Breaking News

Breaking News

ರಾಜ್ಯದಲ್ಲಿ ಆಗಿರುವ ಮಳೆ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆ ಹಾನಿ ಕುರಿತು ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶನಿವಾರ) ವಿಡಿಯೊ ಸಂವಾದ ನಡೆಸಿದರು. ಮಳೆಯಿಂದಾಗಿ ಉಂಟಾಗಿರುವ ನಷ್ಟದ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಸಂವಾದ ನಡೆಸಿ ಮಾಹಿತಿ ಪಡೆದರು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಸಚಿವರ …

Read More »

ಗ್ಯಾರಂಟಿ ಯೋಜನೆಗಳ ಲಾಭ ಶೇ.95 ರಷ್ಟು ಜನರಿಗೆ ಲಭಿಸಿದೆ: ಸಂಸದ ಸಾಗರ್‌ ಖಂಡ್ರೆ

ಔರಾದ್: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಲಾಭ ಶೇ 95ರಷ್ಟು ಜನರಿಗೆ ತಲುಪಿದೆ ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆ ಜಾರಿಯಿಂದ ಮಹಿಳೆಯರು ತುಂಬಾ ಖುಷಿಯಲ್ಲಿದ್ದಾರೆ ಇದು ಅವರ ಸ್ವಾವಲಂಬಿ ಬದುಕಿಗೆ ಪೂರಕವಾಗಿದೆ ಇಡೀ ದೇಶದಲ್ಲೇ ಈ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದು …

Read More »

ಕೆಲಸ ಮಾಡುತ್ತಿದ್ದ ಹೋಟೆಲ್ ಗೆ ಕನ್ನ ಹಾಕಿದ ಭೂಪ

ಹುಬ್ಬಳ್ಳಿ: ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ಅಡುಗೆಯಾಳು, ಹೋಟೆಲ್ ನಲ್ಲಿನ ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಶಾಂತಿನಗರದ ಟೇಸ್ಟಿ ಟಿಫಿನ್ಸ್ ನಲ್ಲಿ ಕಳ್ಳತನವಾಗಿದ್ದು, ಅಡುಗೆಯಾಳು ಶಂಭು ಮುದ್ದೆಗೌಡ‌ರ್ (28) ಎಂಬಾತನೇ ಚೋರ ಶಿಖಾಮಣಿ. ಇನ್ನು ಕಳೆದ ಒಂದು ವಾರದಿಂದ ಹೋಟೆಲ್ ನ್ನು ಬಂದ್ ಮಾಡಲಾಗಿತ್ತು. ಈ ವೇಳೆ ಅಡುಗೆಯಾಳು ಶಂಭು, ಹೋಟೆಲ್ ನಲ್ಲಿದ್ದ ಕುಕ್ಕರ್, ಗ್ಯಾಸ್, ಫ್ರಿಡ್ಜ್, ಹೆಂಚು, ಹೀಟ‌ರ್ …

Read More »

ತುಮಕೂರು: ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಯೋಜನೆಯಡಿ ಕೊಳಚೆ ನೀರು ಸಂಸ್ಕರಣೆಗೆ ₹135 ಕೋಟಿ ಮಂಜೂರು

ತುಮಕೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಲಶುದ್ಧಿ ಅಭಿಯಾನದಡಿ ಕೊಳಚೆ ನೀರಿನ ಸಂಸ್ಕರಣೆ, ಸ್ವಚ್ಛ ಭಾರತ್ ಮಿಷನ್, ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಯೋಜನೆಯಲ್ಲಿ ₹135.23 ಕೋಟಿ ಅನುದಾನ ಮಂಜೂರು ಮಾಡಲಾಗಿದೆ ಎಂದು ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ (ಕೆಯುಐಡಿಎಫ್‍ಸಿ) ವ್ಯವಸ್ಥಾಪಕ ನಿರ್ದೇಶಕ ಶರತ್ ತಿಳಿಸಿದರು. ನಗರದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆಯಲ್ಲಿ ಈ ಮಾಹಿತಿ ನೀಡಿದರು. ತುಮಕೂರು ಮಹಾನಗರ ಪಾಲಿಕೆಗೆ ₹50 ಕೋಟಿ …

