Breaking News

Breaking News

ಸಂಸತ್ತಿನ ಚಳಿಗಾಲದ ಅಧಿವೇಶನ ನ.25 ರಿಂದ ಆರಂಭ: ಕೇಂದ್ರ ಸಚಿವ ಕಿರಣ್ ರಿಜಿಜು

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ. ಚಳಿಗಾಲದ ಅಧಿವೇಶನದ ವೇಳಾಪಟ್ಟಿಯನ್ನ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಪ್ರಕಟಿಸಿದ್ದು, ನವೆಂಬರ್ 26ರಂದು ಸಂವಿಧಾನ್ ಸದನದ ಸೆಂಟ್ರಲ್ ಹಾಲ್ನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುವುದು ಎಂದು ಹೇಳಿದರು. ಅಂದ್ಹಾಗೆ, ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭಾ ಚುನಾವಣೆಯ ನಂತರ ಇದು ಮೊದಲ ಚಳಿಗಾಲದ ಅಧಿವೇಶನವಾಗಿದೆ.

Read More »

ಮಹಾರಾಷ್ಟ್ರದ ನೂತನ ಡಿಜಿಪಿಯಾಗಿ ಐಪಿಎಸ್ ಅಧಿಕಾರಿ ಸಂಜಯ್ ಕುಮಾರ್ ವರ್ಮಾ ನೇಮಕ

ಮುಂಬೈ: 1990 ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಸಂಜಯ್ ಕುಮಾರ್ ವರ್ಮಾ ಅವರು ಮಹಾರಾಷ್ಟ್ರದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಇಂದು ನೇಮಕಗೊಂಡಿದ್ದಾರೆ. ಈ ಹಿಂದೆ ಇದ್ದ ಪೊಲೀಸ್‌ ವರಿಷ್ಠಾಧಿಕಾರಿ ರಶ್ಮಿ ಶುಕ್ಲಾ ಅವರನ್ನು ಚುನಾವಣಾ ಆಯೋಗ ಪದಚ್ಯುತಗೊಳಿಸಿದ ಒಂದು ದಿನದ ಬಳಿಕ ಐಪಿಎಸ್ ಅಧಿಕಾರಿ ಸಂಜಯ್ ಕುಮಾರ್ ವರ್ಮಾ ಅವರನ್ನು ನೂತನ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ವಿಪಕ್ಷಗಳ ದೂರವಾಣಿ ಕದ್ದಾಲಿಕೆ ಆರೋಪದ ಮೇಲೆ …

Read More »

ಕೇಂದ್ರ ಸರ್ಕಾರದಿಂದ ಭಾರತ್ ಬ್ರ್ಯಾಂಡ್ ನಡಿ ಕೆ.ಜಿ ಗೆ 34 ರಂತೆ ಅಕ್ಕಿ ಮಾರಾಟಕ್ಕೆ ಚಾಲನೆ

ನವದೆಹಲಿ: ಕೇಂದ್ರ ಸರ್ಕಾರವು ಭಾರತ್‌ ಬ್ರ್ಯಾಂಡ್‌ನಡಿ ರಿಯಾಯಿತಿ ದರದಲ್ಲಿ ಗೋಧಿ ಹಿಟ್ಟು ಮತ್ತು ಅಕ್ಕಿ ಮಾರಾಟದ ಎರಡನೇ ಹಂತಕ್ಕೆ ಇಂದು ಚಾಲನೆ ನೀಡಿದೆ. ಪ್ರಸ್ತುತ ಗೋಧಿ ಹಿಟ್ಟು ಪ್ರತಿ ಕೆ.ಜಿಗೆ ₹30 ದರ ಇದ್ದರೆ, ಅಕ್ಕಿ ದರ ಕೆ.ಜಿಗೆ ₹34ರಂತೆ ಮಾರಾಟ ಮಾಡಲಿದೆ. ಆದರೆ, ಮೊದಲನೇ ಹಂತದಲ್ಲಿ ಗೋಧಿ ಹಿಟ್ಟು ಕೆ.ಜಿ ₹27 ಮತ್ತು ಅಕ್ಕಿ ಕೆ.ಜಿ ₹29 ಇತ್ತು. ಇದಕ್ಕೆ ಹೋಲಿಸಿದರೆ ಎರಡನೇ ಹಂತದಲ್ಲಿ ಬೆಲೆಯು ಏರಿಕೆಯಾಗಿದೆ. ಪ್ರಸ್ತುತ …

