BigTv News
October 28, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 450 ಪೊಲೀಸ್ ಇಲಾಖೆಯ ಹುದ್ದೆಗಳ ನೇಮಕಾತಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭರ್ತಿಗೆ ಅನುಮೋದನೆ ನೀಡಲಾಗಿದೆ. ಈ ಮೂಲಕ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ. ಇಂದು ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದಂತ ಸಚಿವ ಮಹದೇವಪ್ಪ ಅವರು 22 ವಿಶೇಷ ಪೊಲೀಸ್ ಠಾಣೆಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ದೌರ್ಜನ್ಯ ಪ್ರಕರಣಗಳ ತುರ್ತು ವಿಲೇವಾರಿಗಾಗಿ ಠಾಣೆಗಳ ಸ್ಥಾಪನೆ ಮಾಡಲಾಗುತ್ತಿದೆ. …
Read More »
BigTv News
October 28, 2024
Breaking News
ನವದೆಹಲಿ: 2025 ರ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾಕುಂಭಕ್ಕೆ ಸಿದ್ಧತೆ ಜೋರಾಗಿದ್ದು, ಈ ಸಮಯದಲ್ಲಿ ಯಾವುದೇ ಯಾತ್ರಿಕರು ಬಾಯಾರಿಕೆಯಾಗದಂತೆ ನೋಡಿಕೊಳ್ಳಲು, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಜಾಗ್ರತೆ ವಹಿಸಿದೆ. ಸಂಪರ್ಕವಿರುವ ಹೊರ ಭಾಗದಲ್ಲಿ ಸಂಪರ್ಕಿಸುವ ಎಲ್ಲಾ ಅರಸ್ತೆಗಳು ಮತ್ತು ತೆರೆದ ಮೈದಾನಗಳ ಉದ್ದಕ್ಕೂ 200 ನೀರಿನ ಎಟಿಎಂಗಳು ಮತ್ತು 6,500 ಟ್ಯಾಪ್ ಸ್ಟ್ಯಾಂಡ್‌ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಆರಂಭಿಕ ಹಂತವು ಈಗಾಗಲೇ ನಡೆಯುತ್ತಿದೆ ಇದರ ಜವಾಬ್ದಾರಿಯನ್ನು …
Read More »
Shaikh BigTv
October 28, 2024
Breaking News, ಧಾರವಾಡ
ನವಲಗುಂದ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ನಾಗನೂರ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಾದ ಶಿವಾನಂದ ಹುಬ್ಬಳ್ಳಿ ಎತ್ತರ ಜಿಗಿತ ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ, ಗಂಗೋತ್ರಿ ಬನಹಟ್ಟಿ ಗುಂಡು ಎಸೆತದಲ್ಲಿ ಪ್ರಥಮ, ನಿವೇದಿತಾ ಕುಂಬಾರ 200 ಮೀಟರ್ ಓಟದಲ್ಲಿ ದ್ವಿತೀಯ ಮತ್ತು ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
Read More »
BigTv News
October 28, 2024
Breaking News, ವಿಜಯಪುರ
