Breaking News

Breaking News

ನಿವೃತ್ತ ಯೋಧರಿಗೆ ಒನ್ ರ್ಯಾಂಕ್ ಒನ್ ಪೆನ್ಶನ್ ಜಾರಿ ಮಹತ್ವದ ಹೆಜ್ಜೆ: ಪ್ರಧಾನಿ ಮೋದಿ

ನವದೆಹಲಿ :ನಿವೃತ್ತ ಯೋಧರಿಗೆ ಒನ್ ರ‍್ಯಾಂಕ್ ಒನ್ ಪೆನ್ಶನ್‌ ಜಾರಿಯು ತನ್ನ ವೀರರಿಗೆ ರಾಷ್ಟ್ರದ ಕೃತಜ್ಞತೆಯನ್ನು ಪುನರುಚ್ಚರಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 2014 ರ ಲೋಕಸಭಾ ಚುನಾವಣೆಯ ಮೊದಲು ಬಿಜೆಪಿಯ ಭರವಸೆಯ ಯೋಜನೆಯನ್ನು ಈ ದಿನ ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರವು ನವೆಂಬರ್ 7, 2015 ರಂದು ಆದೇಶವನ್ನು ಹೊರಡಿಸುವ ಮೂಲಕ OROP ಜಾರಿಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿತು, ಅದರ ಪ್ರಯೋಜನಗಳನ್ನು ಜುಲೈ 1, …

Read More »

ರಾಜ್ಯದ ಜನರ ಸಮಸ್ಯೆ ಆಲಿಸಿ ವಿಸ್ತೃತ ವರದಿ ಸಭಾಪತಿಗೆ ಸಲ್ಲಿಸಲಾಗುವುದು: ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್

ಹುಬ್ಬಳ್ಳಿ: ವಕ್ಫ್ ಬೋರ್ಡ್ ಆಸ್ತಿ ಕಬಳಿಸುವ ಆರೋಪ ಕೇಳಿಬಂದ ಹಿನ್ನೆಲೆ ಕರ್ನಾಟಕ ಜನರ ಸಮಸ್ಯೆಗಳ ಆಲಿಸಿ ಇದರ ವಿಸ್ತೃತ ವರದಿಯನ್ನು ಸಭಾಪತಿ ಅವರಿಗೆ ಸಲ್ಲಿಸಲಾಗುವುದು ಎಂದು ಕೇಂದ್ರ ವಕ್ಫ್ ಬೋರ್ಡ್ ಸಂಸದೀಯ ಜಂಟಿ ಸಮಿತಿ‌ (JPC)ಯ ಅಧ್ಯಕ್ಷ ಜಗದಂಬಿಕಾ ಪಾಲ್ ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ತೇಜಸ್ವಿ ಸೂರ್ಯ ಅವರು ಕರ್ನಾಟಕದ ರೈತರು ಹಾಗೂ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಕೆ ಮಾಡಿದ್ದಾರೆಂದು ತಿಳಿಸಿದ್ದಾರೆ. ಆದ್ದರಿಂದ ಜನರ ಅಹವಾಲು ಸ್ವೀಕರಿಸಲು …

Read More »

ವಿತ್ತೀಯ ಕೊರತೆ: 40 ಸಾವಿರ ಕೋಟಿ ಸಾಲ ಪಡೆಯಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳಿಗೆ ಹಣ ಹೊಂದಿಸಲು ಹಣಕಾಸಿನ ಕೊರತೆ ಎದುರಾಗಿದ್ದು ಇದನ್ನು ಸರಿದೂಗಿಸಲು ರಾಜ್ಯ ಸರ್ಕಾರ ಬರೋಬ್ಬರಿ 40000 ಕೋಟಿ ರೂ. ಸಾಲ ಪಡೆಯಲು ಮುಂದಾಗಿದೆ. ಇದಕ್ಕೆ ಆರ್ ಬಿಐ ಕೂಡಾ ಅನುಮತಿ ನೀಡಿದೆ. ಇದರೊಂದಿಗೆ ರಾಜ್ಯದ ಒಟ್ಟಾರೆ ಸಾಲದ ಮೊತ್ತ 5.53 ಲಕ್ಷ ಕೋಟಿ ರೂ.ತಲುಪಲಿದೆ. ಇತ್ತೀಚೆಗೆ ಹಣಕಾಸು ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡಸಿದ್ದಾಗ ವಿತ್ತೀಯ ಕೊರತೆ ಕಂಡುಬಂದಿದ್ದು, ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದರು. ಇದೀಗ …

