Breaking News

Breaking News

ರಾಯಚೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಹಸಿರು ನಿಶಾನೆ: ಸಚಿವ ಭೋಸರಾಜು

ಬೆಂಗಳೂರು : ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ ಕೇಂದ್ರ ಸರಕಾರ ಹಸಿರು ನಿಶಾನೆ ತೋರಿದೆ. ಕೇಂದ್ರ ಸರಕಾರದ ವಿಮಾನಯಾನ ಸಚಿವರೊಂದಿಗೆ ಹಲವಾರು ಬಾರಿ ನಡೆಸಿದ ಚರ್ಚೆಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ. ಇಂದು ಕೇಂದ್ರ ಸರಕಾರದಿಂದ ವಿಮಾನ ನಿಲ್ದಾಣಕ್ಕೆ ಹಸಿರು ನಿಶಾನೆ ದೊರೆತಿರುವ ಬಗ್ಗೆ ಹೇಳಿಕೆ ನೀಡಿದ ಅವರು, ನಮ್ಮ ಕಾಂಗ್ರೆಸ್ ಸರಕಾರ …

Read More »

ರಸ್ತೆ ಅಪಘಾತದಲ್ಲಿ ಸಾವನಪ್ಪಿದ ವ್ಯಕ್ತಿಯ ಮನೆಗೆ ಸಂತೋಷ್ ಲಾಡ್

ಧಾರವಾಡ: ಅಕ್ಟೋಬರ್ 20, 2024 ರಂದು ಸಂಪಿಗೆ ನಗರ ಹತ್ತಿರ ರಸ್ತೆ ಅಪಘಾತದಲ್ಲಿ ಕೆಲಗೇರಿ ಗ್ರಾಮದ ರಮೇಶ್ ಹಂಚಿನಮನಿ, ಮರೆವ್ವ ಹಂಚಿನಮನಿ, ಪ್ರಣವ್ ಹಂಚಿನಮನಿ ಮೃತಪಟ್ಟಿದ್ದು, ಇವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಇಂದು ಭೇಟಿ ನೀಡಿದರು. ವಾರಸುದಾರರಿಗೆ 2 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಣೆ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ತಹಶೀಲ್ದಾರ ಡಾ.ಡಿ.ಎಚ್.ಹೂಗಾರ, ಡಿಸಿಪಿ ರವೀಶ, …

Read More »

ಚಿತ್ರದುರ್ಗದಲ್ಲಿ ವರುಣಾರ್ಭಟ: ಹಳ್ಳದಲ್ಲಿ ಕೊಚ್ಚಿಹೋದ ಟ್ರ್ಯಾಕ್ಟರ್

ಚಿತ್ರದುರ್ಗ : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರಿದ್ದು, ಇತ್ತ ಜಿಲ್ಲೆಯಲ್ಲೂ ರಣ-ರಣ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಚಳ್ಳಕೆರೆ ತಾಲೂಕಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ, ಗಜ್ಜುಗಾನಹಳ್ಳಿ ಹಳ್ಳವು ತುಂಬಿ ಹರಿಯುತ್ತಿದೆ ರಭಸದಿಂದ ಹರಿಯುತ್ತಿರುವ ಹಳ್ಳದ ನೀರಿನ ಹೊಡೆತಕ್ಕೆ ರಸ್ತೆ ದಾಟುತ್ತಿದ್ದ ಟ್ರ್ಯಾಕ್ಟರ್ ಕೊಚ್ಚಿ ಹೋಗಿರುವ ಘಟನೆ ನಡೆದಿದ್ದು, ಚಾಲಕ ಬಚಾವ್ ಆಗಿದ್ದಾನೆ. ನಿರಂತರ ಮಳೆಗೆ ತುಂಬಿ ಹರಿಯುತ್ತಿರುವ ಗಜ್ಜುಗಾನಹಳ್ಳಿ ಹಳ್ಳವು ಸರ್ವಕಾಲಿಕ ದಾಖಲೆ ಮೀರಿ ತುಂಬಿ …

Read More »

ರೈತರಿಗೆ ಮತ್ತೇ ಬೀಜ ವಿತರಿಸುವ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ; ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ಸಂತೋಷ ಲಾಡ