Read More »

ಆಸ್ತಿಗಳನ್ನು ಡಿಜಿಟಲ್ ಸ್ವರೂಪಕ್ಕೆ ತರಲು ಜನವರಿ ಅಂತ್ಯಕ್ಕೆ ಪ್ರತಿ ಮನೆಗೆ ಇ-ಸ್ವತ್ತು ಕಾರ್ಯಕ್ರಮ: ಸಂಸದೆ ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಹಳ್ಳಿಯ ಆಸ್ತಿಗಳನ್ನು ಡಿಜಿಟಲ್‌ ಸ್ವರೂಪಕ್ಕೆ ತರಲು ಜನವರಿ ಅಂತ್ಯಕ್ಕೆ ಪ್ರತಿ ಮನೆಗೆ ಇ-ಸ್ವತ್ತು ತಲುಪಿಸುವ ಕಾರ್ಯವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಮಾಡಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಸೂಚನೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ದಾವಣಗೆರೆ ತಾಲ್ಲೂಕಿನ 42 ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭೂಮಿ, ನಿವೇಶನ, ಮನೆಗಳಿಗೆ ಸಂಬಂಧಿಸಿದ ಆಸ್ತಿ ಕಲಹ ಗ್ರಾಮೀಣ …

Read More »

ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವು

ಯಾದಗಿರಿ: ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ರೈತನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಸುರಪುರ ನಗರದ ರಂಗಂಪೇಟೆಯ ತಿಮ್ಮಾಪುರದಲ್ಲಿ ಸಂಭವಿಸಿದೆ. ಸೋಮನಾಥ ನಿಂಗಪ್ಪ (40) ಸಾವನ್ನಪ್ಪಿರುವ ರೈತ. ಇವರು ಮಹಿಬೂಬ್ ಸುಭಾನಿ ದರ್ಗಾದ ಹಿಂಬದಿಯಲ್ಲಿನ ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ಆಘಾತದಿಂದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಶ್ರೀಮಂತ ಜನರ ಕಲ್ಯಾಣಕ್ಕೆ ಕೆಲಸ ಮಾಡುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ರಾಂಚಿ: ಜಾರ್ಖಂಡ್‌ ಜನರ ಕಲ್ಯಾಣವನ್ನು ಖಾತ್ರಿಪಡಿಸುವ ಉದ್ದೇಶ ಬಿಜೆಪಿಗೆ ಇಲ್ಲ, ಬದಲಿಗೆ ರಾಜ್ಯದ ಕಲ್ಲಿದ್ದಲು, ಇತರ ಖನಿಜ ಸಂಪನ್ಮೂಲಗಳನ್ನು ಲೂಟಿ ಮಾಡುವ ಸಲುವಾಗಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಥಳೀಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು. ಇಲ್ಲಿ ಬಿಜೆಪಿ ಅಭ್ಯರ್ಥಿಗಳಿಗಿಂತ ನಾಯಕರೇ ಹೆಚ್ಚಾಗಿದ್ದು, ಬುಡಕಟ್ಟು ಮುಖ್ಯಮಂತ್ರಿಯಿಂದ ಅಧಿಕಾರ ಕಸಿದುಕೊಳ್ಳಲು …

Read More »

