Breaking News

Breaking News

ಮುಡಾದಲ್ಲಿ ಇಡಿ ತನಿಖೆ ಮುಂದುವರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಶಿ

ಧಾರವಾಡ: ಮುಡಾದಲ್ಲಿ ಇಡಿ ತನಿಖೆ ಮುಂದುವರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಆಗಿದೆ. ಹೀಗಾಗಿ ಇಡಿ ವಿಚಾರಣೆ ಮುಂದುವರೆದಿದ್ದು, ಲಕ್ಷಾಂತರ ರೂಪಾಯಿಯ ಬಂಡವಾಳ ಬಯಲಾಗುತ್ತಿದೆ ಎಂದಿದ್ದಾರೆ. ಸಿದ್ದರಾಮಯ್ಯನವರಿಗೆ ಹತ್ತಿರದವರು ಹಾಗೂ ಅವರಿಗೆ ಬೇಕಾದವರು ಈ ಪ್ರಕರಣದಲ್ಲಿ ಇದ್ದಾರೆ. ಸ್ವತಃ ಸಿದ್ದರಾಮಯ್ಯ ಸಿಕ್ಕಾಪಟ್ಟೆ ಭೂ ಕಬಳಿಕೆ ಮಾಡಿದ್ದಾರೆ. ವಾಲ್ಮೀಕಿ ಹಗರಣದಲ್ಲಿಯೂ ಇಡಿ ಮಧ್ಯ ಪ್ರವೇಶಿಬೇಕು ಎಂದು ಜೋಶಿ ಹೇಳಿದರು. …

Read More »

ಮತ್ತೆ ಒಂದಾದ ಮಾಜಿ ಶಾಸಕ ಹಾಗೂ ಹಾಲಿ ಶಾಸಕ

ಶ್ರೀ ಶ್ರೀನಿವಾಸ್ ಮಾನೆ ಶಾಸಕರು, (ಹಾನಗಲ್‌) ಮತ್ತು ಶಿಗ್ಗಾವ್ ಮಾಜಿ ಶಾಸಕರು ಶ್ರೀ ಅಜೀಂ ಪೀರ್ ಖಾದ್ರಿ ಅವರು. ಸನ್ಮಾನ್ಯ ಶ್ರೀ B Z ಜಮೀರ್ ಅಹ್ಮದ್ ಅವರ ನೇತೃತ್ವದಲ್ಲಿ ಒಂದಾಗಿ, ಅವರ ನಡುವಿನ ಭಿನ್ನಮತವನ್ನು ಶಮನಗೊಂಡಿದೆ. ಶಿಗ್ಗಾಂವಿ &ಸವಣೂರು ಕ್ಷೇತ್ರದ ಜನರಿಗೆ ಬಹಳ ಖುಷಿ ತಂದಿದ್ದು,ಇನ್ಮುಂದೆ ಬಿಜೆಪಿಗೆ ಸೋಲು ನಿಶ್ಚಿತ. 30, ವರ್ಷ ಕಾಂಗ್ರೆಸ್ ಬಾವುಟ ಹಾರದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ, ಶ್ರೀ ಅಜೀಂ ಪೀರ ಖಾದ್ರಿಜಿ, ಅವರು …

Read More »

ಭ್ರಷ್ಟಾಚಾರ ನಿರ್ಮೂಲನೆಗೆ ಕಾನೂನು ಅರಿವು ಮತ್ತು ಜಾಗೃತಿ ಅತ್ಯಗತ್ಯ: ಡಿಸಿ ಮೊಹಮ್ಮದ್ ರೋಷನ್

ಬೆಳಗಾವಿ: ವಿವಿಧ ಕ್ಷೇತ್ರದಲ್ಲಿರುವ ಭ್ರಷ್ಟಾಚಾರ ನಿರ್ಮೂಲನೆಗಾಗಿ ಕಾನೂನು ಅರಿವು ಮತ್ತು ಜಾಗೃತಿ ಅತ್ಯಗತ್ಯವಾಗಿದೆ. ಭ್ರಷ್ಟಾಚಾರ ವಿರುದ್ಧ ಪ್ರಕರಣ ದಾಖಲಾದರೂ ನ್ಯಾಯ ನೀಡಿಕೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗುವಲ್ಲಿ ವಿಳಂಬವಾಗುತ್ತಿರುವುದರಿಂದ ಭ್ರಷ್ಟಾಚಾರ ನಿಯಂತ್ರಣ ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅಧಿಕಾರಿಗಳು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಲೋಕಾಯುಕ್ತ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ …

Read More »

ಕವಲೂರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇಂದು ನಾಮಪತ್ರ ಸಲ್ಲಿಕೆ

ಧಾರವಾಡ : ಕರ್ನಾಟಕ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಪರಶುರಾಮ ಕವಲೂರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷ ಸಿದ್ದನಗೌಡರ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಜರಿದ್ದರು.

