Breaking News

Breaking News

ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಕೇಂದ್ರ ಸರ್ಕಾರದಿಂದ ₹3 ಲಕ್ಷ ಕೋಟಿ ರೂ. ಹಣ ಮೀಸಲು: ಕೇಂದ್ರ ಸಚಿವ ಎಚ್ಡಿಕೆ

ಬೆಂಗಳೂರು: ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡುತ್ತಿದ್ದು, ಕಳೆದ ಬಜೆಟ್ ಯುವಜನರಲ್ಲಿ ಕುಶಲತೆ ವೃದ್ಧಿಸುವ ನಿಟ್ಟಿನಲ್ಲಿ ₹3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಪ್ರಧಾನಮಂತ್ರಿ ಉದ್ಯೋಗ ಮೇಳ (ರೋಜ್ ಗಾರ್ ಮೇಳ)ದ 2ನೇ ಹಂತದಲ್ಲಿ ದೇಶದಾದ್ಯಂತ ವಿವಿಧ ಕೇಂದ್ರ ಸರಕಾರಿ ಇಲಾಖೆಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾದ …

Read More »

ಕೊಪ್ಪಳದಲ್ಲಿ ಆರೋಗ್ಯ ಸೌಲಭ್ಯವನ್ನು ಮೇಲ್ದರ್ಜೆಗೇರಿಸಲು ಹೊಸ ಕೇಂದ್ರಗಳ ಸ್ಥಾಪನೆಗೆ ನಿರ್ಧಾರ

ಕೊಪ್ಪಳ: ಕಲ್ಯಾಣ ಕರ್ನಾಟಕ ಸಂಪೂರ್ಣ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ಹಲವು ಆರೋಗ್ಯ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಹೊಸ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಇದರ ಭಾಗವಾಗಿ ಕೊಪ್ಪಳ ನಗರಕ್ಕೆ ಹೊಸ ಆರೋಗ್ಯ ಕೇಂದ್ರ ಮಂಜೂರಾಗಿದೆ. ನಗರ ವ್ಯಾಪ್ತಿಯಲ್ಲಿ ಈಗಾಗಲೇ ತಾಲ್ಲೂಕು ಆಸ್ಪತ್ರೆಯೂ ಇದ್ದು, ಹೊಸ ನಗರ ಆರೋಗ್ಯ ಕೇಂದ್ರವನ್ನು ಭಾಗ್ಯನಗರ ಭಾಗದಲ್ಲಿ ಆರಂಭಿಸುವ ಬಗ್ಗೆಯೂ ಚರ್ಚೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಹಿಂದುಳಿದಿದ್ದು, ಭಾರತೀಯ ಸಾರ್ವಜನಿಕ …

Read More »

ಪುನೀತ್ ರಾಜ್‌ಕುಮಾರ್ ಸ್ಮರಿಸಿದ ಕಮೀಷನರ್ ಎನ್ ಶಶಿಕುಮಾರ್

ಹುಬ್ಬಳ್ಳಿ: ಕರುನಾಡಿನ ಪವರ್ ಸ್ಟಾರ್ ಪುನೀತ್ ರಾಜಕುಮಾ‌ರ್ ಅವರು ನಮ್ಮನ್ನು ಆಗಲಿ ಇದೀಗ ಮೂರು ವರ್ಷ ಕಳೆದಿದೆ. ಆದರೂ ಕೂಡಾ ಅವರು ನಮ್ಮ ನಡುವೆಯೇ ಇದ್ದಾರೆ ಎಂಬುದಕ್ಕೆ ಕರುನಾಡಿನ ಜನ ಅವರ ಮೇಲೆ ಇಟ್ಟ ಪ್ರೀತಿ ಕಾರಣ. ಪುನೀತ್ ರಾಜ್‌ಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಇಂದು ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಇದ್ದ ಹಿನ್ನೆಲೆ ಹುಬ್ಬಳ್ಳಿ ಧಾರವಾಡ ಪೊಲೀಸ್‌ ಕಮಿಷನರ್‌ ಎನ್ ಶಶಿಕುಮಾರ್ ಪುನೀತ್ ಅಭಿನಯದ ಹಾಡನ್ನು ಹಾಡಿ ಅಪ್ಪುವನ್ನು …

Read More »

