BigTv News
October 25, 2024
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಅವಧಿಯಲ್ಲಿ 56, 993 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದ್ದು, 21 ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು, ಇಂದು ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅತಿವೃಷ್ಟಿಯ ಪರಿಣಾಮಗಳ ಬಗ್ಗೆ ನಾಳೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಯಲಿದೆ. ಜಂಟಿ ಸಮೀಕ್ಷಾ ವರದಿಗಳ ಪರಿಶೀಲನೆಯ ನಂತರ …
Read More »
BigTv News
October 25, 2024
Breaking News
ನವದೆಹಲಿ: ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ನೀಡುವ ಸಾಲದ ಮಿತಿಯನ್ನು ₹ 20 ಲಕ್ಷಕ್ಕೆ ಹೆಚ್ಚಿಸಿದ್ದು, ದೇಶದಾದ್ಯಂತ ಉದ್ಯಮಶೀಲತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಪಿಟಿಐ ವರದಿ ಮಾಡಿದೆ. ಕಾರ್ಪೊರೇಟ್ ಅಲ್ಲದ ಕೃಷಿಯೇತರ ಸಣ್ಣ ಮತ್ತು ಅತಿಸಣ್ಣ ಉದ್ಯಮಿಗಳಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ. ಯೋಜನೆಯ ಆಶಯವನ್ನು ಮತ್ತಷ್ಟು ವಿಸ್ತರಿಸಲು ಸಾಲದ ಮಿತಿಯನ್ನು ಹೆಚ್ಚಿಸಲಾಗಿದೆ ಎಂದು ಕೇಂದ್ರ …
Read More »
BigTv News
October 25, 2024
Breaking News, ದಾವಣಗೆರೆ
ದಾವಣಗೆರೆ: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ. 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು, ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ 15 ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು. ಅವರು ಇಂದು ಜಗಳೂರು …
Read More »
BigTv News
October 25, 2024
Breaking News, ದಾವಣಗೆರೆ
ದಾವಣಗೆರೆ: ಕೇಂದ್ರ ಸರಕಾರವು ಶಿಕ್ಷಣ ಸಚಿವಾಲಯಕ್ಕಾಗಿ ಸಲಹಾ ಸಮಿತಿಯನ್ನು ರಚನೆ ಮಾಡಿದ್ದು, ಈ ಸಮಿತಿಗೆ ಸದಸ್ಯರಾಗಿ ಕರ್ನಾಟಕದಿಂದ ಲೋಕಸಭಾ ಸದಸ್ಯರ ಪೈಕಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರನ್ನು ನೇಮಕ ಮಾಡಲಾಗಿದೆ. ಸಮಿತಿಗೆ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್, ಶಿಕ್ಷಣ ಸಚಿವಾಲಯದ ರಾಜ್ಯ ಸಚಿವರಾದ ಜಯಂತ್ ಚೌಧರಿ ಹಾಗೂ ಕೌಶಲ್ಯ ಅಭಿವೃದ್ದಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ರಾಜ್ಯ ಸಚಿವರಾದ ಮಜುಂದಾರ್ ಅವರುಗಳು ಅಧ್ಯಕ್ಷರಾಗಿದ್ದಾರೆ. ಈ ಸಮಿತಿಯಲ್ಲಿ 8 ಲೋಕಸಭಾ ಸದಸ್ಯರು …
Read More »
Shaikh BigTv
October 25, 2024
Breaking News, ಧಾರವಾಡ
ಕುಂದಗೋಳ : ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ವೀರರಾಣಿ ಚೆನ್ನಮ್ಮನ 200ನೇಯ ಜಯಂತ್ಯುತ್ಸವ ಮತ್ತು ವಿಜಯೋತ್ಸವ ಕಾರ್ಯಕ್ರಮವು ನಾಳೆ ಅ.26 ರಂದು ಸವಾಯಿ ಗಂಧರ್ವ ಸ್ಮಾರಕ ಭವನ ಕುಂದಗೋಳದಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮವನ್ನು ಪಾವನ ದಿವ್ಯ ಸಾನಿಧ್ಯವನ್ನು ಪ್ರಥಮ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳು, ದಿವ್ಯ ಸಾನಿಧ್ಯವನ್ನು ಷ.ಬ.ಶ್ರೀ ಶಿತಿಕಂಠೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಪಂಚಗ್ರಹ ಹಿರೇಮಠ, ಶಿವಾನಂದ ಮಹಾಸ್ವಾಮಿಗಳು ಶಿವಾನಂದ ಮಠ, ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರ, …
Read More »
BigTv News
October 25, 2024
