BigTv News
October 24, 2024
Breaking News, ಬೆಂಗಳೂರು
ಬೆಂಗಳೂರು: ಬಾಬು ಸಾ ಪಾಳ್ಯದಲ್ಲಿ ಕುಸಿದ ಕಟ್ಟಡದಿಂದ ಮೃತಪಟ್ಟ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಟ್ಟಡ ಕುಸಿತವಾಗಿರುವ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರೊಬ್ಬರನ್ನು ಅಮಾನತು ಮಾಡಿದರೆ ಸಾಲದು, ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲು ಅವಕಾಶ ಕೊಟ್ಟ ಐಎಎಸ್ ಅಧಿಕಾರಿ ವಲಯ ಆಯುಕ್ತ, ಕಾರ್ಯಪಾಲಕ ಎಂಜಿನಿಯರ್ ಅವರಿಗೂ ನೋಟಿಸ್ ನೀಡಲು ಬಿಬಿಎಂಪಿ ಮುಖ್ಯ …
Read More »
BigTv News
October 24, 2024
Breaking News, ಬೆಂಗಳೂರು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟಕ್ಕೆ ನಿನ್ನೆ ಮತ್ತೊಂದು ಅವಘಡ ನಡೆದಿತ್ತು. ಹೆಣ್ಣೂರು ಬಳಿಯ ಬಾಬುಸಾ ಪಾಳ್ಯದಲ್ಲಿ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಎಂಟು ಮಂದಿ ಮೃತಪಟ್ಟಿದ್ದರು. ಇದೀಗ ಈ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬೆಂಗಳೂರಿನಲ್ಲಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಪ್ರಾಣಹಾನಿಯಾಗಿರುವುದು ಬೇಸರ ನನಗೆ ತುಂಬಾನೆ ತಂದಿದೆ. ತಮ್ಮ …
Read More »
Shaikh BigTv
October 24, 2024
Breaking News, ಧಾರವಾಡ
ಧಾರವಾಡ: ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಟಾಟಾ ಏಸ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕೆಲವರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿ, ಧಾರವಾಡ ಬೈಪಾಸ್ ಬಳಿ ಇರುವ ಮಿಶ್ರಾ ಪೇಡಾದ ಹತ್ತಿರ ನಿನ್ನೆ ರಾತ್ರಿ ಸಂಭವಿಸಿದೆ. ಯಲ್ಲಮ್ಮನ ಗುಡ್ಡಕ್ಕೆ ಹೊರಟಿದ್ದ ಟಾಟಾ ಏಸ್ ವಾಹನವು ಮುಂದೆ ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಟಾಟಾ ಏಸ್‌ನಲ್ಲಿ ಮೂರ್ನಾಲ್ಕು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ನಿನ್ನೆ ರಾತ್ರಿಯೇ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ …
Read More »
BigTv News
October 24, 2024
Breaking News
ನವದೆಹಲಿ: ರೈತ ಸಮುದಾಯವನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2027ರೊಳಗೆ 11 ಕೋಟಿ ರೈತರಿಗೆ ಡಿಜಿಟಲ್ ಐಡಿ ಕಾರ್ಡ್ ಸೃಷ್ಟಿಸುವ ಗುರಿ ಹೊಂದಿದೆ. ಇದು ಆಧಾರ್ ಕಾರ್ಡ್ ನಂತೆಯೇ ಇರುತ್ತದೆ. ರೈತರಿಗೆ ಪ್ರಮುಖ ಸೇವೆಗಳು ಮತ್ತು ಯೋಜನೆಗಳನ್ನು ತಲುಪಿಸುವ ರೈತ ಕೇಂದ್ರಿತ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಒದಗಿಸುತ್ತದೆ. ಆಧಾರ್ ಕಾರ್ಡ್ ನಂತೆಯೇ ರೈತರಿಗೆ ರೈತ ಗುರುತಿನ ಚೀಟಿ ಪರಿಚಯಿಸುವುದು ಅಗ್ರಿಸ್ಟ್ಯಾಕ್ನ ಪ್ರಮುಖ ವೈಶಿಷ್ಟ್ಯವಾಗಿದೆ. 2024-25ರ ಹಣಕಾಸು ವರ್ಷದಲ್ಲಿ 6 ಕೋಟಿ, …
Read More »
BigTv News
October 24, 2024
Breaking News, ಆಂಧ್ರ ಪ್ರದೇಶ
ಕರ್ನೂಲ್: ಜಿಲ್ಲೆಯಲ್ಲಿ ತುಂಗಭದ್ರಾ ಪೈಪ್‌ಲೈನ್ ಸೋರಿಕೆಯಿಂದಾಗಿ 2 ದಿನಗಳಿಂದ ನೀರು ವ್ಯರ್ಥವಾಗುತ್ತಿದ್ದು, ಇದರಿಂದ ಸುಮಾರು 50 ಎಕರೆ ಬೆಳೆ ನೀರಿನಲ್ಲಿ ಮುಳುಗಿದೆ. ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ ಇದರಿಂದ ರೈತರು ಕಂಗಾಲಾಗಿದ್ದಾರೆ. ಕೋಸ್ಗಿ ಮಂಡಲದ ಸಾತನೂರು ಬಳಿ ಈ ಘಟನೆ ನಡೆದಿದೆ ಪುಲಿಕನುಮ ಪಂಪ್ ಹೌಸ್ನ ಪೈಪ್ ಲೈನ್ ಒಡೆದು 2 ದಿನ ಕಳೆದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಹಾಗೂ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪೈಪ್ …
Read More »
Shaikh BigTv
October 24, 2024
