Breaking News

Breaking News

ರೀಲ್ಸ್ ನೋಡಿ ಐತಿಹಾಸಿಕ ದೇವಸ್ಥಾನದಲ್ಲಿ ಕಳ್ಳತನ: ಗುಜರಾತ್ ಮೂಲದ ಗ್ಯಾಂಗ್ ಅರೆಸ್ಟ್

ವಿಜಯಪುರ: ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ನಡೆದಿದ್ದ 32 ಕೆಜಿ ಬೆಳ್ಳಿ ಬಸವಣ್ಣನ ಮೂರ್ತಿ ಕಳ್ಳತನ ಪ್ರಕರಣವನ್ನು ಪೊಲೀಸರು ಒಂದು ತಿಂಗಳ ಬಳಿಕ ಭೇದಿಸಿದ್ದಾರೆ. ಗುಜರಾತ್ ಮೂಲದ ಸುರೇಶಕುಮಾರ್ ಸೋನಿ (51), ಬ್ರಹ್ಮಾರ್ ನೇಟ್ (35) ಹಾಗೂ ಇಂದ್ರಜೀತ್ ನೇಟ್ (33) ಬಂಧಿತರಾಗಿದ್ದಾರೆ. ಯೂಟ್ಯೂಬ್ ಹಾಗೂ ಇನ್‌ಸ್ಟಾಗ್ರಾಮ್ ರೀಲ್ಸ್‌ಗಳ ಮೂಲಕ ದೇವಸ್ಥಾನದ ಮಾಹಿತಿ ಪಡೆದು, ಜುಲೈ 6ರಂದು ಗುಜರಾತ್‌ನಿಂದ ಕಾರಿನಲ್ಲಿ ಬಂದು ಕಳ್ಳತನ ಎಸಗಿದ್ದರೆಂದು ತನಿಖೆಯಲ್ಲಿ ಬೆಳಕಿಗೆ …

Read More »

ಕೊಲ್ಲೂರು: ಬಟ್ಟೆ ಇಡುವ ಸಣ್ಣ ವಿಷಯಕ್ಕೆ ತಾಯಿ ಬೈದಿದ್ದಕ್ಕೆ ಬೇಸರ – ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು!

ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ತಾಯಿ ಬೈದಿದ್ದಕ್ಕೆ ಮನನೊಂದ 18 ವರ್ಷದ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿ ಪ್ರಮಿತಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಹೋದರಿಯರ ನಡುವೆ ಬಟ್ಟೆ ಇಡುವ ವಿಚಾರಕ್ಕೆ ಜಗಳ ನಡೆದಿದ್ದು, ತಾಯಿ ಇಬ್ಬರನ್ನೂ ಬೈದ ಬಳಿಕ ಪ್ರಮಿತಾ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಳು. ಬಳಿಕ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಾಯಿ ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ …

Read More »

ಮೂರು ಮಟ್ಕಾ ಪ್ರಕರಣಗಳಲ್ಲಿ ಬುಕ್ಕಿ ಸೇರಿ ಐವರ ಬಂಧನ

ಉಡುಪಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಮಟ್ಕಾ ಜುಗಾರಿ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರನ್ನು ಬಂಧಿಸಿದ್ದಾರೆ. ಜೊತೆಗೆ ಓರ್ವ ಮಟ್ಕಾ ಬುಕ್ಕಿಯನ್ನೂ ವಶಕ್ಕೆ ಪಡೆದಿದ್ದಾರೆ. ಕಾರ್ಕಳ ಹಾಗೂ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿದ್ದ ಆರೋಪಿಗಳನ್ನು ಬಂಧಿಸಿ, ನಗದು, ಮೊಬೈಲ್, ಮಟ್ಕಾ ಚೀಟಿಗಳು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರಿಂದ ದೊರೆತ ಮಾಹಿತಿಯ ಆಧಾರದ ಮೇಲೆ …

Read More »

ವರ್ಕ್ ಫ್ರಂ ಹೋಂ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ್ದ ದಂಪತಿ ಅರೆಸ್ಟ್

