Breaking News

Breaking News

ಹುಬ್ಬಳ್ಳಿ ಧಾರವಾಡ ಕಮಿಷನ‌ರ್ ಎನ್ ಶಶಿಕುಮಾರ್ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಅವಳಿ ನಗರದ ಪೊಲೀಸ್ ಕಮಿಷನ‌ರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ ಶಶಿಕುಮಾರ್ ಅವರ ಆರೋಗ್ಯದಲ್ಲಿ ಧಿಡೀರ್ ಏರುಪೇರಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕಳೆದ ಮೂರು ತಿಂಗಳಿಂದ ಅವಳಿ ನಗರದ ಕಮಿಷನ‌ರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಮಿಷನ‌ರ್ ಎನ್ ಶಶಿಕುಮಾ‌ರ್ ಅವಳಿ ನಗರದಲ್ಲಿರುವ ಎಲ್ಲ ಪ್ರದೇಶಗಳಿಗೂ ಕೂಡಾ ಕಾಲ್ನಡಿಗೆಯಲ್ಲಿ ಪ್ರತಿದಿನ ನಾಲ್ಕರಿಂದ ಐದು ಕಿ.ಲೋ ಮೀಟ‌ರ್ ಓಡಾಡಿ …

Read More »

ಪತ್ರಕರ್ತ ಬಸವರಾಜ ಎಸ್‌ ದೀಪಾವಳಿ ಅವರಿಗೆ ಶ್ರೀ ಮಹರ್ಷಿ ವಾಲ್ಮೀಕಿ ತಾಲೂಕ ಪ್ರಶಸ್ತಿ ಪ್ರಧಾನ

ಕುಂದಗೋಳ: ಪತ್ರಕರ್ತ ಬಸವರಾಜ ಎಸ್‌ ದೀಪಾವಳಿ ಅವರಿಗೆ ಸವಾಯಿ ಗಂಧರ್ವ ಸಭಾ ಭವನದಲ್ಲಿ ಇತ್ತಿಚೆಗೆ ನಡೆದ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ತಾಲೂಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಸಾಧನೆಗೈದ ಯರೇಬೂದಿಹಾಳ ಗ್ರಾಮದ ವಾಲ್ಮೀಕಿ ಸಮಾಜದ ಮತ್ತು ಕಾರ್ಯನಿರತ ಪತ್ರಕರ್ತ ಸಂಘದ ಸಹ ಕಾರ್ಯದರ್ಶಿಗಳಾದ ಬಸವರಾಜ ಎಸ್‌. ದೀಪಾವಳಿ ಅವರಿಗೆ ತಾಲೂಕ ದಂಡಾಧಿಕಾರಿ ರಾಜು ಮಾವರಕರ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ …

Read More »

ಮೃತ ಅಂಜಲಿ ಕುಟುಂಬಕ್ಕೆ ಸಿಎಂ ಐದು ಲಕ್ಷ ರೂಪಾಯಿ ಚೆಕ್‌ ವಿತರಣೆ

ಹುಬ್ಬಳ್ಳಿ : ನಗರದ ವಿಮಾನ ನಿಲ್ದಾಣದಲ್ಲಿಂದ ಮೃತ ಅಂಜಲಿ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ನವರು ಐದು ಲಕ್ಷ ರೂಪಾಯಿ ಚೆಕ್‌ ವಿತರಿಸಿದರು. ಮೇ 15ರಂದು ಅಂಜಲಿ ಕೊಲೆಯಾಗಿದ್ದಳು. ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಗಿರೀಶ್ ಅಂಜಲಿ ಮನೆಯಲ್ಲಿ ಅಂಜಲಿಯನ್ನು ಚಾಕುವಿನಿಂದ ಕೊಂದಿದ್ದನು. ಕೆಲ ದಿನಗಳ ಹಿಂದೆ ಅಂಜಲಿ ಕುಟುಂಬಕ್ಕೆ ಸರ್ಕಾರ ಪರಿಹಾರ ಬಿಡುಗಡೆ ಮಾಡಿತ್ತು. ಹುಬ್ಬಳ್ಳಿಗೆ ಸಿಎಂ ಆಗಮನದ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಮಾಡಿದರು.