ಧಾರವಾಡ : ಅತಿಯಾದ ಮಳೆಯಿಂದಾಗಿ, ಮುಂಗಾರಿನ ಫಸಲು ಕೊಯ್ಲು ಹಂತದಲ್ಲಿ ನಾಶವಾಗಿದ್ದು ಮತ್ತು ಹಿಂಗಾರು ಬಿತ್ತನೆ ಮಾಡಿದ್ದ ಬೀಜಗಳು ಕೊಚ್ಚಿಕೊಂಡು ಹೋಗಿ ನಾಟಿ ಬಂದಿರುವದಿಲ್ಲ. ಆದ್ದರಿಂದ ಈಗಾಗಲೇ ಕೃಷಿ ಇಲಾಖೆಯಿಂದ ಹಿಂಗಾರು ಬಿತ್ತನೆಗೆ ಬೀಜ ಪಡೆದಿದ್ದ ರೈತರಿಗೆ ಮರಳಿ ರಿಯಾತಿಯಲ್ಲಿ ಬಿತ್ತನೆ ಬೀಜ ವಿತರಿಸಲು ಅಗತ್ಯವಿರುವ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಅವರು ತಿಳಿಸಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾ …

Read More »

ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ ಲಾಡ ಭೇಟಿ; ರೈತರ ಅಹವಾಲು ಆಲಿಕೆ

ಧಾರವಾಡ : ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಅವರು ಇಂದು ಮದ್ಯಾಹ್ನ ಜಿಲ್ಲೆಯ ಅಮ್ಮಿನಭಾವಿ ಹೋಬಳಿಯ ಗ್ರಾಮಗಳಿಗೆ ಭೇಟಿ ನೀಡಿ, ಜಿಲ್ಲೆಯ ಮಳೆ ಹಾನಿ ಕುರಿತು ಹಾನಿಯಾದ ಮನೆಗಳಿಗೆ ಹಾಗೂ ಜಮೀನುಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ಅವರು ರೈತರೊಂದಿಗೆ ಮಾತನಾಡಿ, ಬೆಳೆ ಹಾನಿ ಕುರಿತು ಪ್ರತಿ ರೈತರನ ಜಮೀನುಗಳನ್ನು ತಪ್ಪದೇ ನಿಖರವಾಗಿ ಸಮೀಕ್ಷೆ ಮಾಡಿ, ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರಕ್ಕೆ ಜಿಲ್ಲೆಯ ಬೆಳೆ ಹಾನಿ ಕುರಿತು ವಿಶೇಷ ವರದಿ …

Read More »

ದೇಶದಲ್ಲಿರುವ ಸಿ ಆರ್ ಪಿ ಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ

ನವದೆಹಲಿ: ಕಳೆದ ಒಂದು ವಾರದಿಂದ ವಿಮಾನಗಳಿಗೆ ಬೆದರಿಕೆ ಕರೆ ಬರುತ್ತಿರುವ ಬೆನ್ನಲ್ಲೇ, ರಾಷ್ಟ್ರ ರಾಜಧಾನಿ ನವದೆಹಲಿ, ಹೈದರಾಬಾದ್ ಸೇರಿ ದೇಶದ ವಿವಿಧೆಡೆ ಇರುವ ಸಿಆರ್ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಈ ಇಮೇಲ್ ಮಾಡಿರುವವರು ಭಯಭೀತರಾಗಲು ಯಾರೋ ಮಾಡಿದ ಕೃತ್ಯ ಎಂದು ಶಂಕಿಸಲಾಗಿದೆ. ಅವುಗಳಲ್ಲಿ ಎರಡು ದೆಹಲಿಯಲ್ಲಿ ಮತ್ತು ಒಂದು ಹೈದರಾಬಾದ್ನಲ್ಲಿವೆ. ತಡರಾತ್ರಿ ಈ ಶಾಲೆಗಳ ಆಡಳಿತ ಮಂಡಳಿಗೆ ಇಮೇಲ್ ಮೂಲಕ ಬೆದರಿಕೆಯನ್ನು ರವಾನಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ …

Read More »

ಹೊಸ ಬೆಳವಣಿಗೆಯ ಅವಕಾಶ ಬಳಸಿಕೊಳ್ಳಲು ಭಾರತ ಬದ್ಧ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಯಾರ್ಕ್: ಜಾಗತಿಕ ಆರ್ಥಿಕ ವಾತಾವರಣವು ಸವಾಲುಗಳನ್ನು ಎದುರಿಸಬಹುದು ಆದರೆ ಹೊಸ ಬೆಳವಣಿಗೆಯ ಅವಕಾಶಗಳನ್ನು ಬಳಸಿಕೊಳ್ಳಲು ಭಾರತವು ಉತ್ತಮ ಸ್ಥಾನದಲ್ಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಲ್ಲಿನ ಕೊಲಂಬಿಯಾ ವಿಶ್ವವಿದ್ಯಾನಿಲಯದಲ್ಲಿ ಭಾರತದ ಆರ್ಥಿಕ ಸ್ಥಿತಿಸ್ಥಾಪಕತ್ವ ಮತ್ತು ಸವಾಲು ಮತ್ತು ಅನಿಶ್ಚಿತ ಜಾಗತಿಕ ಪರಿಸರದ ನಡುವೆ ಭವಿಷ್ಯ ಕುರಿತು ವಿಶೇಷ ಉಪನ್ಯಾಸ ನೀಡುವಾಗ ಸೀತಾರಾಮನ್ ಈ ಹೇಳಿಕೆಗಳನ್ನು ನೀಡಿದರು. ಭಾರತವು ದೇಶೀಯ ಸಾಮರ್ಥ್ಯಗಳನ್ನು ಹೆಚ್ಚಿಸಲು ಮತ್ತು ಬಾಹ್ಯ ಆಘಾತಗಳ ವಿರುದ್ಧ …

