Breaking News

Breaking News

ಮರಗಳು ಇಲ್ಲೆ ಉಳಿದವು, ಮರ ನೀಡಿದ ಹಣ್ಣುಗಳು ಪಟ್ಟಣ ಸೇರಿದವು

ಅನಾದಿ ಕಾಲದಿಂದಲೂ ಇದೇ ಆಗಿರುವುದು, ಈಗಲೂ ಅದೇ ಆಗುತ್ತಿರುವುದೂ ಕೂಡ.  ಆದರೆ ಈಗ ಆಗುತ್ತಿರುವ ಬದಲಾವಣೆ ಭಯ ಹುಟ್ಟಿಸುವಂತಾದ್ದು.  ಆ ಭೂಮಿ, ಆ ಪರಿಸರ, ಆ ವ್ಯವಸ್ಥೆಯೊಂದಿಗೆ ಬೆಸಗೊಂಡ ಹೃದಯಗಳ ಭಾವನೆಗಳು ಕ್ರಮೆಣ ಕಡಿಮೆಯಾಗುತ್ತಿದೆ.  ಇದರ ಪರಿಣಾಮವೇ * ಹಣ್ಣುಗಳನ್ನು ನೀಡಿದ ಮರಗಳು ಇಲ್ಲೇ ಉಳಿದವು, ಹಣ್ಣುಗಳು ಮಾತ್ರ ಪಟ್ಟಣ ಸೇರಿದವು. ಹಿಂದೆ ಹಳ್ಳಿಗಳು ಅನ್ನದ ಕಣಜ ಎಂದೇ ಹೆಸರಾಗಿದ್ದವು.  ಆದರೆ ಅದೇ ಈ ಹಳ್ಳಿಗಳು ಕೇವಲ ವೃದ್ದಾಶ್ರಮಗಳಾಗಿ ಮಾರ್ಪಟ್ಟಿವೆ.  …

Read More »

ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ವಹಣೆಗೆ ಚಿಂತನೆ: ಸಚಿವ ಬೋಸರಾಜು

ಬೆಂಗಳೂರು: ಸೇವಾ ಮನೋಭಾವನೆಯಿಂದ ಉಚಿತವಾಗಿ ಅತ್ಯಾಧುನಿಕ ಚಿಕಿತ್ಸೆಯನ್ನು ನೀಡುತ್ತಿರುವ ಸತ್ಯಸಾಯಿ ಟ್ರಸ್ಟ್‌ ಜೊತೆಗೂಡಿ ರಾಯಚೂರಿನ ರಾಜೀವ್‌ ಗಾಂಧಿ ಸೂಪರ್‌ ಸ್ಪೇಷಾಲಿಟಿ ಆಸ್ಪತ್ರೆಯನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಎನ್‌ ಎಸ್‌ ಬೋಸರಾಜು ತಿಳಿಸಿದರು. ಇತ್ತೀಚೆಗೆ ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಾದ ಸುಜಾತಾ ರಾಥೋಡ್, ರಾಯಚೂರು ಜಿಲ್ಲಾಧಿಕಾರಿಗಳಾದ ನಿತೇಶ್‌ ಕೆ, ಸತ್ಯಸಾಯಿ ಟ್ರಸ್ಟ್‌ ನ ಪದಾಧಿಕಾರಿಗಳಾದ ಗೋವಿಂದ ರೆಡ್ಡಿ ಸೇರಿದಂತೆ …

Read More »

ದೇಶವು 2029-30 ರ ವೇಳೆಗೆ 50 ಸಾವಿರ ಕೋಟಿ ರೂ. ರಕ್ಷಣಾ ವಸ್ತುಗಳನ್ನು ರಫ್ತು ಮಾಡಲಿದೆ: ಕೇಂದ್ರ ಸಚಿವ ರಾಜನಾಥ್ ಸಿಂಗ್

ನವದೆಹಲಿ: 2029-30ರ ವೇಳೆಗೆ ದೇಶವು 50,000 ಕೋಟಿ ರೂ.ಗಿಂತ ಹೆಚ್ಚು ರಕ್ಷಣಾ ವಸ್ತುಗಳನ್ನು ರಫ್ತು ಮಾಡಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಯಲ್ಲಿ ನಡೆದ 65 ನೇ ಸಂಸ್ಥಾಪನಾ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರ ವಿಕ್ಷಿತ್ ಭಾರತ್ ದೃಷ್ಟಿಕೋನವನ್ನು ಸಾಕಾರಗೊಳಿಸಲು ದೇಶವು ಆಮದು ಮಾಡಿಕೊಳ್ಳುವ ಉನ್ನತ ಮಟ್ಟದ ತಂತ್ರಜ್ಞಾನಗಳನ್ನು ದೇಶೀಯವಾಗಿ ಅಭಿವೃದ್ಧಿಪಡಿಸುವಂತೆ ಭಾರತೀಯ …

Read More »

ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ : ಲಕ್ಷ್ಮೀ ಹೆಬ್ಬಾಳ್ಳರ್‌

ಉಡುಪಿ: ಮುಂಬರುವ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದ್ದು, ಸರ್ವೇ ಜನ ಸುಖಿನೋ ಭವಂತು ಅನ್ನೋ ಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೆಲಸ ಮಾಡುತ್ತಿದ್ದು, ಜನರು ನಮ್ಮನ್ನು ಕೈ ಹಿಡಿಯುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆ ಉತ್ತರಿಸಿದರು. ವಕ್ಸ್ ಮಂಡಳಿಗೆ ಜಮೀನು ಬಿಟ್ಟು ಕೊಡುವಂತೆ ರೈತರಿಗೆ …

Read More »

ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ : ಪ್ರವಾಸಿಗರಿಗೆ ಗಂಭೀರ ಗಾಯ

ಉಡುಪಿ : ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಡಿಕ್ಕಿ ಹೊಡೆದು ಪುಣ್ಯಕ್ಷೇತ್ರ ದರ್ಶನಕ್ಕೆ ಹೊರಟಿದ್ದ ಪ್ರವಾಸಿಗರು ಗಾಯಗೊಂಡ ದುರ್ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಕೊಲ್ಲೂರಿನತ್ತ ತೆರಳುತ್ತಿದ್ದ ಹೊರ ರಾಜ್ಯದ ಟೂರಿಸ್ಟ್ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. …

Read More »

ಪರ್ಯಾಯ ಪುತ್ತಿಗೆ ಮಠದ ಕಾರ್ಯಕ್ರಮಕ್ಕೆ ರಜನೀಕಾಂತ್ ಗೆ ಆಮಂತ್ರಣ

ಉಡುಪಿ: ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಉಡುಪಿ ಶ್ರೀಕೃಷ್ಣನ ಭಕ್ತರಾದ ಖ್ಯಾತ ಚಿತ್ರನಟ ಸೂಪರ್ ಸ್ಟಾರ್ ರಜನೀಕಾಂತ್ ಅವರನ್ನು ಪರ್ಯಾಯದ ಕಾರ್ಯಕ್ರಮಗಳಿಗೆ ಆಮಂತ್ರಿಸಲಾಯಿತು. ಮಠದ ವತಿಯಿಂದ ಹರೀಶ್ ಭಟ್ ಅವರು ರಜನೀಕಾಂತ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಈ ಸಂದರ್ಭದಲ್ಲಿ ರಜನೀಕಾಂತ್ ಅವರು ಕೋಟಿ ಗೀತಾ ಲೇಖನ ಯಜ್ಞದ ಬಗ್ಗೆ ಖುದ್ದಾಗಿ ಮಾಹಿತಿ ಪಡೆದುಕೊಂಡು ಸಂತೋಷಪಟ್ಟು, ಸದ್ಯದಲ್ಲಿಯೇ ಭೇಟಿ ನೀಡುವುದಾಗಿ ತಿಳಿಸಿದರು.

Read More »

ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತೀದ್ದವರ ಬಂಧನ

ಉಳ್ಳಾಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ೩ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಆಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡ ພ໐໖໖໖. ಆರೋಪಿತರಿಂದ 2,04,000 ರೂ ಬೆಲೆಯ 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿದೆ. ಮಾಡೂರು ನಿವಾಸಿ ನಜೀರ್ ಹುಸೈನ್ (50) ಮತ್ತು ಕಿನ್ಯಾ ರೆಹಮತ್ ನಗರ ದ ಅನ್ಸಾತ್ (37) ಎಂಬವರನ್ನು …

Read More »

ನ್ಯೂ ಲುಕ್ ನಲ್ಲಿ ಪೋಸ್ ಕೊಟ್ಟ ಶ್ವಾನ

ಉಡುಪಿ: ಹೊಸ ಟಿಶರ್ಟ್, ಚಡ್ಡಿ ಧರಿಸಿರುವ ಬೀದಿ ಶ್ವಾನವೊಂದು ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸುವುದು ಗಮನಸೆಳೆಯಿತು. ಒಂದಿಷ್ಟು ಜನರು ಫೋಟೋ ಕ್ಲಿಕ್ಕಿಸಿದರು. ಕೆಲವರಂತೂ ಮುಸಿ ಮುಸಿ ನಕ್ಕರು. ನಿಜ ಸಂಗತಿ ತಿಳಿದುಬಂದಾಗ ಎಲ್ಲರೂ ವಿಸ್ಮಿತರಾದರು. ಪ್ರಾಣಿಪ್ರಿಯ ನಿತ್ಯಾನಂದ ಒಳಕಾಡು ಅವರು ನಾಯಿಗೆ ಸ್ನಾನಮಾಡಿಸಿ ಹೊಸಬಟ್ಟೆ ಉಡಿಸಿ ದೀಪಾವಳಿಯನ್ನು ವಿಶಿಷ್ಟವಾಗಿ ಆಚರಿಸಿದ್ದರು. ಈ ಬೀದಿನಾಯಿ ಕಳೆದ ಎರಡು ವರ್ಷಗಳ ಹಿಂದೆ ವಾಹನ ಅಪಘಾತದಿಂದ ಗಾಯಾಳಾಗಿ ಅಸಹಾಯಕ ಸ್ಥಿತಿಯಲ್ಲಿತ್ತು. ಒಳಕಾಡುವರು ರಕ್ಷಿಸಿ ಚಿಕಿತ್ಸೆಗೆ …

Read More »

ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ : ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಕ್ಸ್ ಸೊತ್ತುಗಳನ್ನು ರಾಷ್ಟ್ರೀಕರಣಗೊಳಿಸಿ ಎಂಬ ಬಿಜೆಪಿ ಶಾಸಕ …

Read More »

ಅತಿವೃಷ್ಟಿಯಿಂದ ಆದ ಬೆಳೆ ಹಾನಿಗೆ ಪರಿಹಾರ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ

ದಾವಣಗೆರೆ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆಹಾನಿಗೆ ಪರಿಹಾರವಾಗಿ ರೈತರಿಗೆ 1 ಕೋಟಿ 42 ಲಕ್ಷ ರೂಪಾಯಿ ವಿತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದೆ. ಶೀಘ್ರವೇ ವರದಿ ಬರುವ ನಿರೀಕ್ಷೆ ಇದ್ದು, ಹೆಚ್ಚಿನ ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ರೈತರಿಗೆ ಭರವಸೆ ನೀಡಿದ್ದಾರೆ.

Read More »