Read More »

ಉಪಚುನಾವಣೆ ನಂತರ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಬಿ.ವೈ ವಿಜಯೇಂದ್ರ

ಕೊಟ್ಟೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಂತರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಅವರು ರಾಜೀನಾಮೆ ನೀಡುವುದನ್ನು ಯಾವುದೇ ಶಕ್ತಿ ತಡೆ ಯಲಾರದು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಪೆರೋಲ್ ಮೇಲೆ ಹೊರಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಉಜ್ಜಯನಿ ಸದ್ದರ್ಮ ಪೀಠಕ್ಕೆ ಆಗಮಿಸಿ ಜಗದ್ಗುರುಗಳಿಂದ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಡಾ ಹಗರಣದ ತನಿಖೆ ತೀವ್ರಗತಿಯಲ್ಲಿ ಸಾಗಿದೆ ಇದರ ಸತ್ಯಾಸತ್ಯತೆ ಸಿದ್ದರಾಮಯ್ಯ ಅವರ …

Read More »

ಹರಿಯಾಣದಲ್ಲಿ ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಹರಿಯಾಣ: ಹರಿಯಾಣದ ಗುರುಗ್ರಾಮದ ಸರಸ್ವತಿ ಎನ್ಕ್ಲೇವ್ನಲ್ಲಿರುವ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದರ ಪರಿಣಾಮವಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಎಲ್ಲರೂ ಮೂಲತಃ ಬಿಹಾರ ಮೂಲದವರು. ಇಂದು ಮುಂಜಾನೆ 12:15 ರ ಸುಮಾರಿಗೆ ಈ ಘಟನೆ ನಡೆದಿದ್ದು, ಪೊಲೀಸರು, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ನೊಂದಿಗೆ ತಕ್ಷಣ ಸ್ಥಳಕ್ಕೆ ಆಗಮಿಸಿದರು. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಕೌನ್ಸಿಲರ್ ಬ್ರಹ್ಮ ಯಾದವ್ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಆರ್ಥಿಕ ನೆರವು ಸೇರಿದಂತೆ ಸಾಧ್ಯವಿರುವ …

Read More »

ಶಿಗ್ಗಾಂವಿ ಕ್ಷೇತ್ರದಲ್ಲೇ ನಮಗೆ ಹೆಚ್ಚು ಮತ ಬಂದಿದೆ. ನಮ್ಮ ಅಭ್ಯರ್ಥಿ ಸಮರ್ಥರು ಇದ್ದಾರೆ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ 64 ಸಾವಿರ ಮತ ಪಡೆದಿದ್ದರು. ಆಗ ಬಸವರಾಜ ಬೊಮ್ಮಾಯಿ ಅವರು ಗೆದ್ದಿರಬಹುದು. ಆದರೆ ನಮ್ಮಅಭ್ಯರ್ಥಿ ಒಳ್ಳೆಯ ಫೈಟ್ ಕೊಟ್ಟಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲೇ ನಮಗೆ ಹೆಚ್ಚು ಮತ ಬಂದಿದೆ. ನಮ್ಮ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಸಮರ್ಥರಾಗಿದ್ದಾರೆ. ನಮಗೆ ಭರತ್ ಬೊಮ್ಮಾಯಿ ಸಮರ್ಥ …

Read More »

ಮುತ್ತಗಿ ಗ್ರಾಮದ ತಾಲೂಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಭೇಟಿ

ಕಲಘಟಗಿ: ಕಲಘಟಗಿ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಗ್ರಾಮದ ಎಪ್ಪತ್ತಕ್ಕೂ ಅಧಿಕ ಜನರು ವಾಂತಿಭೇದಿಯಿಂದ ಆಸ್ವಸ್ಥಗೊಂಡಿದ್ದು ಇಂದು ಜಿಲ್ಲಾಧಿಕಾರಿಗಳು ಮುತ್ತಗಿ ಗ್ರಾಮಕ್ಕೆ ಆಗಮಿಸಿ ಗ್ರಾಮದ ಒಣಿಗಳಲ್ಲಿ ಭೇಟಿ ನೀಡಿ ಸಾರ್ವಜನಿಕರಲ್ಲಿ ಮಾಹಿತಿ ಪಡೆದರು. ನಂತರ ಕಲಘಟಗಿ ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ ದಾಖಲಾದ ರೋಗಿಗಳ ಅರೋಗ್ಯ ವಿಚಾರಿಸಿದರು.