Read More »

ಭಾರತ ಚೀನಾ ಗಡಿಯಲ್ಲಿ ವಿಶ್ವಾಸ ಮರುಸ್ಥಾಪಿಸಲು ಯತ್ನ: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

ನವದೆಹಲಿ: ಭಾರತ -ಚೀನಾ ಗಡಿಯಲ್ಲಿ ವಿಶ್ವಾಸವನ್ನು ಮರುಸ್ಥಾಪಿಸಲು ನಾವು ಯತ್ನಿಸುತ್ತಿದ್ದೇವೆ, ಈ ಗುರಿ ಸಾಧಿಸಲು ಉಭಯ ರಾಷ್ಟ್ರಗಳು ಪರಸ್ಪರ ಭರವಸೆ ನೀಡಬೇಕಾಗಿದೆ ಎಂದು ಭಾರತೀಯ ಸೇನೆಯ ಮುಖ್ಯಸ್ಥ ಜನರಲ್‌ ಉಪೇಂದ್ರ ದ್ವಿವೇದಿ ಇಂದು ಹೇಳಿದರು. ರಕ್ಷಣಾ ಇಲಾಖೆಯ ಚಿಂತಕರ ಚಾವಡಿ ಯುಎಸ್‌ಐ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಈ ಬಗ್ಗೆ ಮಾತನಾಡಿದರು. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಸ್ರಿ ಅವರು ಒಪ್ಪಂದಕ್ಕೆ ಬರಲಾಗಿದೆ ಎಂಬುದನ್ನು ಸೋಮವಾರ ಪ್ರಕಟಿಸಿದ್ದರು. ಗಡಿಯಲ್ಲಿ,ಪೂರ್ವ ಲಡಾಖ್‌ ಬಳಿ …

Read More »

ವಯನಾಡು ಕ್ಷೇತ್ರಕ್ಕೆ ನನ್ನ ಸಹೋದರಿಗಿಂತ ಉತ್ತಮ ಅಭ್ಯರ್ಥಿಯನ್ನು ಉಹಿಸಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ನವದೆಹಲಿ: ವಯನಾಡ್‌ನ ಜನರಿಗೆ ನನ್ನ ಹೃದಯದಲ್ಲಿ ಬಹಳ ವಿಶೇಷವಾದ ಸ್ಥಾನವಿದೆ. ಆ ಜನರನ್ನು ಪ್ರತಿನಿಧಿಸಲು ನನ್ನ ಸಹೋದರಿಗಿಂತ ಉತ್ತಮರನ್ನು ನಾನು ಊಹಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಇಂದು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರ ಅವರು ವಯನಾಡ್‌ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಯುಡಿಎಫ್‌ ಅಭ್ಯರ್ಥಿಯಾಗಿ ನಾಳೆ(ಬುಧವಾರ) ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ರಾಹುಲ್‌ ಹಾಗೂ …

Read More »

85 ಭಾರತೀಯ ಸೈನಿಕರನ್ನು ಬಿಡುಗಡೆಗೊಳಿಸಿದ ರಷ್ಯಾ ಸೇನೆ: ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ

ನವದೆಹಲಿ: ರಷ್ಯಾ ಸೇನೆಯು ಈವರೆಗೆ ಭಾರತ ಮೂಲದ 85 ಸೈನಿಕರನ್ನು ಬಿಡುಗಡೆ ಮಾಡಿದೆ ಉಳಿದ 20 ಸೈನಿಕರನ್ನು ವಾಪಸ್‌ ಕರೆಸಿಕೊಳ್ಳುವ ಪ್ರಯತ್ನ ಮುಂದುವರಿದಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ತಿಳಿಸಿದರು. ಬ್ರಿಕ್ಸ್‌ ಶೃಂಗಸಭೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಉಳಿದ ಸೈನಿಕರ ವಾಪಸಾತಿ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು. …

Read More »