ವಕ್ಸ್ ಆಸ್ತಿ ಬಗ್ಗೆ ನೋಟಿಸ್‌ ಕೊಟ್ಟಿದ್ದು ರಾಜ್ಯ ಸರ್ಕಾರ ಆಡಳಿತ ವೈಫಲ್ಯ: ಶೆಟ್ಟರ್

ಹುಬ್ಬಳ್ಳಿ : ರಾಜ್ಯಾದ್ಯಂತ ವಕ್ಸ್ ಗೊಂದಲ ವಿಚಾರ, ಇದು ರಾಜ್ಯ ಸರ್ಕಾರದ ಮಿಸ್ ಮ್ಯಾನೇಜೆಂಟ್. ಸರ್ಕಾರದ ಅವ್ಯವಸ್ಥೆಗೆ ಇದು ಸ್ಪಷ್ಟ ಉದಾಹರಣೆ. ವಕ್ಸ್ ಆಸ್ತಿ ಬಗ್ಗೆ ನೋಟಿಸ್‌ ಕೊಟ್ಟಿದ್ದು ರಾಜ್ಯ ಸರ್ಕಾರ ಆಡಳಿತ ವೈಫಲ್ಯ. ಇದನ್ನು ಯಾರು ಕೇಳದಿದ್ದೆ ಅದು ವಕ್ಸ್ ಬೋರ್ಡ್ ಆಸ್ತಿ ಆಗುತ್ತಿತ್ತು.ಬೋರ್ಡ್ ಗೆ ಆಸ್ತಿ ನೀಡುವ ಮೂಲಕ ಅಲ್ಪಸಂಖ್ಯಾತರ ತುಷ್ಟಿಕರಣ ಹೀನ ಮಟ್ಟಕ್ಕಿಳಿದಿದೆ ಎಂದು ಸಂಸದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ …

Read More »

ರೈಲ್ವೆಯಲ್ಲಿ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ: ಕೇಂದ್ರ ಸಚಿವ ಸೋಮಣ್ಣ

ಮೈಸೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದರು. ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಧಾನ …

Read More »

ಬೀದರ್ ವಿಮಾನಯಾನ ಪುನರಾರಂಭಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ: ಸಚಿವ ಈಶ್ವರ ಖಂಡ್ರೆ

ಬೀದರ್: ಕಳೆದ 10 ತಿಂಗಳುಗಳಿಂದ ಸ್ಥಗಿತಗೊಂಡಿರುವ ಬೀದರ್ ನಾಗರಿಕ ವಿಮಾನಯಾನ ಸೇವೆಯನ್ನು ಪುನಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಭೆಯ ಬಳಿಕ ವಿವರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಉಡಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಬ್ಸಿಡಿ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ವಿಮಾನ ಯಾನ ಸೇವೆ ಸ್ಥಗಿತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಸಬ್ಸಿಡಿ ನೀಡಿ ಬೀದರ್ ಗೆ ವಾಯುಯಾನ ಕಲ್ಪಿಸಲು ನಿರ್ಧರಿಸಿದೆ …

Read More »

ಹೆಚ್ಚು ಹಣ ಹೊಡಿಕೆ ಮಾಡುವಂತೆ ನಂಬಿಸಿ ಮಹಿಳೆಗೆ ವಂಚನೆ

ಹುಬ್ಬಳ್ಳಿ : ಖಾಸಗಿ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ನಂಬಿಸಿ ಇಲ್ಲಿನ ಗೋಕುಲ ರಸ್ತೆಯ ಬಸವೇಶ್ವರ ನಗರದ ಪ್ರಸನ್ನ ಕಾಲೊನಿಯ ಚಿತ್ರಾ ಹೇಮಂತ ಲಾಡ್ ಅವರಿಗೆ 97.50 ಲಕ್ಷ ರೂಪಾಯಿ ವಂಚಿಸಲಾಗಿದೆ. ಚಿತ್ರಾ ಅವರು ಷೇರು ಟ್ರೇಡಿಂಗ್ ಬಗ್ಗೆ ಗೂಗಲ್‌ನಲ್ಲಿ ಸರ್ಚ್ ಮಾಡಿದ್ದಾರೆ. ಆಗ ಸಿಕ್ಕ ಲಿಂಕ್ ಕ್ಲಿಕ್ ಮಾಡಿದಾಗ ಅವರ ಮೊಬೈಲ್ ಸಂಖ್ಯೆ ‘ಬಿ1 ವಿಜಯ್ ಬಜಾಜ್ ವೆಲ್ತ್ ಫ್ರೀಡಂ ಲರ್ನಿಂಗ್ ಗ್ರೂಪ್’ …