Breaking News, ಧಾರವಾಡ
ಧಾರವಾಡ : ದೇಶದಲ್ಲಿ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಕಹಳೆ ಮೊಳಗಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ಇಂದಿನ ಮಹಿಳೆಯರಿಗೆ ಆದರ್ಶ ಪ್ರಾಯರಾಗಿದ್ದಾರೆ. ಅವರ ಹೋರಾಟ, ಧೈರ್ಯ, ಸ್ಥೈರ್ಯ ಮತ್ತು ಸ್ವಾಭಿಮಾನಗಳು ಪ್ರತಿಯೊಬ್ಬ ಮಹಿಳೆಯಲ್ಲಿ ಇರಬೇಕು. ನಮ್ಮ ಹೆಣ್ಣುಮಕ್ಕಳಿಗೆ ರಾಣಿ ಚನ್ನಮ್ಮನ ಗುಣಗಳನ್ನು ಬೆಳೆಸಬೇಕು. ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ, ಸ್ವಾಭಿಮಾನಿ ಕಿತ್ತೂರು ರಾಣಿ ಚನ್ನಮ್ಮ ಆದರ್ಶ ಪ್ರಾಯಳಾಗಿದ್ದು, ಅವರ ಜೀವನ ಮತ್ತು ಸಾಧನೆಗಳು ಎಲ್ಲರಿಗೂ ಪ್ರೇರಕ ಶಕ್ತಿಯಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ …
Read More »
Shaikh BigTv
October 24, 2024
Breaking News, ಧಾರವಾಡ
ಧಾರವಾಡ: ಅಕ್ಟೋಬರ್ 25 ರಂದು ಧಾರವಾಡದಲ್ಲಿ ರಾಜ್ಯ ಸರಕಾರ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಅಲ್ ಇಂಡಿಯಾ ಬಂಜಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಪಾಂಡುರಂಗ ಪಮ್ಮಾರ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಾತಿಗಣತಿ ಬಹಿರಂಗಪಡಿಸದೇ ಒಳಮೀಸಲಾತಿ ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ. ಲಂಬಾಣಿ, ಕೊರಮ, ಕೊರಚ, ಭೋವಿ, ಒಡ್ಡರ ಸೇರಿದಂತೆ 99 ಜಾತಿಗಳ ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
Read More »
Shaikh BigTv
October 24, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ :ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ವೀರರಾಣಿ ಕಿತ್ತೂರು ಚೆನ್ನಮ್ಮ ನವರ ಜನ್ಮ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಪ್ರತಿಮೆಗೆ ಮೇಯರ್ ರಾಮಪ್ಪ ಬಡಿಗೇರ್ ರವರು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ ಉಪ ಮೇಯರ್ ಶ್ರೀಮತಿ ದುರ್ಗಮ್ಮ ಶಶಿಕಾಂತ ಬಿಜವಾಡ ರವರು, ಪಾಲಿಕೆ ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ ರವರು, ಗೌರವಾನ್ವಿತ ಪಾಲಿಕೆ ಸದಸ್ಯರುಗಳು ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
Read More »
Shaikh BigTv
October 24, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ ಹಾಗೂ ಸ್ವರಾಜ್ಯ ಯುದ್ಧದ 200ನೇಯ ವರ್ಷದ ವಿಜಯೋತ್ಸವದ ನಿಮಿತ್ಯ ಹುಬ್ಬಳ್ಳಿಯಲ್ಲಿರುವ ಪುತ್ಥಳಿಗೆ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಮಾಲಾರ್ಪಣೆ ಮಾಡಿ ಮಾತನಾಡಿದರು. ವೀರಮಾತೆಯರ ಸಾಲಿನ ಮುಕುಟ ಮಣಿ ಕಿತ್ತೂರು ರಾಣಿ ಚೆನ್ನಮ್ಮನವರ ಪರಾಕ್ರಮದ ಕುರಿತು ಮಾತನಾಡಿ, ಅವರ ಸ್ಮರಣಾರ್ಥವಾಗಿ ಕೇಂದ್ರ ಸರಕಾರವು ಚೆನ್ನಮ್ಮರ ಅಂಚೆ ಚೀಟಿ ಬಿಡುಗಡೆ ಮಾಡುತ್ತಿರುವುದು ರಾಜ್ಯದ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
Read More »
Shaikh BigTv
October 24, 2024
Breaking News, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ. 37 ಹಾಗೂ 47 ರಲ್ಲಿ ಸದಸ್ಯತಾ ಅಭಿಯಾನ ನಡೆಸಿ, ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಾಯಿಸಲು ಶಾಸಕ ಮಹೇಶ್ ಟೆಂಗಿನಕಾಯಿ ಅವರು ಮಾರ್ಗದರ್ಶನ ಮಾಡಿದರು. ಇದೆ ವೇಳೆಯಲ್ಲಿ ಪಕ್ಷ ಸಂಘಟನೆ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಉಮೇಶಗೌಡ ಕೌಜಗೇರಿ, ಶ್ರೀಮತಿ ರೂಪಾ ಶೆಟ್ಟಿ, ಪಕ್ಷದ ಪದಾಧಿಕಾರಿಗಳು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.
Read More »