Breaking News

Breaking News

ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ರಾಯಚೂರು: ಕಾರು ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಹೊರವಲಯದ ಪವರ್ ಗ್ರಿಡ್ ಸಮೀಪ ಸೋಮವಾರ ರಾತ್ರಿ ನಡೆದಿದೆ. ಕಲ್ಲೂರು ಗ್ರಾಮದ ನಿವಾಸಿಗಳಾದ ಶರಣಬಸವ (20) ಮತ್ತು ಶಿವು (20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗರೀಬ್ ಹಾಗೂ ಇರ್ಫಾನ್ ಗೆ ಗಂಭೀರ ಗಾಯಳಾಗಿವೆ ಎಂದು ತಿಳಿದುಬಂದಿದೆ. ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಯುವಕರು ರಾಯಚೂರು ನಗರಕ್ಕೆ ಸೆಂಟ್ರಿಂಗ್ …

Read More »

ಏಕಗವಾಕ್ಷಿ ಯೋಜನೆಯಡಿ ಉಮಾ ತಂತ್ರಾಂಶ ಅಭಿವೃದ್ದಿ: ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಏಕಗವಾಕ್ಷಿ ಯೋಜನೆಯಡಿ ಹಸಿರು ನಿಶಾನೆ ನೀಡಲಾಗಿರುವ ಕೈಗಾರಿಕಾ ಯೋಜನೆಗಳಿಗೆ ಗರಿಷ್ಠ 100 ದಿನಗಳ ಒಳಗೆ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಲು ಮೈಕ್ರೋಸಾಫ್ಟ್ ಕಂಪನಿಯ ನೆರವಿನಿಂದ ಉಮಾ (ಉದ್ಯೋಗ ಮಿತ್ರ ಅಸಿಸ್ಟೆಂಟ್) ಎಂಬ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಇದನ್ನು ಫೆಬ್ರುವರಿ ತಿಂಗಳಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ತಿಳಿಸಿದ್ದಾರೆ. ಏಕಗವಾಕ್ಷಿ ಯೋಜನೆ ಜಾರಿ ಸಂಬಂಧ ಮೈಕ್ರೋಸಾಫ್ಟ್ ಸಂಸ್ಥೆಯ ಪ್ರತಿನಿಧಿಗಳು ನೀಡಿದ ಪ್ರಾತ್ಯಕ್ಷಿಕೆ‌ …

Read More »

ರಾಜ್ಯದಲ್ಲಿ ಹೊಸದಾಗಿ 5 ವೈದ್ಯಕೀಯ ಕಾಲೇಜುಗಳ ಸ್ಥಾಪನೆ: ಸಚಿವ ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 5 ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭ ಮಾಡಲು ಸರ್ಕಾರ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲು ಸಚಿವ ಶರಣ ಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿರುವ ಸದ್ಯ 22 ವೈದ್ಯ ಕಾಲೇಜುಗಳಿದ್ದು, ಕನಕಪುರ ಮತ್ತು ರಾಮನಗರ ವೈದ್ಯ ಕಾಲೇಜು ಈ ವರ್ಷ ಪ್ರಾರಂಭವಾಗುವ ನಿರೀಕ್ಷೆ ಇದೆ. ಇದಲ್ಲದೆ, ಬಾಗಲಕೋಟೆ, ತುಮಕೂರು, ಕೋಲಾರ, ದಾವಣಗೆರೆ ಮತ್ತು ಬಿಜಾಪುರದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಎಲ್ಲಾ …

Read More »

ಬೆಂಬಲ ಬೆಲೆಯಡಿ ರೈತರಿಗೆ ಅನುಕೂಲವಾಗುವಂತೆ ಖರೀದಿ ಕೇಂದ್ರಗಳನ್ನು ತೆರೆಯಲು ಸಚಿವ ಶರಣಪ್ರಕಾಶ್ ಪಾಟೀಲ ಸೂಚನೆ

ರಾಯಚೂರು: ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ಬೆಳೆ ಕಟಾವು ಹಂತದಲ್ಲೇ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ತೆರೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು …

Read More »

ಸಾಂಬ್ರಾ ವಿಮಾನ ನಿಲ್ದಾಣದ ಟರ್ಮಿನಲ್ ಅಭಿವೃದ್ದಿ ಕಾಮಗಾರಿಯನ್ನು ಪರಿಶೀಲಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭೇಟಿ ನೀಡಿ, ವಿಮಾನ ನಿಲ್ದಾಣ ವಿಕ್ಷೀಸಿ, ನೂತನವಾಗಿ ನಿರ್ಮಾಣವಾಗುತ್ತಿರುವ ಟರ್ಮಿನಲ್ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಟರ್ಮಿನಲ್ ಕಟ್ಟಡ, ರನ್‌ವೇ, ಟ್ಯಾಕ್ಸಿ ವೇ, ಬ್ಯಾಗೇಜ್ ಹ್ಯಾಂಡಲಿಂಗ್ ವ್ಯವಸ್ಥೆ, ಸೆಕ್ಯುರಿಟಿ ಸ್ಕ್ಯಾನರ್ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ, ಭದ್ರತಾ ಉಪಕರಣಗಳೂ ಸೇರಿದಂತೆ ಬಾಕಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಂತರಾಷ್ಟ್ರೀಯ ಮಟ್ಟಕ್ಕೆ ವಿಮಾನ ನಿಲ್ದಾಣ …

