Breaking News

Breaking News

ಮಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ರ್ಯಾಗಿಂಗ್ ; ವಿದ್ಯಾರ್ಥಿಯ ಕುತ್ತಿಗೆ ಮೂಳೆ ಮುರಿತ, 6 ಮಂದಿ ಪೊಲೀಸ್ ವಶಕ್ಕೆ

ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ರ್ಯಾಗಿಂಗ್ ಹೆಸರಿನಲ್ಲಿ ನಡೆದ ಹಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಹಲ್ಲೆಯಿಂದ ಕುತ್ತಿಗೆಯ ಮೂಳೆ ಮುರಿದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದ್ವಿತೀಯ ವರ್ಷದ ವಿದ್ಯಾರ್ಥಿಗಳ ಗುಂಪು ಜೂನಿಯರ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ. ಪ್ರಕರಣ ಸಂಬಂಧ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾಲೇಜು ಆಡಳಿತವೂ ಆಂತರಿಕ ತನಿಖೆಗೆ …

Read More »

ಹಳೆ ಲವರ್‌ ಕಾಟ ತಾಳಲಾರದೇ ಜೀವ ಬಿಟ್ಟ ಯುವತಿ.. ತ್ರಿಕೋನ ಪ್ರೇಮ ಪ್ರಕರಣದಲ್ಲಿ ಅಸಲಿಗೆ ಆಗಿದ್ದೇನು?

ಬಳ್ಳಾರಿಯಲ್ಲಿ ತ್ರಿಕೋನ ಪ್ರೇಮ ಪ್ರಕರಣ ದುರಂತ ಅಂತ್ಯ ಕಂಡಿದೆ. ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಮಾಜಿ ಪ್ರಿಯಕರ ಬೆದರಿಕೆ ಹಾಕಿದ್ದರಿಂದ ಮನನೊಂದ ಫೀರ್ದೋಸ್ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಯುವತಿ ಮೊದಲು ಅಜೀಂ ಎಂಬಾತನನ್ನು ಪ್ರೀತಿಸುತ್ತಿದ್ದು, ಬಳಿಕ ಆತನಿಂದ ದೂರವಾಗಿ ಸೋಹೈಲ್ ಎಂಬ ಯುವಕನನ್ನು ಮದುವೆಯಾಗಲು ನಿರ್ಧರಿಸಿದ್ದರು. ಈ ವಿಚಾರ ತಿಳಿದ ಅಜೀಂ, ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ …

Read More »

ಗಾಂಜಾ ಜೊತೆ ಸಿಕ್ಕಿ ಬಿದ್ದ ವಿದ್ಯಾರ್ಥಿಗಳು: 290 ಗ್ರಾಂ ಮಾದಕ‌ ಪದಾರ್ಥ ಪತ್ತೆ

ಬೆಂಗಳೂರು ನಗರದ ಕಾಲೇಜೊಂದರಲ್ಲಿ ನಡೆಸಿದ ತಪಾಸಣೆಯಲ್ಲಿ ಮೂವರು ವಿದ್ಯಾರ್ಥಿಗಳು 290 ಗ್ರಾಂ ಗಾಂಜಾದೊಂದಿಗೆ ಸಿಕ್ಕಿಬಿದ್ದಿದ್ದಾರೆ. ಕಾಲೇಜು ಆಡಳಿತ ಮಾಹಿತಿ ನೀಡಿದ ಬಳಿಕ ಪೊಲೀಸರು ಗಾಂಜಾವನ್ನು ವಶಪಡಿಸಿಕೊಂಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ವಿದ್ಯಾರ್ಥಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಗಾಂಜಾ ತಂದಿದ್ದ ಪ್ರಮುಖ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಜಾಮೀನು ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸಿದ ವ್ಯಕ್ತಿಯ ಪತ್ತೆಗೆ ಪೊಲೀಸರು ತನಿಖೆ …

Read More »

ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಾಗೂ ‘ಪೇಮೆಂಟ್ ಸೀಟ್’ ಹಂಚಿಕೆ ಕುರಿತು ಶಾಸಕ ಆರ್. ಬಿ. ತಿಮ್ಮಾಪುರ ಮತ್ತು ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಸಂಭಾಷಣೆ ವೈರಲ್ ಆಗಿದೆ.ಈ ಸಂಭಾಷಣೆ ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತವನ್ನು ಮತ್ತೆ ಬೀದಿಗೆ ತಂದಿದ್ದು, ಪ್ರತಿಪಕ್ಷಗಳಿಗೆ ಹೊಸ ಪ್ರಹಾರ ಮಾಡಲು ಅಸ್ತ್ರ ಸಿಕ್ಕಂತಾಗಿದೆ. ಈ ಸಂಬಂಧ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್​ವಾಮಿ ಅವರು ಆಡಿಯೋ ಬಿಡುಗಡೆ ಮಾಡಿ ಸಚಿವ …

Read More »

ದೃಶ್ಯ ಸಿನಿಮಾ ಶೈಲಿಯ ಭೀಕರ ಕೊಲೆ ಪ್ರಕರಣ: 4 ವರ್ಷಗಳ ಬಳಿಕ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಮಲನಾಯ್ಕನ ತಾಂಡದಲ್ಲಿ 2022ರ ಯುಗಾದಿ ದಿನ ನಡೆದಿದ್ದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪತಿಯನ್ನು ಕೊಂದು ಹೊಸ ಮನೆಯ ಅಡಿಪಾಯದಲ್ಲಿ ಶವ ಹೂತು ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿ ರಾಜಾನಾಯ್ಕನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮೃತ ರವಿಚಂದ್ರನಾಯ್ಕ ತಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾರೆ ಎಂಬ ಕಾರಣಕ್ಕೆ ಪತ್ನಿ …

Read More »

ಹಾವೇರಿ ಜಿಲ್ಲೆಯಲ್ಲಿ ಖೋಟಾ ನೋಟುಗಳ ಹಾವಳಿ, ಜನರಿಗೆ ತಲೆಬಿಸಿ

ಹಾವೇರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಖೋಟಾ ನೋಟುಗಳ ಚಲಾವಣೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿದೆ. ಇತ್ತೀಚೆಗೆ ಬ್ಯಾಡಗಿಯ ಬ್ಯಾಂಕ್‌ವೊಂದರಲ್ಲಿ ₹500 ಮುಖಬೆಲೆಯ ಐದು ಖೋಟಾ ನೋಟುಗಳು ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತನಿಖೆಯಲ್ಲಿ ವೃದ್ಧೆಯೊಬ್ಬರು ಆ ನೋಟುಗಳನ್ನು ಬ್ಯಾಂಕ್‌ಗೆ ಜಮೆ ಮಾಡಲು ತಂದಿದ್ದರೆಂಬುದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯಂತೆ, ಬಣ್ಣದ ಪ್ರಿಂಟರ್ ಬಳಸಿ ಅಸಲಿ ನೋಟಿನಂತೆಯೇ ಕಾಣುವ ನಕಲಿ ನೋಟುಗಳನ್ನು ಮುದ್ರಿಸಿ ಮಾರುಕಟ್ಟೆಯಲ್ಲಿ ಚಲಾವಣೆ ಮಾಡಲಾಗುತ್ತಿದೆ ಎಂಬ …

Read More »

ಜೊತೆಗಿದ್ದವಳನ್ನೇ ಕೊಂದು ಮಂಚದಡಿ ಬಚ್ಚಿಟ್ಟ, 20 ದಿನ ಮಹಿಳೆಯ ಹೆಣದ ಜೊತೆ ಇದ್ನಾ ಹಂತಕ? ಮೈಸೂರಿನಲ್ಲಿ ಶಾಕಿಂಗ್​ ಘಟನೆ

ಮೈಸೂರಿನಲ್ಲಿ ಸಂಬಂಧದ ವಿಚಾರಕ್ಕೆ 40 ವರ್ಷದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಆರೋಪಿಯೊಬ್ಬ, ಸುಮಾರು 20 ದಿನಗಳ ಬಳಿಕ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಆರೋಪಿ ತಪ್ಪೊಪ್ಪಿಕೊಂಡ ಬಳಿಕವೇ ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ಅಗಸನಪುರ ಮೂಲದ ಜ್ಯೋತಿ (40) ಮೃತರು. ಪತಿ ಮೃತಪಟ್ಟ ಬಳಿಕ ಸಂಬಂಧಿಕನಾದ ಕನಕಪುರ ಮೂಲದ ಸಿದ್ದರಾಜು (64) ಜೊತೆ …

Read More »

