Breaking News

Breaking News

ಕಲಬುರಗಿಯಲ್ಲಿ ಕಲ್ಯಾಣ ಪಥ ಯೋಜನೆಯಡಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಶೀಘ್ರ ಚಾಲನೆ: ಪ್ರಿಯಾಂಕ್ ಖರ್ಗೆ

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶದ ಗ್ರಾಮೀಣ ರಸ್ತೆ ಸುಧಾರಣೆ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಕಲ್ಯಾಣ ಪಥ ಯೋಜನೆಯಡಿ 1,000 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಇನ್ನು 15 ದಿನದಲ್ಲಿ ಚಾಲನೆ ನೀಡಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಇಂದು ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಈಗಾಗಲೇ …

Read More »

ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ಮಾಡಿ್ಲದ ಸಂತೋಷ್ ಲಾಡ್

ಸಂಡೂರು: ಗಣಿ ಧಣಿಗಳ ನಾಡು ಸಂಡೂರಿನಲ್ಲಿ ಉಪಚುನಾವಣೆ ಕಾವು ಜೋರಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಪರ ಸಚಿವ ಸಂತೋಷ್ ಲಾಡ್ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಕೆಲ ವಾರಗಳಿಂದ ಕಾಲುನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಸಚಿವರು ಎಷ್ಟೇ ನೋವಿದ್ರೂ ಪ್ರಚಾರದಲ್ಲಿ ಪಾಲ್ಗೊಂಡು ತಮ್ಮ ಜವಾಬ್ದಾರಿ ನಿರ್ವಹಿಸುತ್ತಿರುವುದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Read More »

ದೀಪಾವಳಿ ಶುಭಾಶಯ ತಿಳಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ : ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ತಿಳಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಈ ದೀಪದ ಹಬ್ಬ ದೀಪಾವಳಿ ರಾಜ್ಯದ ಜನತೆಗೆ, ದೇಶದ ಜನತೆಗೆ ಅವರ ಜೀವನದಲ್ಲಿ ಬೆಳಕನ್ನು ನೀಡಲೆಂದು ಹರಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತ ಗುರಿಗೆ ಎಲ್ಲರು ಕೈ ಜೋಡಿಸಿ, ಮತ್ತೊಮ್ಮೆ ದೀಪಾವಳಿ ಹಬ್ಬದ ಶುಭಾಶಯಗಳು.

Read More »

ಶಕ್ತಿ ಯೋಜನೆ ಯಥಾಸ್ಥಿತಿ ಮುಂದುರೆಯಲಿದೆ, ಯಾವುದೇ ಬದಲಾವಣೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಶಕ್ತಿ ಯೋಜನೆ ಯಥಾಸ್ಥಿತಿ ಮುಂದುವರೆಯಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು ಸುದ್ದಿಗಾರರ ಜೊತೆ ಇಂದು ಮಾತನಾಡಿದ ಅವರು, ‘ಮೂರೂವರೆ ವರ್ಷ ಅಷ್ಟೇ ಅಲ್ಲ, ಮುಂದಿನ ಅವಧಿಗೂ ಈ ಯೋಜನೆ ಮುಂದುವರೆಯಲಿದೆ’ ಎಂದರು. ಅಷ್ಟಕ್ಕೂ ಉಪ ಮುಖ್ಯಮಂತ್ರಿ ನನ್ನ ಬಳಿ ಅವರ ಹೇಳಿಕೆ ಬಗ್ಗೆ ಮಾತನಾಡಿಲ್ಲ. ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರು ಈ ಯೋಜನೆಯನ್ನು ಪರಿಶೀಲಿಸುವ ಹೇಳಿಕೆ ನೀಡಿದ್ದಾರೆ. ಆದರೆ, ನನ್ನ …

Read More »

ರಾಜ್ಯ ಸರ್ಕಾರದ ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಸಹಾಯಧನ

ಬೆಂಗಳೂರು: ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕರ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ನೀಡುವ ಪ್ರೋತ್ಸಾಹಧನವನ್ನು ಒಮ್ಮೆಲೇ ನೇರ ಖಾತೆಗೆ ವರ್ಗಾಯಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಾರಂಭಿಸಿರುವ ಆಶಾ ಸಾಫ್ಟ್ ವ್ಯವಸ್ಥೆಯಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ ಕಾರ್ಯಕ್ಷಮತೆಯ ಆಧಾರದ ಮೇಲೆ ನೀಡುವ ಪ್ರೋತ್ಸಾಹಧನ ಸರಿಯಾದ ಸಮಯಕ್ಕೆ ಕೈಸೇರದಂತಾಗಿದೆ. ಆಶಾ ಕಾರ್ಯಕರ್ತೆಯರಿಗೆ ಅವರ ಕಾರ್ಯಕ್ಷಮತೆಯ ಆಧಾರದ ಮೇಲೆ ಕೇಂದ್ರ ಸರ್ಕಾರದಿಂದ ನೀಡುವ ಪ್ರೋತ್ಸಾಹಧನವನ್ನು ನೇರ ಖಾತೆಗೆ ಜಮಾ …

Read More »

ರಾಜ್ಯದಲ್ಲಿ ಒಳ ಮೀಸಲಾತಿಗೆ ಆಯೋಗ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್‌ ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್‌ ಆಫ್‌ ಇನ್‌ಕ್ವೈರಿ ಅಕ್ಟ್‌ 1952 ಅನ್ವಯ …

Read More »

ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳ ಹೆಚ್ಚಿನ ಹೊರೆ: ಆದಾಯ ಸಂಗ್ರಹದಲ್ಲಿ 12 ಸಾವಿರ ಕೋಟಿ ರೂ.ಕೊರತೆ

