Breaking News

Breaking News

ನಮೋ ಡ್ರೋನ್ ದೀದಿ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ

ನವದೆಹಲಿ: ದೇಶದ 14,500 ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್‌ ಒದಗಿಸಲಿರುವ ಕೇಂದ್ರದ ಮಹತ್ವಾಕಾಂಕ್ಷೆಯ ನಮೋ ಡ್ರೋನ್‌ ದೀದಿ ಯೋಜನೆಗೆ ಚಾಲನೆ ದೊರೆತಿದೆ. ಯೋಜನೆ ಜಾರಿ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನೂ ಕೇಂದ್ರ ಸರಕಾರ ಬಿಡುಗಡೆ ಮಾಡಿದೆ. ಕೇಂದ್ರ ಕೃಷಿ, ಗ್ರಾಮೀಣಾಭಿವೃದ್ಧಿ, ರಸಗೊಬ್ಬರ, ವಿಮಾನಯಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳ ಸಮಿತಿ ಇದರ ಮೇಲ್ವಿಚಾರಣೆ ನಡೆಸಲಿದೆ. ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಸ್ವ-ಸಹಾಯ ಸಂಘಗಳಿಗೆ ಡ್ರೋನ್‌ ಮತ್ತು ಅದರ …

Read More »

ರಾಯಚೂರು ವಿಮಾನ ನಿಲ್ದಾಣಕ್ಕೆ ಶೀಘ್ರವೇ ಕಾಮಗಾರಿ ಆರಂಭ: ಸಚಿವ ಶರಣಪ್ರಕಾಶ್‌ ಪಾಟೀಲ್‌

ರಾಯಚೂರು : ಜಿಲ್ಲೆಯ ಜನರ ಬಹುದಿನಗಳ ಕನಸಾದ ರಾಯಚೂರು ವಿಮಾನ ನಿಲ್ದಾಣ ನನಸಾಗುವ ಹಂತಕ್ಕೆ ಬಂದಿದೆ. ಕೇಂದ್ರ ಸರಕಾರ ಸೈಟ್ ಕ್ಲಿಯರೆನ್ಸ್ ನೀಡಿರುವುದರಿಂದ ಶೀಘ್ರವೇ ಕಾಮಗಾರಿ ಆರಂಭವಾಗಲಿದ್ದು, ಯೋಜನಾ ವರದಿ ಸಿದ್ಧವಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ತಿಳಿಸಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ‌ ರಾಜ್ಯೋತ್ಸವ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಬಳಿಕ ಮಾತನಾಡಿದರು. ನಗರದ …

Read More »

ಶಕ್ತಿ ಯೋಜನೆ ಇನ್ನೂ 8.5 ವರ್ಷ ಜಾರಿಯಲ್ಲಿರುತ್ತೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ರಾಜ್ಯ ಸರ್ಕಾರ ಮಹತ್ವದ ಯೋಜನೆಯನ್ನು ಪರಿಷ್ಕರಿಸುವ ವಿಷಯಕ್ಕೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿಕೆ ನೀಡಿದ್ದು ಯಾರಿಗೆ ಟಿಕೆಟ್​ ತೆಗೆದುಕೊಳ್ಳುವ ಶಕ್ತಿ ಇದೆಯೋ ಅವರು ಡಿ.ಕೆ ಶಿವಕುಮಾರ್​ ಅವರಿಗೆ ಹೇಳಿದ್ದಾರೆ. ಅದನ್ನು ಡಿ.ಕೆ ಶಿವಕುಮಾರ್ ಪ್ರಸ್ತಾಪ ಮಾಡಿದರು ಎಂದು ಹೇಳಿದರು. ಮುಂದುವರಿದು ಮಾತನಾಡಿದ ರಾಮಲಿಂಗರೆಡ್ಡಿ ಶಕ್ತಿ ಕಾರ್ಯಕ್ರಮ ಇನ್ನೂ 8.5 ವರ್ಷ ಇರುತ್ತದೆ‌. ಈ ಅವಧಿಯ 3.5 ಹಾಗೂ ಮುಂದಿನ ಅವಧಿ 5 ವರ್ಷ ಜಾರಿಯಲ್ಲಿ ಇರುತ್ತದೆ ಎಂದು …

Read More »

