Shaikh BigTv
November 3, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಹಣದ ಹೊಳೆ ಹರಿಸುವವರು ಬಿಜೆಪಿಯವರು. ಭ್ರಷ್ಟಾಚಾರ ಮಾಡುವವರು ಬಿಜೆಪಿಯವರು. ಬಿಜೆಪಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಹಗರಣ ಮಾಡಿದ್ದಾರೆ. ರಾಜ್ಯದಲ್ಲಿ ಸುಮಾರು 50 ಸಾವಿರ ಜನರು ಸಾವನ್ನಪ್ಪಿದ್ದಾರೆ. ಆದ್ರೆ ಅವರು ತೋರಿಸಿದ್ದು ಮಾತ್ರ 4 ಸಾವಿರ ಜನ. ಅತೀ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ …
Read More »
Shaikh BigTv
November 3, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಶಿಗ್ಗಾಂವಿ ಚುನಾವಣೆ ವಿಚಾರವಾಗಿ ಮೂರು ಉಸ್ತುವಾರಿಗಳ ಪ್ರಮುಖ ಮುಖಂಡರ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಸಚಿವರು ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು. ಆರು ಜಿಲ್ಲಾ ಪಂಚಾಯಿತಿಗಳಿಗೆ ಹಾಗೂ ಮೂರು ಪುರಸಭೆಗಳಿಗೆ ಸಚಿವರನ್ನು ನೇಮಿಸಲಾಗಿದೆ. ಎಲ್ಲರಲ್ಲೂ ಹುಮ್ಮಸ್ಸು ಹಾಗೂ ಒಗ್ಗಟ್ಟಿದೆ. ಈ ಚುನಾವಣೆಯು ಅಭಿವೃದ್ಧಿ ಮತ್ತು ಅಭಿವೃದ್ಧಿ ಶೂನ್ಯದ ನಡುವೆ ನಡೆಯುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಬಿಜೆಪಿಯನ್ನು ಸೋಲಿಸಬೇಕು, ಕಾಂಗ್ರೆಸ್ …
Read More »
BigTv News
November 3, 2024
Breaking News, ಹೈದರಾಬಾದ್
ಹೈದರಾಬಾದ್: ರಾಜ್ಯ ಸರ್ಕಾರದ ಜಾತಿಗಣತಿಗೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ ಪಕ್ಷವು ನವೆಂಬರ್ 5ರಂದು ಆಯೋಜಿಸಲಿರುವ ಸಭೆಗೆ ರಾಹುಲ್ ಗಾಂಧಿ ಅವರು ಹಾಜರಾಗಲಿದ್ದಾರೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ ಬಿ. ಮಹೇಶ್ ಕುಮಾರ್ ಗೌಡ್ ಅವರು, ಜಾತಿಗಣತಿ ಕುರಿತು ಸಲಹೆಗಳನ್ನು ಸ್ವೀಕರಿಸುವ ಸಲುವಾಗಿ ರಾಜ್ಯ ಘಟಕವು ಸಭೆ ನಡೆಸಲಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಆಹ್ವಾನಿಸಿರುವುದಾಗಿ ಗೌಡ್ ತಿಳಿಸಿದ್ದಾರೆ. ಕಳೆದ ವರ್ಷ ವಿಧಾನಸಭೆ ಚುನಾವಣೆ …
Read More »
BigTv News
November 3, 2024
Breaking News
ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ನ. 11 ರಂದು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಸ್ತುತ ಸಿಜೆಐ ಡಿ.ವೈ. ಚಂದ್ರಚೂಡ್ ಅವರ ಅಧಿಕಾರಾವಧಿಯು ನವೆಂಬರ್ 10 ರಂದು ಕೊನೆಗೊಳ್ಳಲಿದೆ. ಸಿಜೆಐ ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗಿ ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ ಕೆಲವು ದಿನಗಳ ನಂತರ ರಾಷ್ಟ್ರಪತಿಗಳು ನೇಮಿಸಿದ್ದಾರೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನವೆಂಬರ್ 10, 2024 …
Read More »
BigTv News
November 3, 2024
Breaking News
ನವದೆಹಲಿ: ನವೆಂಬರ್ 25 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತದೆ. ಡಿಸೆಂಬರ್ 20 ರವರೆಗೆ ಮುಂದುವರಿಯುತ್ತದೆ ಎಂದು ತಿಳಿದುಬಂದಿದೆ. ಈ ಚಳಿಗಾಲದ ಅಧಿವೇಶನದಲ್ಲಿ, ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆ ಮತ್ತು ವಕ್ಫ್(ತಿದ್ದುಪಡಿ) ಮಸೂದೆ – 2024 ಬಗ್ಗೆ ಚರ್ಚೆಯಾಗಲಿದೆ. ಗೃಹ ಸಚಿವ ಅಮಿತ್ ಶಾ ಅವರು ವಕ್ಫ್(ತಿದ್ದುಪಡಿ) ಮಸೂದೆ, 2024 ಕುರಿತು ಮಾತನಾಡುತ್ತಾ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಅಂಗೀಕರಿಸಲಾಗುವುದು ಎಂದು ಈ ಮೊದಲೇ ಪ್ರಸ್ತಾಪಿಸಿದ್ದಾರೆ. ಗುರ್ಗಾಂವ್ನ ಬಾದ್ಶಾಹ್ಪುರ …
