತರು ಹಾಗೂ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಕೆ ಮಾಡಿದ್ದಾರೆಂದು ತಿಳಿಸಿದ್ದಾರೆ. ಆದ್ದರಿಂದ ಜನರ ಅಹವಾಲು ಸ್ವೀಕರಿಸಲು …
Read More »
BigTv News
November 7, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಿಗೆ ಹಣ ಹೊಂದಿಸಲು ಹಣಕಾಸಿನ ಕೊರತೆ ಎದುರಾಗಿದ್ದು ಇದನ್ನು ಸರಿದೂಗಿಸಲು ರಾಜ್ಯ ಸರ್ಕಾರ ಬರೋಬ್ಬರಿ 40000 ಕೋಟಿ ರೂ. ಸಾಲ ಪಡೆಯಲು ಮುಂದಾಗಿದೆ. ಇದಕ್ಕೆ ಆರ್ ಬಿಐ ಕೂಡಾ ಅನುಮತಿ ನೀಡಿದೆ. ಇದರೊಂದಿಗೆ ರಾಜ್ಯದ ಒಟ್ಟಾರೆ ಸಾಲದ ಮೊತ್ತ 5.53 ಲಕ್ಷ ಕೋಟಿ ರೂ.ತಲುಪಲಿದೆ. ಇತ್ತೀಚೆಗೆ ಹಣಕಾಸು ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡಸಿದ್ದಾಗ ವಿತ್ತೀಯ ಕೊರತೆ ಕಂಡುಬಂದಿದ್ದು, ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದರು. ಇದೀಗ …
Read More »
Shaikh BigTv
November 7, 2024
Breaking News, ಧಾರವಾಡ
ಹುಬ್ಬಳ್ಳಿ : ತಾಲ್ಲೂಕಿನ ಬ್ಯಾಹಟ್ಟಿ ಗ್ರಾಮದ ಹತ್ತಿರ ಇರುವ ದೊಡ್ಡಹಳ್ಳಕ್ಕೆ ಸೇತುವೆ ಲೋಕಾರ್ಪಣೆಯನ್ನು ನಿನ್ನೆ ಶಾಸಕ ಎನ್. ಎಚ್. ಕೋನರೆಡ್ಡಿ ಅವರು ಮಾಡಿದರು. ನಂತರ ಮಾತಾನಾಡಿದ ಅವರು, ಬ್ಯಾಹಟ್ಟಿ-ಕಿರೆಸೂರ-ಇಂಗಳಹಳ್ಳಿ ರಸ್ತೆಯಲ್ಲಿ ಗ್ರಾಮದ ರೈತರೆಲ್ಲರೂ ತಮ್ಮ ಜಮೀನುಗಳಿಗೆ ಹೋಗಿ ಬರಲು ಮಳೆ ಬಂದಾಗ ಹಳ್ಳ ಕಟ್ಟಿ ಓಡಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಸೇತುವೆ ನಿರ್ಮಾಣಕ್ಕಾಗಿ ಕಳೆದ 10-15 ವರ್ಷಗಳಿಂದ ಗ್ರಾಮಸ್ಥರು ಅಧಿಕಾರದಲ್ಲಿದ್ದ ಜನಪ್ರತಿನಿಧಿಗಳಿಗೆ ಮನವಿ ಮಾಡುತ್ತಿದ್ದರು ಎಂದರು.
Read More »