Read More »

ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು 2400 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಸಾಧಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಂದಿನ ಮಾರ್ಚ್ ವರೆಗೆ ಪ್ರತಿ ತಿಂಗಳು ರೂ. 2400 ಕೋಟಿ ರಾಜಸ್ವ ಸಂಗ್ರಹ ಗುರಿ ಸಾಧಿಸಲೇಬೇಕು ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅವರ ಅಧ್ಯಕ್ಷತೆಯಲ್ಲಿ ನಡೆದ ನೋಂದಣಿ ಮತ್ತು ಮುದ್ರಾಂಕ ಇಲಾಖೆ 2024-25ರ ಸಾಲಿನ ರಾಜಸ್ವ ಸಂಗ್ರಹಣೆ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದರು. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2024-25ರ ಸಾಲಿನಲ್ಲಿ ರೂ. 26000 ಕೋಟಿ ರಾಜಸ್ವ ಸಂಗ್ರಹ …

Read More »

ಕುಂದಗೋಳ ಘಟಕದ ನಿರ್ದೇಶಕ ಸ್ಥಾನಕ್ಕೆ ಆಯ್ಕೆ

ಕುಂದಗೋಳ : 2024-2029 ರ ಅವಧಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕುಂದಗೋಳ ಘಟಕದ ನಿರ್ದೇಶಕ ಸ್ಥಾನಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳಾದ ಪರ್ವಿನ್‌’ಭಾನು ಕಾಂಟ್ರಾಕ್ಟರ್ ಮತ್ತು ವಿನಯ ನಲವಡಿ ಇಬ್ಬರು ಸಮಾನ ಮತಗಳನ್ನು ಪಡೆದು ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಇವರನ್ನೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಪರವಾಗಿ ಕುಂದಗೋಳ ತಾಲ್ಲೂಕಿನ ಎಲ್ಲ ಸರಕಾರಿ ನೌಕರರ ಪರವಾಗಿ ಗೌರವಿಸಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ಮಾಡಲಗೇರಿ …

Read More »

ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ: ಕಾಂಗ್ರೆಸ್ ನಿಂದ ಪ್ರಚಾರ ಉಸ್ತುವಾರಿಗಳ ನೇಮಕ

ಬೆಂಗಳೂರು: ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್‌ ಕ್ಷೇತ್ರಗಳಿಗೆ ಪ್ರಚಾರ ಉಸ್ತುವಾರಿಗಳನ್ನು ನೇಮಕಗೊಳಿಸಿದ್ದು, ಸಚಿವರು ಮತ್ತು ಶಾಸಕರ ನೇತೃತ್ವದಲ್ಲಿ ತಂಡಗಳನ್ನು ರಚಿಸಿದೆ. ಶಿಗ್ಗಾವಿ ಕ್ಷೇತ್ರಕ್ಕೆ ಸಚಿವರಾದ ಈಶ್ವರ್‌ ಖಂಡ್ರೆ, ಎಚ್‌.ಕೆ ಪಾಟೀಲ್‌, ಜಮೀರ್‌ ಅಹಮ್ಮದ್‌ ಖಾನ್‌, ಲಕ್ಷ್ಮಿ ಹೆಬ್ಬಾಳಕರ, ತಿಮ್ಮಾಪುರ, ಎಸ್‌.ಎಸ್‌ ಮಲ್ಲಿಕಾರ್ಜುನ, ಬೈರತಿ ಸುರೇಶ್‌ ಮತ್ತು ಶಿವರಾಜ್‌ ತಂಗಡಗಿ ಅವರನ್ನೊಳಗೊಂಡ ತಂಡವನ್ನು ಪಕ್ಷ ನೇಮಿಸಿದೆ. ಸಂಡೂರು ಕ್ಷೇತ್ರಕ್ಕೆ ಸಚಿವರಾದ ಎಚ್‌. ಮುನಿಯಪ್ಪ, ಕೆ.ಜೆ …