ವಿಜಯಪುರ: ಜಿಲ್ಲೆಯ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ಸಮಿತಿಯೊಂದನ್ನು ರಚಿಸಿ, 1964 ರಿಂದ 1974ರವರೆಗಿನ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ವಹಿಸುವಂತೆ ಸಚಿವ ಡಾ.ಎಂ.ಬಿ.ಪಾಟೀಲ್ ಸೂಚಿಸಿದರು. ನಗರದ ಸೋಲಾಪುರ ರಸ್ತೆಯಲ್ಲಿರುವ ಸಚಿವರ ಗೃಹ ಕಚೇರಿಯಲ್ಲಿ ಜಿಲ್ಲೆಯ ವಿವಿಧ ತಹಶೀಲ್ದಾರರು, ವಕ್ಫ್ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವಿಜಯಪುರ ಜಿಲ್ಲೆಯಾದ್ಯಂತ ರೈತರು ಸೇರಿದಂತೆ ಖಾಸಗಿ ಜಮೀನುಗಳ ಪೈಕಿ ಒಂದು ಎಕರೆಯೂ ಸಹ ವಕ್ಪ್‌ಗೆ …
Read More »
BigTv News
October 28, 2024
Breaking News, ನ್ಯೂಯಾರ್ಕ್
ನ್ಯೂಯಾರ್ಕ್: ತನ್ನ ವಿರುದ್ಧ ಇಸ್ರೇಲ್ ನಡೆಸಿದ ದಾಳಿ ಸಂಬಂಧ ತುರ್ತು ಸಭೆ ನಡೆಸುವಂತೆ ಇರಾನ್ ಮಾಡಿದ್ದ ಮನವಿಯ ಅನುಸಾರ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇಂದು (ಸೋಮವಾರ) ಮಧ್ಯಾಹ್ನ ಸಭೆ ಕರೆದಿದೆ. ಯುಎನ್‌ಎಸ್‌ಸಿ ಅಧ್ಯಕ್ಷತೆ ವಹಿಸಿಕೊಂಡಿರುವ ಸ್ವಿಟ್ಜರ್‌ಲ್ಯಾಂಡ್, ತುರ್ತು ಸಭೆ ಆಯೋಜನೆ ಬಗ್ಗೆ ಭಾನುವಾರ ಹೇಳಿಕೆ ನೀಡಿದೆ. ಇರಾನ್ ಮನವಿಯನ್ನು ರಷ್ಯಾ, ಚೀನಾ ಮತ್ತು ಅಲ್ಜೀರಿಯಾ ಬೆಂಬಲಿಸಿವೆ ಎಂದು ತಿಳಿಸಿದೆ. ಇದೇ ತಿಂಗಳ ಆರಂಭದಲ್ಲಿ ಇಸ್ರೇಲ್ ವಿರುದ್ಧ ಇರಾನ್ ಕ್ಷಿಪಣಿ ದಾಳಿ …
Read More »
BigTv News
October 28, 2024
Breaking News
ನವದೆಹಲಿ: ಅಕ್ಕಿ ಗಿರಣಿಗಾರರ ಕುಂದುಕೊರತೆ ನಿವಾರಣೆಗೆ ಕೇಂದ್ರ ಸರ್ಕಾರ ಹೊಸ ಆಯಪ್ ರೂಪಿಸಿದ್ದು, ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಈ ಆನ್ಲೈನ್ ಪೋರ್ಟಲ್ ಅನ್ನು ಘೋಷಿಸಿದ್ದಾರೆ. ಅಕ್ಕಿ ಗಿರಣಿಗಾರರು ಎದುರಿಸುವ ಸಮಸ್ಯೆಗಳಿಗೆ ಈ ಪೋರ್ಟಲ್ನಲ್ಲಿ ಪರಿಹಾರ ನೀಡುವ ವ್ಯವಸ್ಥೆ ಮಾಡಲಾಗಿದೆ. ಅಕ್ಕಿ ಗಿರಣಿಗಾರರಿಗೆ ಸಾರಿಗೆ ವೆಚ್ಚ, ಅಕ್ಕಿ ಖರೀದಿಸುವ ಪ್ರಕ್ರಿಯೆಯಲ್ಲಿ ಆಗುವ ವಿಳಂಬ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಈ ಪೋರ್ಟಲ್ನ ಉದ್ದೇಶವಾಗಿದೆ. ರೈಸ್ ಮಿಲ್ …
Read More »
BigTv News
October 28, 2024
Breaking News, ಗದಗ
ಗದಗ: ಕಪ್ಪತಗುಡ್ಡದಲ್ಲಿನ ಎಲ್ಲಾ 28 ಗಣಿಗಾರಿಕೆ ಪ್ರಸ್ತಾವನೆಗಳನ್ನು ತಿರಸ್ಕರಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾರಿಯಿದ್ದಾರೆ. ಇತ್ತೀಚೇಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಗಣಿಗಾರಿಕೆ ಪ್ರಸ್ತಾವನೆಗಳನ್ನು ಮುಂದೂಡಿದ್ದರು. ಇದೀಗ ಬಸವರಾಜ ಹೊರಟ್ಟಿ ಸಿಎಂಗೆ ಪತ್ರ ಬರೆದು ಕಟ್ಟುನಿಟ್ಟಿನ ಕ್ರಮ ಕೈಗೊಂಡು ಗಣಿಗಾರಿಕೆ ಪ್ರಸ್ತಾವನೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ವಾರ ತೋಂಟದಾರ್ಯ ಮಠಾಧೀಶರು, ಸಾಮಾಜಿಕ ಕಾರ್ಯಕರ್ತರು, ಪರಿಸರವಾದಿಗಳು ಡಿಸಿ ಮೂಲಕ ಸಿಎಂಗೆ …