Read More »

ಅಮೆರಿಕದ ಶ್ವೇತವನದಲ್ಲಿ ದೀಪಾವಳಿ ಸಂಭ್ರಮ: ಅಧ್ಯಕ್ಷ ಜೋ ಬೈಡನ್‌ ಭಾಗಿ

ವಾಷಿಂಗ್ಟನ್: ಸೋಮವಾರ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ದೀಪಾವಳಿ ಆಚರಣೆಯನ್ನು ಆಯೋಜಿಸಿದ್ದರು. ಶ್ವೇತಭವನದಲ್ಲಿ ನಡೆದ ದೀಪಾವಳಿ ಆಚರಣೆಯಲ್ಲಿ ದೇಶದಾದ್ಯಂತದ ಕಾಂಗ್ರೆಸ್ ಸದಸ್ಯರು, ಅಧಿಕಾರಿಗಳು ಮತ್ತು ಕಾರ್ಪೊರೇಟ್ ಅಧಿಕಾರಿಗಳು ಸೇರಿದಂತೆ 600 ಕ್ಕೂ ಹೆಚ್ಚು ಭಾರತೀಯ ಅಮೆರಿಕನ್ನರು ಭಾಗವಹಿಸಿದ್ದರು. ಅಧ್ಯಕ್ಷನಾಗಿ ಶ್ವೇತಭವನದಲ್ಲಿ ಇದುವರೆಗೆ ಅತಿದೊಡ್ಡ ದೀಪಾವಳಿ ಆಯೋಜಿಸಲು ನನಗೆ ಗೌರವ ಹೆಮ್ಮೆ ಇದೆ. ಸೆನೆಟರ್, ಉಪಾಧ್ಯಕ್ಷ ಮತ್ತು ಅಧ್ಯಕ್ಷರಾಗಿ ದೀಪಾವಳಿ ಆಚರಣೆಯಲ್ಲಿ ಭಾಗವಹಿಸಿದ್ದೇನೆ. ದಕ್ಷಿಣ ಏಷ್ಯಾದ ಅಮೆರಿಕನ್ನರು ನನ್ನ ಸಿಬ್ಬಂದಿಯ …

Read More »

ಭ್ರಷ್ಟಾಚಾರ ಒಂದು ಪಿಡುಗು: ಅದನ್ನು ತೊಡೆದು ಹಾಕಲು ನಿಸ್ವಾರ್ಥ ಸೇವೆ, ನಿಸ್ವಾರ್ಥ ಜೀವನ ತಮ್ಮದಾಗಬೇಕು: ಪ್ರಧಾನ ಜಿಲ್ಲಾ ನ್ಯಾಯಾಧೀಶೆ ಬಿ.ಜಿ.ರಮಾ

ಧಾರವಾಡ : ಇಂದು ಎಲ್ಲೆಡೆ ಭ್ರಷ್ಟಾಚಾರದ ಮಾತು ಕೇಳಿ ಬರುತ್ತಿದೆ. ಇದು ಸಮಾಜಕ್ಕೆ ಅಂಟಿದ ಪಿಡುಗು. ಇದನ್ನು ತೊಡೆದು ಹಾಕಲು ನಿಸ್ವಾರ್ಥ ಸೇವೆ, ನಿಸ್ವಾರ್ಥ ಜೀವನ ನಮ್ಮದಾಗಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ಬಿ.ಜಿ.ರಮಾ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಲೋಕಾಯುಕ್ತ ಧಾರವಾಡ …

Read More »

ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಕೇಂದ್ರಗಳ ಸ್ಥಾಪನೆ: ಜಿಲ್ಲಾಧಿಕಾರಿ

ರಾಯಚೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ರೈತರು ಸದುಪಯೋಗಪಡೆಯಬೇಕೆಂದು ಜಿಲ್ಲಾಧಿಕಾರಿ ನಿತೀಶ್ ಕೆ., ಅವರು ತಿಳಿಸಿದ್ದಾರೆ. ರೈತರಿಂದ ಶೇಂಗಾ ಉತ್ಪನ್ನವನ್ನು ಪ್ರತಿ ಎಕರಿಗೆ 3.00 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್‍ಗೆ 6,783 ರೂ.ಗಳ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಲಾಗುವುದು. ಆಸಕ್ತರ ರೈತರು ರಾಯಚೂರು …

Read More »