BigTv News
October 23, 2024
Breaking News, ಕಲಬುರಗಿ
ಕಲಬುರಗಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಘೋಷಣೆಯಾದ ಕಾರಣ ಆಳಂದ ಹಾಗೂ ಅಫಜಲಪುರ ತಾಲ್ಲೂಕುಗಳ ಗಡಿ ಗ್ರಾಮಗಳಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಿ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ತಿಳಿಸಿದರು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವರ್ಚುವಲ್ ಮೂಲಕ ನಡೆದ ಅಂತರರಾಜ್ಯ ಸಹಕಾರ ಸಭೆಯಲ್ಲಿ ಮಾತನಾಡಿದರು. ಆಳಂದ ತಾಲ್ಲೂಕಿನ 17 ಮತ್ತು ಅಫಜಲಪುರ ತಾಲ್ಲೂಕಿನ 5 ಗ್ರಾಮಗಳು ಮಹಾರಾಷ್ಟ್ರದ ಸೋಲಾಪುರ ಹಾಗೂ ಧಾರಾಶಿವ ಜಿಲ್ಲೆಯ ಗಡಿ ಭಾಗದಲ್ಲಿವೆ. ಮಾದರಿ ನೀತಿ ಸಂಹಿತೆ …
Read More »
BigTv News
October 23, 2024
Breaking News, ಬೆಂಗಳೂರು
ಬೆಂಗಳೂರು : ನಗರದಲ್ಲಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದ್ದು, ಹಲವು ಏರಿಯಾಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ನಷ್ಟ ಸಂಭವಿಸಿತ್ತು. ಹೀಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸದ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮಳೆಯಿಂದ ಉಂಟಾಗಿರುವ ಹಾನಿಗೆ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ …
Read More »
BigTv News
October 23, 2024
Breaking News, ರಷ್ಯಾ
ಕಝನ್: ಭಾರತ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತದೆಯೇ ಹೊರತು ಯುದ್ಧವನ್ನಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ಬ್ರಿಕ್ಸ್ ಸಮಾವೇಶದಲ್ಲಿ ಪ್ರತಿಪಾದಿಸಿದ್ದಾರೆ. ಆ ಮೂಲಕ ರಷ್ಯಾ-ಉಕ್ರೇನ್ ಸಂಘರ್ಷವನ್ನು ಶಾಂತಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎನ್ನುವ ಕರೆ ನೀಡಿದ್ದಾರೆ. ತಮ್ಮ ಭಾಷಣದಲ್ಲಿ ಯುದ್ಧ, ಆರ್ಥಿಕ ಅನಿಶ್ಚಿತತೆ, ಹವಾಮಾನ ಬದಲಾವಣೆ ಹಾಗೂ ಉಗ್ರವಾದದ ಸವಾಲುಗಳ ಬಗ್ಗೆ ಮಾತನಾಡಿದ ಅವರು, ಜಗತ್ತನ್ನು ಸರಿಯಾದ ದಾರಿಯಲ್ಲಿ ಕೊಂಡೊಯ್ಯಲು ಬ್ರಿಕ್ಸ್ ಸಕಾರಾತ್ಮಕ ಪಾತ್ರವನ್ನು ವಹಿಸಬಹುದು ಎಂದು ಹೇಳಿದ್ದಾರೆ. ಕೋವಿಡ್ …
Read More »
Shaikh BigTv
October 23, 2024
Breaking News, ಧಾರವಾಡ