ದೇವನಹಳ್ಳಿಯಲ್ಲಿ ‘ವರ್ಕ್ ಫ್ರಂ ಹೋಂ’ ಉದ್ಯೋಗದ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ ಕಿರಣ್ ಹಾಗೂ ಆತನ ಪತ್ನಿ ಆರತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರು ‘ಕಾಳಿಕಾ ದೇವಿ ಎಂಟರ್‌ಪ್ರೈಸಸ್’ ಹೆಸರಿನಲ್ಲಿ ನಕಲಿ ಸಂಸ್ಥೆ ನಡೆಸುತ್ತಿದ್ದರು. ಮೇಣದಬತ್ತಿ, ಡ್ರೈ ಫ್ರೂಟ್ಸ್ ಹಾಗೂ ಅಗರಬತ್ತಿ ಪ್ಯಾಕಿಂಗ್ ಕೆಲಸ ನೀಡುವುದಾಗಿ ಹೇಳಿ, ₹1 ಲಕ್ಷ ಡೆಪಾಸಿಟ್ ಮಾಡಿದವರಿಗೆ ತಿಂಗಳಿಗೆ ₹23 ಸಾವಿರ ಸಂಬಳ ನೀಡುವ ಭರವಸೆ ನೀಡಿ ಸಾರ್ವಜನಿಕರಿಂದ ₹2 ಲಕ್ಷದಿಂದ ₹20 ಲಕ್ಷದವರೆಗೆ …

Read More »

ಕಸದ ರಾಶಿಯಿಂದ ಹತ್ತಿದ ಬೆಂಕಿ – ಕಾರು, ಬೈಕ್‌ಗಳ ಜೊತೆ ಟ್ರಾನ್ಸ್‌ಫಾರ್ಮರ್ ಸುಟ್ಟು ಭಸ್ಮ

ಬೆಂಗಳೂರು ನಗರದ ಡಿ.ಜೆ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಮೋದಿ ಗಾರ್ಡನ್ ಬಳಿ ಶುಕ್ರವಾರ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಮೊದಲು ವಿದ್ಯುತ್ ಟ್ರಾನ್ಸ್‌ಫಾರ್ಮರ್ ಪಕ್ಕದಲ್ಲಿದ್ದ ಕಸದ ರಾಶಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಹಲವು ವಾಹನಗಳಿಗೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಅನೇಕ ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬೆಂಕಿಯಿಂದ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೂ ಹಾನಿಯಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಯಿತು. ಮಾಹಿತಿ ತಿಳಿದ …

Read More »

ಚಿನ್ನದಂಗಡಿ ದರೋಡೆಗೆ ಯತ್ನ: ಮಾಲಿಕನ ಕಾಲಿಗೆ ಗುಂಡು

ನೆಲಮಂಗಲ: ದಾಬಸ್‌ಪೇಟೆ ಪ್ರೇಮ್‌ ಶಿವ ಜ್ಯುವೆಲರ್ಸ್‌ ನಲ್ಲಿ ಗುರುವಾರ ದುಷ್ಕರ್ಮಿಗಳು ದರೋಡೆಗೆ ಯತ್ನಿಸಿದ್ದು, ಅಂಗಡಿ ಮಾಲಿಕರ ಕಾಲಿಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗ್ರಾಹಕರಂತೆ ಬಂದ ಇಬ್ಬರು ದುಷ್ಕರ್ಮಿಗಳು 10 ಗ್ರಾಂ ಬೆಳ್ಳಿ ಖರೀದಿಸಿದ್ದು, ಬಳಿಕ ಮಾಲಿಕ ಕುನ್ನಾರಾಮ್‌ ಕೆಲಸಗಾರರನ್ನು ಊಟಕ್ಕೆ ಕಳುಹಿಸಿ, ತಾವು ಅಂಗಡಿಯ ಒಳಭಾಗಕ್ಕೆ ಊಟ ಮಾಡಲು ತೆರಳಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಅಂಗಡಿಗೆ ನುಗ್ಗಿ ಗನ್‌ ಹಿಡಿದು ಬೆದರಿಸಿದ್ದಾರೆ. ಮಾಲಿಕ ಪ್ರತಿರೋಧ ತೋರಿದ್ದರಿಂದ ಕಾಲಿಗೆ ಗುಂಡು ಹಾರಿಸಿ, …

Read More »

ಗುಂಡಿನ ದಾಳಿಗೆ ಉಡುಪಿ ಕಾಂಗ್ರೆಸ್ ಮುಖಂಡ ಬಲಿ! ಮತ್ತೊಂದು ಶೂಟೌಟ್‌ಗೆ ಬೆಚ್ಚಿಬಿದ್ದ ಕರಾವಳಿ

ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮಧ್ಯಾಹ್ನ ನಡೆದ ಈ ದಾಳಿಯಲ್ಲಿ ಡೇವಿಡ್ ಡಿಸೋಜಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಶೂಟೌಟ್‌ಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ …

Read More »

ನೆಲಮಂಗಲ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ – ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನ!