Read More »

ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2 ಲಕ್ಷ ಹುದ್ದೆಗಳು ಹಂತ ಹಂತವಾಗಿ ಭರ್ತಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡು ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್‌ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಲ್ಯಾಣ ಪಥ ಕಾರ್ಯಕ್ರಮದಡಿ ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ 1000 ಕೋಟಿ …

Read More »

ರಾಜ್ಯದಲ್ಲಿ ಮಳೆ ಹಾನಿ ಕುರಿತು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಮಳೆಯಿಂದ ಹಾನಿಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯದಲ್ಲಿ ಮಹತ್ವದ ಸಭೆ ನಡೆಯಲಿದೆ. ಮಳೆಯಿಂದ ಹಾನಿಗೊಳಗಾದ ಜಿಲ್ಲೆಯ ಜಿಲ್ಲಾಧಿಕಾರಿಗಳು, ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಮಳೆ ಹಾನಿ, ಸಮಸ್ಯೆಗಳ ಕುರಿತಾಗಿ ಮಾಹಿತಿ ಪಡೆದು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸೂಚನೆ ನೀಡಲಿದ್ದಾರೆ. ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ …

Read More »

ರಾಜ್ಯದಲ್ಲಿ ಬೆಳೆ ಸಮೀಕ್ಷೆ ನಡೆಸಿ 15 ದಿನಗಳೊಳಗೆ ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

ದಾವಣಗೆರೆ : ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಜಗಳೂರು …

Read More »

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಪಕ್ಷ ಉಪಚುನಾವಣೆಗೆ ಸನ್ನದ್ಧವಾಗಿದ್ದು , ಮೂರು ಕ್ಷೇತ್ರಗಳಿಗೆ ಸಮರ್ಥರಾದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ ಎಂದರು. ಕೇಂದ್ರ ಸಚಿವ ಕುಮಾರಸ್ವಾಮಿಯವರ ಭಾವನಾತ್ಮಕ ಚುನಾವಣಾ ಭಾಷಣ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಭಾವನಾತ್ಮಕ …

Read More »

ಹುಬ್ಬಳ್ಳಿಗೆ ಆಗಮಿಸಿದ ಸಿಎಂ

ಹುಬ್ಬಳ್ಳಿ: ಇಂದು ಬೆಳಗಾವಿಯ ಕಿತ್ತೂರು ಉತ್ಸವದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹಿನ್ನೆಲೆ, ಜಿಲ್ಲಾಡಳಿತದಿಂದ ಸ್ವಾಗತ ಮಾಡಿಕೊಂಡು ಅವರಿಗೆ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು.

Read More »

ಅ.27 ರಿಂದ 3 ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿರುವ ಸ್ಪೇನ್ ರಾಷ್ಟ್ರಪತಿ ಪೆಟ್ರೊ ಸ್ಯಾಂಷೆಝ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ರಾಷ್ಟ್ರಪತಿ ಪೆಟ್ರೊ ಸ್ಯಾಂಷೆಝ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ. ಪತ್ನಿ ಬೆಗೋನಾ ಗೋಮೆಝ್ ಜತೆಗೂಡಿ ಪೆಟ್ರೊ ಅವರು ಅ.27ರಿಂದ 29ರವರೆಗೆ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಸ್ಪೇನ್ ರಾಷ್ಟ್ರಪತಿಯೊಬ್ಬರು 18 ವರ್ಷ ಬಳಿಕ ಭಾರತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದೇ ವೇಳೆ, ಗುಜರಾತ್‌ನ ವಡೋದರಾದಲ್ಲಿ ಸ್ಥಾಪನೆ ಆಗಿರುವ ಸಿ295 ವಿಮಾನ ಜೋಡಣಾ ಘಟಕದ ಉದ್ಘಾಟನೆ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ. ಆತ್ಮನಿರ್ಭರ ಭಾರತದ …

Read More »

ದಾವಣಗೆರೆ: ಹಳ್ಳ ದಾಟುವ ವೇಳೆ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ ಸಾವು

ದಾವಣಗೆರೆ: ಹಳ್ಳ ದಾಟಲು ಹೋಗಿದ್ದ ವ್ಯಕ್ತಿಯೊಬ್ಬ ನೀರು ಪಾಲಾದ ಘಟನೆ ಜಗಳೂರು ತಾಲೂಕಿನ ಸಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ತಾಲೂಕಿನ ಭರಮಸಾಗರ ಹೋಬಳಿಯ ಅರಳಿಕಟ್ಟೆ ಗ್ರಾಮದ ಜಯಣ್ಣ (45) ಮೃತಪಟ್ಟ ವ್ಯಕ್ತಿ. ಈ ಬಾರಿ ಭಾರೀ ಮಳೆ ಸುರಿದಿದ್ದು, ಜಗಳೂರು ತಾಲೂಕಿನ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದವು. ಬಹುತೇಕ ಕೆರೆಗಳು ಭರ್ತಿಯಾಗಿದ್ದು, ಈ ನಡುವೆ ಸಂಗೇನಹಳ್ಳಿ ಗ್ರಾಮದಲ್ಲಿರುವ ತನ್ನ ಸೊಸೆಯ ಮನೆಗೆ ಬಂದಿದ್ದ ಜಯಣ್ಣ ಅವರು, ಹಳ್ಳ ದಾಟುವ ವೇಳೆ …

Read More »