Read More »

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಧಾರವಾಡದಲ್ಲಿ ಬೃಹತ್‌ ಪ್ರತಿಭಟನೆ

ಧಾರವಾಡ: ರೈತರ ಪಹಣಿ ಪತ್ರಿಕೆಗಳಲ್ಲಿ ವಕ್ಷ ಆಸ್ತಿ ಎಂಬ ಹೆಸರು ನಮೂದಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಧಾರವಾಡದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು. ಧಾರವಾಡದ ಉಳವಿ ಚೆನ್ನಬಸವೇಶ್ವರ ದೇವಸ್ಥಾನದಿಂದ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕರಾದ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕರಾದ ಅಮೃತ ದೇಸಾಯಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದರು. ನಂತರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ, ರಾಜ್ಯ …

Read More »

ಕೇಂದ್ರದ ವಿರುದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ: ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಬಿಜೆಪಿಯವರು ಈವರೆಗೆ ಧ್ವನಿ ಎತ್ತಿಲ್ಲ. ಕೇಂದ್ರದ ವಿರುದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 15 ನೇ ಹಣಕಾಸು ಆಯೋಗದಿಂದ 11490 ಕೋಟಿ ರೂಪಾಯಿ ವಿಶೇಷ ಅನುದಾನ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿತ್ತು. ಈವರೆಗೂ ಒಂದು ಪೈಸೆ ಕೂಡ ರಾಜ್ಯಕ್ಕೆ ಬಂದಿಲ್ಲ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಹಣಕಾಸು ಸಚಿವೆ …

Read More »

ಬಿಜೆಪಿಯವರು ರಾಜಕೀಯ ದುರುದ್ದೇಶಕ್ಕಾಗಿ ಉಲ್ಟಾ ಹೊಡೆದಿದ್ದಾರೆ : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ವಕ್ಸ್‌ ಆಸ್ತಿಯನ್ನು ಇಂಚಿಂಚು ಜಾಗವನ್ನು ಪರಭಾವೆಯಾಗಿ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಯಾಕೆ ಯೂಟರ್ನ್ ಹೊಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟ‌ರ್, ಬಸವರಾಜ ಬೊಮ್ಮಾಯಿ, ಸದಾನಂದಗೌಡ ಅವರ ಅವಧಿಯಲ್ಲಿ ರೈತರಿಗೆ 216 ನೋಟಿಸ್‌ಗಳನ್ನು ಜಾರಿ ಮಾಡಿದ್ದರು. ಈ ಬಗ್ಗೆ ಅವರು ಯಾಕೆ …

Read More »

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ

ಹುಬ್ಬಳ್ಳಿ: ಬಿಜೆಪಿಯವರು ಕಳೆದ 11 ವರ್ಷಗಳಿಂದ 600 ಭರವಸೆಗಳನ್ನು ನೀಡಿದ್ದಾರೆ. ಇದರಲ್ಲಿ 10%ರಷ್ಟನ್ನು ಕೂಡಾ ಜಾರಿಗೊಳಿಸಿಲ್ಲ. ಕಾಂಗ್ರೆಸ್ ಸರ್ಕಾರ 2013-18 ರ ಅವಧಿಯಲ್ಲಿ 165 ಭರವಸೆಗಳಲ್ಲಿ 158 ಭರವಸೆಯನ್ನು ಈಡೇರಿಸಿದೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ಸವಾಲ್ ಹಾಕಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸದ್ಯ ಗ್ಯಾರಂಟಿ ಯೋಜನೆಗಾಗಿ ವರ್ಷಕ್ಕೆ 55,000 ಕೋಟಿ ರೂಪಾಯಿಗಳನ್ನು ಕೊಡುತ್ತಿದ್ದೇವೆ. ಬಡವರು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕೆಂದು ನಾವು ಬಯಸಿದ್ದೇವೆ. …

Read More »

ಹೆಚ್ಚು ತೆರಿಗೆ ಕೊಟ್ಟರೂ ರಾಜ್ಯಕ್ಕೆ ಮಾತ್ರ ಅಲ್ಪ ಪಾಲು: ಕೇಂದ್ರದ ವಿರುದ್ಧ ಸಚಿವ ಜಾರ್ಜ್ ಆಕ್ರೋಶ

ಸಂಡೂರು: ಕೇಂದ್ರಕ್ಕೆ ಕರ್ನಾಟಕ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಅದಕ್ಕೆ ಪ್ರತಿಯಾಗಿ ರಾಜ್ಯಕ್ಕೆ ಕೇಂದ್ರ ನೀಡುತ್ತಿರುವುದು ಅಲ್ಪ ಪಾಲು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಆಕ್ರೋಶ ವ್ಯಕ್ತಪಡಿಸಿದರು. ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಪರ ಇಂದು ಪ್ರಚಾರ ಕೈಗೊಂಡರು. ಓ ಮೇಘ ಬಿಲಿವರ್ಸ್ ಚರ್ಚ್ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ರೈಸ್ತ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು ಈ ಹಿಂದೆನಂತೇ ಈ ಬಾರಿಯೂ ಕಾಂಗ್ರೆಸ್‌ಗೆ ಮತ …

Read More »