Breaking News

Breaking News

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ: ಸಚಿವ ತಿಮ್ಮಾಪುರ

ಹಾವೇರಿ: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿರುವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಇದು ನನ್ನ ವಿರುದ್ಧದ ರಾಜಕೀಯ ಷಡ್ಯಂತ್ರ. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ. ಶಿಗ್ಗಾಂವಿ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಬಂದಿರುವ ಆರೋಪ ರಾಜಕೀಯ ಷಡ್ಯಂತ್ರ. ನಮ್ಮ ಇಲಾಖೆಯಲ್ಲಿ ಈ ರೀತಿಯ ಯಾವುದೇ ಅವ್ಯವಹಾರ ನಡೆದಿಲ್ಲ. ಯಾವುದೇ ನೇಮಕಾತಿ ನಡೆದಿಲ್ಲ, ಯಾವುದೇ ವರ್ಗಾವಣೆ ನಡೆದಿಲ್ಲ ಯಾವುದೇ …

Read More »

ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುವ ಎಸ್ಸಿ ವಿದ್ಯಾರ್ಥಿಗಳಿಗೆ 50 ಲಕ್ಷ ರೂ. ಪ್ರೋತ್ಸಾಹಧನ

ಬೆಂಗಳೂರು: ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರೂ.ವರೆಗೆ ಪ್ರೋತ್ಸಾಹಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಪಿಯುಸಿಯಲ್ಲಿ ಶೇ.95 ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಲಭ್ಯವಾಗದಿದ್ದಾಗ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೊದಲನೇ ವರ್ಷದ ಕಾಲೇಜು ಶುಲ್ಕ …

Read More »

16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ: ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್‌ಗೆ ದಾಸರಾಗುತ್ತಿದ್ದಾರೆ. ಮಲಗುವಾಗ, ಎದ್ದಾಗ, ಊಟ ಮಾಡುವಾಗ, ಆಟವಾಡುವಾಗ ನಿತ್ಯವೂ ಮೊಬೈಲ್ ನೋಡುತ್ತಿರುತ್ತಾರೆ. ಎಷ್ಟರಮಟ್ಟಿಗೆ ಎಂದರೆ ಮೊಬೈಲ್ ಇಲ್ಲದೇ ಕೆಲವು ಮಕ್ಕಳು ಊಟವನ್ನೂ ಮಾಡಲಾರರು. ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ಮಕ್ಕಳು ಶಿಕ್ಷಣ, ದೈಹಿಕ ಚಟುವಟಿಕೆಯಿಂದ ದೂರ ಸರಿಯುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳು ಮಕ್ಕಳ ಮೇಲೆ ಕೆಟ್ಟ ಪ್ರಭಾವ ಬೀರಿವೆ. ಆದರೆ ಈಗ ಇದನ್ನು ತಡೆಯಲು ಸರ್ಕಾರ ದೊಡ್ಡ ಕ್ರಮಕ್ಕೆ ಮುಂದಾಗಿದೆ. ಹೌದು, ಈಗ 16 …

Read More »
Featured Video Play Icon

ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿ ಕೆ ಶಿವಕುಮಾರ್

ಹುಬ್ಬಳ್ಳಿ : ಒಳಗಡೆ ಏನ ಪ್ರಶ್ನೆ ಕೇಳಿದಾರೇ ಏನ ಉತ್ತರ ಕೊಟ್ಟೀದಾರೆ ಅನ್ನೋದು ಅವರಿಗೆ ಮಾತ್ರ ಗೊತ್ತು.ಅದರ ಬಗ್ಗೆ ನಿಮಗೇನು ಗೊತ್ತು . ವಾಪಸ್ ವಿಚಾರಣೆಗೆ ಕರೀಬಹುದು ಎಂದು ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆಗೆ ಹಾಜರಾದ ವಿಚಾರಕ್ಕೆ ಡಿಸಿಎಮ್ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತರ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿದಾರಾ ಅನ್ನೋ ಹೇಳಿಕೆಗೆ ಡಿಕೆ ಗರಂ ಆಗಿದ್ದಾರೆ. ಗೌರವ ಕೊಟ್ಟು ಲೋಕಾಯುಕ್ತ ಕಚೇರಿಗೆ ಸಿಎಮ್ ಹಾಜರಾಗಿದ್ದರೆ. …

Read More »

ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಮಂಜೂರಾತಿ ಪತ್ರ ವಿತರಣೆ

ನವಲಗುಂದ: ನಗರದ ಅಣ್ಣಿಗೇರಿ ರಸ್ತೆಯಲ್ಲಿ ಇರುವ ಆಶ್ರಯ ಬಡಾವಣೆಯಲ್ಲಿ ಕೊಳಚೆ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಮನೆಗಳನ್ನು ನಿರ್ಮಿಸಲು ಆಶ್ರಯ ಯೋಜನೆಯಡಿ ಹಕ್ಕುಪತ್ರ ಪಡೆದಂತಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಮಂಜೂರಾತಿ ಪತ್ರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ, ಶಿವಾನಂದ ತಡಸಿ, ಶ್ರೀ ಜೀವನ ಪವಾರ, ಅಪ್ಪಣ್ಣ ಹಳ್ಳದ, ಮೋದಿನ ಶಿರೂರ, ಮಂಜುನಾಥ ಜಾಧವ, ಹನುಮಂತ ವಾಲಿಕರ, ಬಾಬಾಜಾನ ಮಕಾನದಾರ, ಆಶ್ರಯ ಸಮಿತಿ ಸದಸ್ಯರಾದ ಮದರಸಾಬ ಉಗುರಗೋಳ ಸೇರಿದಂತೆ ಇನ್ನು ಮುಂತಾದವರು …