Breaking News, ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ: ಸರ್ಕಾರವು ಈ ಬಾರಿ ಬರಗಾಲದ ಕಾರಣ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಬರಗಾಲದಲ್ಲಿಯೂ ಬಿಸಿಯೂಟ ನೀಡಿತ್ತು, ವಿದ್ಯಾರ್ಥಿಗಳು ರಜೆ ಇದ್ದರೂ ಬಿಸಿಯೂಟಕ್ಕಾಗಿ ಶಾಲೆಗೆ ಬರುತ್ತಿದ್ದರು. ಹೀಗೆ ಬರದಲ್ಲಿಯೂ ಬಿಸಿಯೂಟವನ್ನು ತಯಾರಿಸಿದ ಸಿಬ್ಬಂದಿಗೆ ಮಾತ್ರ ಇಲ್ಲಿಯವರೆಗೂ ಆ ಎರಡು ತಿಂಗಳ ಗೌರವಧನವನ್ನು ಸರ್ಕಾರ ಪಾವತಿಸಿಲ್ಲ. ಏಪ್ರಿಲ್ ಮತ್ತು ಮೇ ತಿಂಗಳ ಗೌರವಧನ ಈ ಬಾರಿ ಬರುತ್ತದೆ ಮುಂದಿನ ಬಾರಿ ಬರುತ್ತದೆ ಎಂದು ಪ್ರತಿ ತಿಂಗಳೂ ಜಿಲ್ಲೆಯ ಬಿಸಿಯೂಟ ಸಿಬ್ಬಂದಿ ಕಾಯುತ್ತಲೇ ಇದ್ದಾರೆ. …
Read More »
Shaikh BigTv
October 25, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಮಹಾರಾಷ್ಟ್ರ ಚುನಾವಣೆ ನಂತರ ರಾಜ್ಯ ಸರಕಾರ ಬೀಳಲಿದೆ ಎಂದು ಹೇಳುವವರ ಬುದ್ದಿ ಭ್ರಮಣೆಯಾಗಿದೆ. ಅವರು ತಿರುಕನ ಕನಸು ಕಾಣುತ್ತಿದ್ದಾರೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಚಿವ ಈಶ್ವರ ಖಂಡ್ರೆ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದುರಾಡಳಿತ ನಡೆಸಿದವರಿಗೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎನ್ನುವ ಹಪಾಹಪಿಯಲ್ಲಿದ್ದಾರೆ. ಅಧಿಕಾರ ದುರ್ಬಳಿಕೆ ಮಾಡಿಕೊಂಡವರಿಗೆ ಅಧಿಕಾರ ಬೇಕಾಗಿದೆ. ಆದರೆ ನಮ್ಮ ಪಕ್ಷದ ೧೩೬ ಶಾಸಕರು ಒಗ್ಗಟ್ಟಾಗಿದ್ದಾರೆ. ನಮ್ಮ ಸರಕಾರ ಸುಭದ್ರವಾಗಿ ಇರಲಿದೆ ಎಂದರು.
Read More »
BigTv News
October 25, 2024
Breaking News, ಚಿತ್ರದುರ್ಗ
ಚಿತ್ರದುರ್ಗ: ಬಿಜೆಪಿ – ಜೆಡಿಎಸ್ ನಾಯಕರಿಗೆ ರಾಜ್ಯದ ರೈತರ ಪರ ನಿಜವಾದ ಕಾಳಜಿ ಇದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಳ ಮಾಡಿಸಲಿ, ಓಬಿರಾಯನ ಮಾನದಂಡ ಇಟ್ಟುಕೊಂಡು ಬಿಡಿಗಾಸು ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಅಸಮಧಾನ ವ್ಯಕ್ತಪಡಿಸಿದರು. ಇಂದು (ಅ.25) ಚಿತ್ರದುರ್ಗ ಜಿಲ್ಲೆಗೆ ಮಳೆಯಿಂದ ಹಾನಿಗೊಳಗಾದ ಬೆಳೆ ಸಮೀಕ್ಷೆಗೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು ರಾಜ್ಯ ಸರ್ಕಾರ ರೈತರ ಪರವಾಗಿಲ್ಲ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ …
Read More »
BigTv News
October 25, 2024
Breaking News, ಬೀದರ್
ಬೀದರ್: ಸಾಲದ ಬಾಧೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ ತಾಲೂಕಿನಲ್ಲಿ ನಡೆದಿದೆ. ಕಪಲಾಪುರ ಗ್ರಾಮದ ಶಿವಕುಮಾರ ಸಂಗನಬಸಪ್ಪ (38) ಎಂಬುವರು ತಮ್ಮ ಹೊಲದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಿಸಿಸಿ ಬ್ಯಾಂಕ್, ಪಿಎಲ್ಡಿ ಬ್ಯಾಂಕ್, ಖಾಸಗಿ ಸೇರಿದಂತೆ 5 ಲಕ್ಷ ರೂ. ಅಧಿಕ ಸಾಲ ಇತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಪಿಎಸ್‌ಐ ಹುಲೇಪ್ಪ ಭೇಟಿ ನೀಡಿದ್ದರು. ಜನವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ …
Read More »
BigTv News
October 25, 2024
Breaking News, ರಾಯಚೂರು
ರಾಯಚೂರು: ಜಿಲ್ಲೆಯ ಸಿಂಧನೂರಿನ ಸಿಎಸ್‌ಎಫ್ ಚರ್ಚ್ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರರು ಸವಾರರು ಮೃತಪಟ್ಟ ಘಟನೆ ಇಂದು (ಅ.25) ನಡೆದಿದೆ. ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಶೆಕ್ಷಾವಲಿ (19) ಮೃತಪಟ್ಟಿದ್ದು, ಮತ್ತೋರ್ವ ಮೃತ ಬೈಕ್ ಸವಾರನ ಹೆಸರು ತಿಳಿದು ಬಂದಿಲ್ಲ. ತಾಲೂಕಿನ ದುಮುತಿ ಗ್ರಾಮದಿಂದ ಸಿಂಧನೂರಿನ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿ, ಜವಳಗೆರಾದಿಂದ ಜಮೀನಿಗೆ ಹೊರಟಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಎರಡೂ ಬೈಕುಗಳ ಮುಂಭಾಗ ನಜ್ಜುಗುಜ್ಜಾಗಿದೆ. …
Read More »