Read More »

ಕರ್ತವ್ಯದಲ್ಲಿ ನಿರ್ಲಕ್ಷತೆ ವಹಿಸಿದ್ದರಿಂದ ಪಿಡಿಓ ಪ್ರವೀಣಕುಮಾರ ಗಣಿ ಅಮಾನತ್ತು

ಕಲಘಟಗಿ: ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಕೆರೆಗಳಿಂದ ಗ್ರಾಮಗಳಿಗೆ ಬರುತ್ತಿರುವ ನೀರು ಕಲುಷಿತಗೊಂಡಿರುವುದರಿಂದ, ಮುತ್ತಗಿ ಗ್ರಾಮದ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವುದು ಹಾಗೂ ಕುಡಿಯುವ ನೀರಿಗೆ ಕ್ಲೋರಿನೇಷನ್ ಮಾಡಿ ಸ್ವಚ್ಛ ಹಾಗೂ ಶುದ್ಧವಾದ ನೀರನ್ನು ಗ್ರಾಮದ ಸಾರ್ವಜನಿಕರಿಗೆ ಒದಗಿಸಲು ಮುತ್ತಗಿ ಗ್ರಾಮ ಪಂಚಾಯತಿಯ ಪಿಡಿಓ ಪ್ರವೀಣಕುಮಾರ ಗಣಿ ಇವರಿಗೆ ದೂರವಾಣಿ ಮುಖಾಂತರ ಸೂಚಿಸಲಾಗಿತ್ತು. ಶುದ್ಧವಾದ ಕುಡಿಯುವ ನೀರನ್ನು ಗ್ರಾಮ ಪಂಚಾಯತಿಯಿಂದ ಸರಬರಾಜು ಮಾಡದೇ ಇರುವುದರಿಂದ ಕಲುಷಿತ ನೀರನ್ನು ಸೇವಿಸಿ, ೪೪ …

Read More »

ಕುಮಾರಸ್ವಾಮಿ ಗೆ ವ್ಯಂಗ್ಯ ಮಾಡಿದ ಸಿಎಂ

ಹುಬ್ಬಳ್ಳಿ: ಉಪಚುನಾವಣೆಗೆ ಬಹಳಷ್ಟು ತಯಾರಿ ಮಾಡಿದ್ದೇವೆ. ಮೂರು ಕ್ಷೇತ್ರದಲ್ಲಿ ಜನ ಆಶೀರ್ವಾದ ಮಾಡ್ತಾರೆ. ಕುಮಾರಸ್ವಾಮಿ ಅವರ ಭಾವನಾತ್ಮಕವಾಗಿ ಮಾತನಾಡೋದು ಅಳೋದನ್ನ ನೋಡಿ ಜನರಿಗೆ ಸಾಕಾಗಿದೆ. ಇದನ್ನೆಲ್ಲ ಜನ ನೋಡಲ್ಲ, ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಕುರಿತು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಶಿಗ್ಗಾವಿಯಲ್ಲಿ ಬಂಡಾಯವಾಗಿ ಅಜ್ಜಂಪೀರ್ ಖಾದ್ರಿ ನಾಮಪತ್ರ ಸಲ್ಲಿಸಿದ್ದಾರೆ. ಪಠಾಣ್ ಅವರಿಗೆ ಈಗಾಗಲೇ ಟಿಕೆಟ್ ಕೊಟ್ಟಿದ್ದೇವೆ. ಇಬ್ಬರಿಗೆ ಕೊಡಲು ಆಗುವುದಿಲ್ಲ ಎಂದರು.

Read More »