Read More »
BigTv News
November 3, 2024
Breaking News
ನವದೆಹಲಿ: ಸಿಖ್ ಮತ್ತು ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಗಳಿಗೆ ಮತಾಂತರಗೊಂಡ ವ್ಯಕ್ತಿಗಳಿಗೆ ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ ನೀಡಬಹುದೇ ಎಂದು ಪರಿಶೀಲಿಸಲು ಸ್ಥಾಪಿಸಲಾದ ಆಯೋಗದ ಅವಧಿಯನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಒಂದು ವರ್ಷ ವಿಸ್ತರಿಸಿದೆ. ನವೆಂಬರ್ 1 ರ ಅಧಿಸೂಚನೆಯ ಮೂಲಕ ಔಪಚಾರಿಕವಾಗಿರುವ ಈ ನಿರ್ಧಾರವು, ಆಯೋಗವು ತನ್ನ ಕೆಲಸವನ್ನು ಅಕ್ಟೋಬರ್ 10 ರಂದು ಮುಕ್ತಾಯಗೊಳಿಸಲು ಪ್ರಾರಂಭಿಸಿದಾಗ ತನ್ನ ವರದಿಯನ್ನು ಅಂತಿಮಗೊಳಿಸಲು ಹೆಚ್ಚುವರಿ ಸಮಯವನ್ನು ಕೋರಿದ್ದರಿಂದ …
Read More »
Shaikh BigTv
November 3, 2024
Breaking News, ಹುಬ್ಬಳ್ಳಿ
ಅನಾದಿ ಕಾಲದಿಂದಲೂ ಇದೇ ಆಗಿರುವುದು, ಈಗಲೂ ಅದೇ ಆಗುತ್ತಿರುವುದೂ ಕೂಡ. ಆದರೆ ಈಗ ಆಗುತ್ತಿರುವ ಬದಲಾವಣೆ ಭಯ ಹುಟ್ಟಿಸುವಂತಾದ್ದು. ಆ ಭೂಮಿ, ಆ ಪರಿಸರ, ಆ ವ್ಯವಸ್ಥೆಯೊಂದಿಗೆ ಬೆಸಗೊಂಡ ಹೃದಯಗಳ ಭಾವನೆಗಳು ಕ್ರಮೆಣ ಕಡಿಮೆಯಾಗುತ್ತಿದೆ. ಇದರ ಪರಿಣಾಮವೇ * ಹಣ್ಣುಗಳನ್ನು ನೀಡಿದ ಮರಗಳು ಇಲ್ಲೇ ಉಳಿದವು, ಹಣ್ಣುಗಳು ಮಾತ್ರ ಪಟ್ಟಣ ಸೇರಿದವು. ಹಿಂದೆ ಹಳ್ಳಿಗಳು ಅನ್ನದ ಕಣಜ ಎಂದೇ ಹೆಸರಾಗಿದ್ದವು. ಆದರೆ ಅದೇ ಈ ಹಳ್ಳಿಗಳು ಕೇವಲ ವೃದ್ದಾಶ್ರಮಗಳಾಗಿ ಮಾರ್ಪಟ್ಟಿವೆ. …
Read More »
BigTv News
November 3, 2024
Breaking News, ಬೆಂಗಳೂರು
ಬೆಂಗಳೂರು: ಸೇವಾ ಮನೋಭಾವನೆಯಿಂದ ಉಚಿತವಾಗಿ ಅತ್ಯಾಧುನಿಕ ಚಿಕಿತ್ಸೆಯನ್ನು ನೀಡುತ್ತಿರುವ ಸತ್ಯಸಾಯಿ ಟ್ರಸ್ಟ್ ಜೊತೆಗೂಡಿ ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಎನ್ ಎಸ್ ಬೋಸರಾಜು ತಿಳಿಸಿದರು. ಇತ್ತೀಚೆಗೆ ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಾದ ಸುಜಾತಾ ರಾಥೋಡ್, ರಾಯಚೂರು ಜಿಲ್ಲಾಧಿಕಾರಿಗಳಾದ ನಿತೇಶ್ ಕೆ, ಸತ್ಯಸಾಯಿ ಟ್ರಸ್ಟ್ ನ ಪದಾಧಿಕಾರಿಗಳಾದ ಗೋವಿಂದ ರೆಡ್ಡಿ ಸೇರಿದಂತೆ …
Read More »
BigTv News
November 3, 2024
Breaking News
ನವದೆಹಲಿ: 2029-30ರ ವೇಳೆಗೆ ದೇಶವು 50,000 ಕೋಟಿ ರೂ.ಗಿಂತ ಹೆಚ್ಚು ರಕ್ಷಣಾ ವಸ್ತುಗಳನ್ನು ರಫ್ತು ಮಾಡಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಯಲ್ಲಿ ನಡೆದ 65 ನೇ ಸಂಸ್ಥಾಪನಾ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರ ವಿಕ್ಷಿತ್ ಭಾರತ್ ದೃಷ್ಟಿಕೋನವನ್ನು ಸಾಕಾರಗೊಳಿಸಲು ದೇಶವು ಆಮದು ಮಾಡಿಕೊಳ್ಳುವ ಉನ್ನತ ಮಟ್ಟದ ತಂತ್ರಜ್ಞಾನಗಳನ್ನು ದೇಶೀಯವಾಗಿ ಅಭಿವೃದ್ಧಿಪಡಿಸುವಂತೆ ಭಾರತೀಯ …
Read More »
BigTv News
November 3, 2024
Breaking News
ಉಡುಪಿ: ಮುಂಬರುವ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದ್ದು, ಸರ್ವೇ ಜನ ಸುಖಿನೋ ಭವಂತು ಅನ್ನೋ ಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೆಲಸ ಮಾಡುತ್ತಿದ್ದು, ಜನರು ನಮ್ಮನ್ನು ಕೈ ಹಿಡಿಯುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆ ಉತ್ತರಿಸಿದರು. ವಕ್ಸ್ ಮಂಡಳಿಗೆ ಜಮೀನು ಬಿಟ್ಟು ಕೊಡುವಂತೆ ರೈತರಿಗೆ …
Read More »