Read More »
BigTv News
October 28, 2024
Breaking News
ವಡೋದರಾ: ಕಳೆದ ಒಂದು ದಶಕದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ವಿವಿಧ ಕ್ರಮಗಳ ಪರಿಣಾಮವಾಗಿ ಭಾರತದಲ್ಲಿ ರಕ್ಷಣಾ ಕ್ಷೇತ್ರ ಹುಲುಸಾಗಿ ಬೆಳೆಯುತ್ತಿದೆ. ಡಿಫೆನ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರದಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆ ಹೆಚ್ಚುತ್ತಿದೆ. ಕಳೆದ ಐದಾರು ವರ್ಷದಲ್ಲಿ 1,000 ಹೊಸ ಸ್ಟಾರ್ಟಪ್ಗಳು ಆರಂಭವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್ನ ವಡೋದರಾ ನಗರದಲ್ಲಿ ಟಾಟಾ ಏರ್ಕ್ರಾಫ್ಟ್ ಕಾಂಪ್ಲೆಕ್ಸ್ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ನರೇಂದ್ರ ಮೋದಿ, ಸರ್ಕಾರ ತೆಗೆದುಕೊಂಡ ವಿವಿಧ ಕ್ರಮಗಳ ಬಗ್ಗೆ ಮಾಹಿತಿ …
Read More »
BigTv News
October 28, 2024
Breaking News
ನವದೆಹಲಿ: ಕಳೆದ ಕೆಲ ವರ್ಷಗಳಿಂದ ಸಾವಿರಾರು ಮಂದಿ ದೇಶಾದ್ಯಂತ ಜನಗಣತಿ ಯಾವಾಗ ನಡೆಯುತ್ತೆ ಅನ್ನೋದನ್ನು ಕಾಯುತ್ತಿದ್ದಾರೆ. 2011ರಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರ ಕೊನೆಯದಾಗಿ ಜನಗಣತಿ ಮಾಡಿತ್ತು. ಇದೀಗ ಕೇಂದ್ರದ ಎನ್‌ಡಿಎ ಸರ್ಕಾರ ಜನಗಣತಿ ಮಾಡಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಕೇಂದ್ರ ಸರ್ಕಾರ ನಡೆಸುವ ಜನಗಣತಿಗೆ ಸಂಬಂಧಿಸಿದಂತೆ ಇದೀಗ ಪ್ರಮುಖ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಮುಂದಿನ ವರ್ಷದಿಂದ ದೇಶದಲ್ಲಿ ಜನಗಣತಿ ಆರಂಭವಾಗಬಹುದು ಎಂದು ಮೂಲಗಳು ತಿಳಿಸಿದ್ದು, ಜನಗಣತಿಯು ಮುಂದಿನ ವರ್ಷ …
Read More »
BigTv News
October 28, 2024
Breaking News, ಬೆಂಗಳೂರು
ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿಯ(ವಿಎಒ) ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವಿವಾರ ನಡೆಸಿದ ಲಿಖಿತ ಪರೀಕ್ಷೆ ಅತ್ಯಂತ ಸುಗಮವಾಗಿ ನಡೆದಿದ್ದು, ಶೇ.80ರಷ್ಟು ಮಂದಿ ಹಾಜರಾಗಿದ್ದಾರೆ. ಬೆಂಗಳೂರಿನ 88 ಕೇಂದ್ರ ಸೇರಿದಂತೆ ರಾಜ್ಯದ 1,173 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆದಿದೆ. ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡಿದ್ದರು. ಅವರಲ್ಲಿ ಶೇ.80ರಷ್ಟು ಮಂದಿ ಪರೀಕ್ಷೆಗೆ …
Read More »