BigTv News
October 27, 2024
Breaking News, ಬೆಂಗಳೂರು
ಬೆಂಗಳೂರು: ಮಹಾತಗಾಂಧೀಜಿಯವರು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿ ಶತಮಾನೋತ್ಸವ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅದ್ಧೂರಿ ಕಾರ್ಯ ಕ್ರಮವನ್ನು ಆಯೋಜಿಸಲು ಕಾಂಗ್ರೆಸ್ ತಯಾರಿ ನಡೆಸಿದ್ದು, ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಪಕ್ಷದ ಎಲ್ಲಾ ಶಾಸಕರು, ಸಂಸದರು, ಸಚಿವರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು. ಭಾನುವಾರ ರಜಾ ದಿನವೂ ಕೂಡ ಇಂದು ಬಿಡುವಿಲ್ಲದಂತೆ ಚಟುವಟಿಕೆಯಲ್ಲಿ ತೊಡಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಗೃಹಕಚೇರಿ ಕೃಷ್ಣಾದಿಂದಲೇ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ್ದಾರೆ. ಬಿಜೆಪಿ …
Read More »
BigTv News
October 27, 2024
Breaking News, ಚಿತ್ರದುರ್ಗ
ಚಿತ್ರದುರ್ಗ: ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷರಾಗಿ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷರಾಗಿ ಚಾಮರಸ ಮಾಲಿಪಾಟೀಲ, ಪ್ರಧಾನ ಕಾರ್ಯದರ್ಶಿಯಾಗಿ ರವಿಕಿರಣ್ ಪೂಣಚ್ಚ ಹಾಗೂ ಉಪಾಧ್ಯಕ್ಷರಾಗಿ ಕೆ.ಪಿ.ಭೂತಯ್ಯ ಪುನರಾಯ್ಕೆಯಾದರು. ಇಲ್ಲಿ ನಡೆದ ಸಂಘದ ರಾಜ್ಯ ಘಟಕದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಪ್ರಧಾನ ಕಾರ್ಯದರ್ಶಿಯಾಗಿ ಎನ್.ಡಿ.ವಸಂತಕುಮಾರ್, ಕಾರ್ಯಾಧ್ಯಕ್ಷರಾಗಿ ಜೆ.ಎಂ.ವೀರಸಂಗಯ್ಯ, ಎ.ಗೋವಿಂದರಾಜು ಮತ್ತು ಎ.ಎಂ.ಮಹೇಶ್‌ಪ್ರಭು ಆಯ್ಕೆಯಾದರು. ಖಜಾಂಚಿಯಾಗಿ ಪ್ರಸನ್ನ ಎನ್.ಗೌಡ, ಕಾರ್ಯದರ್ಶಿಗಳಾಗಿ ಗೋಪಾಲ ಪಾಪೇಗೌಡ, ಅರುಣ್‌ಕುಮಾರ್ ಕುರುಡಿ, ಸೂಗೂರಯ್ಯ …
Read More »
BigTv News
October 27, 2024
Breaking News, ಬೆಂಗಳೂರು
ಬೆಂಗಳೂರು: ವಕ್ಫ್ ಬೋರ್ಡ್ ಜೊತೆ ಸೇರಿಕೊಂಡು ರೈತರ 15 ಸಾವಿರ ಎಕರೆ ಭೂಮಿಯನ್ನು ಕಬಳಿಸಲು ಕಾಂಗ್ರೆಸ್ ಸರ್ಕಾರ ಹುನ್ನಾರ ನಡೆಸಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ರೈತರಿಗೆ ವಕ್ಫ್ ಬೋರ್ಡ್‌ನಿಂದ ನೋಟಿಸ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ವಕ್ಫ್ ಹೆಸರಲ್ಲಿ ರೈತರ ಭೂಮಿಯನ್ನು ಸರ್ಕಾರ ಕಿತ್ತುಕೊಳ್ಳಲು ಮುಂದಾಗಿದೆ. ಹರಿಜನರಿಗೆ ನೋಟಿಸ್ ಕೊಟ್ಟು ಅವರ ಭೂಮಿ ಕಿತ್ತುಕೊಳ್ಳುವ ಮೂಲಕ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ದೂರಿದರು. ಲೋಕಸಭೆಯಲ್ಲಿ …