Read More »

ದೊಡ್ಡಹಳ್ಳಕ್ಕೆ ಸೇತುವೆ ಲೋಕಾರ್ಪಣೆ ಮಾಡಿದ ಕೋನರಡ್ಡಿ

ಹುಬ್ಬಳ್ಳಿ : ತಾಲ್ಲೂಕಿನ ಬ್ಯಾಹಟ್ಟಿ ಗ್ರಾಮದ ಹತ್ತಿರ ಇರುವ ದೊಡ್ಡಹಳ್ಳಕ್ಕೆ ಸೇತುವೆ ಲೋಕಾರ್ಪಣೆಯನ್ನು ನಿನ್ನೆ ಶಾಸಕ ಎನ್. ಎಚ್. ಕೋನರೆಡ್ಡಿ ಅವರು ಮಾಡಿದರು. ನಂತರ ಮಾತಾನಾಡಿದ ಅವರು, ಬ್ಯಾಹಟ್ಟಿ-ಕಿರೆಸೂರ-ಇಂಗಳಹಳ್ಳಿ ರಸ್ತೆಯಲ್ಲಿ ಗ್ರಾಮದ ರೈತರೆಲ್ಲರೂ ತಮ್ಮ ಜಮೀನುಗಳಿಗೆ ಹೋಗಿ ಬರಲು ಮಳೆ ಬಂದಾಗ ಹಳ್ಳ ಕಟ್ಟಿ ಓಡಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಸೇತುವೆ ನಿರ್ಮಾಣಕ್ಕಾಗಿ ಕಳೆದ 10-15 ವರ್ಷಗಳಿಂದ ಗ್ರಾಮಸ್ಥರು ಅಧಿಕಾರದಲ್ಲಿದ್ದ ಜನಪ್ರತಿನಿಧಿಗಳಿಗೆ ಮನವಿ ಮಾಡುತ್ತಿದ್ದರು ಎಂದರು.

Read More »

ಡಾ. ರಮೇಶ್ ಮಹಾದೇವಪ್ಪನವರ ಅವರಿಗೆ ರಾಜ್ಯ ಪ್ರಶಸ್ತಿ ಪ್ರಧಾನ

ಪವರ್ ಆಫ್ ಯುಥ್ ಫೌಂಡೇಶನ್ (ರಿ), ಹುಬ್ಬಳ್ಳಿ ವತಿಯಿಂದ ಕರ್ನಾಟಕದ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಕನ್ನಡ ರಾಜ್ಯೋತ್ಸವ ನಾಡ ಹಬ್ಬ ಹಾಗೂ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ. 10 ರಂದು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರಿಗೆ ರಾಜ್ಯ ಪ್ರಶಸ್ತಿ ನೀಡಿ ಸತ್ಕರಿಸಲಾಗುತ್ತ ಎಂದು ಆಯೋಜಕರು ತಿಳಿಸಿದ್ದಾರೆ.

Read More »

ಕರ್ನಾಟಕ ಜನರ ಸಮಸ್ಯೆಗಳ ಆಲಿಸಿ ಇದರ ವಿಸ್ತ್ರತ ವರದಿ ಸಿದ್ಧಪಡಿಸಿ, ಸ್ಪೀಕರ್‌ಗೆ ನೀಡಲಾಗುವುದು: ಜಗದಂಬಿಕಾ ಪಾಲ

ಹುಬ್ಬಳ್ಳಿ: ವಕ್ಸ್‌ ಬೋರ್ಡ್ ಆಸ್ತಿ ಕಬಳಿಸುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕ ಜನರ ಸಮಸ್ಯೆಗಳ ಆಲಿಸಿ ಇದರ ವಿಸ್ತ್ರತ ವರದಿ ಸಿದ್ಧಪಡಿಸಿ, ಸ್ಪೀಕರ್‌ಗೆ ನೀಡಲಾಗುವುದು ಎಂದು ವಕ್ಸ್ ಬೋರ್ಡ್ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ವಕ್ಸ್ ಬೋರ್ಡ್ ಕರ್ನಾಟಕದ ರೈತರು ಹಾಗೂ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಕೆ ಮಾಡಲು ಮುಂದಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಆದ್ದರಿಂದ ಅಹವಾಲು …

Read More »