ಬೆಂಗಳೂರು: ಕರ್ನಾಟಕ ಸರ್ಕಾರ ಹಣಕಾಸು ಸಂಕಷ್ಟಕ್ಕೆ ಸಿಲುಕಿದ್ದು, ಆದಾಯ ಸಂಗ್ರಹದಲ್ಲಿ 12 ಸಾವಿರ ಕೋಟಿ ರೂ. ಕೊರತೆ ಇದೆ ಎಂದು ವರದಿಯಾಗಿದೆ. ಗ್ಯಾರಂಟಿ ಮತ್ತು ಸಬ್ಸಿಡಿಗಳಿಗೆ ಸರ್ಕಾರ 90 ಸಾವಿರ ಕೋಟಿ ರೂ. ವ್ಯಯಿಸುತ್ತಿದೆ. ಬೊಕ್ಕಸದಲ್ಲಿ ಹಣದ ಕೊರತೆ ಉಂಟಾಗಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗಾಗಿ ಸರ್ಕಾರ ಸಾಲ ತರಲು ಚಿಂತಿಸುತ್ತಿದೆ. ಸರ್ಕಾರಿ ಹಿರಿಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, 2024-25ರ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದ ಆರಂಭದಲ್ಲಿ 12,000 ಕೋಟಿ ರೂಪಾಯಿ …

Read More »

ದೇಶದಲ್ಲಿ ಶೀಘ್ರವೇ ಒಂದು ದೇಶ ಒಂದು ಚುನಾವಣೆ ಜಾರಿ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಭಾರತವು ಒಂದು ರಾಷ್ಟ್ರ ನಾಗರಿಕ ಸಂಹಿತೆಯತ್ತ ಸಾಗುತ್ತಿದ್ದು, ದೇಶದಲ್ಲಿ ಶೀಘ್ರವೇ ಒಂದು ದೇಶ, ಒಂದು ಚುನಾವಣೆ ಜಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಗುಜರಾತ್ ನಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಏಕತಾ ಪ್ರತಿಜ್ಞೆ ಬೋಧಿಸಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 149 ನೇ ಜನ್ಮ ದಿನಾಚರಣೆಯಂದು ಅವರು ಏಕತಾ ನಗರದ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ನಾವು ಒನ್ ನೇಷನ್ ಒನ್ …

Read More »
Featured Video Play Icon

ಇಸ್ಪೀಟ್ ನಲ್ಲಿ ದಾವುದ್ ಅಂದರ್: ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ ಅವ್ಯಾಹತವಾಗಿ ಅಂದರ್ ಬಾಹರ್..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಇಸ್ಪೀಟು ಆಟದ ಹಾವಳಿ ಜೋರಾಗಿದೆ. ಮಂಟೂರ್ ರಸ್ತೆಯಲ್ಲಿ ರೌಡಿಶೀಟರ್ ಗಳು ನಡೆಸುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ಸಿಸಿಬಿ ಹಾಗೂ ಶಹರ ಠಾಣೆಯ ಪೊಲೀಸರು ದಾಳಿಯನ್ನು ಮಾಡಿದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಯತ್ನಿಸಿದ ಆರೋಪದಡಿಯಲ್ಲಿ 6 ಜನ ರೌಡಿ ಶೀಟರ್ ಗಳು ಸೇರಿದಂತೆ 19 ಜನ ಆರೋಪಿಗಳನ್ನು ಬಂಧನ ಮಾಡಿದ್ದಾರೆ.ಮಂಟೂರ್ ರಸ್ತೆಯ ಮನೆಯೊಂದರಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತವಾಗಿ ಹಲವು ರೌಡಿ ಶೀಟರ್’ಗಳು ಸೇರಿ ಇಸ್ಪೀಟ್ …

Read More »

ನವಲಗುಂದದಲ್ಲಿ ಅಧಿಕಾರಿಗಳಿಗೆ ಸನ್ಮಾನಿಸಿದ ಶಾಸಕ ಕೋನರೆಡ್ಡಿ

ನವಲಗುಂದ: ಹುಬ್ಬಳ್ಳಿ ಗ್ರಾಮಿಣ ತಹಶೀಲ್ದಾರರಾಗಿ ಅಧಿಕಾರ ಸಲ್ಲಿಸಿ ವರ್ಗಾವಣೆಗೊಂಡ ಪ್ರಕಾಶ ನಾಶಿ ಅವರನ್ನು, ನೂತನ ತಹಶೀಲ್ದಾರರಾಗಿ ಅಧಿಕಾರ ಸ್ವೀಕರಿಸಿದ ಜೆ. ಬಿ. ಮಜ್ಜಗಿ ಮತ್ತು ಲೋಕೋಪಯೋಗಿ ಇಲಾಖೆಯಲ್ಲಿ ಎಇಇ ಸ್ಥಾನದಿಂದ ಎಇ ಯಾಗಿ ಪದೋನ್ನತಿ ಹೊಂದಿದ ಎಸ್. ಎನ್. ಸಿದ್ದಾಪೂರ ಅವರನ್ನು ನವಲಗುಂದ ವಿಧಾನಸಭಾ ಮತಕ್ಷೇತ್ರ-69 ನವಲಗುಂದ ನಗರದ ವಾಲ್ಮೀಕಿ ಭವನದಲ್ಲಿ ಶಾಸಕ ಎನ್. ಎಚ್. ಕೋನರೆಡ್ಡಿ ನೇತೃತ್ವದಲ್ಲಿ ನಿನ್ನೆ ಸಂಜೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳು ಉಪಸ್ಥಿತರಿದ್ದರು.

Read More »