Read More »

ಬೆಂಗಳೂರಿನಲ್ಲಿ 160 ಪ್ರಶಿಕ್ಷಣಾರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

ಬೆಂಗಳೂರು: ಇಡೀ ದೇಶದಲ್ಲಿ ನಡೆದ ಉದ್ಯೋಗ ಮೇಳದಲ್ಲಿ 50 ಸಾವಿರ ಮಂದಿಗೆ ನೇಮಕಾತಿ ಪತ್ರ ನೀಡಲಾಗಿದ್ದು, ಇವರಲ್ಲಿ 20 ಸಾವಿರ ಮಂದಿಗೆ ಅಂಚೆ ಇಲಾಖೆ ಉದ್ಯೋಗ ನೀಡಿದೆ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಅಂಚೆ ಇಲಾಖೆ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಇಂದು ನಡೆದ ರೋಜ್‌ಗಾರ್ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಉದ್ಯೋಗಿಗಳನ್ನು ಕರ್ಮಯೋಗಿಗಳು ಎಂದು ಪ್ರಧಾನಿ ಕರೆದಿರುವುದು ಅವರ ಹೊಸ ಚಿಂತನೆಯಾಗಿದೆ …

Read More »

ಬೆಂಗಳೂರಿನಲ್ಲಿ 2 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ: ವಿದೇಶಿ ಡ್ರಗ್ ಪೆಡ್ಲರ್ ಬಂಧನ

ಬೆಂಗಳೂರು: ಮೆಡಿಕಲ್‌ ವೀಸಾದಡಿ ಭಾರತಕ್ಕೆ ಬಂದು ವೀಸಾ ಅವಧಿ ಮುಗಿದರೂ ಅಕ್ರಮವಾಗಿ ನೆಲೆಸಿ ಮಾದಕವಸ್ತು ಮಾರಾಟದಲ್ಲಿ ತೊಡಗಿದ್ದ ವಿದೇಶಿ ಡ್ರಗ್‌ ಪೆಡ್ಲರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿ 2.36 ಕೋಟಿ ರೂ.ಮೌಲ್ಯದ 1 ಕೆಜಿ 577 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ ವಶಪಡಿಸಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆ ವ್ಯಾಪ್ತಿಯ ಶ್ರೀನಿಧಿ ಲೇಔಟ್‌, ದೊಡ್ಡನಾಗಮಂಗಲದ ಮನೆಯೊಂದರಲ್ಲಿ ಈ ಡ್ರಗ್ಸ್ ಪೆಡ್ಲರ್‌ ವಾಸವಾಗಿದ್ದು, ಮಾದಕವಸ್ತು ಸಂಗ್ರಹಿಸಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಾ ಅಕ್ರಮ ಹಣ ಸಂಪಾದನೆಯಲ್ಲಿ …

Read More »

ಅ.30 ಕಲ್ಯಾಣಪುರ ಮಠದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ

ಕುಂದಗೋಳ : ಅಕ್ಟೋಬರ್ 30 ನಾಳೆ ಬುಧವಾರ ಬೆಳಗ್ಗೆ 9-30 ರಿಂದ ಮಧ್ಯಾಹ್ನ 2-00 ಗಂಟೆಯವರೆಗೆ ಕಲ್ಯಾಣಪುರ ಬಸವಣ್ಣಜ್ಜನವರ ಮಠದಲ್ಲಿ ವಾಸನ್ ಐ ಕೇರ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದ ದಿವ್ಯ ಸಾನಿಧ್ಯವನ್ನೂ ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರು ವಹಿಸಲಿದ್ದು, ಶಿಬಿರದಲ್ಲಿ ಉಚಿತವಾಗಿ ನೇತ್ರ ತಪಾಸಣಾ ಮಾಡಿ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಉಚಿತ ಆಪರೇಷನ್‌ ಸಹ ಮಾಡಲಾಗುವುದು. ಈ ಶಿಬಿರದ ಪ್ರಯೋಜನ ಪಡೆಯಲು ಇಚ್ಚಿಸುವ ಕುಂದಗೋಳ …

Read More »