ವಕ್ಸ್ ಬೋರ್ಡ್ ಆಸ್ತಿ ವಿವಾದ: ಜಂಟಿ ಸಂಸದೀಯ ಸಮಿತಿ ಹುಬ್ಬಳ್ಳಿಗೆ ಆಗಮನ

ಹುಬ್ಬಳ್ಳಿ: ರಾಜ್ಯದಲ್ಲಿ ವಕ್ಸ್ ಬೋರ್ಡ್ ಆಸ್ತಿ ವಿವಾದ ವಿಚಾರವಾಗಿ ಜಂಟಿ ಸಂಸದೀಯ ಸಮಿತಿ ಹುಬ್ಬಳ್ಳಿಗೆ ಆಗಮಿಸಿದೆ. ವಕ್ಸ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸತ್ತಿನ ಜಂಟಿ ಸಮಿತಿಯ ಅಧ್ಯಕ್ಷರಾಗಿರುವ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ನೇತೃತ್ವದ ಕಮಿಟಿ ಇಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದಂತೆ ಅವರನ್ನು ಶಾಸಕ ಮಹೇಶ ಟೆಂಗಿನಕಾಯಿ ಸ್ವಾಗತಿಸಿದರು. ಈ ವೇಳೆ ರೈತರು ಮತ್ತು ವಕೀಲರು ವಕ್ಸ್ ಬೋರ್ಡ್ ಆಸ್ತಿ ವಿವಾದ ಸರಿಪಡಿಸುವಂತೆ ಸಮಿತಿಗೆ ಮನವಿ ಸಲ್ಲಿಸಿದರು.

Read More »

ಜೀಪ್ ಹಾಗೂ ಪಶು ಆ್ಯಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ: ಕೆಲವರಿಗೆ ಗಾಯ

ಧಾರವಾಡ: ತಾ‌ರ್ ಜೀಪ್ ಹಾಗೂ ಪಶು ಆ್ಯಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಾರ್‌ನಲ್ಲಿದ್ದ ಕೆಲವರಿಗೆ ಗಾಯಗಳಾಗಿರುವ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಸಂಭವಿಸಿದೆ. ಪಶು ಆ್ಯಂಬುಲೆನ್ಸ್ ಹಾಗೂ ತಾರ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇದರಿಂದ ತಾರ್ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅದೇ ವಾಹನದಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಗಾಯಗೊಂಡವರ ಹೆಸರು ವಿಳಾಸ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ …

Read More »

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನ

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 03 ಫಲಾನುಭವಿ ಆಧಾರಿತ ಯೋಜನೆಗಳಿಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನ ವ್ಯಕ್ತಿಗಳೊಡನೆ ವಿವಾಹ ಏರ್ಪಡುವ ಪ್ರಕರಣಗಳಲ್ಲಿ, ವಿಕಲಚೇತನ ವ್ಯಕ್ತಿಯ ಹೆಸರಿನಲ್ಲಿ 50,000 ರೂಗಳನ್ನು ಹೂಡಿಕೆಯ ರೂಪದಲ್ಲಿನ ವಿವಾಹ ಪ್ರೋತ್ಸಾಹಧನ ಯೋಜನೆ, ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ, ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲತೆಗೆ ಒಳಗಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವಿಕಲಚೇತನರಿಗೆ ನಿರಾಮಯ …

Read More »

ಬೆಳಗಾವಿಯಲ್ಲಿ SDA ಆತ್ಮಹತ್ಯೆ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ

ಹುಬ್ಬಳ್ಳಿ : ಬೆಳಗಾವಿಯಲ್ಲಿ SDA ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರ ಆಪ್ತರಾಗಲಿ ಯಾರೇ ಆಗಿರಲಿ ಕ್ರಮ ಆಗತ್ತೆ. ಚುನಾವಣೆ ಸಮಯದಲ್ಲಿ ಈ ತರಹದ ಆರೋಪ ಇರೋದೆ ಎಂದು ಡಿಕೆ ಶಿವಕುಮಾರ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೆಲವರು ಚುನಾವಣೆ ಸಂದರ್ಭಗಳಲ್ಲಿ ಇಂತಹದ್ದು ತರ್ತಾರೆ. ಕಾನೂನಿನ ಪ್ರಕಾರ ತನಿಖೆ ಆಗತ್ತೆ ಎಂದ ಡಿಕೆ ಶಿವಕುಮಾ‌ರ್ ಹೇಳಿದರು.

Read More »