ಕನ್ನಡ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು: ಸಚಿವ ಡಿ.ಸುಧಾಕರ್

ಚಿತ್ರದುರ್ಗ : ಕನ್ನಡ ಭವನ ನಿರ್ಮಾಣಕ್ಕೆ ಅಗತ್ಯವಾದ ಅನುದಾನ ಒದಗಿಸಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದ್ದಾರೆ. ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹಲ್ಮಿಡಿ ಶಾಸನ ಉದ್ಘಾಟನೆ ನೆರವೇರಿಸಿದ ನಂತರ ಕಸಾಪ ಪದಾಧಿಕಾರಿಗಳ ಜೊತೆ ಮಾತನಾಡಿದರು. ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಮಾತನಾಡಿ, ಕನ್ನಡ ಭವನ ಜಿಲ್ಲೆಯ ಸಾಹಿತ್ಯಾಸಕ್ತರ ದಶಕಗಳ ಕನಸಾಗಿದೆ. ಪರಿಷತ್ತಿಗೆ ಪಿಳ್ಳೇಕೇರನಹಳ್ಳಿಯ ಬಾಪೂಜಿ ಕಾಲೇಜಿನ …

Read More »

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಿದ ಹೈಮಾಸ್ ದೀಪಗಳಿಗೆ ಸಚಿವ ಬೋಸರಾಜು ಚಾಲನೆ

ರಾಯಚೂರು: ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಡವಾಟಿ ಬಿಜಿನೆಗೆರಾ, ಮಲಿಯಾಬಾದನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾದ ಹೈಮಾಸ್ ದೀಪಗಳನ್ನು ಸಚಿವ ಎನ್ ಎಸ್ ಬೋಸರಾಜು ಅವರು ಹಿಮಾಸ್ ದೀಪದ ಬಟನ್ ಆನ್ ಮಾಡುವ ಮೂಲಕ ಚಾಲನೆ ನೀಡಿದರು. ವಡವಾಟಿ, ಬಿಜನಗೆರ, ಮಲೆಯಾಬಾದ್ ನಲ್ಲಿ ನಿರ್ಮಿಸಿದ ಹೈಮಸ್ ದೀಪಗಳಿಗೆ ಚಾಲನೆ ನೀಡಿ ಮಾತನಾಡಿ ರಾಯಚೂರು ನಗರ ಪ್ರದೇಶದಲ್ಲಿ ಈಗಾಗಲೇ ವಿವಿಧ ಬಡಾವಣೆಗಳಲ್ಲಿ 100 ವ್ಯಾಟ್ ನ ಎಲ್‌ಇಡಿ …

Read More »

ಬಳ್ಳಾರಿಯಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ಆಚರಣೆ: ಸಚಿವ ಕೃಷ್ಣ ಬೈರೇಗೌಡ ಧ್ವಜಾರೋಹಣ

ಬಳ್ಳಾರಿ: ಜಿಲ್ಲೆಯಲ್ಲಿ ಇಂದು ಸುವರ್ಣ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಮೊದಲಿಗೆ ಕನ್ನಡಾಂಬೆಗೆ ಪುಷ್ಪನಮನ ಸಲ್ಲಿಸಿ, ಬಳಿಕ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್‌ ಪಡೆಯಿಂದ ಗೌರವಂದನೆ ಸ್ವೀಕರಿಸಿದರು. ಹಂಪಿಯಿಂದ ಕನ್ನಡ ಸಂಘಟನೆಗಳು ತಂದಿದ್ದ ಕನ್ನಡ ಜ್ಯೋತಿ ಹಸ್ತಾಂತರ ಮಾಡಲಾಯಿತು. ಬಳಿಕ ಸಚಿವ ಬೈರೇಗೌಡ ರಾಜ್ಯೋತ್ಸವದ ಶುಭಾಶಯ ಕೋರಿದರು. ನಾನು ಕೋಲಾರ ಮೂಲದವನು ಬಳ್ಳಾರಿಗೆ ಬಂದು …

Read More »