7 ಬಾರಿ ಗೆದ್ದರೂ ಸಿಗದ ಮಂತ್ರಿ ಭಾಗ್ಯ, ಮೊಳಕಾಲ್ಮುರು ರಾಜಕೀಯ ಇತಿಹಾಸ

ಮೊಳಕಾಲ್ಮುರು ಶಾಸಕ ಎನ್‌.ವೈ. ಗೋಪಾಲಕೃಷ್ಣ ಅವರಿಗೆ ಸಚಿವ ಸ್ಥಾನ ಮತ್ತೊಮ್ಮೆ ಕೈತಪ್ಪಿದ್ದು, ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಏಳು ಬಾರಿ ಶಾಸಕರಾಗಿದ್ದರೂ ಅವಕಾಶ ನೀಡದಿರುವುದು ಮೊಳಕಾಲ್ಮುರು ಕ್ಷೇತ್ರಕ್ಕೆ ಮಾಡಿದ ಅನ್ಯಾಯ ಎಂದು ಕಾರ್ಯಕರ್ತರು ಮತ್ತು ಅಭಿಮಾನಿಗಳು ಆರೋಪಿಸಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಎನ್‌.ವೈ. ಗೋಪಾಲಕೃಷ್ಣ, ಕ್ಷೇತ್ರಕ್ಕೆ ಮರಳಿದ ಬಳಿಕ ಜನಾಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಚಿವ ಸ್ಥಾನ ಪಡೆಯಲು ಯಾವ ಮಾನದಂಡ ಬೇಕು …

Read More »

ಶಾಸಕ ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ 3 ತಾಲೂಕು ಬಂದ್ ಮಾಡಿ ಪ್ರತಿಭಟನೆ; ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ

ಚಿಕ್ಕಬಳ್ಳಾಪುರ:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನ ತೀವ್ರಗೊಂಡಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಶಾಸಕರು, ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಮುಖಂಡರು ರಾಜೀನಾಮೆ ಮತ್ತು ಪ್ರತಿಭಟನೆಗಳ ಮೂಲಕ ಆಕ್ರೋಶ ಹೊರಹಾಕುತ್ತಿದ್ದಾರೆ. ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರು ತಾಲೂಕುಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ಮೂರು ಬಾರಿ ಶಾಸಕರಾಗಿದ್ದರೂ ಅವರನ್ನು ಕಡೆಗಣಿಸಲಾಗಿದೆ …

Read More »

ರಾಜ್ಯದಲ್ಲಿ ಭೀಕರ ಘಟನೆ – ಕೆಮಿಕಲ್‌ ಸೋರಿಕೆಯಿಂದ ಮೂವರು ಸಾವು, ಇಬ್ಬರು ಗಂಭೀರ!

ಯಾದಗಿರಿ : ಕೆಮಿಕಲ್‌ ಸೋರಿಕೆಯಿಂದಾಗಿ ಕಾರ್ಖಾನೆಯ ಮೂವರು ಸಿಬ್ಬಂದಿ ಮೃತಪಟ್ಟಿರುವ ಘಟನೆ ಯಾದಗಿರಿಯ ಕಡೇಚೂರ್‌ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಅಸ್ವಸ್ಥರಾಗಿದ್ದು ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಔಷಧಿಗಳನ್ನು ತಯಾರಿಸವು ಸಿಲ್‌ ಲ್ಯಾಬೋರೇಟರಿ ಕಾರ್ಖಾನೆಯಲ್ಲಿ ಈ ಅವಘಡ ನಡೆದಿದೆ. ಮೃತರ ಪೈಕಿ ಇಬ್ಬರು ಉತ್ತರ ಭಾರತದ ಮೂಲದವರಾಗಿದ್ದು, ಮತ್ತೊಬ್ಬರು ತೆಲಂಗಾಣ ಮೂಲದವರೆನ್ನಲಾಗಿದೆ. ಇಂದು ಬೆಳಗ್ಗೆ ಸುಮಾರು 5 ಗಂಟೆಯ ಹೊತ್ತಿನಲ್ಲಿ ಇದ್ದಕ್ಕಿದ್ದಂತೆಯೇ ರಾಸಾಯನಿಕ ಸೋರಿಕೆಯಾಗಿ, ಅಲ್ಲಿ ಕೆಲಸ ಮಾಡುತ್ತಿದ್ದ …

Read More »