ನವಲಗುಂದ: ಮಳೆಗೆ ತಾಲೂಕಿನ ಬಳ್ಳೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣ ಸಂಪೂರ್ಣ ಕೆರೆಯಂತಾಗಿದ್ದು, ಮಕ್ಕಳು ಶಾಲೆಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ದಸರಾ ರಜೆ ಮುಗಿಸಿ ಶಾಲೆಯತ್ತ ಮುಖ ಮಾಡಿದ ಮಕ್ಕಳಿಗೆ ವರುಣ ಸೃಷ್ಟಿಸಿದ ಅವಾಂತರದಿಂದಾಗಿ ಕುಳಿತುಕೊಳ್ಳಲು ಶಾಲೆಯಲ್ಲಿ ಜಾಗ ಇಲ್ಲದ ಪರಿಸ್ಥಿತಿ ಎದುರಾಗಿದೆ. ಸದ್ಯ 1ರಿಂದ 8ನೇ ತರಗತಿಯನ್ನು ಹೊಂದಿರುವಂತಹ ಈ ಶಾಲೆಯಲ್ಲಿ 227 ಮಕ್ಕಳು ಕಲಿಯುತ್ತಿದ್ದಾರೆ. ಸನ್ 2020-21ನೇ ಸಾಲಿನಲ್ಲಿ ಹೊಸದಾಗಿ ಎರಡು …
Read More »
BigTv News
October 23, 2024
Breaking News, ಕಲಬುರಗಿ
ಕಲಬುರಗಿ : ನಗರದಲ್ಲಿ ಸುಗಮ ಮತ್ತು ಸುರಕ್ಷತೆಯ ಸಂಚಾರ ವ್ಯವಸ್ಥೆ ಕೈಗೊಳ್ಳುವುದಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನವಾದ ಸಮಗ್ರ ಸಂಚಾರ ನಿರ್ವಹಣೆ ವ್ಯವಸ್ಥೆ (ಐಟಿಎಂಎಸ್) ಮೂಲಕ ಇ – ಚಲನ್ ಮುಂದಿನ 10 ದಿನಗಳಲ್ಲಿ ಜಾರಿ ಮಾಡುವ ಉದ್ದೇಶ ಇದೆ ಎಂದು ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ ಹೇಳಿದರು. ಕಲಬುರಗಿ ಆಕಾಶವಾಣಿಯಲ್ಲಿ ಇಂದು ನಡೆಸಿದ ಫೋನ್-ಇನ್ ಕಾರ್ಯಕ್ರಮದಲ್ಲಿ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಿಗ್ನಲ್ ವ್ಯವಸ್ಥೆ ಇದ್ದರೂ ನಿಯಮ ಉಲ್ಲಂಘನೆ ಮಾಡಿ ಸಂಚರಿಸುತ್ತಿರುವ …
Read More »
BigTv News
October 23, 2024
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ (ರೂ 85 ಲಕ್ಷ ಕೋಟಿ) ಆರ್ಥಿಕತೆಯಾಗಿ ಬೆಳೆಸುವ ಗುರಿಯೊಂದಿಗೆ ಉದ್ಯಮ ಪರಿಣಿತರ ಅಭಿಪ್ರಾಯ ಆಧರಿಸಿ 2025-30ರ ಅವಧಿಗೆ ಪ್ರಗತಿ ಕೇಂದ್ರಿತ ಕೈಗಾರಿಕಾ ನೀತಿ ರೂಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದರು. ಅಮೆರಿಕ ಚೇಂಬರ್ ಆಫ್ ಕಾಮರ್ಸ್ ಇನ್ ಇಂಡಿಯಾ (ಆಮ್ ಚಾಮ್) ಇಲ್ಲಿನ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಪರಿವರ್ತನೆಯಾಗುತ್ತಿರುವ ಕರ್ನಾಟಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಗತ್ಯಕ್ಕೆ …
Read More »
Shaikh BigTv
October 23, 2024
Breaking News, ದೆಹಲಿ
ನವದೆಹಲಿ : ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಎಂಆರ್ ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ನವದೆಹಲಿಯಲ್ಲಿ ಎಂಆರ್ ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ. ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳನ್ನು ವಾಹನಗಳ ಮೂಲಕ ವಿತರಿಸಲು ಕೇಂದ್ರ ಸರ್ಕಾರ ಚಾಲನೆ ನೀಡಿದೆ. …