Read More »

ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮ

ನವಲಗುಂದ: ಅಂಗವಿಕಲರನ್ನು ದೈಹಿಕವಾಗಿ, ಮಾನಸಿಕವಾಗಿ ಸದೃಢರನ್ನಾಗಿಸುವಲ್ಲಿ ಆರೈಕೆದಾರರ ಪಾತ್ರ ಮಹತ್ವದ್ದಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭಾಗ್ಯಶ್ರೀ ಜಹಗೀರದಾರ ಹೇಳಿದರು. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಅಂಗವಿಕಲರ ಸಾಮರ್ಥ್ಯವನ್ನು ನಿರ್ಲಕ್ಷ್ಯ ಮಾಡಬಾರದು. ಅವರ ಸಾಧನೆ ಆರೋಗ್ಯವಂತರಿಗೂ ಸ್ಫೂರ್ತಿಯಾಗಿದೆ ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿದೇವಿ ಪಾಟೀಲ ಮಾತನಾಡಿ, ಅಂಗವಿಕಲ ಮಕ್ಕಳ …

Read More »

ಮನೆಯ ಮೇಲ್ಪಾವಣಿಗೆ ತಗಡು ಹಾಕುವ ವೇಳೆಯಲ್ಲಿ ಶಾರ್ಟ್ ಸರ್ಕ್ಯೂಟ್‌

ಹುಬ್ಬಳ್ಳಿ: ಮನೆಯ ಮೇಲ್ಪಾವಣಿಗೆ ತಗಡು ಹಾಕುವ ವೇಳೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದ ಪರಿಣಾಮ ದೊಡ್ಡ ಪ್ರಮಾಣದ ಬೆಂಕಿ ಹೊತ್ತಿಕೊಂಡಿರುವ ಘಟನೆ ಹುಬ್ಬಳ್ಳಿಯ ತಾಜ್‌ನಗರದಲ್ಲಿ ನಡೆದಿದೆ. ಮನೆಯ ಟೆರೇಸ್‌ಗೆ ತಗಡು ಹಾಕುವ ಸಂದರ್ಭದಲ್ಲಿ ಫೈಬ‌ರ್ ವೆಲ್ಡಿಂಗ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ತಕ್ಷಣವೇ ಎಚ್ಚೆತ್ತ ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಬೆಂಕಿ ನಂದಿಸಲಾಗಿದೆ. ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿದೆ. ಈ …

Read More »

ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ

ನವಲಗುಂದ: ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ಶಿಶು ಅಭಿವೃದ್ಧಿ ಯೋಜನೆ, ತಾಲೂಕಾ ಕಾನೂನು ಸೇವಾ ಸಮೀತಿ ಹಾಗೂ ತಾಲೂಕಾ ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ನ.5 ರಂದು ಜನಿಸಿದ ಹೆಣ್ಣು ಮಕ್ಕಳ ತಾಯಂದಿರಿಗೆ ಪ್ರೋತ್ಸಾಹ ನೀಡಲು ಹಾಗೂ ಅವರ ರಕ್ಷಣೆ ಮತ್ತು ಶಿಕ್ಷಣಕ್ಕೆ ಉತ್ತೇಜನ ನೀಡಲು ಹಮ್ಮಿಕೊಂಡಿದ್ದ ಕಾರ್ಯಕ್ರಮ ಹಿರಿಯ ದಿವಾಣಿ ನ್ಯಾಯಾಧಿಶರಾದ ಮಂಜುನಾಥ ಪಾನಘಂಟಿ ಅವರು ಭಾಗಿಯಾಗಿದ್ದರು. ಇದೆ ವೇಳೆ …

Read More »

ಮಹಿಳೆಯರ ಮೀಸಲಾತಿ ಪ್ರಮಾಣ 35% ಏರಿಕೆ: ಕೇಂದ್ರ ಸರ್ಕಾರ ಘೋಷಣೆ

ಭೋಪಾಲ್‌: ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯಿಂದ ಮಹಿಳೆಯರಿಗೆ ಆದ್ಯತೆ ನೀಡುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ. ಚುನಾವಣೆಯ ಜೊತೆಗೆ, ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಗುರಿಯನ್ನು ಕೇಂದ್ರ ಹೊಂದಿದೆ. ಅದರಂತೆ ಮಧ್ಯಪ್ರದೇಶ ಕ್ಯಾಬಿನೆಟ್‌ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಪ್ರಮಾಣವನ್ನು 35% ಏರಿಸುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ. ಇಲ್ಲಿಯವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಕಲ್ಪಿಸಲಾಗುತ್ತಿತ್ತು. ಸರ್ಕಾರ ಈಗ ಕೋಟಾದಲ್ಲಿ ಹೆಚ್ಚುವರಿಯಾಗಿ 2% ನೀಡಿದೆ. ಕಾಯ್ದೆಯಾಗಿ ಜಾರಿ ಬಂದರೆ ಮಹಿಳಾ …

Read More »

ಮುಡಾ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಪ್ರತಿಕ್ರಿಯೆ

ಮೈಸೂರು : ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿರುವ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಾನು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದು, ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ. ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಇದುವರೆಗೆ ಕಾನೂನಿನ ಪ್ರಕಾರವೇ …

Read More »