Read More »
Shaikh BigTv
October 27, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರಿಂದ ಮೂರು ಜನ ಮನೆ ಕಳ್ಳರ ಬಂಧನ ಮಾಡುವುಲ್ಲಿ ಯಶಸ್ವಿಯಾಗಿದ್ದಾರೆ. 05 ಗ್ರಾಂ ಚಿನ್ನ, 200 ಗ್ರಾಂ ಬೆಳ್ಳಿ, ಒಂದು ಮೊಬೈಲ ಪೋನ ಹಾಗೂ ನಗದು ಹಣ ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಯುನುಸ್ ಅಬ್ದುಲ ಖಾದರ ಖಾಜಿ,ಸಿದ್ದಪ್ಪ ಯಮನಪ್ಪ ವಾಲ್ಮೀಕಿ, ಉಮೇಶ ಲಕ್ಷ್ಮಣ ಕೂಲಿ ನಾಗರಾಜ ಬಾಚಣಕಿ ವಶಪಡಿಸಿಕೊಂಡು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇತ್ತೀಚೆಗೆ ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯ ಆನಂದನಗರ ಘೋಡ್ಡೆ ಪ್ಲಾಟ ಮತ್ತು …
Read More »
BigTv News
October 27, 2024
Breaking News, ಬೆಂಗಳೂರು
ಬೆಂಗಳೂರು: ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ (ಪಿಎಸ್‌ಜಿಎಂಬಿವೈ)ಯಡಿ ಮನೆ ಚಾವಣಿ ಮೇಲೆ ಸೌರ ಫಲಕ ಅಳವಡಿಸಿಕೊಂಡ ಫಲಾನುಭವಿಗಳಿಗೆ ಉತ್ತೇಜಿಸಲು ಕೇಂದ್ರ ಸರ್ಕಾರ ಇನ್ನೊಂದು ದಿಟ್ಟ ಹೆಜ್ಜೆಯಿಡುತ್ತಿದೆ. ಸೂರಿನ ಮೇಲೆ ಸೌರಶಕ್ತಿಯಿಂದ ಉತ್ಪಾದಿತ ಮನೆಗೆ ಬಳಸಿಕೊಂಡ ನಂತರವೂ ಹೆಚ್ಚುವರಿಯಾಗಿ ಲಭ್ಯ ವಿದ್ಯುತ್‌ನ್ನು ಎಸ್ಕಾಂಗಳು ಖರೀದಿಸುವುದು ಶೀಘ್ರ ಕಡ್ಡಾಯವಾಗಲಿದೆ. ಇದಕ್ಕಾಗಿ ಅಧಿಕಾರಿ ವರ್ಗದಮಟ್ಟದಲ್ಲಿ ಚರ್ಚೆಗಳು ನಡೆದಿವೆ. ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಲು ಸಂಬಂಧಿಸಿದ ಕಾಯ್ದೆಗೆ ತಿದ್ದುಪಡಿ ಕರಡು ಸಿದ್ಧವಾಗುತ್ತಿದೆ. ಇಷ್ಟರಲ್ಲೇ ಅಂತಿಮವಾಗಲಿದೆ ಎಂದು …
Read More »
BigTv News
October 27, 2024
Breaking News, ತುಮಕೂರು
ತುಮಕೂರು: ಜಿಲ್ಲೆಯ ಗುಬ್ಬಿ ರೈಲ್ವೆ ನಿಲ್ದಾಣವನ್ನು 16.73 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು. ಗುಬ್ಬಿ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಬ್ಬಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಈಗಾಗಲೇ ನೀಲಿ ನಕ್ಷೆ ಸಿದ್ಧಪಡಿಸಲಾಗಿದೆ. ರೈಲ್ವೆ ನಿಲ್ದಾಣದ ಕಾಮಗಾರಿ ಪೂರ್ಣಗೊಂಡ ಬಳಿಕ ನಿಲ್ದಾಣಕ್ಕೆ ಶ್ರೀ ಚನ್ನಬಸವೇಶ್ವರ ಸ್ವಾಮಿಗಳ ಹೆಸರನ್ನು ನಾಮಕರಣ …
Read More »
BigTv News
October 27, 2024
Breaking News
ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 70 ವರ್ಷ ದಾಟಿದವರಿಗೆ ವಿಶೇಷ ಆರೋಗ್ಯ ವಿಮೆ ಘೋಷಣೆ ಮಾಡಿದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ನಾಗರಿಕರಿಗೆ ಅವರ ಆದಾಯದ ಸ್ಥಿತಿಯನ್ನು ಲೆಕ್ಕಿಸದೆ ಆರೋಗ್ಯ ರಕ್ಷಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 29 ರಂದು ಬಿಡುಗಡೆ ಮಾಡುವ …
Read More »
BigTv News
October 27, 2024
Breaking News, ಬಳ್ಳಾರಿ
ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ-2024ಕ್ಕೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, ನವೆಂಬರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ. ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ದಿನದಿಂದ ಇಲ್ಲಿಯವರೆಗೆ ಒಟ್ಟು 7 ಅಭ್ಯರ್ಥಿಗಳು ಒಟ್ಟು 13 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್ ಹೆಚ್. ಡಿ. …
Read More »
BigTv News
October 27, 2024
Breaking News
ನವದೆಹಲಿ: ಪ್ರಧಾನಿ ನರೇಂದ್ರಮೋದಿ ಅವರು ಪದಾತಿ ದಳದ ಎಲ್ಲಾ ಶ್ರೇಣಿಗಳು ಮತ್ತು ಅನುಭವಿಗಳ ಅದಮ್ಯ ಮನೋಭಾವ ಮತ್ತು ಧೈರ್ಯವನ್ನು ಶ್ಲಾಘೀಸಿದ್ದಾರೆ. ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಅವರು, ಯಾವುದೇ ಪ್ರತಿಕೂಲತೆಯನ್ನು ಎದುರಿಸಲು ಯಾವಾಗಲೂ ದೃಢವಾಗಿ ನಿಲ್ಲುತ್ತಾರೆ, ರಾಷ್ಟದ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸುತ್ತಾರೆ ಎಂದು ಹೇಳಿದ್ದಾರೆ. ಪಾಕಿಸ್ತಾನ ಸೇನೆಯ ನೆರವಿನಿಂದ ಜಮ್ಮು ಮತ್ತು ಕಾಶ್ಮೀರದ ಜನರನ್ನು ಪಾಕಿಸ್ತಾನಿ ಕಬೈಲಿ ರೈಡರ್‌ಗಳ ವಿನ್ಯಾಸದಿಂದ ರಕ್ಷಿಸಲು ಅಕ್ಟೋಬರ್ 27, 1947ರಂದು ಸಿಖ್ ರೆಜಿಮೆಂಟ್‌ನ 1ನೇ …
Read More »
BigTv News
October 27, 2024
Breaking News, ಬೆಂಗಳೂರು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಆಯೋಜಿಸಿದ್ದ ಹಳ್ಳಿಕಾರ ಸಮುದಾಯದ ಸಮಾವೇಶ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹಳ್ಳಿಕಾರರ ಸಂಘದ ಉಪಾಧ್ಯಕ್ಷರಾದ ಕೆ.ಎಂ.ನಾಗರಾಜು ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪಮೋಯ್ಲಿ,ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸಚಿವರುಗಳಾದ ರಾಮಲಿಂಗ ರೆಡ್ಡಿ, …
Read More »