Breaking News

Breaking News

ನಮ್ಮ ಧಾರವಾಡ ಜಿಲ್ಲೆಯಲ್ಲೇ 500 ಎಕರೆ ಆಸ್ತಿ ವಕ್ಷಗೆ ಒಳಪಟ್ಟಿದೆ: ಅರವಿಂದ ಬೆಲ್ಲದ

ಧಾರವಾಡ: ಇಡೀ ರಾಜ್ಯದ ಜನತೆಗೆ ಆಘಾತ ಕೊಡುವ ಬೆಳವಣಿಗೆಯೊಂದು ನಡೆಯುತ್ತಿದೆ. ನಮ್ಮ ಧಾರವಾಡ ಜಿಲ್ಲೆಯಲ್ಲೇ 500 ಎಕರೆ ಆಸ್ತಿ ವಕ್ಷಗೆ ಒಳಪಟ್ಟಿದೆ ಎಂಬ ಮಾಹಿತಿ ಇದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಉಪ್ಪಿನ ಬೆಟಗೇರಿ ಗ್ರಾಮದ ಕೆಲ ರೈತರ ಜಮೀನಿನ ಪಹಣಿಯಲ್ಲೂ ವಕ್ಷ ಆಸ್ತಿ ಎಂದು ನಮೂದಾಗಿದೆ. ಧಾರವಾಡದ ಸ್ಮಶಾನ ಕೂಡ 1995 ರಲ್ಲಿ ವಕ್ಷ ಆ್ಯಕ್ಟ್ ಮಾಡಿದ್ದ ವೇಳೆ …

Read More »

ವಿವಿಧ ಸ್ಥಳಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಭೇಟಿ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ. 54 ರ ವ್ಯಾಪ್ತಿಯ ಗ್ರೀನ್ ಗಾರ್ಡನ್, ರಾಜಧಾನಿ ಕಾಲೋನಿ, ಸಿದ್ದಲಿಂಗೇಶ್ವರ ಕಾಲೋನಿ ಹಾಗೂ ವಿಕಾಸ ನಗರದ ಸಾರ್ವಜನಿಕರಿಂದ ರಸ್ತೆ ಕಾಮಗಾರಿ ಹಾಗೂ ಸಂಚಾರ ದಟ್ಟಣೆ ಕುರಿತು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಮೋಹನ ಬರೋಡೆ, ಸಂದೀಪ ಜಡಿ, ವಿನಾಯಕ ದೊಂಗಡಿ ಇದ್ದರು.

Read More »

“ನನ್ನ ಭಾರತ ಅಡಿಯಲ್ಲಿ ದೀಪಾವಳಿ ವಿಥ್ ಮೈ ಭಾರತ” ಸ್ವಚ್ಚತಾ ಕಾರ್ಯಕ್ರಮ

ಹುಬ್ಬಳ್ಳಿ: ನಗರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಭಾರತ ಸರಕಾರದ ನೆಹರು ಯುವ ಕೇಂದ್ರ, ಶ್ರೀ ವಾಯುಪುತ್ರ ಸಾಂಸ್ಕೃತಿಕ ಕಲಾ ಕ್ರೀಡಾ ಶಿಕ್ಷಣ, ಗ್ರಾಮ ಅಭಿವೃದ್ಧಿ ಯುವ ಸಂಘ, ರಂಗಜೀವನ ಸಂಘ, ಚಂದ್ರ ಸ್ಪೂರ್ತಿ ಸಾಂಸ್ಕೃತಿಕ ಕಲಾ ಸಂಘ ಹಾಗೂ ಆದರ್ಶ ಮಹಿಳಾ ಸಾಂಸ್ಕೃತಿಕ ಕಲಾ ಸಂಘ ಇವರ ಸಹಯೋಗದಲ್ಲಿ ಇಂದು “ನನ್ನ ಭಾರತ ಅಡಿಯಲ್ಲಿ ದೀಪಾವಳಿ ವಿಥ್ ಮೈ ಭಾರತ” ಅಂಗವಾಗಿ ನಗರದ ಹಲವೆಡೆ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ …

Read More »

ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ: ಬಗ‌ರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಧಾರವಾಡ ತಹಸೀಲ್ದಾರ್ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ನಗರದ ತಹಸೀಲ್ದಾರ್ ಕಚೇರಿ ಎದುರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಬೆಳ್ಳಿಗೆಟ್ಟಿ ಗ್ರಾಮದ ಸಾಗುವಳಿದಾರರಿಗೆ ಕಿರುಕುಳ ತಪ್ಪಿಸಿ, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Read More »

ದೀಪಾವಳಿ ಹೊತ್ತಲ್ಲೇ ರೈತರಿಗೆ ಸಿಹಿಸುದ್ದಿ: ಕ್ವಿಂಟಲ್‌ ಗೆ 51 ಸಾವಿರ ತಲುಪಿದ ಅಡಿಕೆ ದರ

ದಾವಣಗೆರೆ: ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಅಡಿಕೆ ದರ ಹೆಚ್ಚಾಗಿರುವುದು ಬೆಳೆಗಾರರ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಕಳೆದ ಎರಡು ದಿನಗಳಿಂದ ಅಡಿಕೆ ದರ ಕ್ವಿಂಟಲ್ ಗೆ 51,000 ರೂ. ತಲುಪಿದೆ. ಒಂದು ವಾರದ ಹಿಂದೆ ಕ್ವಿಂಟಲ್ ಅಡಿಕೆ ದರ 41,000 ದಿಂದ 45,000 ರೂ.ಆಸು ಪಾಸಿನಲ್ಲಿತ್ತು. ಬೆಳೆಗಾರರು ಅಡಿಕೆ ಮಾರಾಟ ಮಾಡಲು ಹಿಂದೇಟು ಹಾಕಿದ್ದರು. ಇದೀಗ ಅಡಿಕೆ ದರ 51,000 ರೂ. ತಲುಪುತ್ತಿದ್ದಂತೆ ಬೆಳೆಗಾರರು ಅಡಿಕೆ ಮಾರಾಟಕ್ಕೆ ಮುಂದಾಗಿದ್ದಾರೆ. ಚನ್ನಗಿರಿ …

Read More »

ಸಚಿವ ಈಶ್ವರ ಖಂಡ್ರೆ ಎಚ್ಎಂಟಿ ಜಾಗಕ್ಕೆ ಅತಿಕ್ರಮ ಪ್ರವೇಶ: ಕೇಂದ್ರ ಸಚಿವ ಕುಮಾರಸ್ವಾಮಿ

ಚನ್ನಪಟ್ಟಣ: ಅರಣ್ಯ ಸಚಿವ ಈಶ್ವರ ಖಂಡ್ರೆ ಎಚ್‌ಎಂಟಿ ಜಾಗದಲ್ಲಿ ಅತಿಕ್ರಮವಾಗಿ ಪ್ರವೇಶಿಸಿದ್ದಾರೆ. ಎಚ್‌ಎಂಟಿ ಅರಣ್ಯ ಪ್ರದೇಶ ಬಗ್ಗೆ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಇದ್ದು, ಅದರ ತೀರ್ಪಿಗಾಗಿ ಕಾಯುತ್ತಿದ್ದೇವೆ ನಾವು ಕಾನೂನು ಮೂಲಕ ಹೋರಾಟ ಮಾಡುತ್ತೇವೆ ಪ್ರಚಾರಕ್ಕಾಗಿ ಈ ವಿಚಾರ ತೆಗೆದುಕೊಳ್ಳಲ್ಲ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು ಸಚಿವ ಖಂಡ್ರೆ ಅವರಿಗೆ ಮಾಹಿತಿ ಮತ್ತು ಜ್ಞಾನದ ಕೊರತೆ ಇದೆ. …

Read More »

ತುಂಗಭದ್ರಾ ಜಲಾಶಯ ಕಾಪಾಡಿದ ಕನ್ನಯ್ಯ ನಾಯ್ಡುಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ನಿನ್ನೆ (ಅಕ್ಟೋಬರ್ 30) ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗೆ ಆಯ್ಕೆಯಾದ ಒಟ್ಟು 69 ಜನರ ಹೆಸರನ್ನು ಪ್ರಕಟಿಸಿದರು. ಇದರಲ್ಲಿ ಮುಖ್ಯವಾಗಿ ತುಂಗಭದ್ರಾ ಜಲಾಶಯವನ್ನು ಕಾಪಾಡಿದ ಕನ್ನಯ್ಯ ನಾಯ್ಡುಗೆ ಹೊರದೇಶ, ಹೊರನಾಡು ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಮೂಲಕ ಕನ್ನಯ್ಯ ನಾಯ್ಡು ಅವರ ಕೆಲಸಕ್ಕೆ ರಾಜ್ಯ …