Read More »
Shaikh BigTv
October 23, 2024
Breaking News, ಧಾರವಾಡ
ನವಲಗುಂದ : ಅತಿವೃಷ್ಟಿಯಿಂದ ಇತ್ತೀಚಿಗೆ ತಾಲೂಕಿನ ಹನಸಿ ಗ್ರಾಮದದಲ್ಲಿ ಮನೆಬಿದ್ದ ಪರಿಣಾಮ ಸುಮಂಗಲಾ ಮರಿಗೌಡ ಪಾಟೀಲ(54) ಎಂಬುವರು ತೀವ್ರ ಗಾಯಗೊಂಡ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ನಂತರ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ಮೃತರ ಮನೆಗೆ ಇಂದು ತಾಲೂಕಾ ಕಾಂಗ್ರೆಸ್ ಕಮಿಟಿಯವರು ಸಾಂತ್ವನ ಹೇಳಿ ತಮ್ಮ ನೋವು ಹಾಗೂ ಕಷ್ಟಕ್ಕೆ ಸರಕಾರ ಪರಿಹಾರ ನೀಡಲು ಬದ್ದವಾಗಿದೆ. ಕ್ಷೇತ್ರದ ಶಾಸಕ ಎನ್.ಎಚ್.ಕೋನರಡ್ಡಿ ಅವರ ಜೊತೆಗೆ ಚರ್ಚಿ ಮಾಡಿ ಸರಕಾರದಿಂದ ಬರುವಂತಹ ಎಲ್ಲ ಸೌಲಭ್ಯಗಳನ್ನು …
Read More »
BigTv News
October 23, 2024
Breaking News
ಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತ ಪರಿಣಾಮ ಇಂದು ಬೆಳಗ್ಗೆ ಡಾನಾ ಚಂಡಮಾರುತ ತೀವ್ರಗೊಂಡಿದ್ದು, ಮುಂದಿನ 48 ಗಂಟೆಗಳಲ್ಲಿ ಒಡಿಶಾ ಕರಾವಳಿಯ ಭಿತರ್‌ಕಾನಿಕಾ ಮತ್ತು ಧಮ್ರಾ ಸಮೀಪ ದಾಟುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕರಾವಳಿ ಪ್ರದೇಶಗಳಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ರಾಜ್ಯ ಸರ್ಕಾರ ಚುರುಕುಗೊಳಿಸಿದೆ. ಒಡಿಶಾ ರಾಜ್ಯಕ್ಕೆ ವಿಶೇಷವಾಗಿ ಕರಾವಳಿ ಪ್ರದೇಶಕ್ಕೆ ಚಂಡಮಾರುತ ಪ್ರಭಾವ ಬೀರುವ ಸಾಧ್ಯತೆಯಿರುವುದರಿಂದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಆಡಳಿತದೊಂದಿಗೆ ಸಮನ್ವಯ …
Read More »
BigTv News
October 23, 2024
Breaking News
ವಯನಾಡ್: 17ನೇ ವಯಸ್ಸಿನಿಂದಲೇ ರಾಜಕೀಯ ಪ್ರಚಾರಗಳಲ್ಲಿ ಭಾಗವಹಿಸುತ್ತಾ ಬಂದಿದ್ದು, ರಾಜಕೀಯದಲ್ಲಿ ನನಗೆ 35 ವರ್ಷಗಳ ಅನುಭವವಿದೆ ಎಂದು ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರು ಪ್ರತಿಸ್ಪರ್ಧಿ ಬಿಜೆಪಿಯ ನವ್ಯಾ ಹರಿದಾಸ್ ಅವರಿಗೆ ಪರೋಕ್ಷವಾಗಿ ಕುಟುಕಿದ್ದಾರೆ. ಜನರನ್ನು ಪ್ರತಿನಿಧಿಸುವ ವಿಚಾರದಲ್ಲಿ ಪ್ರಿಯಾಂಕಾ ಗಾಂಧಿಗಿಂತ ಹೆಚ್ಚಿನ ಅನುಭವ ನನಗಿದೆ ಎಂದು ನವ್ಯಾ ಹರಿದಾಸ್ ಮಂಗಳವಾರ ಹೇಳಿದ್ದರು. ನಾಮಪತ್ರ ಸಲ್ಲಿಸುವ ಮುನ್ನ ಕಲ್ಪೇಟಾದಲ್ಲಿ ನಡೆದ ರೋಡ್ ಶೋನಲ್ಲಿ ಭಾಗವಹಿಸಿ ಮಾತನಾಡಿದ …
Read More »