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನಿಸಿ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿರುವ ಘಟನೆ ನೆಲಮಂಗಲ ತಾಲೂಕಿನ ಡಾಬಸ್‌ಪೇಟೆಯಲ್ಲಿರುವ ಪ್ರೇಮ್ ಶಿವ ಜ್ಯುವೆಲರಿ ಅಂಗಡಿಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಬುಲೆರೋ ಕಾರಿನಲ್ಲಿ ಬಂದಿದ್ದ ಐದಾರು ಮಂದಿ ದುಷ್ಕರ್ಮಿಗಳು ಮೊದಲು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಎಂಟ್ರಿಕೊಟ್ಟಿದ್ದಾರೆ. ಚಿನ್ನಾಭರಣಗಳನ್ನ ತೋರಿಸುವಂತೆ ಮಾತುಕತೆ ನಡೆಸಿದ ಬಳಿಕ, ಅಂಗಡಿಯೊಳಗೆ ಇದ್ದ ಇಬ್ಬರು ಅಪರಿಚಿತರು ಏಕಾಏಕಿ ಗನ್‌ಗಳನ್ನ ಹೊರತೆಗೆದು ದಾಳಿ ನಡೆಸಿದ್ದಾರೆ.

Read More »

ಮರಕ್ಕೆ ಕಟ್ಟಿ ಯುವಕನಿಗೆ ಹಲ್ಲೆ: ಇಬ್ಬರ ಬಂಧನ; ದಲಿತ ದೌರ್ಜನ್ಯ ಪ್ರಕರಣದಲ್ಲೂ ಆರೋಪಿಯ ಸೆರೆ

ಉಡುಪಿ: ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ದೂರು-ಪ್ರತಿದೂರು ದಾಖಲಾಗಿದ್ದು, ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಸನತ್ ಮೊಗವೀರ ವಿರುದ್ಧ ಮನೆಗೆ ನುಗ್ಗಿ ಅನುಚಿತವಾಗಿ ವರ್ತಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಡಿ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಇನ್ನೊಂದೆಡೆ, ಸನತ್ ನೀಡಿದ ದೂರಿನ ಮೇರೆಗೆ ಯುವತಿಯ ತಂದೆ ರಾಮಕುಮಾರ್ …

Read More »

33.50 ಲ.ರೂ. ದುರುಪಯೋಗ: ಮುಖ್ಯ ಬರಹಗಾರ್ತಿ ವಿರುದ್ಧ ಪ್ರಕರಣ

ಉಡುಪಿ: ಹಾರ್ದಳ್ಳಿ ಮಂಡಳ್ಳಿ ಗ್ರಾ.ಪಂ. ವ್ಯಾಪ್ತಿಯ ಸಮೃದ್ಧ ಸಂಜೀವಿನಿ ಒಕ್ಕೂಟದಲ್ಲಿ ಮುಖ್ಯ ಬರಹಗಾರ್ತಿಯಾಗಿರುವ ಅಶ್ವಿನಿ (33) ವಿರುದ್ಧ ₹33.50 ಲಕ್ಷ ಹಣ ದುರುಪಯೋಗ ಹಾಗೂ ನಕಲಿ ಸಹಿ-ಸೀಲು ಬಳಸಿ ವಂಚನೆ ನಡೆಸಿದ ಆರೋಪ ಕೇಳಿಬಂದಿದೆ. ಸರ್ಕಾರದಿಂದ ಬಂದ ಅನುದಾನವನ್ನು ಸ್ವಸಹಾಯ ಸಂಘಗಳಿಗೆ ಹಂಚಿಕೆ ಮಾಡದೇ, ನಕಲಿ ದಾಖಲೆಗಳ ಮೂಲಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಕ್ಕೂಟದ ಅಧ್ಯಕ್ಷರಿಗೆ ಬ್ಯಾಂಕ್ ವ್ಯವಹಾರಗಳ ಮೊಬೈಲ್ ಸಂದೇಶ …

Read More »