Read More »

ದೇಶದಲ್ಲಿ ವಕ್ಫ್ ಕಾಯ್ದೆಯ ನಿರಂಕುಶ, ಅಪರಿಮಿತ ಅಧಿಕಾರ ಶೀಘ್ರ ರದ್ದು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವಿಜಯಪುರ: ‘ದೇಶದಲ್ಲಿ ವಕ್ಫ್‌ ಕಾಯ್ದೆಗೆ ಇರುವ ನಿರಂಕುಶ, ಅಪರಿಮಿತ ಅಧಿಕಾರವನ್ನು ಕೇಂದ್ರ ಸರ್ಕಾರ ಶೀಘ್ರವೇ ರದ್ದು ಮಾಡಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ವಕ್ಪ್‌ ಆಸ್ತಿ ವಿವಾದ ಸಂಬಂಧಿಸಿದಂತೆ ಜಿಲ್ಲೆಯ ರೈತರು ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು. ಮುಂದಿನ ಅಧಿವೇಶನದಲ್ಲಿ ವಕ್ಪ್‌ ಕಾಯ್ದೆಗೆ ತಿದ್ದುಪಡಿ ತರುಲು ಕೇಂದ್ರ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ …

Read More »

ಮುಂದಿನ ದಿನಗಳಲ್ಲಿ ಶಕ್ತಿ ಯೋಜನೆ ಸ್ಥಗಿತ: ಮುನ್ಸೂಚನೆ ನೀಡಿದ ಡಿಸಿಎಂ ಡಿಕೆಶಿ

ಬೆಂಗಳೂರು: 2023ರ ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಕೂಡ ಒಂದಾಗಿದ್ದು, ರಾಜ್ಯಾದ್ಯಂತ ಈ ಯೋಜನೆಗೆ ಭರ್ಜರಿ ರೆಸ್ಪಾನ್ಸ್​ ದೊರೆಯುತ್ತಿದೆ. ಯೋಜನೆ ಜಾರಿಯಾಗಿ ಒಂದು ವರ್ಷಕ್ಕೂ ಅಧಿಕ ಕಾಲಗಳಾಗಿದ್ದು, ಮಹಿಳೆಯರು ಉಚಿತ ಪ್ರಯಾಣದ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಆದರೆ, ಇದೀಗ ಮಹಿಳೆಯರಿಗಾಗಿ ಜಾರಿಗೆ ತಂದಿದ್ದ ಈ ಯೋಜನೆಯನ್ನು ಮುಂದಿನ ದಿನಗಳಲ್ಲಿ ಸ್ಥಗಿತಗೊಳ್ಳಲಿದೆ ಎಂಬ ಅನುಮಾನ ಮೂಡಲು ಶುರುವಾಗಿದ್ದು, ಡಿಸಿಎಂ ಡಿ.ಕೆ. …

Read More »

ರಾಜ್ಯದಲ್ಲಿ 11 ಹೊಸ ಮೆಡಿಕಲ್ ಕಾಲೇಜು ಆರಂಭಿಸಲು ಸರ್ಕಾರ ತೀರ್ಮಾನ: ಸಚಿವ ಶರಣಪ್ರಕಾಶ ಪಾಟೀಲ

ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದಲ್ಲಿ 11 ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಿದೆ, ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಈ ಮಾದರಿ ಕಾಲೇಜುಗಳು ನಿರ್ಮಾಣವಾಗಲಿದ್ದು ಯಾವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ಇಲ್ಲವೋ ಅಲ್ಲಿ ಹೊಸ ಕಾಲೇಜುಗಳು ನಿರ್ಮಾಣಗೊಳ್ಳಲಿವೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ ಹೇಳಿದ್ದಾರೆ. ಸದ್ಯ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ 11 ಜಿಲ್ಲೆಗಳಲ್ಲಿ ಕಾಲೇಜುಗಳಿಲ್ಲ ಆದ್ದರಿಂದ ಸರ್ಕಾರ ಹೊಸ ವೈದ್ಯಕೀಯ ಕಾಲೇಜುಗಳನ್ನು …

Read More »