ವಿಜಯಪುರದಲ್ಲಿ ವಕ್ಫ್ ಬೋರ್ಡ್ ಹೆಸರಿನಲ್ಲಿ 14 ಸಾವಿರ ಎಕರೆ ಜಮೀನು ಕಬಳಿಕೆ: ಗೋವಿಂದ ಕಾರಜೋಳ

ಬಳ್ಳಾರಿ: ವಿಜಯಪುರ ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್‌ನಿಂದಾದ ಅವಾಂತರ ಕುರಿತು ಬಿಜೆಪಿಯ ಸತ್ಯಶೋಧನಾ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಪಕ್ಷದ ರಾಜ್ಯಾಧ್ಯಕ್ಷರಿಗೆ ನಗರದಲ್ಲಿ ವರದಿ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ 14,210 ಎಕರೆ ಜಮೀನು ವಕ್ಫ್‌ ಬೋರ್ಡ್ ಹೆಸರಿನಲ್ಲಿ ಕಬಳಿಕೆಯಾಗಿದೆ ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ. ಸಿಂದಗಿಯಲ್ಲಿ 12ನೇ ಶತಮಾನದಲ್ಲಿ ಬಸವಾದಿ ಶರಣರ ಕಾಲದಲ್ಲಿ ನಿರ್ಮಿಸಲಾದ ಮಠದ ಆಸ್ತಿ, ದೇವರ ಹಿಪ್ಪರಗಿ ತಾಲೂಕಿನ ಪಡಗನೂರು ಗ್ರಾಮದಲ್ಲಿ ಸರ್ವೆ ಸಂಖ್ಯೆ 220ರಲ್ಲಿ 57 ಎಕರೆ ಜಮೀನು, …

Read More »

ಗ್ರಾಪಂ ನೂತನ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡ ಉದ್ಘಾಟನೆ

ನವಲಗುಂದ: ತಾಲೂಕಿನ ಅಳಗವಾಡಿ ಗ್ರಾಪಂ ನೂತನ ರಾಜೀವ ಗಾಂಧಿ ಸೇವಾ ಕೇಂದ್ರದ ಕಟ್ಟಡವನ್ನು ಶಾಸಕ ಎನ್. ಎಚ್. ಕೋರನರಡ್ಡಿ ಉದ್ಘಾಟಿಸಿದರು. ಈ ವೇಳೆ ತಹಶೀಲ್ದಾರ ಸುಧೀರ ಸಾವಕಾರ, ತಾಪಂ ಇಓ ಭಾಗ್ಯಶ್ರೀ ಜಾಗೀರದಾರ, ಲೋಕೋಪಯೋಗಿ ಎಇಇ ಎಸ್‌.ಎನ್‌. ಸಿದ್ದಾಪೂರ, ಪಿ.ಆರ್.ಇ.ಡಿ. ಎಇಇ ಎಂ.ಜಿ. ಶಿಂಧೆ, ಗ್ರಾ.ಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮತ್ತು ಸದಸ್ಯರುಗಳು ಇದ್ದರು.

Read More »

ದಿವ್ಯಪ್ರಭು ನೇತೃತ್ವದಲ್ಲಿಂದು ಏರೋಡೋಮ್ ಕಾರ್ಯಾಗಾರ ಹಾಗೂ ಸಭೆ

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಹಾಗೂ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರಿಗೆ ಗುಣಮಟ್ಟದ ವಿಮಾನ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣ ಸಾಕಷ್ಟು ಶ್ರಮವಹಿಸುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲಿ ವಿಶೇಷ ಸಭೆಯ ಮೂಲಕ ಮತ್ತಷ್ಟು ಕಾರ್ಯಪ್ರವೃತ್ತವಾಗಿದೆ.ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಎದುರಿಸುತ್ತಿರುವ ಪರಿಸರದ ಸವಾಲುಗಳ ಜಿಲ್ಲಾಧಿಕಾರಿ ದಿವ್ಯಪ್ರಭು ನೇತೃತ್ವದಲ್ಲಿಂದು ಏರೋಡೋಮ್ ಕಾರ್ಯಾಗಾರ ಹಾಗೂ ಸಭೆಯನ್ನು ನಡೆಸಲಾಗಿದೆ. ವಿಮಾನ ನಿಲ್ದಾಣದಲ್ಲಿನ ಪರಿಸರ ಸವಾಲುಗಳನ್ನು ಸಕ್ರಿಯವಾಗಿ ಎದುರಿಸುವ ಹಾಗೂ ಪ್ರಮುಖ ವಿಷಯಗಳ …

Read More »

ಹೊಸದಾಗಿ ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡುವ ಬಗ್ಗೆ ಚಿಂತನೆ: ಸಚಿವ ಆರ್.ಬಿ.ತಿಮ್ಮಾಪುರ

ಹುಬ್ಬಳ್ಳಿ: ಹೊಸದಾಗಿ ಮದ್ಯದಂಗಡಿಗಳಿಗೆ ಲೈಸನ್ಸ್ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಅಬಕಾರಿ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಮಾಡಿಲ್ಲ. ಸಹಜವಾಗಿ ಅಧಿಕಾರಿಗಳಿಗೆ ಬಡ್ತಿ ನೀಡಿದ್ದೇವೆ ಎಂದರು.

Read More »