ವಕ್ಫ್ ಮಸೂದೆ ತಿದ್ದುಪಡಿ: ಕೇಂದ್ರ ಜಂಟಿ ಸಮಿತಿಯಿಂದ ಪರಿಶೀಲನೆ

ನವದೆಹಲಿ: ವಕ್ಫ್ ಮಸೂದೆ, 2024 ರ ಜಂಟಿ ಸಮಿತಿಯು ಭಾರತದ ಐದು ನಗರಗಳಲ್ಲಿ ಅಧ್ಯಯನ ಪ್ರವಾಸವನ್ನು ನಡೆಸಲಿದೆ ಎಂದು ಲೋಕಸಭೆಯ ಸೆಕ್ರೆಟರಿಯೇಟ್ ಪ್ರಕಟಿಸಿದೆ. ವಕ್ಫ್ ಮಸೂದೆ 2024 ರ ಪರಿಶೀಲನೆಯ ಭಾಗವಾಗಿ ನವೆಂಬರ್ 9 ರಿಂದ ನವೆಂಬರ್ 14 ರವರೆಗೆ ಸಮಿತಿಯು ಗೌಹಾಟಿ, ಭುವನೇಶ್ವರ, ಕೋಲ್ಕತ್ತಾ, ಪಾಟ್ನಾ ಮತ್ತು ಲಕ್ಕೋಗೆ ಭೇಟಿ ನೀಡಲಿದೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಪ್ರವಾಸಕ್ಕೆ ಸೇರಲು ಆಸಕ್ತಿ ಇರುವವರು ಇಂದು ನಿರ್ದಿಷ್ಟ ಫಾರ್ಮ್ ಅನ್ನು …

Read More »

ಕನ್ನಡವನ್ನು ಆದ್ಯತೆ ಭಾಷೆಯಾಗಿ ಬಳಸಿದರೆ ಮಾತ್ರ ಭಾಷೆಯ ಬೆಳವಣಿಗೆ ಸಾಧ್ಯ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡಿದ್ದು, ಕನ್ನಡಿಗರೆಲ್ಲರೂ ಕನ್ನಡವನ್ನು ಆದ್ಯತೆ ಭಾಷೆಯಾಗಿ ಬಳಸಿದರೆ ಮಾತ್ರ ಭಾಷೆಯ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಕನ್ನಡ ರಾಜ್ಯೋತ್ಸವ ಅಂಗವಾಗಿ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಕನ್ನಡ ಭಾಷೆಯನ್ನು ಉಳಿಸಿ ಹಾಗೂ ಬೆಳೆಸಿಕೊಂಡು ಹೋಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ರಾಜ್ಯ …

Read More »

ಅನ್ನಭಾಗ್ಯ ಯೋಜನೆಯಡಿ ರಾಜ್ಯದಲ್ಲಿ 8,433 ಕೋಟಿ ರೂ. ಹಣ ವರ್ಗಾವಣೆ: ಸಚಿವ ಮುನಿಯಪ್ಪ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ರಾಜ್ಯದಲ್ಲಿ 2023 ರ ಜುಲೈನಿಂದ ಇಲ್ಲಿಯವರೆಗೆ 51.39 ಕೋಟಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ 8,433 ಕೋಟಿ ರೂ. ಹಣ ವರ್ಗಾವಣೆ ಮಾಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್‌.ಮುನಿಯಪ್ಪ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರ ಧ್ವಜಾರೋಹಣ …

Read More »

ಕೇಂದ್ರ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿ: ಕರ್ನಾಟಕಕ್ಕೆ 12 ಪೈಸೆ ಮಾತ್ರ; ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೇಂದ್ರ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿಯಿಂದಾಗಿ ₹ 100 ತೆರಿಗೆ ಕಟ್ಟುವ ಪ್ರದೇಶಕ್ಕೆ ವಾಪಸ್ ₹ 333 ಹೋಗುತ್ತಿದೆ. ಕರ್ನಾಟಕಕ್ಕೆ 12 ಪೈಸೆ ಮಾತ್ರ ವಾಪಸ್ ಬರುತ್ತಿದೆ. ಲೋಕಸಭಾ ಕ್ಷೇತ್ರಗಳ ಪುನರ್‌ ವಿಂಗಡಣೆಯಾದರಂತೂ ದಕ್ಷಿಣದ ರಾಜ್ಯಗಳು ತಮ್ಮ ಧ್ವನಿಯನ್ನೇ ಕಳೆದುಕೊಳ್ಳಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದರು. ಜಿಲ್ಲಾಡಳಿತದ ವತಿಯಿಂದ ಇಲ್ಲಿನ ನಗರೇಶ್ವರ ಶಾಲೆಯ ಆವರಣದಲ್ಲಿ ಇಂದು ಆಯೋಜಿಸಿದ್ದ 69ನೇ ಕರ್ನಾಟಕ ರಾಜ್ಯೋತ್ಸವ …

Read More »